Sunday, July 3, 2022

ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಹೈದರಾಬಾದ್​: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ. ಆರೋಪಿಯ ಮೃತದೇಹವು ಘಣಪುರ್​ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದೆ.


ಆರೋಪಿಯನ್ನು ಪಲ್ಲಕೊಂಡ ರಾಜು (30) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್​ 9ರಂದು 6 ವರ್ಷದ ಬಾಲಕಿ ಸೈದಾಬಾದ್​ನ ಸಿಂಗ್ರೌಣಿ ಕಾಲನಿಯಲ್ಲಿರುವ ತನ್ನ ನಿವಾಸದಿಂದ ನಾಪತ್ತೆಯಾಗಿದ್ದಳು.

ಮರುದಿನ ಆಕೆಯ ಮೃತದೇಹವು ಬೆಡ್​ಶೀಟ್​ನಲ್ಲಿ ಸುತ್ತಿಟ್ಟಿದ್ದ ಸ್ಥಿತಿಯಲ್ಲಿ ನೆರೆಯ ಮನೆಯಲ್ಲೇ ಪತ್ತೆಯಾಗಿತ್ತು.

ಇದಾದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆಯ ಮೇಲೆ ಕಾಮುಕ ಅಟ್ಟಹಾಸ ನಡೆಸಿ ಕೊಲೆ ಮಾಡಿದ್ದ.

ಇದಾದ ಬಳಿಕ ಆರೋಪಿ ಪರಾರಿಯಾಗಿದ್ದ. ಬಂಧನವಾದ ಕೂಡಲೇ ಆತನನ್ನು ಎನ್​ಕೌಂಟರ್​ ಮಾಡುವಂತೆ ತೆಲಂಗಾಣ ಕಾರ್ಮಿಕ ಸಚಿವ ಮಲ್ಲ ರೆಡ್ಡಿ ಒತ್ತಾಯಿಸಿದ್ದರು.

ಇದರ ನಡುವೆ ಆರೋಪಿಯ ಸುಳಿವು ನೀಡಿದವರಿಗೆ ಸೈಬರಾಬಾದ್​ ಪೊಲೀಸರು 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು.

ಅಲ್ಲದೆ, ಪೊಲೀಸರು ಆತನ ಫೋಟೋವನ್ನು ಸಹ ಬಿಡುಗಡೆ ಮಾಡಿದ್ದರು. ಆದರೆ, ಇದೀಗ ಆರೋಪಿ ಭಯದಿಂದಲೋ? ಅಥವಾ ಪಾಪಪ್ರಜ್ಞೆಯಿಂದಲೋ ಆತ್ಮಹತ್ಯೆ ಹಾದಿ ಹಿಡಿದಿದ್ದಾನೆ.

LEAVE A REPLY

Please enter your comment!
Please enter your name here

Hot Topics

“ಮದರಸ ಬಗ್ಗೆ ಹೇಳಿಕೆಯನ್ನು ಉದುರುವಾಗ ನಾಲಗೆ ಹದ್ದು ಬಸ್ತಿನಲ್ಲಿ ಇಟ್ಟು ಮಾತನಾಡುವುದು ಒಳಿತು”

ಮಂಗಳೂರು: ಪ್ರವಾದಿ ನಿಂದನೆಗೈದ ನೂಪುರ್ ಶರ್ಮಾ ರನ್ನು ಬೆಂಬಲಿಸಿ ಹೇಳಿಕೆ ನೀಡಿದ ಕನ್ನಯ್ಯ ಲಾಲ್ ನನ್ನು ಇತ್ತೀಚೆಗೆ ರಾಜಸ್ತಾನದ ಉದಯಪುರದಲ್ಲಿ ಹತ್ಯೆ ಮಾಡಿದ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರು ಆಗಿದ್ದು,ಅಂತಹ...

ಅಕ್ರಮ ಗೋಸಾಗಾಟ ತಡೆಯಲು ಖಡಕ್‌ ಖಾಕಿಗೆ ಖಡಕ್‌ ಸೂಚನೆ ಕೊಟ್ಟ ಶಾಸಕ ಕಾಮತ್‌

ಮಂಗಳೂರು: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್‌ ಕಾಮತ್ ಸೂಚನೆ ನೀಡಿದ್ದಾರೆ.ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ...

ಡಿಸಿಪಿ ಹರಿರಾಂ ಶಂಕರ್‌ಗೆ ಮಂಗಳೂರು ನಗರ ಪೊಲೀಸರ ಹೃದಯಸ್ಪರ್ಶಿ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್‌ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್‌, ಮಂಗಳೂರಿನಲ್ಲಿ ವಿವಿಧ...