Connect with us

DAKSHINA KANNADA

ಪುತ್ತೂರು: ಜೋಪಡಿಯಲ್ಲಿದ್ದ ಪ್ರತಿಭಾವಂತ ದಲಿತ ವಿದ್ಯಾರ್ಥಿನಿಯ ಮನೆ ಬೆಳಗಿದ ಶಿಕ್ಷಕರು

Published

on

ಪುತ್ತೂರು: ವಿದ್ಯಾರ್ಥಿಯ ಬೌಧಿಕ ಮಟ್ಟವನ್ನೇನೋ ಶಿಕ್ಷಕ, ಶಿಕ್ಷಣ ಇಲಾಖೆ ಬೆಳೆಸುತ್ತೆ.

ಆದರೆ ಆ ವಿದ್ಯಾರ್ಥಿಯ ಮನೆಯನ್ನು ಹೇಗೆ ಬೆಳೆಸುತ್ತದೆ ಎನ್ನುವ ಪ್ರಶ್ನೆಗೆ ಉತ್ತರವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇದೀಗ ದೊರೆತಿದೆ.

ಹೌದು ಪ್ರತಿಭಾವಂತ ಬಡ ವಿದ್ಯಾರ್ಥಿನಿಯೋರ್ವಳ ಮನೆಗೆ ಭೇಟಿ ನೀಡಿದ ಶಿಕ್ಷಣ ಇಲಾಖೆ ಅಧಿಕಾರಿ ಹಾಗೂ ಶಿಕ್ಷಕರ ತಂಡ ಯಾವ ರೀತಿ ಆ ಬಡ ವಿದ್ಯಾರ್ಥಿನಿಯ ಮನೆಯನ್ನು ಬೆಳಗಿತು ಅನ್ನೋದನ್ನ ಹೇಳ್ತೀವಿ, ನೋಡಿ.


ಇದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆಯ ವ್ಯಾಪ್ತಿಗೆ ಬರುವ ಪೆರ್ವತ್ತೋಡಿಯ ಸುನಂದಾ ಎನ್ನುವ ದಲಿತ ವಿಧವೆಯ ನಿರ್ಮಾಣ ಹಂತದಲ್ಲಿರುವ ಮನೆಯ ಕಥೆ.

ಜೋಪಡಿ ಹಾಕಿಕೊಂಡು ಜೀವನ ಸಾಗಿಸುತ್ತಿದ್ದ ಈ ವಿಧವೆ ಹಾಗೂ ಈಕೆಯ ಎರಡು ಹೆಣ್ಣು ಮಕ್ಕಳ ಮನೆಯ ಸ್ಥಿತಿಯನ್ನು ಕಂಡು ಮರುಗಿದವರೇ ಹೆಚ್ಚು.

ಕಳೆದ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸಲು ಸಿದ್ಧಳಾಗಿದ್ದ ಸುನಂದಾ

ಅವರ ಎರಡನೇ ಮಗಳಾದ ಅನಿತಾ ಮನೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತೆಯನ್ನು ಪರಿಶೀಲಿಸಲೆಂದು ಪುತ್ತೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಹಾಗೂ ಪುತ್ತೂರಿನ ಕೊಂಬೆಟ್ಟು ಶಾಲೆಯ ಶಿಕ್ಷಕಿಯಾದ ಗೀತಾಮಣಿ ತಂಡ ಭೇಟಿ ನೀಡಿತ್ತು.

ಭೇಟಿಯ ಸಂದರ್ಭದಲ್ಲಿ ಸುನಂದಾ ಹಾಗೂ ಆಕೆಯ ಮಕ್ಕಳು ಅನುಭವಿಸುತ್ತಿರುವ ಕಷ್ಟ, ಮಕ್ಕಳ ಓದಿಗಾಗಿ ಸುನಂದಾ ಅವರ ಪರದಾಟ ಕಂಡ ಶಿಕ್ಷಣಾಧಿಕಾರಿ ಹಾಗೂ ಶಿಕ್ಷಕರು ಅಂದೇ ಒಂದು ನಿರ್ಧಾರಕ್ಕೆ ಬಂದಿತ್ತು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್

ಎಸ್.ಎಸ್.ಎಲ್.ಸಿ ಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿರುವ ಕಿರಿಮಗಳು ಅನಿತಾ ಇದೀಗ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಮೊದಲ ವರ್ಷದಲ್ಲಿ ಕಲಿಯುತ್ತಿದ್ದಾಳೆ.

