Connect with us

    LATEST NEWS

    ಬೆಂಗಳೂರು ಮಹಾ ಸ್ಪೋಟಕ್ಕೆ ಸಂಚು – ಐವರು ಶಂಕಿತ ಉಗ್ರರ ಬಂಧನ..!

    Published

    on

    ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರನ್ನು ಸ್ಪೋಟಿಸಲು ಮಹಾ ಸಂಚು ನಡೆಸಿದ ಐವರು ಖತಾರ್ನಾಕ್ ಉಗ್ರಗಾಮಿಗಳನ್ನು ಪೊಲೀಸರು ಮಟ್ಟ ಹಾಕಿದ್ದಾರೆ.

    ಬೆಂಗಳೂರು :  ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂಗರನ್ನು ಸ್ಪೋಟಿಸಲು ಮಹಾ ಸಂಚು ನಡೆಸಿದ ಐವರು ಖತಾರ್ನಾಕ್ ಉಗ್ರಗಾಮಿಗಳನ್ನು ಪೊಲೀಸರು ಮಟ್ಟ ಹಾಕಿದ್ದಾರೆ.

    ನಿಖರ ಮಾಹಿತಿ ಪಡೆದು ನಗರ ಅಪರಾಧ ವಿಭಾಗ ಪೊಲೀಸರು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದು ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ.

    ಬಂಧಿತರಿಂದ ಸ್ಪೋಟಕ್ಕೆ ಸಿದ್ದತೆ ಮಾಡಿಕೊಂಡಿದ್ದ ಕಚ್ಚಾವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

    ಇದರಿಂದ ಬೆಂಗಳೂರಿನಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ತಪ್ಪಿಸಲಾಗಿದೆ.

    ಬಂಧಿತರಿಂದ 7 ಪಿಸ್ತೂಲ್ 45 ಮದ್ದು ಗುಂಡುಗಳು, ಹನ್ನೆರಡು ಬೇಸಿಕ್ ಸೆಟ್ ಮೊಬೈಲ್ ಫೋನ್, ಡ್ರ್ಯ್ಯಾಗರ್, ವಾಕಿ ಟಾಕಿ ವಶಕ್ಕೆ ಪಡೆದುಕೊಳ್ಳಲಾಗಿದೆ.

    ಬಂಧಿತರು ಬೆಂಗಳೂರು ನಗರದಲ್ಲಿ ಕೃತ್ಯವೆಸಗಲು ಪ್ಲ್ಯಾನ್​​ ಮಾಡಿದ್ದರು. ವಿದೇಶದಿಂದ ವಿಧ್ವಂಸಕ ಕೃತ್ಯ್ಕಕೆ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದ್ದಾರೆ.

    ಶಂಕಿತ ಉಗ್ರರು ಬೆಂಗಳೂರು ನಗರವನ್ನೇ ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯವೆಸಗಲು ಹೊಂಚುಹಾಕುತ್ತಿದ್ದರು.

    ಪೊಲೀಸರ ಮಾಹಿತಿ ಪ್ರಕಾರ ಅರೆಸ್ಟ್ ಆದ ಎಲ್ಲಾ ಶಂಕಿತರು ಬೆಂಗಳೂರು ಸ್ಥಳೀಯ ನಿವಾಸಿಗಳೇ ಆಗಿದ್ದಾರೆ.

    ಉಗ್ರರ ಜೊತೆ ಸಂಪರ್ಕ ಹೊಂದಿ ವಿಧ್ವಂಸಕ ಕೃತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದರು.

    ಬೆಂಗಳೂರಿನಲ್ಲಿ ಎಲ್ಲೆಲ್ಲಿ ಬ್ಲಾಸ್ಟ್ ಮಾಡಬೇಕು ಏನು ಅನ್ನೋದರ ಬಗ್ಗೆಯೂ ತರಬೇತಿ ಪಡೆದಿದ್ದರು. ಶಂಕಿತರ ಟೀಂ ಎಲ್ಲಾ ಕಡೆಯೂ ಆಕ್ಟೀವ್ ಆಗಿತ್ತು.

