Wednesday, October 5, 2022

ಬಾಲಕಿಗೆ ಲವ್ ಲೆಟರ್ ಕೊಟ್ಟ ಆರನೇ ತರಗತಿ ವಿದ್ಯಾರ್ಥಿ- ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕಿ..!

ಕಾರವಾರ : ಪುಟ್ಟ ಬಾಲಕಿಗೆ ಲವ್ ಲೆಟರ್ ಬರೆದು ಪ್ರೇಮ ನಿವೇದನೆ ಮಾಡಿದ ಆರನೇ ತರಗತಿಯ ವಿದ್ಯಾರ್ಥಿಯನ್ನು ಬಾಸುಂಡೆಗಳು ಬರುವಾಗೆ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ.

ಇಲ್ಲಿನ ಪ್ರಾಥಮಿಕ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯ ಕಿರಿಯ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದಾನೆ.

ಕೂಡಲೇ ವಿದ್ಯಾರ್ಥಿನಿ ಶಾಲೆಯ ಶಿಕ್ಷಕಿಗೆ ಈ ಘಟನೆ ವಿವರಿಸಿದ್ದಾಳೆ. ಲವ್ ಲೆಟರ್ ನೋಡಿ ಸಿಟ್ಟಾದ ಶಿಕ್ಷಕಿ, ವಿದ್ಯಾರ್ಥಿಯನ್ನು ಕರೆಯಿಸಿ ಕೋಪದಿಂದ ಬೆನ್ನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎನ್ನಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿಯ ಹೊಡೆತಕ್ಕೆ ಬಾಲಕನ ಬೆನ್ನುಗಳಲ್ಲಿ ಬಾಸುಂಡೆ ಎದ್ದಿದೆ.

ಬಾಲಕ ಮನೆಗೆ ತೆರಳಿದಾಗ ಷೋಷಕರು ನೋಡಿದ್ದು, ಬೆನ್ನು ಕೆಂಪಾಗಿತ್ತು. ತಕ್ಷಣ ಪೋಷಕರು ಶಿಕ್ಷಕಿಯನ್ನು ತರಾಟೆ ತೆಗೆದುಕೊಂಡಿದ್ದಾಳೆ. ವಿಷಯದ ಕುರಿತು ಶಿಕ್ಷಕಿ ಪೋಷಕರಲ್ಲಿ ಕ್ಷಮೆ ಕೇಳಿದ್ದು, ಪ್ರಕರಣ ಇತ್ಯರ್ಥಗೊಂಡಿದೆ.

LEAVE A REPLY

Please enter your comment!
Please enter your name here

Hot Topics

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...