ಸುನಂದಾ ತನ್ನ ಮಕ್ಕಳಿಗೆ ಈ ರೀತಿಯ ಬಡತನದಲ್ಲೂ ಶಿಕ್ಷಣ ನೀಡಿರುವ ವಿಚಾರವನ್ನು ಕಣ್ಣಾರೆ ಕಂಡ ಶಿಕ್ಷಣಾಧಿಕಾರಿ ಮತ್ತು ಕೊಂಬೆಟ್ಟು ಶಾಲೆಯ ಶಿಕ್ಷಕಿ ಗೀತಾಮಣಿ ಹಕ್ಕುಪತ್ರವಿಲ್ಲದ ಜಮೀನಿಗೆ ಹಕ್ಕುಪತ್ರವನ್ನು ಒದಗಿಸುವ ಕೆಲಸವನ್ನು ಮಾಡಿದ್ದಾರೆ.

ಆ ಬಳಿಕ ಹಳೆ ವಿದ್ಯಾರ್ಥಿಗಳು, ರೋಟರಿ ಕ್ಲಬ್ ಸಹಾಯದೊಂದಿಗೆ ಇದೀಗ ಸುನಂದಾ ಕುಟುಂಬಕ್ಕೆ ಹೊಸ ಮನೆಯನ್ನೂ ನಿರ್ಮಿಸುತ್ತಿದ್ದು, ಮುಂದಿನ ತಿಂಗಳು ಈ ಮನೆಯ ಗೃಹಪ್ರವೇಶವೂ ನಡೆಯಲಿದೆ.

ಶಿಕ್ಷಕಿ ಗೀತಾಮಣಿ

ಸುನಂದಾ ಪತಿ ಪ್ರತಿದಿನವೂ ಕುಡಿದು ಗಲಾಟೆ ಮಾಡುತ್ತಿದ್ದು, ಮನೆಯ ಹಾಗು ಮಕ್ಕಳ ಎಲ್ಲಾ ಜವಾಬ್ದಾರಿಯೂ ಸುನಂದಾ ಮೇಲಿತ್ತು. ಈ ನಡುವೆ ವರ್ಷದ ಹಿಂದೆ ಪತಿ ಕೂಡಾ ಕುಡಿದೂ ಕುಡಿದು ಸಾವನ್ನಪ್ಪಿದ ಬಳಿಕ ಇಬ್ಬರು ಹೆಣ್ಣು ಮಕ್ಕಳ ಜೊತೆ ಸುನಂದಾ ಭದ್ರತೆಯಿಲ್ಲದ ಜೋಪಡಿಯಲ್ಲಿ ವಾಸಿಸುವ ಸ್ಥಿತಿಯಿತ್ತು.

ಈ ಸಂದರ್ಭದಲ್ಲಿ ಆಕೆಗೆ ಸಹಾಯ ಮಾಡುವುದಾಗಿ ಹಲವರು ಭರವಸೆಗಳನ್ನೇನೋ ನೀಡಿದ್ದರೂ, ಭರವಸೆ ಮಾತ್ರ ಭರವಸೆಯಾಗಿಯೇ ಉಳಿದಿತ್ತು.

ಈ ನಡುವೆ ವಿದ್ಯಾರ್ಥಿನಿಯ ಶಿಕ್ಷಣದ ತಯಾರಿಯನ್ನು ವೀಕ್ಷಿಸಲು ಬಂದ ಶಿಕ್ಷಣ ಅಧಿಕಾರಿ ಮತ್ತು ಶಿಕ್ಷಕರ ತಂಡ ಸುನಂದಾರ ಸಂಕಷ್ಟಕ್ಕೆ ಸ್ಪಂದಿಸಿದೆ.

