Sunday, November 27, 2022

ಮಂಗಳೂರು: ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಖ್ಯಾತ ಇ.ಎನ್.ಟಿ ಶಸ್ತ್ರ ಚಿಕಿತ್ಸಕ ಡಾ.ಕಿಶೋರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದ್ರು ಜೊತೆಗೆ ಎಕ್ಸ್ ಪರ್ಟ್ ನ ನೂತನ ಸಭಾಂಗಣ ‘ಎಕ್ಸ್ಪೋಡಿಯಂ’ ಅನ್ನು ಲೋಕಾರ್ಪಣೆಗೊಳಿಸಿದ್ರು.

ಬಳಿಕ ಮಾತನಾಡಿದ ಅವರು “ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು, ಸಮರ್ಪಣಾ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ನಮ್ಮ ಕನಸು ಯಾವಾಗಲೂ ದೊಡ್ಡದಾಗಿರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್‌, “ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮುಖ್ಯ. ನಮ್ಮ ಬದುಕಿನಲ್ಲಿ ಬಂದ ಪ್ರತಿಯೊಂದು ಶಿಕ್ಷಕರನ್ನು ಸ್ಮರಿಸಬೇಕಾದದ್ದು ನಮ್ಮ ಆದ್ಯ ಕರ್ತವ್ಯ.

ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದುಡಿದರೆ ಯಶಸ್ಸು ಖಂಡಿತ ಸಾಧ್ಯ ಎಂದರು.ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾ ಪ್ರಭಾ ಎನ್. ನಾಯಕ್‌ ಮಾತನಾಡಿ, “ಯಾವುದೇ ನಿರೀಕ್ಷೆಯಿಲ್ಲದೆ ಕಲಿಸುವವರು ಶಿಕ್ಷಕರು. ಆದರೆ ಸಮಾಜದಲ್ಲಿ ಶಿಕ್ಷಕರು ನಿರ್ಲಕ್ಷಕ್ಕೆ ಒಳಗಾಗಿದ್ದಾರೆ.

ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಬಾಂಧವ್ಯ ಉತ್ತಮವಾಗಿರಬೇಕು.ಶಿಕ್ಷಕರಿಲ್ಲದೆ ನಾವು ಉತ್ತಮ ಮನುಷ್ಯ ಮತ್ತು ನಾಗರಿಕರಾಗಲು ಖಂಡಿತ ಸಾಧ್ಯವಿಲ್ಲ ಎಂದರು. ಕಾರ್ಯಕ್ರಮದಲ್ಲಿ ಡಾ.ಕಿಶೋರ್ ಶೆಟ್ಟಿಯವರ ಜೀವಮಾನದ ಸಾಧನೆ ಮಾತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಾಗಿ ಅವರನ್ನು ಈ ವೇಳೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಉಸ್ತಾದ್ ರಫೀಕ್‌ಖಾನ್, ಮಾಹಿತಿ-ತಂತ್ರಜ್ಞಾನ ವಿಭಾಗದ ನಿರ್ದೇಶಕರಾದ ಅಂಕುಶ್ ಎನ್.ನಾಯಕ್, ಪ್ರಾಂಶುಪಾಲರಾದ ಪ್ರೊ.ರಾಮಚಂದ್ರಭಟ್, ವಾಸ್ತುಶಿಲ್ಪ ತಜ್ಞೆಯಾದ ದೀಪಿಕಾ ಎ. ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...