Connect with us

    LATEST NEWS

    ವಿದ್ಯಾರ್ಥಿನಿಯರ ಖಾ*ಸಗಿ ಅಂ*ಗಾಂಗ ಫೋಟೋಗಳನ್ನು ಹಿಡಿದು ದೌ*ರ್ಜನ್ಯ ನಡೆಸುತ್ತಿದ್ದ ಶಿಕ್ಷಕ ಅರೆಸ್ಟ್

    Published

    on

    ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಸರ್ಕಾರಿ ಶಾಲೆ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಶಿಕ್ಷಕ ಮೊಹಮ್ಮದ್ ಸಾಧಿಕ್ ಮಿಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

    ಮಂಗಳೂರು/ಬೆಳಗಾವಿ : ಸರ್ಕಾರಿ ಶಾಲೆಯ ಶಿಕ್ಷಕನೋರ್ವ ವಿದ್ಯಾರ್ಥಿನಿಯರ ಅಂಗಾಂ*ಗಗಳನ್ನು ಮುಟ್ಟಿ ದೌರ್ಜ*ನ್ಯವೆಸಗುತ್ತಿದ್ದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. ಆರೋಪಿ ಮೊಹಮ್ಮದ್​ ಸಾದಿಕ್ ವಿದ್ಯಾರ್ಥಿನಿಯರ ಖಾ*ಸಗಿ ಅಂಗಾಂಗ*ಗಳನ್ನು ಮುಟ್ಟಿ ವಿಕೃತಿ ಮೆರೆದಿದ್ದಾನೆ. ಅಲ್ಲದೇ, ಶೌಚಕ್ಕೆ ಹೋಗುತ್ತಿದ್ದಾಗ ಖಾ*ಸಗಿ ಅಂ*ಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಹೇಳುತ್ತಿದ್ದ. ಈ ಫೋಟೋಗಳನ್ನು ತನ್ನ ಮೊಬೈಲ್​ನಲ್ಲಿ ಸೇವ್​​ ಮಾಡಿಕೊಳ್ಳುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
    ತರಗತಿಯಲ್ಲಿ ಪಾಠ ಮಾಡುವುದನ್ನು ಬಿಟ್ಟು ವಿಚಿತ್ರವಾಗಿ ಕಾಮುಕನಂತೆ ವರ್ತಿಸುತಿದ್ದನಂತೆ. ಶಿಕ್ಷಕ ಮೊಹಮ್ಮದ್​ ಸಾದಿಕ್ ಕಳೆದ ಒಂದು ವರ್ಷದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ದೌ*ರ್ಜನ್ಯವೆಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ ತನ್ನ ತಾಯಿಯ ಬಳಿ ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ​ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


