Connect with us

    DAKSHINA KANNADA

    ಏರುತ್ತಿರುವ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿದ ‘ಮಾಸ್ಟರ್’ ಮೈಂಡ್

    Published

    on

    ಮಂಗಳೂರು: ರಾಜ್ಯದಲ್ಲಿ ಒಂದು ಕಡೆ ಕೊರೋನಾ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂನಂತಹ ಕ್ರಮಗಳನ್ನು ಸರ್ಕಾರ ಜಾರಿಗೆ ತಂದಿದೆ. ಇದರಿಂದ ಜನರು ಮೊದಲೇ ಕಂಗೆಟ್ಟು ಹೋಗಿದ್ದಾರೆ. ಇನ್ನೊಂದು ಕಡೆ ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ದಿಕ್ಕೆಟ್ಟು ಹೋಗಿದ್ದಾರೆ.

    ಅದರಲ್ಲೂ ತಿಂಗಳ ಸಂಬಳ ನಂಬಿಕೊಂಡು ಜೀವನ ನಿರ್ವಹಣೆ ಮಾಡುವ ಶಿಕ್ಷಕರ ಪಾಡನ್ನಂತೂ ಹೇಳತೀರದು. ದಿನನಿತ್ಯ ಬಸ್ಸಿನಲ್ಲಿ ಓಡಾಡುವ ಸಮಸ್ಯೆಯ ಜೊತೆಗೆ ಕಾರು ಹಿಡಿದು ದುಬಾರಿ ಖರ್ಚು ಮಾಡಿ ಹೋಗುವುದು ಕಷ್ಟ ಸಾಧ್ಯ ಕೂಡಾ. ಸಮಸ್ಯೆಗಳು ಇದ್ದ ಮೇಲೆ ಪರಿಹಾರವಿಲ್ಲದೆ ಇರುತ್ತದೆಯೇ? ಖಂಡಿತಾ ಇಲ್ಲ.

    ಇದೇ ಕಾರಣಕ್ಕೆ ಮಂಗಳೂರಿನ ಸುರತ್ಕಲ್‌ ಎಂಆರ್‌ಪಿಎಲ್‌ನ ಡೆಲ್ಲಿ ಪಬ್ಲಿಕ್ ಸ್ಕೂಲ್‌ನ ಶಿಕ್ಷಕರು ದಿನನಿತ್ಯ ಶಾಲೆಗೆ ಹೋಗಲು ಒಂದು ವಿಶೇಷ ಯೋಚನೆಯನ್ನು ಯೋಜನೆಯ ಮೂಲಕ ಸಾಕಾರಗೊಳಿಸಿದ್ದಾರೆ.

    ಅಷ್ಟೇ ಅಲ್ಲದೆ ಕಡಿಮೆ ಖರ್ಚಿನಲ್ಲಿ ಹೊಸ ಉಪಾಯ ಕಂಡುಕೊಂಡಿದ್ದಾರೆ.

    ಇವರು ತಮ್ಮದೇ ಆದ ವಿಶೇಷ ವ್ಯಾನ್‌ ವ್ಯವಸ್ಥೆ ಮಾಡಿದ್ದು, ಎಲ್ಲರೂ ಒಟ್ಟಾಗಿ ಅದರಲ್ಲಿ ಹೋಗುತ್ತಿದ್ದಾರೆ. ಅರ್ಧ ಗಂಟೆಗೆ ಶಾಲೆಗೆ ಹೋಗುವ ಪಯಣ ತುಂಬಾ ಖುಷಿಯಾಗಿದೆ ಎನ್ನುತ್ತಾರೆ ಅವರು.

    ಕೋವಿಡ್‌ನ ಸಂದರ್ಭದಲ್ಲಿ ಏಳೆಂಟು ತಿಂಗಳ ಹಿಂದೆ ಈ ಯೋಜನೆ ರೂಪು ಪಡೆದಿತ್ತು. ಸುಮಾ ಮತ್ತು ಶ್ಯಾಮಲಾ ಟೀಚರ್ ಈ ಯೋಜನೆಯ ಮಾಸ್ಟರ್ ಮೈಂಡ್.

    ಈ ವ್ಯವಸ್ಥೆ ಮಾಡಿದ ಬಳಿಕ ನಮಗೆ ತುಂಬಾ ಅನುಕೂಲವಾಗಿದೆ ಎನ್ನುತ್ತಾರವರು. ಹಲವು ಮಂದಿ ಶಿಕ್ಷಕರು ದಿನನಿತ್ಯ ಈ ಮಿನಿ ಬಸ್ಸಿನಲ್ಲಿ ಶಾಲೆಗೆ ಹೋಗುತ್ತಾರೆ.

    ಬೆಳಿಗ್ಗೆ ಕರೆದುಕೊಂಡು ಹೋಗುವುದು ಹಾಗೂ ಮರಳಿ ಕರೆ ತರುವ ಕೆಲಸವನ್ನು ಕೂಡಾ ಅಷ್ಟೊಂದು ಪ್ರೀತಿಯಿಂದ ಚಾಲಕ ನಿರ್ವಹಿಸುತ್ತಾರೆ ಎಂದು ತಮ್ಮ ಖುಷಿಯನ್ನು ಹಂಚಿಕೊಳ್ಳುತ್ತಾರೆ.