ಸುನಂದಾರ ಮಕ್ಕಳ ಶಿಕ್ಷಣದ ಇಂಗಿತದ ಜೊತೆಗೆ ಭವಿಷ್ಯದ ದಾರಿಯನ್ನೂ ಸುಭದ್ರಗೊಳಿಸಿದೆ. ನೀಡಿದ ಭರವಸೆಯನ್ನು ಒಂದೊಂದಾಗಿ ನೆರವೇರಿಸಿರುವ ಶಿಕ್ಷಣಾಧಿಕಾರಿ ಹಾಗು ಶಿಕ್ಷಕರ ಈ ಸ್ಪಂದನೆ ಹಾಗೂ ರೋಟರಿ ಕ್ಲಬ್ ಪದಾಧಿಕಾರಿಗಳ ನೆರವಿಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಗಿದೆ.

DAKSHINA KANNADA

ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!

Published

on

ಮಂಗಳೂರು : ಆಕೆ ಆರೋಗ್ಯವಾಗಿದ್ದು, ಇನ್ನೊಬ್ಬರ ಆರೋಗ್ಯ ವಿಚಾರಿಸುವ ವೈದ್ಯೆಯಾಗಿದ್ದವರು. ದಂತ ವೈದ್ಯಕೀಯ ಪದವಿ ಮುಗಿಸಿ ಇನ್ನೇನು ಕೆಲಸಕ್ಕೆ ಸೇರಬೇಕು ಅಂತ ಒಂದು ಕ್ಲಿನಿಕ್‌ಗೆ ಜಾಯಿನ್ ಆಗಿದ್ದಾರೆ. ಆದ್ರೆ ದುರಾದೃಷ್ಟ ಅಂದ್ರೆ ಕೆಲಸಕ್ಕೆ ಜಾಯಿನ್ ಆಗುವ ದಿನವೇ ಆಕೆ ಇಹಲೋಕ ತ್ಯಜಿಸಿದ್ದಾರೆ. ಉಳ್ಳಾಲ ತಾಲೂಕಿನ ನರಿಂಘಾನ ಗ್ರಾಮದ ಆಳ್ವರಬೆಟ್ಟು ನಿವಾಸಿ 24 ವರ್ಷದ ಸ್ವಾತಿ ಶೆಟ್ಟಿ ಇಹಲೋಕ ತ್ಯಜಿಸಿದ ವೈದ್ಯೆಯಾಗಿದ್ದಾರೆ. ಉಳ್ಳಾಲ ತಾಲೂಕಿನ ನರಿಂಗಾನ‌ ಗ್ರಾಮದ ಆಳ್ವರಬೆಟ್ಟು ನಿವಾಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ, ಶಾಂತಿಪಳಿಕೆ ಶ್ರೀ ಮಹಾಮ್ಮಾಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು ಹಾಗೂ ಜ್ಯೋತಿ ಶೆಟ್ಟಿ ದಂಪತಿ ಪುತ್ರಿ ಇವರು.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಮುಗಿಸಿ ಮಂಗಳವಾರದಿಂದ(16-04-2024) ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ಕೆಲಸಕ್ಕೆ ಜಾಯಿನ್ ಆಗುವವರಿದ್ದರು. ಹೀಗಾಗಿ ಸೋಮವಾರ (15-04-2024) ಸಂಜೆ ಪಾಂಡೇಶ್ವರದ ಪಿಜಿ ಬಂದು ಜಾಯಿನ್ ಆಗಿದ್ದರು. ಮರುದಿನ ಹೊಸ ಕೆಲಸಕ್ಕೆ ಹೋಗುವ ಕಾರಣ ಸಾಕಷ್ಟು ಎಕ್ಸೈಟ್ ಆಗಿದ್ದ ಸ್ವಾತಿ ತಂದೆ ತಾಯಿ ಜೊತೆ ಫೋನ್ ಮೂಲಕ ಮಾತನಾಡಿದ್ದರು. ಈ ವೇಳೆ ವಿಪರೀತ ತಲೆನೋವು ಕಾಣಿಸಿಕೊಂಡ ಕಾರಣ ಬೇಗನೆ ಮಲಗುವುದಾಗಿ ಹೇಳಿ ಸ್ವಾತಿ ನಿದ್ರೆಗೆ ಜಾರಿದ್ದರು. ಈ ವೇಳೆ ರೂಮ್ ಮೇಟ್ ಕೂಡಾ ಜೊತೆಯಲ್ಲಿ ಇದ್ದರಾದ್ರೂ ತಲೆನೋವಿನ ಕಾರಣ ತೊಂದರೆ ಕೊಡದೆ ಅವರೂ ಕೂಡಾ ಮಲಗಿದ್ದರು. ಮುಂಜಾನೆ ಸ್ವಾತಿ ಎದ್ದಿಲ್ಲ ಅನ್ನೋ ಕಾರಣಕ್ಕೆ ಅವರನ್ನು ಅಲುಗಾಡಿಸಲು ಹೋದಾಗ ಮೈ ತಣ್ಣಗಾಗಿರುವುದು ಗೊತ್ತಾಗಿದೆ.  ತಕ್ಷಣ ಅಂಬ್ಯುಲೆನ್ಸ್ ಮೂಲಕ ನಗರದ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಅಷ್ಟರಲ್ಲಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ವಾತಿ ಅವರಿಗೆ ಅಪರೂಪಕ್ಕೆ ತಲೆ ನೋವು ಕಾಣಿಸಿಕೊಳ್ಳುತ್ತಿತ್ತು. ಆದ್ರೆ ಅವರ ಈ ಧಿಡೀರ್ ಸಾವಿಗೆ ಕಾರಣ ಏನು ಅನ್ನೋದು ಇನ್ನಷ್ಟೇ ಗೊತ್ತಾಗಬೇಕಾಗಿದೆ.

