Sunday, November 27, 2022

ಶಾಲೆಯಲ್ಲಿ ಟೀಚರ್ ಫುಲ್ ಟೈಟು: ಟೇಬಲ್ ಡ್ರಾಯರ್ ಒಳಗೂ ಕ್ವಾಟ್ರು ಬಾಟ್ಲಿ..!

ತುಮಕೂರು: ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮುಕೂರಿನಲ್ಲಿ ನಡೆದಿದೆ.

ಗಂಗಲಕ್ಷ್ಮಮ್ಮ ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿ.

ತುಮುಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿಯೊಬ್ಬರು ಶಾಲೆಯಲ್ಲೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿ ಬಿದ್ದಿದ್ದಾರೆ.

ಕಳೆದ 25 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗಂಗಲಕ್ಷ್ಮಮ್ಮ 5 ವರ್ಷಗಳಿಂದ ಮದ್ಯ ವ್ಯಸನದ ಚಟ ಬೆಳೆಸಿಕೊಂಡಿದ್ದರು.

ಮದ್ಯ ಸೇವಿಸಿ ತರಗತಿಯಲ್ಲಿ ಪಾಠ ಮಾಡುತ್ತಿದ್ದರು. ಇಂತಹ ಸಮಯದಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗ್ರಾಮಸ್ಥರೊಂದಿಗೆ ಶಾಲೆಗೆ ಆಗಮಿಸಿದ ವೇಳೆ ಗಂಗಲಕ್ಷ್ಮಮ್ಮ ಅಧಿಕಾರಿಗಳು ಮತ್ತು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಶಿಕ್ಷಕಿಯ ಟೇಬಲ್‌ನ ಡ್ರಾಯರ್‌ನಲ್ಲಿ ಪರಿಶೀಲಿಸಿದಾಗ ಮದ್ಯದ ಬಾಟಲಿಗಳು ಪತ್ತೆಯಾಗಿದೆ. ಈ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆಂದು ತಿಳಿದು ಬಂದಿದೆ

LEAVE A REPLY

Please enter your comment!
Please enter your name here

Hot Topics

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...