    ಒಂದೆಡೆ ಸಮಯದ ಉಳಿತಾಯವಾದರೆ 15 ಮಂದಿ ಶಿಕ್ಷಕರು ಜೊತೆಯಾಗಿ ಸೇರಿಕೊಂಡು ಕಷ್ಟಸುಖ ಮಾತನಾಡಿಕೊಂಡು ಶಾಲೆಗೆ ಹೋಗುವಾಗ ನೆಮ್ಮದಿ ಸಿಗುತ್ತದೆ ಎಂದು ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾರೆ.

     

    DAKSHINA KANNADA

    ದೀಪಾವಳಿಗೆ ಬಂಪರ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು

    Published

    on

    ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ ಭಾರ ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ – ಮಂಗಳೂರು ಜಂಕ್ಷನ್‌- ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ನಿರ್ಧರಿಸಿದ್ದು, ಅ.30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ.


    ನಂ.06565 ಯಶವಂತಪುರ-ಮಂಗಳೂರು ಜಂಕ್ಷನ್‌ ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.31ರಂದು ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ.06566 ಮಂಗಳೂರು ಜಂಕ್ಷನ್‌ – ಯಶವಂತಪುರ ವಿಶೇಷ ರೈಲು ಅ.31ರಂದು ಮಧ್ಯಾಹ್ನ 1 ಗಂಟೆಗೆ ಮಂಗ ಳೂರು ಜಂಕ್ಷನ್‌ನಿಂದ ಹೊರಡಲಿದ್ದು, ರಾತ್ರಿ 9.45ಕ್ಕೆ ಬೆಂಗಳೂರು ತಲುಪಲಿದೆ.
    ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ರೈಲು ಒಟ್ಟು 21 ಬೋಗಿ ಸಂಯೋಜನೆಯನ್ನು ಒಳಗೊಂಡಿದೆ.

    ಪ್ರಯಾಣಿಕರ ಬೇಡಿಕೆ :
    ಕಳೆದ ವರ್ಷ ದಸರಾ, ದೀಪಾವಳಿ ಸಂದರ್ಭದಲ್ಲಿ ಮಂಗಳೂರು – ಬೆಂಗಳೂರು – ಮೈಸೂರು ನಡುವೆ ವಿಶೇಷ ರೈಲು ಓಡಾಟ ನಡೆಸಿತ್ತು. ಈ ಬಾರಿ ದಸರಾದಲ್ಲಿ ನಂ.06569 ಯಶವಂತಪುರ – ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಮತ್ತು ನಂ. 06570 ಕಾರವಾರ – ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ವಯಾ ಪಡೀಲ್‌ ಮೂಲಕ ಸಂಚರಿಸಿದೆ. ಇದರಿಂದ ಮಂಗಳೂರಿಗೆ ಬರುವವರಿಗೆ ಹೆಚ್ಚಿನ ಲಾಭವಾಗಿಲ್ಲ. ದೀಪಾವಳಿಗಾದರೂ ಮಂಗಳೂರು – ಬೆಂಗಳೂರು ನಡುವೆ ಹೆಚ್ಚುವರಿ ರೈಲು ಓಡಲಿ ಎನ್ನುವುದು ರೈಲ್ವೇ ಹೋರಾಟಗಾರರ ಆಗ್ರಹವಾಗಿತ್ತು.

    ಸಂಸದರಿಂದ ಮನವಿ ಪತ್ರ:
    ವಿಶೇಷ ರೈಲಿಗೆ ಬೇಡಿಕೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ನೈಋತ್ಯ ರೈಲ್ವೇ ಮಹಾ ಪ್ರಬಂಧಕರಿಗೆ ಪತ್ರ ಬರೆದು, ದೀಪಾವಳಿ ಹಬ್ಬಕ್ಕೆ ಬೆಂಗಳೂರು – ಮಂಗಳೂರು ನಡುವೆ ವಿಶೇಷ ರೈಲು ಓಡಿಸುವಂತೆ ಮನವಿ ಮಾಡಿದ್ದರು. ಬೆಂಗಳೂರಿನಿಂದ ಊರಿಗೆ ಬರುವ ಸಾವಿರಾರು ಪ್ರಯಾಣಿಕರಿಗೆ ಈ ರೈಲಿನಿಂದ ಅನುಕೂಲವಾಗಲಿದೆ. ಆದ್ದರಿಂದ ಆದ್ಯತೆ ಮೇರೆಗೆ ರೈಲನ್ನು ಓಡಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ರೈಲ್ವೇ ಇಲಾಖೆಗೂ ಹೆಚ್ಚಿನ ಲಾಭವಾಗಲಿದೆ ಎಂದು ಸಂಸದರು ಪತ್ರದಲ್ಲಿ ವಿವರಿಸಿದ್ದರು. ಪ್ರಯಾಣಿಕರು, ಹೋರಾಟಗಾರರು ಹಾಗೂ ಜನ ಪ್ರತಿನಿಧಿಗಳ ಬೇಡಿಕೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೇ ವಿಶೇಷ ರೈಲು ಓಡಾಟಕ್ಕೆ ಮುಂದಾಗಿದೆ.

    Continue Reading

    DAKSHINA KANNADA

    ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ

    Published

    on

    ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.


    ತಾಂತ್ರಿಕ ತೊಂದರೆಯಿಂದ ಟ್ಯಾಂಕ್‌ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್‌ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.


    ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Continue Reading

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending