Connect with us

    LATEST NEWS

    ತೀರ್ಥಹಳ್ಳಿ ತಹಶೀಲ್ದಾರ್ ಬೆಂಗಳೂರಿನ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ!

    Published

    on

    ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಜಿ. ಬಿ. ಜಕ್ಕಣ್ಣಗೌಡರ್ ನಿಗೂಢವಾಗಿ ಸಾ*ವನ್ನಪ್ಪಿದ್ದಾರೆ. ಅವರ ಶ*ವ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್‌ವೊಂದರಲ್ಲಿ ಪತ್ತೆಯಾಗಿದೆ.

    ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ(ಅ.16) ರಾತ್ರಿ ‌ಮೃ*ತದೇಹ ಪತ್ತೆಯಾಗಿದೆ. ಹೃದಯಾ*ಘಾತದಿಂದ ಮೃ*ತಪಟ್ಟಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ. ನ್ಯಾಯಾಲಯದ ಕೆಲಸ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವೈಭವ್ ಲಾಡ್ಜ್‌ನಲ್ಲಿ ಉಳಿದಿದ್ದರು. ಮಂಗಳವಾರ ಸಂಜೆಯಿಂದಲೂ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ.

    ಬಳಿಕ ಅವರ ಮೊಬೈಲ್ ಲೊಕೇಶನ್  ಪರಿಶೀಲಿಸಿದಾಗ ಮೆಜೆಸ್ಟಿಕ್ ಸಮೀಪ ತೋರಿಸಿದೆ.‌ ಅದನ್ನು ಆಧರಿಸಿ ವಿಚಾರಿಸಿದಾಗ, ವೈಭವ್ ಲಾಡ್ಜ್ ಕೊಠಡಿಯಲ್ಲಿ ಮೃ*ತದೇಹ ಪತ್ತೆಯಾಗಿದೆ. ಕೊಠಡಿ ಬಾಗಿಲು ಹಾಕಿತ್ತು. ಪೊಲೀಸರು ಬಾಗಿಲು ತೆರೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.  ಮರ*ಣೋತ್ತರ ಪರೀಕ್ಷೆಯ ಬಳಿಕ ಸಾ*ವಿಗೆ ಕಾರಣ ಗೊತ್ತಾಗಲಿದೆ.

    ಜಿ. ಬಿ. ಜಕ್ಕಣ್ಣಗೌಡರ್ ಮೂಲತಃ ಗದಗದವರು. ತೀರ್ಥಹಳ್ಳಿಯಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಸರ್ಕಾರಿ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಾಗ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದು, ಅಲ್ಲೇ ಮೃ*ತಪಟ್ಟಿದ್ದಾರೆ.

    ಇದನ್ನೂ ಓದಿ : ಬೀದಿ ನಾಯಿಗಳ ಭೀಕರ ದಾಳಿಗೆ ಬಾಲಕ ಬ*ಲಿ!

    ತೀರ್ಥಹಳ್ಳಿ ತಾಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಮೃತ್ ಅತ್ರೇಶ್ ಅವರನ್ನು 2023ರಲ್ಲಿ ವರ್ಗಾವಣೆ ಮಾಡಲಾಗಿತ್ತು. ಬಳಿಕ ಹಂಗಾಮಿಯಾಗಿ ಲಿಂಗರಾಜು ಕಾರ್ಯ ನಿರ್ವಹಿಸುತ್ತಿದ್ದರು.  2023ರ ಅಕ್ಟೋಬರ್‌ನಲ್ಲಿ ಜಿ. ಬಿ.ಜಕ್ಕಣ್ಣಗೌಡರ್ ಅವರನ್ನು ನೂತನ ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿತ್ತು.

     

    DAKSHINA KANNADA

    ದೀಪಾವಳಿಗೆ ಬಂಪರ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು

    Published

    on

    ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ ಭಾರ ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ – ಮಂಗಳೂರು ಜಂಕ್ಷನ್‌- ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ನಿರ್ಧರಿಸಿದ್ದು, ಅ.30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ.


