Tuesday, October 19, 2021

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ ಪ್ರೀತಿ ಪಾತ್ರದವರಿಗೆ ಗುಡ್​ಬೈ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.


ವಿಡಿಯೋದಲ್ಲಿ ಕಾರನ್ನು ರಸ್ತೆ ಪಕ್ಕದಲ್ಲಿ ಪಾರ್ಕ್​ ಮಾಡಿ ಒಳಗಡೆ ಕುಳಿತು ಕಣ್ಣೀರಿಡುತ್ತಾ ತಮ್ಮ ಪ್ರೀತಿ ಪಾತ್ರದವರಿಗೆ ಕೊನೆಯ ಸಾಲುಗಳನ್ನು ಹೇಳುತ್ತಿರುವ ದೃಶ್ಯವಿದೆ.

ಆರ್ಥಿಕ ಸಂಕಷ್ಟದಿಂದ ದಂಪತಿ ಈ ಆತುರದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಮೃತರನ್ನು ಕಾರ್ನತಿ ಸುಬ್ರಮಣ್ಯಂ (33) ಪತ್ನಿ ರೋಹಿಣಿ (27) ಎಂದು ಗುರುತಿಸಲಾಗಿದೆ.

ಕಳೆದ ನಾಲ್ಕು ವರ್ಷಗಳಿಂದ ಕೋಯ್ಲಕುಂಟ್ಲದಲ್ಲಿ ಖಾಸಗಿ ಇಂಗ್ಲಿಷ್​ ಮಾಧ್ಯಮ ಶಾಲೆಯನ್ನು ತೆರೆದಿದ್ದರು. ಆದರೆ, ಕರೊನಾ ಕಾರಣದಿಂದಾಗಿ ಮಕ್ಕಳ ಪಾಲಕರು ಶಾಲಾ ಶುಲ್ಕವನ್ನು ಕಟ್ಟಲು ಆಗಲಿಲ್ಲ.

ಇತ್ತ ಶಾಲೆ ಆರಂಭಿಸಲು ಮಾಡಿದ್ದ ಸಾಲದ ಬಡ್ಡಿ ಮತ್ತು ಇಎಂಐ ಕಟ್ಟುವುದೇ ದಂಪತಿಗೆ ಚಿಂತೆಯಾಗಿತ್ತು.

ಪೊಲೀಸ್​ ಮೂಲಗಳ ಪ್ರಕಾರ ದಂಪತಿ ಶಾಲೆಯ ಮೂಲಸೌಕರ್ಯ ಹೆಚ್ಚಿಸಲು ಸುಮಾರು 1.5 ರಿಂದ 2 ಕೋಟಿ ರೂಪಾಯಿ ಸಾಲ ಪಡೆದಿದ್ದರು ಎಂದು ಅವರ ಆಪ್ತರು  ತಿಳಿಸಿದ್ದಾರೆ.
ದಂಪತಿ ಮಾರ್ಗ ಮಧ್ಯೆ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಕಾರು ನಿಲ್ಲಿಸಿ ಕೊನೆಯ ಸಂದೇಶದ ವಿಡಿಯೋ ರೆಕಾರ್ಡ್​ ಮಾಡಿ ದಂಪತಿ ಕಣ್ಣೀರಿಡುತ್ತಲೇ ಬದುಕಿಗೆ ವಿದಾಯ ಹೇಳಿದ್ದಾರೆ.

ವಿಡಿಯೋ ನೋಡಿದ ಕುಟುಂಬಸ್ಥರು ಅವರನ್ನು ಹುಡುಕಿಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದಾದರೂ ಇಬ್ಬರು ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...