    ಬೆಂಗಳೂರಿನ ಸುಮಾರು ಹತ್ತು ಕಡೆ ಬ್ಲಾಸ್ಟಿಂಗ್ ಗೆ ಪ್ಲಾನ್ ಮಾಡಿದ್ದರು ಎಂದು ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.

    ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 5 ಶಂಕಿತ ಉಗ್ರರನ್ನು ಬಂಧಿಸಿದೆ. ಅವರನ್ನು ಸೈಯದ್ ಸುಹೇಲ್, ಉಮರ್, ಜಾನಿದ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದ್ದು, ಈ ತಂಡ ಬೆಂಗಳೂರಿನಲ್ಲಿ ಸ್ಫೋಟ ನಡೆಸಲು ಯೋಜನೆ ರೂಪಿಸಿತ್ತು ಎಂದು ಶಂಕಿಸಲಾಗಿದೆ.

    ಈ ಐವರೂ 2017ರ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಅವರು ಉಗ್ರರ ಸಂಪರ್ಕಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

    ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ರು ತಿಳಿದ್ದಾರೆ.

    2008ರಲ್ಲಿ ನಡೆದಿದ್ದ ಸೀರಿಯಲ್ ಸ್ಫೋಟ ಆರೋಪಿ ನಸೀರ್​ ಸಂಚು ರೂಪಿಸಿದ್ದ. ಟಿ.ನಸೀರ್​​​ ಹಾಗೂ ಜುನೈದ್ ಈ ಪ್ರಕರಣದ ಮಾಸ್ಟರ್ ಮೈಂಡ್​ಗಳಾಗಿದ್ದು, ಸದ್ಯ ಟಿ.ನಸೀರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ಪ್ರಮುಖ ಲೀಡರ್ ಜುಲೈನ್ ತಲೆಮರೆಸಿಕೊಂಡಿದ್ದಾನೆ.

     

    2008 ರ ಸೀರಿಯಲ್ ಬ್ಲಾಸ್ಟ್ ಕೇಸ್ ನ ಅರೋಪಿ ಟಿ ನಜೀರ್ ಎಲ್ ಇ ಟಿ ಸಂಘಟನೆಗೆ ಸೇರಿದ್ದವನು. ಈ ಶಂಕಿತರ ಉಗ್ರರು ಕೃತ್ಯವೆಸಗಲು ವಿದೇಶದಿಂದ ಹಣ ಬಂದಿದೆ. ಆರೋಪಿಗಳಿಗೆ ಆನ್​ಲೈನ್ ಹಾಗೂ ನಗದು ರೂಪದಲ್ಲಿ ಹಣ ಪೂರೈಕೆಯಾಗಿದೆ. ಈ ಬಗ್ಗೆ ಐವರು ಆರೋಪಿಗಳನ್ನು 15 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

    ಜಮತ್ ಇ ಇಸ್ಲಾಮಿ ಸಂಘಟನೆಯ ಹ್ಯಾಂಡ್ಲರ್ಸ್ ಮೂಲಕ ತರಬೇತಿ ಪಡೆಯಲು ಶಂಕಿತರು ಸುಲ್ತಾನ್ ಪಾಳ್ಯದಲ್ಲಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳುತ್ತಿದ್ದರು.

    ಸುಲ್ತಾನ್ ಪಾಳ್ಯದ ಮಸೀದಿಯೊಂದರ ಪಕ್ಕದಲ್ಲಿಯೇ ವಾಸವಿದ್ದು ವಿಧ್ವಂಸಕ ಕೃತ್ಯಕ್ಕೆ ನಡೆಸಬೇಕಾದ ಬಗ್ಗೆ ಪ್ಲಾನಿಂಗ್ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

    ಆರೋಪಿಗಳು ಕೊಲೆ, ದರೋಡೆ, ಕೆಂಪು ಮರಳು ಕಳ್ಳಸಾಗಣೆ ಮತ್ತು ಇತರ ಅಪರಾಧಗಳ ಆರೋಪಿಗಳಾಗಿದ್ದಾರೆ.