 

 

Continue Reading

DAKSHINA KANNADA

ದೇಶದಲ್ಲಿ ಮೊದಲ ಬಾರಿಗೆ QR ಕೋಡ್ ವೋಟರ್ ಸ್ಲಿಪ್

Published

on

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿ ಮತದಾರರಿಗೆ ಕ್ಯೂ ಆರ್‌ ಕೋಡ್‌ ಹೊಂದಿರುವ ವೋಟರ್‌ ಸ್ಲಿಪ್‌ ನೀಡಲಾಗುವುದು.

ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ ವೋಟರ್‌ ಸ್ಲಿಪ್‌ ಗಳಲ್ಲಿ ಮತಗಟ್ಟೆಯ ಕ್ಯೂ ಆರ್‌ ಕೋಡ್‌ ಮುದ್ರಿಸಲಾಗಿದೆ.

ನಗರದ ನಿವಾಸಿಗಳು ಕ್ಯೂ ಆರ್‌ ಕೋಡ್‌ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನೋಂದಾಯಿತ ಎಲ್ಲಾ ಮತದಾರರಿಗೆ ಒದಗಿಸಲಾಗುವುದು.

Continue Reading

DAKSHINA KANNADA

ಒಂದು ತಿಂಗಳಿನಿಂದ ಮೊಬೈಲ್‌ ಫೋನ್‌ ಸಂಪರ್ಕವಿಲ್ಲದೆ ಪರದಾಡುತ್ತಿದ್ದಾರೆ ಈ ಜನರು..!!