    ನಂ.06565 ಯಶವಂತಪುರ-ಮಂಗಳೂರು ಜಂಕ್ಷನ್‌ ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.31ರಂದು ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ.06566 ಮಂಗಳೂರು ಜಂಕ್ಷನ್‌ – ಯಶವಂತಪುರ ವಿಶೇಷ ರೈಲು ಅ.31ರಂದು ಮಧ್ಯಾಹ್ನ 1 ಗಂಟೆಗೆ ಮಂಗ ಳೂರು ಜಂಕ್ಷನ್‌ನಿಂದ ಹೊರಡಲಿದ್ದು, ರಾತ್ರಿ 9.45ಕ್ಕೆ ಬೆಂಗಳೂರು ತಲುಪಲಿದೆ.
    ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ರೈಲು ಒಟ್ಟು 21 ಬೋಗಿ ಸಂಯೋಜನೆಯನ್ನು ಒಳಗೊಂಡಿದೆ.

    ಪ್ರಯಾಣಿಕರ ಬೇಡಿಕೆ :
    ಕಳೆದ ವರ್ಷ ದಸರಾ, ದೀಪಾವಳಿ ಸಂದರ್ಭದಲ್ಲಿ ಮಂಗಳೂರು – ಬೆಂಗಳೂರು – ಮೈಸೂರು ನಡುವೆ ವಿಶೇಷ ರೈಲು ಓಡಾಟ ನಡೆಸಿತ್ತು. ಈ ಬಾರಿ ದಸರಾದಲ್ಲಿ ನಂ.06569 ಯಶವಂತಪುರ – ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಮತ್ತು ನಂ. 06570 ಕಾರವಾರ – ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ವಯಾ ಪಡೀಲ್‌ ಮೂಲಕ ಸಂಚರಿಸಿದೆ. ಇದರಿಂದ ಮಂಗಳೂರಿಗೆ ಬರುವವರಿಗೆ ಹೆಚ್ಚಿನ ಲಾಭವಾಗಿಲ್ಲ. ದೀಪಾವಳಿಗಾದರೂ ಮಂಗಳೂರು – ಬೆಂಗಳೂರು ನಡುವೆ ಹೆಚ್ಚುವರಿ ರೈಲು ಓಡಲಿ ಎನ್ನುವುದು ರೈಲ್ವೇ ಹೋರಾಟಗಾರರ ಆಗ್ರಹವಾಗಿತ್ತು.

    ಸಂಸದರಿಂದ ಮನವಿ ಪತ್ರ:
    ವಿಶೇಷ ರೈಲಿಗೆ ಬೇಡಿಕೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ನೈಋತ್ಯ ರೈಲ್ವೇ ಮಹಾ ಪ್ರಬಂಧಕರಿಗೆ ಪತ್ರ ಬರೆದು, ದೀಪಾವಳಿ ಹಬ್ಬಕ್ಕೆ ಬೆಂಗಳೂರು – ಮಂಗಳೂರು ನಡುವೆ ವಿಶೇಷ ರೈಲು ಓಡಿಸುವಂತೆ ಮನವಿ ಮಾಡಿದ್ದರು. ಬೆಂಗಳೂರಿನಿಂದ ಊರಿಗೆ ಬರುವ ಸಾವಿರಾರು ಪ್ರಯಾಣಿಕರಿಗೆ ಈ ರೈಲಿನಿಂದ ಅನುಕೂಲವಾಗಲಿದೆ. ಆದ್ದರಿಂದ ಆದ್ಯತೆ ಮೇರೆಗೆ ರೈಲನ್ನು ಓಡಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ರೈಲ್ವೇ ಇಲಾಖೆಗೂ ಹೆಚ್ಚಿನ ಲಾಭವಾಗಲಿದೆ ಎಂದು ಸಂಸದರು ಪತ್ರದಲ್ಲಿ ವಿವರಿಸಿದ್ದರು. ಪ್ರಯಾಣಿಕರು, ಹೋರಾಟಗಾರರು ಹಾಗೂ ಜನ ಪ್ರತಿನಿಧಿಗಳ ಬೇಡಿಕೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೇ ವಿಶೇಷ ರೈಲು ಓಡಾಟಕ್ಕೆ ಮುಂದಾಗಿದೆ.

    Continue Reading

    LATEST NEWS

    ಶೋಭಾ ಕರಂದ್ಲಾಜೆ ಚಿಕನ್ ಆ್ಯಂಡ್ ಮಟನ್ ಶಾಪ್; ಪೋಟೋ ವೈರಲ್.!

