DAKSHINA KANNADA
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
ಕಿರುತೆರೆ ನಟಿ ಜ್ಯೋತಿ ರೈ ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡುತ್ತಿದ್ದು, ಈ ಫೋಟೋಸ್ ಗಳನ್ನು ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ.
ಬೆಂಗಳೂರು : ಕನ್ನಡದ ಅನೇಕ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿರುವ ನಟಿ ಜ್ಯೋತಿ ರೈ ಅವರ ಪರಿಚಯ ಬಹುತೇಕ ಎಲ್ಲಾ ಕನ್ನಡಿಗರಿಗೆ ಇದೆ. ಸರಿ ಸುಮಾರು 20ಕ್ಕು ಹೆಚ್ಚು ಕನ್ನಡ ಧಾರವಾಹಿಗಳಲ್ಲಿ ನಟಿ ಜನರ ಮನಸ್ಸು ಗೆದ್ದ ಸಹಜ ಸುಂದರಿ ಜ್ಯೋತಿ ರೈ. ಮೂರುಗಂಟು, ಕನ್ಯಾದಾನ, ಅನುರಾಗ ಸಂಗಮ, ಗೆಜ್ಜೆ ಪೂಜೆ, ಕಸ್ತೂರಿ ನಿವಾಸ, ಕಿನ್ನರಿ ಧಾರಾವಾಹಿಗಳನ್ನು ಜನರು ಹೇಗೆ ಮರೆಯಲು ಸಾಧ್ಯ ಅಲ್ವಾ?
ಕೊಡಗಿನಲ್ಲಿ ಹುಟ್ಟಿ ಬೆಳೆದ ಬಂಟ ಸಮುದಾಯದ ನಟಿ ಜ್ಯೋತಿ ರೈ ಓದಿದ್ದು ಪುತ್ತೂರಿನಲ್ಲಿ.8ನೇ ತರಗತಿ ಓದುವಾಗಲೇ ಆಕೆ ಅಪ್ಪನನ್ನು ಕಳೆದುಕೊಂಡರು.ಕಡು ಬಡತನದಲ್ಲಿ ಬೆಳೆದ ಈಕೆ ಅನೇಕ ಸವಾಲುಗಳನ್ನು ಎದುರಿಸಿ ಒಂದು ಎಂಎನ್‌ಸಿ ಕಂಪೆನಿಯಲ್ಲಿ ಕೆಲಸವನ್ನು ಪಡೆದುಕೊಂಡಿದ್ರು.
ಇದಾದ ನಂತರ ಬೆಂಗಳೂರಿಗೆ ಬಂದು ‘ಬರತಾವ ಕಾಲ’ ಧಾರಾವಾಹಿಯಲ್ಲಿ ನಟಿಸಿದರು. ಅಲ್ಲಿಂದ ಮುಂದೆ ಸಾಲು ಸಾಲು ಧಾರಾವಾಹಿಗಳಲ್ಲಿ ನಟಿಸಿದರು. ನಿರೂಪಕಿಯಾಗಿಯೂ ಗಮನ ಸೆಳೆದು.20ನೇ ವಯಸ್ಸಿನಲ್ಲಿ ಮದುವೆ ಆಗಿದ್ದರು .
ಜ್ಯೋತಿ ರೈ 20ನೇ ವಯಸ್ಸಿನಲ್ಲೇ ಮದುವೆ ಆಗಿದ್ದರು.ನೆಟ್‌ವರ್ಕಿಂಗ್ ಇಂಜಿನಿಯರ್ ಪದ್ಮನಾಭ ಎಂಬುವವರ ಕೈ ಹಿಡಿದಿದ್ದರು. ದಂಪತಿಗೆ ಒಬ್ಬ ಮಗ ಕೂಡ ಇದ್ದಾನೆ.
ಜ್ಯೋತಿ ರೈ ಅಂದ್ರೆ ಪಕ್ಕಾ ಸಂಪ್ರದಾಯಸ್ಥ ಹೆಣ್ಣು ಮಗಳು. ಹೆಚ್ಚಾಗಿ ಸೀರೆ ಅಥವ ಚೂಡಿದಾರ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಜ್ಯೋತಿ ರೈ ವೆಸ್ಟ್ರನ್ ಔಟ್ ಫಿಟ್ ಗಳನ್ನು ಚೂಸ್ ಮಾಡೋದು ಬಹಳಾನೆ ಕಮ್ಮಿ.
ಆದ್ರೆ ಆಗ ಜ್ಯೋತಿ ರೈ ಕಂಡು ಇಡೀ ಚಿತ್ರರಂಗವೇ ನಿಬ್ಬೆರಗಾಗಿದೆ.
