Sunday, November 27, 2022

ಕುಂದಾಪುರ: ರಸ್ತೆಯಲ್ಲಿ ಬಿದ್ದಿದ್ದ ಬ್ಯಾಗ್‌ಗಳನ್ನು ವಾರಸುದಾರರಿಗೆ ತಲುಪಿಸಿದ ಶಿಕ್ಷಕ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿದ್ದ ಎರಡು ಬ್ಯಾಗುಗಳನ್ನು ಶಾಲಾ ಶಿಕ್ಷಕನೋರ್ವ ಅದರ ವಾರಸುದಾರರಿಗೆ ಮುಟ್ಟಿಸಿದ ಘಟನೆ ಕುಂದಾಪುರದ ನಾಗೂರಿನಲ್ಲಿ ನಡೆದಿದೆ.


ಬೈಂದೂರು ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಶನಿವಾರ ಎಂದಿನಂತೆ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಮುಗಿಸಿ ತಮ್ಮ ಮನೆಯತ್ತ ಹೋಗುತ್ತಿರುವ ಸಂದರ್ಭದಲ್ಲಿ ನಾಗೂರಿನ ಶ್ರೀ ಆಂಜನೇಯ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಪಕ್ಕದಲ್ಲಿ ಬಿದ್ದಿರುವ ಎರಡು ದೊಡ್ಡಗಾತ್ರದ ಬ್ಯಾಗಗಳು ಬಿದ್ದಿರುವುದು ಕಂಡು ತಕ್ಷಣ ಬೈಂದೂರಿನ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.


ಇನ್ನು ಬ್ಯಾಗ್‌ನ ವಾರಸುದಾರರಾದ ಕೇರಳ ಮೂಲದ ಮುಹಮ್ಮದ್ ಸಿ ಕೆ ಇವರು ಗೋವಾದಿಂದ ವಾಪಸ್ ಕೇರಳಕ್ಕೆ ಹೋಗುವಾಗ ಬ್ಯಾಗ್ ಕಳೆದುಕೊಂಡಿದ್ದರು.

ಸೂಕ್ತ ದಾಖಲೆಗಳು ಬ್ಯಾಗಿನಲ್ಲಿ ಇದ್ದುದರಿಂದ ಪೊಲೀಸರು ಅವರಿಗೆ ಮಾಹಿತಿ ನೀಡಿದ್ದಾರೆ. ತಮ್ಮ ಅಜಾಗರೂಕತೆಯಿಂದ ಕಾರಿನಿಂದ ಬಿದ್ದು ಕಳೆದುಹೋದ ಎರಡು ಬ್ಯಾಗ್‌ನ್ನು ಬೈಂದೂರು ಠಾಣೆಗೆ ಬಂದು ತೆಗೆದುಕೊಂಡಿದ್ದಾರೆ.

ಬ್ಯಾಗನ್ನು ತಲುಪಿಸಿದ ಶುಭದಾ ಶಾಲೆಯ ಮುಖ್ಯಶಿಕ್ಷಕರ ಪ್ರಾಮಾಣಿಕತೆಯನ್ನು ಪ್ರಶಂಸಿಸಿ ಧನ್ಯವಾದಗಳನ್ನು ತಿಳಿಸಿದ್ದಾರೆ.

ಶಿಕ್ಷಕರ ಈ ಮಾನವೀಯತೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...