Published

on

ಉಡುಪಿ: ಜಿಲ್ಲೆಯ ಕಟಪಾಡಿ ಪೇಟೆ ಸುತ್ತಮುತ್ತಲಿನ ಒಂದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಕಳೆದ ಒಂದು  ತಿಂಗಳಿನಿಂದ ಮೊಬೈಲ್ ನೆಟ್ವರ್ಕ್ ಸಂಪೂರ್ಣ ಸ್ಥಗಿತವಾಗಿದ್ದು, ಖಾಸಗಿ ಕಂಪೆನಿಗಳ ಮೊಬೈಲ್ ಫೋನ್ ಮತ್ತು ಇಂಟರ್‌ನೆಟ್ ಬಳಕೆದಾರರು ತೀವ್ರ ಅಡಚಣೆ ಅನುಭವಿಸುತ್ತಿದ್ದಾರೆ.

katapadi

ಮೊಬೈಲ್ ಕಂಪೆನಿ ಹಾಗೂ ಟವರ್ ಅಳವಡಿಸಲಾಗಿರುವ ಜಾಗದ ಮಾಲೀಕರ ನಡುವಿನ ಒಪ್ಪಂದ ಮುಗಿದ ಹಿನ್ನೆಲೆಯಲ್ಲಿ ಏರ್‌ಟೆಲ್, ವಿಐ ಮತ್ತು ಜಿಯೋ ಬಳಕೆದಾರರಿಗೆ ನೆಟ್ ವರ್ಕ್ ಸಿಗದಂತಾಗಿದೆ. ಫೋನ್ ಕರೆ ಮಾಡಲು, ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ, ಆನ್‌ಲೈನ್ ಹಣಕಾಸಿನ ವ್ಯವಹಾರ, ವರ್ಕ್ ಫ್ರಮ್ ಹೋಮ್, ಕಚೇರಿಯ ದೈನಂದಿನ ಕೆಲಸ ನಿರ್ವಹಿಸಲು ಕಷ್ಟಪಡುತ್ತಿದ್ದು, ಜನರ ಗೋಳು ಕೇಳುವವರೇ ಇಲ್ಲವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಮೊಬೈಲ್ ಸೇವೆ ಒದಗಿಸುವ ಕಂಪೆನಿಗಳು ಟವರ್ ಲಭ್ಯವಿಲ್ಲದೆ ನಾವೇನೂ ಮಾಡಲಾಗುತ್ತಿಲ್ಲ. ಸಮೀಪದಲ್ಲಿ ಪರ್ಯಾಯ ಜಾಗವೂ ಸಿಗುತ್ತಿಲ್ಲ ಎಂದು ಹೇಳುತ್ತಿವೆ. ಏರ್‌ಟೆಲ್ ಸಂಸ್ಥೆಯ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ‘ಪರ್ಯಾಯ ಟವರ್‌ಗೆ ವ್ಯವಸ್ಥೆಯಾಗದೆ ಏನೂ ಮಾಡುವಂತಿಲ್ಲ, ಪರ್ಯಾಯ ಜಾಗದ ವ್ಯವಸ್ಥೆ ಆದಲ್ಲಿ ಟವರ್ ನಿರ್ಮಾಣ ಮಾಡುತ್ತೇವೆ’ ಎಂದು ಹೇಳುತ್ತಿದ್ದಾರೆ.

READ MORE..; ಅರ್ಚಕರಿಂದಲೇ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ..!! ವಿಡಿಯೋ ವೈರಲ್

ನೆಟ್ ವರ್ಕ್ ಸಿಗದೆ ಹೈರಾಣಾಗಿರುವ ಸ್ಥಳೀಯರು ಮೊಬೈಲ್ ಸೇವೆ ಕಲ್ಪಿಸುವ ಸಂಸ್ಥೆಗಳ ವಿರುದ್ಧ – ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಜನರಲ್ಲಿ ಕಂಪೆನಿ ವಿರುದ್ದ ಆಕ್ರೋಶ ಹೆಚ್ಚುತ್ತಿದೆ. ಜಾಗದ ಮಾಲೀಕರು ಮತ್ತು ನೆಟ್ವರ್ಕ್ ಸಂಸ್ಥೆಗಳು ಪರಸ್ಪರ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳ ಬೇಕು ಎಂದು ಒತ್ತಾಯಿಸು ತ್ತಿರುವ ಸ್ಥಳೀಯರು ಸಂಘಟಿತ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

 

Continue Reading

LATEST NEWS

Trending