ಹೌದು ಸೋಷಿಯಲ್ ಮೀಡಿಯಾಗಳಲ್ಲಿ ಒಂದಾದ ಮೇಲೆ ಒಂದರಂತೆ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ ಜ್ಯೋತಿ ರೈ. ಅಲ್ಲದೆ Age is Just A Number ಎಂದು ಕೂಡ ಸಾಬೀತುಪಡಿಸಿದ್ದಾರೆ. ತುಂಬಾನೆ ಬೋಲ್ಡ್ ಆಗಿರುವ ಫೋಟೋಸ್ ಅಪ್ಲೋಡ್ ಮಾಡಿ ಇಷ್ಟರ ಮಟ್ಟಿಗೆ ಬದಲಾವಣೆನಾ ಅಂತ ಜನ ಶಾಕ್ ನಲ್ಲಿದ್ದಾರೆ.
ಮೊದಲ ಗಂಡನಿಂದ ದೂರಾಗಿ ಈಗ ಆದ್ರೆ ಇದೀಗ ಶುಕ್ರ, ಮಾತರಾನಿ ಮೌನಮಿದಿ, ಎ ಮಾಸ್ಟರ್ ಪೀಸ್’ ಚಿತ್ರಗಳನ್ನು ನಿರ್ದೇಶಿಸಿದ ಸುಕುಪುರ್ವಜ್ ಅಲಿಯಾಸ್ ಸುರೇಶ್ ಕುಮಾರ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಅನ್ನುವಂತಹ ಟಾಕ್ಸ್ ಇದೀಗ ಹರಿದಾಡುತ್ತಿವೆ.
ಅಲ್ದೇ ಸುರೇಶ್ ಜತೆಗಿರುವ ಫೋಟೊಗಳನ್ನು ನಟಿ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಈಗಾಗಿ ಇದೆಲ್ಲಾ ನಿಜ ಇರಬಹುದು ಅಂತ ಹೇಳಲಾಗ್ತಿದೆ.
ಯಾಕಂದ್ರೆ ಜ್ಯೋತಿ ರೈ ಅವರು ಇನ್‌ಸ್ಟಾಗ್ರಾಮ್‌ನಲ್ಲಿ Ask Me Anything Session ನಡೆಸಿದ್ದರು.
ಆ ವೇಳೆ ನೆಟ್ಟಿಗರು ಕೇಳಿದ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಅದರಲ್ಲಿ ಬಹಳ ಮುಖ್ಯವಾಗಿ ನೀವು ಸಿಂಗಲ್ ಹಾ??? ಅಂತ ನೆಟ್ಟಿಗರೊಬ್ರು ಪ್ರಶ್ನೆ ಮಾಡಿದ್ರು, ಅದಕ್ಕೆ ಜ್ಯೋತಿ ರೈ ಸುಕುಮಾರ್ ಪೂರ್ವಜ ಅವರನ್ನು ಕೇಳಿ ಅಂತ ಹೇಳಿದ್ರು.
ಎ ಮಾಸ್ಟರ್ ಪೀಸ್ ಎನ್ನುವ ಸಿರೀಸ್‌ನ್ನು ಸುಕುಮಾರ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಈಗ ಸುಕುಮಾರ್ ಜೊತೆಗಿನ ಫೋಟೋಗಳನ್ನೇ ಜ್ಯೋತಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಲ್ಳುತ್ತಲೇ ಇದ್ದಾರೆ.
bangalore
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಭಾಗವಹಿಸಿ ಮಕ್ಕಳ ಜೊತೆಗೆ ಮಕ್ಕಳಂತೆ ಬೆರೆತು ಮಕ್ಕಳನ್ನು ಕೊಂಡಾಡಿದರು.
ಈ ವೇದಿಕೆಯಲ್ಲಿ ವಿದ್ಯಾಥಿಗಳು ನಟಿ ರಚಿತಾ ರಾಮ್ ಅವರ ಡ್ರಾಯಿಂಗ್ ಮಾಡಿ ಕೊಡುಗೆಯಾಗಿ ನೀಡಿದಾಗ ಖುಷಿ ಪಟ್ಟ ನಟಿ ಆ ವಿದ್ಯಾರ್ಥಿಗಳನ್ನು ವೇದಿಕೆಗೆ ತಾವೇ ಕರೆಸಿ ಅಭಿನಂದಿಸದರು.
ಹಾಗೂ ಕೆಲವು ವಿದ್ಯಾರ್ಥಿಗಳ ಜೊತೆ ವೇದಿಕೆಗೆ ಕರೆಸಿ ಹಾಡಿಸಿದರು. ಅದರಲ್ಲಿ ತಾನೇ ಬಂದು ವೇದಿಕೆಯಲ್ಲಿ ಒಂದು ಪುಟಾಣಿ ‘ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು’ ಎಂದು ಹಾಡಿದಾಗ ನಟಿ ಬಹಳ ಖುಷಿ ಪಟ್ಟರು.