    ಮೊಬೈಲ್ ನಲ್ಲಿ ಪತ್ತೆಯಾಯ್ತು ಫೋಟೋಗಳು :
    ಬಂಧಿತ ಶಿಕ್ಷಕ ಮೊಬೈಲ್​ನಲ್ಲಿ 300ಕ್ಕೂ ಹೆಚ್ಚು ಅ*ಶ್ಲೀಲ ವೀಡಿಯೋಗಳು ಪತ್ತೆಯಾಗಿವೆ. ಹಾಗೇ ವಿದ್ಯಾರ್ಥಿನಿಯರ ಖಾಸ*ಗಿ ಅಂ*ಗಾಂಗಳ ಫೋಟೋಗಳು ಕೂಡ ಪತ್ತೆಯಾಗಿವೆ. ಅವನ ಮೊಬೈಲ್​ನಲ್ಲಿ 100ಕ್ಕೂ ಹೆಚ್ಚು ಫೋಟೋಗಳು ಪತ್ತೆಯಾಗಿವೆ.
    ಪ್ರಕರಣ ಸಂಬಂಧ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, “ಶಿಕ್ಷಕ ಮೊಹಮ್ಮದ್​ ಸಾದಿಕ್ ​ವಿದ್ಯಾರ್ಥಿನಿಯರ ಅಂ*ಗಾಂಗಗಳನ್ನ ಮುಟ್ಟುತ್ತಿದ್ದನು. ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ಖಾಸ*ಗಿ ಅಂ*ಗಾಂಗಳ ಫೋಟೋ ತೆಗೆದುಕೊಂಡು ಬಾ ಎನ್ನುತ್ತಿದ್ದ ಎಂದು ವಿದ್ಯಾರ್ಥಿನಿಯರ ಹೇಳಿಕೆಯಿಂದ ಮೇಲ್ನೋಟಕ್ಕೆ ದೃಢಪಟ್ಟಿದೆ” ಎಂದರು.
    ಆರೋಪಿಯ ಹಿನ್ನಲೆ:
    ಶಿಕ್ಷಕ ಮೊಹಮ್ಮದ್​ ಸಾದಿಕ್ ಮೂಲತಃ ಹಾವೇರಿ ಜಿಲ್ಲೆಯ ಶಿಗ್ಗಾವಿಯವನಾಗಿದ್ದು, ಕಳೆದ ಐದು ವರ್ಷದಿಂದ ಚಿಕ್ಕೋಡಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಆರೋಪಿಯ ಮೊಬೈಲ್ ಕೂಡ ಸೀಜ್ ಮಾಡಲಾಗಿದ್ದು, ಮೊಬೈಲ್​ನಲ್ಲಿನ ಕೆಲ ಫೋಟೋಗಳು ಡಿಲೀಟ್ ಆಗಿದೆ. ಸುಮಾರು ವಿದ್ಯಾರ್ಥಿನಿಯರು ಆತನ ವಿರುದ್ಧ ಹೇಳಿಕೆ ಕೊಟ್ಟಿದ್ದಾರೆ. ಪೋಕ್ಸೊ ಕಾಯ್ದೆಯಡಿ ತನಿಖೆ ಮಾಡುತ್ತಿದ್ದೇವೆ ಮಾಡಲಾಗುತ್ತಿದೆ. ಸೇವೆಯಿಂದ ಅಮಾನತು ಮಾಡಿ ಎಂದು ಚಿಕ್ಕೋಡಿ ಡಿಡಿಪಿಐ ಬಿ.ಎ ಮೇಕನಮರಡಿ ಆದೇಶ ಹೊರಡಿಸಿದ್ದಾರೆ.

    LATEST NEWS

    ರಾಜ್ಯದ ‘KSRTC’ ಬಸ್ ಸೇರಿದಂತೆ 4 ಬಸ್‌ಗಳ ಮೇಲೆ ಕಲ್ಲು ತೂರಾಟ; ಕಿಡಿಗೇಡಿಗಳು ಪರಾರಿ

    Published

    on

    ಮಂಗಲುರು/ಹೈದ್ರಾಬಾದ್ : ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್ಟಿಸಿ ಸಂಸ್ಥೆಯ ಐರಾವತ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಸಿರುವ ಘಟನೆ ಹೈದರಾಬಾದ್ ಸಮೀಪದ ಶಂಶಾಬಾದ್ ನಲ್ಲಿ ನಡೆದಿದೆ.

    ಗುರುವಾರ (ನ.7) ರಾತ್ರಿ 11 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

    ಹೈದರಾಬಾದ್‌ನಿಂದ ಬೆಂಗಳೂರು ನಡುವೆ ಸಂಚರಿಸುವ ಸಾರಿಗೆ ಬಸ್‌ ರಾತ್ರಿ 10:45ರ ಸುಮಾರಿನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿನತ್ತ ಹೊರಟಿತ್ತು.