    ಅವರು ಜೈಲಿನಲ್ಲಿದ್ದ ಇತರ ಭಯೋತ್ಪಾದಕ ಆರೋಪಿಗಳೊಂದಿಗೆ ಸಂಪರ್ಕದಲ್ಲಿದ್ದರು. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಜತೆ ನಜೀರ್ ಸಂಪರ್ಕ ಹೊಂದಿದ್ದಾನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

     

    LATEST NEWS

    ನಿಯಂತ್ರಣ ತಪ್ಪಿ ಬೈಕ್ ಗದ್ದೆಗೆ; ಸವಾರ ಸಾ*ವು

    Published

    on

    ತೆಕ್ಕಟ್ಟೆ : ನಿಯಂತ್ರಣ ತಪ್ಪಿ ಬೈಕ್ ಗದ್ದೆಗೆ ಉರುಳಿ ಬಿದ್ದು ಸವಾರ ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾದ ಘಟನೆ ಕುಂದಾಪುರ ತೆಕ್ಕಟ್ಟೆ ಸಮೀಪದ ಕೊಮೆಯಲ್ಲಿ ಸಂಭವಿಸಿದೆ.

    ಪಡುಕರೆ ನಿವಾಸಿ ಮಹೇಂದ್ರ (32) ಮೃತ ದುರ್ದೈವಿ.

    ಸಂಬಂಧಿಕರ ಮನೆಯಲ್ಲಿ ದೀಪಾವಳಿ ಹಬ್ಬದ ಕಾರ್ಯಕ್ರಮವನ್ನು ಮುಗಿಸಿ ತಡರಾತ್ರಿ ಬೈಕ್ ನಲ್ಲಿ ಮಹೇಂದ್ರ ಬರುತ್ತಿದ್ದ ವೇಳೆ ತೆಕ್ಕಟ್ಟೆ– ಕೊಮೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೈಕ್ ಸಹಿತ ರಸ್ತೆ ಬದಿಯ ಗದ್ದೆಗೆ ಆಯತಪ್ಪಿ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿದ್ದುದರಿಂದ ಉಸಿರುಗಟ್ಟಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ.

    ಕೃಷಿಭೂಮಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ತುಂಬಿ ಕೊಂಡಿದ್ದು, ಬೈಕ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ಮಗುಚಿ ಬಿದ್ದಿದ್ದರಿಂದ ನೀರಿನಲ್ಲಿ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    Continue Reading

    DAKSHINA KANNADA

    ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನಿಂದ ಮೆಸೇಜ್; ಯುವಕರಿಂದ ಹಲ್ಲೆ

    Published

    on

    ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ.

    ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ‌ ಚಿಕಿತ್ಸೆ ಪಡೆಯುತ್ತಿದ್ದಾನೆ.

    ನಿಯಾಝ್ ಎಂಬಾತ ಹಲ್ಲೆಗೊಳಗಾದ ಯುವಕ.

    ಸ್ಥಳೀಯ ಯುವತಿಯೋರ್ವಳಿಗೆ ನಿಯಾಝ್ ಮೆಸೇಜ್ ಮಾಡುತ್ತಿರುವುದಾಗಿ ತಿಳಿದು ಬಂದ ಬಳಿಕ, ಅವನನ್ನು ಕರೆಸಿಕೊಂಡ ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ.

    ಈ ಪ್ರಕರಣದ ಕುರಿತು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

    Published

    on

    ಮಂಗಳೂರು/ರಾಮನಗರ : ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್‌ ಕುಮಾರಸ್ವಾಮಿ ಬೈಕ್‌ನಿಂದ ಬಿದ್ದಿದ್ದಾರೆ.

    ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್‌ ಕಾರ್ಯಕರ್ತನ ಬೈಕ್‌ ಏರಿ ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

    ಇದನ್ನೂ ಓದಿ : ಚಲಿಸುತ್ತಿದ್ದ ಬೈಕಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ; ಇಬ್ಬರ ಬಂಧನ

    ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್‌ ನೆರವಿಗೆ ಧಾವಿಸಿದ್ದಾರೆ. ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಸ್ವಲ್ಪಹೊತ್ತು ವಿಶ್ರಾಂತಿ ಪಡೆದ ಬಳಿಕ ಮತ್ತೆ ನಿಖಿಲ್‌ ಕುಮಾರಸ್ವಾಮಿ ಪ್ರಚಾರ ಕಾರ್ಯ ಮುಂದುವರಿಸಿದರು.

    Continue Reading

    LATEST NEWS

    Trending