ಈ ಸಂದರ್ಭ ರಚಿತರಾಮ್ ಜೊತೆ ಹಾಡಲು ಹೇಳಿದಾಗ ಅವರು ಕೂಡ “ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು” ಎಂದು ನಗ್ತಾ ನಗ್ತಾ ಹಾಡಿದರು.
ಬಳಿಕ ಮಾತನಾಡಿದ ನಟಿ ವಿದ್ಯಾರ್ಥಿಗಳು ಇಂತಹ ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಮತ್ತೇ ಇಂತಹ ವೇದಿಕೆ ಸಿಗುವುದಿಲ್ಲ. ನಮ್ಮ ಪ್ರತಿಭೆಯನ್ನು ನಾವೇ ಪ್ರದರ್ಶನ ಮಾಡಬೇಕು. ಬೇರೆ ಯಾರೂ ಕೂಡ ನಮಗೆ ಹೇಳಲು ಬರುವುದಿಲ್ಲ.
ಯಾರೂ ಕೂಡ ಸಪೋರ್ಟ್ ಮಾಡುವುದಿಲ್ಲ. ಸ್ವಾಯತ್ತತೆಯಿಂದ ನಾವು ಗೆಲ್ಲಬೇಕು. ಒಳ್ಳೆ ಒಳ್ಳೆ ವೇದಿಕೆ ಸಿಕ್ಕಾಗ ಬಿಡಬಾರದು. ಅದರ ಜೊತೆಗೆ ನಮ್ಮ ಗುರುಗುಳಿಗೆ ಹಾಗೂ ತಮ್ಮ ಪೋಷಕರಿಗೆ ಗೌರವ ಕೊಡಿ, ಮರ್ಯಾದೆ ಕೊಡಿ ಜೊತೆಗೆ ಅವರನ್ನು ಪ್ರೀತಿಸಿ ಎಂದರು.
ಈ ವೇಳೆ ರಚಿತರಾಮ್ ಕನ್ನಡದಲ್ಲಿ ಮಾತನಾಡಿದಾಗ ವಿದ್ಯಾರ್ಥಿಗಳು ತುಳುವಿನಲ್ಲಿ ಮಾತನಾಡಿ ಎಂದು ಕೂಗಾಡಿದರು. ಆಗ ಅವರು ಎಂಚ ವುಲ್ಲರ್ ಮರ್ರೆ…ಹುಷಾರ್ ವುಲ್ಲರಾ…ಎಂದು ತುಳುವಿನಲ್ಲಿ ಮಾತನಾಡಿದರು.
BELTHANGADY
Belthangady: ರಸ್ತೆ ಪಕ್ಕದ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು..!
ಬೆಳ್ತಂಗಡಿ: ಬೆಳ್ತಂಗಡಿ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು.
ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು. ಎಂದಿನಂತೆ ಶುಕ್ರವಾರ ರಾತ್ರಿಯ ವೇಳೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಝೀಝ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಅಂಗಡಿಯನ್ನು ಬಹುತೇಕ ಧ್ವಂಸಗೊಳಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
DAKSHINA KANNADA
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!
ಮಂಗಳೂರು: ತನ್ನ ಪುಟ್ಟ ಕಂದಮ್ಮನನ್ನು ನೀರಿನ ಟಬ್ ಒಳಗೆ ಮುಳುಗಿಸಿ ತಾನೂ ನೇಣು ಬಿಗಿದುಕೊಂಡು ಹೆತ್ತಬ್ಬೆಯೊಬ್ಬಾಕೆಯ ಕೃತ್ಯ ಮನಕಲಕಿದ ಘಟನೆ ಮಂಗಳೂರಿನ ಗುಜ್ಜರಕರೆ ಬಳಿ ನಡೆದಿದೆ.
ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸ ಮಾಡುವ ಫಾತಿಮಾ ರುಕಿಯಾ(23) ಎಂಬಾಕೆ ತನ್ನ ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಎಂಬಾತನನ್ನು ನೀರಿನ ಟಬ್‌ನೊಳಗೆ ಮುಳುಗಿಸಿ ಉಸಿರುಕಟ್ಟಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫಾತಿಮಾಗೆ ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರ ಜೊತೆ ಮದುವೆಯಾಗಿತ್ತು. 2023 ಜು. 7 ರಂದು ಹೆರಿಗೆಯಾಗಿತ್ತು. ಅಬ್ದುಲ್ಲಾ ಹೂದ್ ಎಂಬ ಸುಮಾರು 4ವರೆ ತಿಂಗಳ ಗಂಡು ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಫಾತಿಮಾಗೆ ಚಿಕಿತ್ಸೆಯನ್ನು ಕೂಡಾ ನೀಡಲಾಗುತ್ತಿತ್ತು. ಈ ನಡುವೆ ಫಾತಿಮಾ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ. ನಿನ್ನೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1-30 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ನ ಬೆಡ್ ರೂಮ್ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.