    ಕರ್ನಾಟಕದ ಕೆಎಸ್‌ಆರ್‌ಟಿಸಿ ಬಸ್ ಮಾತ್ರವಲ್ಲದೇ ತೆಲಂಗಾಣದ ಒಂದು ಸರ್ಕಾರಿ ಬಸ್, ಖಾಸಗಿ ಬಸ್ ಸೇರಿದಂತೆ ಒಟ್ಟು 4 ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಬಸ್ಸಿನ ಕಿಟಕಿಯ ಗಾಜುಗಳು ಮಾತ್ರ ಒಡೆದು ಹೋಗಿವೆ.

    ಈ ಪ್ರಕರಣದ ಸಂಬಂಧ ಶಂಶಾಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    BIG BOSS

    BBK 11: ಬಿಗ್‌ಬಾಸ್ ವಾರದ ಕತೆಯಲ್ಲಿ ಮೋಕ್ಷಿತಾಗೆ ಕ್ಲಾಸ್ ತಗೊಳ್ತಾರಾ ಕಿಚ್ಚ?

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11, 41ನೇ ದಿನಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ವಾರದ ಕತೆ ಕಿಚ್ಚನ ಜೊತೆ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್​ನ ಆಗಮನ ಆಗಿದೆ. ವೈಟ್​ ಅಂಡ್ ವೈಟ್​ನಲ್ಲಿ ವೇದಿಕೆಗೆ ಬಂದ ಕಿಚ್ಚ ಸುದೀಪ್ ಈ​ ಯುದ್ಧದಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ತನ್ನ ತನವನ್ನು ಕಳೆದುಕೊಂಡವರು ಯಾರು ಅಂತ ಪ್ರಶ್ನೆ ಮಾಡಿದ್ದಾರೆ.

    ಹೌದು, ಕಲರ್ಸ್​ ಕನ್ನಡದಲ್ಲಿ ರಿಲೀಸ್​ ಆದ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್​ ಅವರು ಬಿಗ್​ಬಾಸ್​ ವೇದಿಕೆಗೆ ಬಂದಿದ್ದಾರೆ. ವಿಶೇಷ ಅಧಿಕಾರಗಳನ್ನು ಗೆಲ್ಲೋ ಉದ್ದೇಶವನ್ನು ಇಟ್ಟುಕೊಂಡಿತ್ತು ಇಡೀ ಮನೆ. ಈ​ ಯುದ್ಧದಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ತನ್ನ ತನವನ್ನು ಕಳೆದುಕೊಂಡವರು ಯಾರು ಅಂತ ಇಂದಿನ ಸಂಚಿಕೆಯಲ್ಲಿ ಚರ್ಚೆಯಾಗಲಿದೆ. ಸದ್ಯ ಇದೇ ಪ್ರೋಮೋ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಇನ್ನು ಈ ವಾರ ಕಿಚ್ಚ ಮೋಕ್ಷಿತಾಗೆ ಕ್ಲಾಸ್ ತೆಗೆದುಕೊಳ್ಳುತ್ತಾರಾ ಎಂದು ಕಾದುನೋಡಬೇಕಾಗಿದೆ.

    ಸದ್ಯ ಬಿಗ್​ಬಾಸ್​ ಮನೆಯಲ್ಲಿ ಒಟ್ಟು 13 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ನಾಳಿನ ಸಂಚಿಕೆಯಲ್ಲಿ ಓರ್ವ ಸ್ಪರ್ಧಿ ಬಿಗ್​ಬಾಸ್​ ಮನೆಗೆ ಗುಡ್​ಬೈ ಹೇಳಬೇಕು. ಬಿಗ್​ಬಾಸ್​ ಮನೆಯಿಂದ ಯಾವ ಸ್ಪರ್ಧಿ ಆಚೆ ಹೋಗಲಿದ್ದಾರೆ ಅಂತ ಕಾದು ನೋಡಬೇಕಿದೆ.

    Continue Reading

    LATEST NEWS

    ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

    Published

    on

    ಮಂಗಳೂರು: ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

    ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ಹೇಳಿದ್ದಾರೆ.

    ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ ಎಂದರು.

    ಹೀಗಾಗಿ, ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.

    Continue Reading

    LATEST NEWS

    Trending