    Published

    on

    ಮಂಗಳೂರು/ಕೊಪ್ಪಳ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯೋರ್ವ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಅವರ ಹೆಸರಿನಲ್ಲಿ ಚಿಕನ್ ಆ್ಯಂಡ್ ಮಟನ್ ಅಂಗಡಿ ಓಪನ್‌ ಮಾಡಿದ್ದಾರೆ.

    ಯುವಕ ಖಾಧೀರ್ ಕಲಾಲ ಎಂಬುವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯಾಗಿದ್ದು, ಅವರ ಹೆಸರಿನಲ್ಲಿ ಈ ಅಂಗಡಿ ತೆರೆದಿದ್ದಾರೆ.

    ಶೋಭಾ ಕರಂದ್ಲಾಜೆ ಮೇಲಿನ ಅಭಿಮಾನಕ್ಕೆ ಈ ರೀತಿ ಹೆಸರು ಇಟ್ಟಿದ್ದೇನೆ ಎಂದು ಖಾಧೀರ್‌ ಕಲಾಲ ತಿಳಿಸಿದ್ದಾರೆ. ‌2008ರಲ್ಲಿ ಚುನಾವಣೆಗೆ ಪ್ರಚಾರಕ್ಕಾಗಿ ಪಟ್ಟಣಕ್ಕೆ ಆಗಮಿಸಿದ್ದ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಆಗಿದ್ದರು. ಅವರ ರಾಜಕೀಯ ಮಾತುಗಳನ್ನು ಕೇಳಿ ಅಭಿಮಾನಿ ಆಗಿದ್ದೇನೆ ಎಂದಿದ್ದಾರೆ.

    ಚಿಕನ್‌ ಆ್ಯಂಡ್ ಮಟನ್‌ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಹಾಕಿಸಿರುವ ವಿಚಾರ ಸಾಕಷ್ಟು ವೈರಲ್ ಆಗಿದೆ.

    ಅಪ್ಪಟ ಅಭಿಮಾನಿ ಆಗಿರುವ ಖಾಧೀರ್ ಕಲಾಲ್ ಕಳೆದ 5 ವರ್ಷಗಳ ಹಿಂದೆ ಶೋಭಾ ಕರಂದ್ಲಾಜೆ ಅವರ ಪೋಟೋವನ್ನು ಕೈಮೇಲೆ ಟ್ಯಾಟೋ ಹಾಕಿಸಿಕೊಂಡಿದ್ದಾರೆ.

    ಈಗ ಹೊಸದಾಗಿ ಪ್ರಾರಂಭಿಸಿರುವ ಅಂಗಡಿಗೆ ಶೋಭಾ ಕರಂದ್ಲಾಜೆ ಮಟನ್ ಆ್ಯಂಡ್ ಚಿಕನ್ ಸೆಂಟರ್ ಹೆಸರು ಹಾಕಿಸಿದ್ದಾರೆ.

    Continue Reading

    FILM

    ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ

    Published

    on

    ಬೆಂಗಳೂರು : ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಅವರಿಗೆ 42 ವರ್ಷ ವಯಸ್ಸಾಗಿತ್ತು.

    ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಅದಕ್ಕೆ ಅವರು ಡಯಾಲಿಸಿಸ್ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ
    ಬೆಂಗಳೂರಿನ ಆರ್​ ಆರ್​ ನಗರದ ಖಾಸಗಿ ಆಸ್ಪತ್ರೆಯಲ್ಲಿ ದೀಪಕ್ ಸಾವನ್ನಪಿದ್ದಾರೆ.

    ‘ಮನಸಾಲಜಿ’, ‘ಶುಗರ್​ ಫ್ಯಾಕ್ಟರಿ’ ಸಿನಿಮಾಗಳಿಗೆ ದೀಪಕ್ ನಿರ್ದೇಶನ ಮಾಡಿದ್ದರು. ದೀಪಕ್ ಅರಸ್ ಅವರಿಗೆ ಮದುವೆ ಆಗಿ ಇಬ್ಬರು ಮಕ್ಕಳು ಇದ್ದಾರೆ.

    Continue Reading

    LATEST NEWS

    Trending