Connect with us

ರಾಜ್ಯ ರಾಜಧಾನಿಗೆ ಕಾಲಿಟ್ಟ ಕೊರೊನಾ: ಭೀತಿಯಲ್ಲಿ ಸಿಲಿಕಾನ್ ಸಿಟಿ ಜನತೆ

Published

on

ರಾಜ್ಯದಲ್ಲಿ ಮೊದಲ ಕೊರೋನಾ ಸೋಂಕು ಧೃಡ: ಅಮೇರಿಕಾದಿಂದ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆ.!               

ಬೆಂಗಳೂರು: ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿನದ್ದೇ ಮಾತು.

ಎದ್ದರೂ ಕೊರೊನಾ, ಬಿದ್ದರೂ ಕೊರೊನಾ, ಉಸಿರಾಡಿದರೂ ಕೊರೊನಾ ವೈರಸ್.

ಜನರು ಬಾಯಿ ತೆರೆದರೆ ಕೊರೊನಾ ವೈರಸ್ ಬಗ್ಗೆಯೇ ಮಾತನಾಡುತ್ತಿದ್ದಾರೆ.

ಇದೀಗ ರಾಜ್ಯದಲ್ಲಿ ಮೊದಲ ಕೊರೋನ ವೈರಸ್ ಸೋಂಕು ಪತ್ತೆಯಾಗಿದೆ.

ಅಮೆರಿಕಾದಿಂದ ಬಂದ ವ್ಯಕ್ತಿಯಲ್ಲಿ ಕೊರೋನ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.

ಅಮೆರಿಕಾದಿಂದ ಬೆಂಗಳೂರಿಗೆ ಆಗಮಿಸಿದ 40 ವರ್ಷ ಪ್ರಾಯದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರಲ್ಲಿ ಸೋಂಕಿರುವುದು ಖಚಿತವಾಗಿದ್ದು, ಅವರಿಗೆ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಮೆರಿಕದಿಂದ ಮಾ.1 ರ ಬೆಳಗ್ಗೆ 8.30ಕ್ಕೆ ಬೆಂಗಳೂರಿಗೆ ಆಗಮಿಸಿದ್ದರು.

ಅವರಿಗೆ ಜ್ವರ ಕಾಣಿಸಿಕೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಅವರಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರ ಪತ್ನಿ, ಮಗು ಹಾಗೂ ಅವರ ಕಾರು ಚಾಲಕನನ್ನು ಪತ್ಯೇಕವಾಗಿ ಇರಿಸಿದ್ದು, ರಾಜೀವ್ ಗಾಂಧಿ ಎದೆ ರೋಗಿಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.

ಕೊರೋನ ವೈರಸ್ ತಡೆಗಟ್ಟುವ ಸಂಬಂಧ ಕೇಂದ್ರ ಸರಕಾರದ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ಇನ್ನು ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನರ್ಸರಿ, ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ರಜೆ ಘೋಷಿಸಲಾಗಿದೆ.

ಇದೀಗ 1ರಿಂದ 5ನೆ ತರಗತಿಯವರೆಗೂ ಮುಂದಿನ ಆದೇಶದವರೆಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಈವರೆಗೂ ಒಟ್ಟು ಕೊರೋನ ಸೋಂಕಿಗೆ ಸಂಬಂಧಿಸಿದಂತೆ 432 ವ್ಯಕ್ತಿಗಳ ರಕ್ತ ಪರೀಕ್ಷೆ ನಡೆಸಲಾಗಿದ್ದು, 364 ಜನರಲ್ಲಿ ಸೋಂಕು ಇಲ್ಲ ಎಂದು ಧೃಡಪಟ್ಟಿದೆ.

ಇನ್ನು ಭಾರತದಲ್ಲಿ 43ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಈ ಪೈಕಿ ಮೂವರು ಸೋಂಕಿತರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ಮೊಸಳೆ ತಲೆ ಬುರುಡೆ ಕಳ್ಳ ಸಾಗಣೆ ಯತ್ನ; ಕೆನಡಾ ಮೂಲದ ವ್ಯಕ್ತಿ ಅರೆಸ್ಟ್

Published

on

ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.

ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

 

Continue Reading

LATEST NEWS

ಶರಣಾದ ನಕ್ಸಲರನ್ನು NIA ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು!

Published

on

ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.

ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.

Continue Reading

LATEST NEWS

ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

Published

on

ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.

ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.

ಇದನ್ನೂ ಓದಿ : ಫ್ರಿಡ್ಜ್‌ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ ಗೊತ್ತಾ..?

2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.

 

Continue Reading

LATEST NEWS

Trending

Exit mobile version