Connect with us

FILM

ಓಟಿಟಿಗೂ ಮೊದಲು ಟಿವಿಯಲ್ಲಿ ಪ್ರಸಾರವಾಗಲಿದೆ ಸೂಪರ್ ಹಿಟ್ ಚಿತ್ರ ‘ಹನುಮಾನ್’; ಯಾವಾಗ? ಯಾವ ಚಾನೆಲ್ ಇಲ್ಲಿದೆ ಪೂರ್ತಿ ಡಿಟೇಲ್ಸ್

Published

on

ತೆಲುಗಿನ ಸೂಪರ್ ಹಿಟ್ ಚಿತ್ರ ‘ಹನುಮಾನ್’ ಭಾರತೀಯ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದ ಹನುಮಾನ್ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಅಂದಾಜು 40 ಕೋಟಿ ರೂ. ಬಜೆಟ್ ನ ಈ ಸಿನಿಮಾ 200 ಕೋ.ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು. ಸದ್ಯ ಈ ಚಿತ್ರದ ಓಟಿಟಿ ಸ್ಟ್ರೀಮಿಂಗ್ ಗೊಂದಲದಲ್ಲಿದೆ.   

ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಗೊಂಡಿದ್ದ ‘ಹನುಮಾನ್’ ಶಿವರಾತ್ರಿಗೆ ಝೀ5 ನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಹೇಳಲಾಗಿತ್ತು. ಆದ್ರೆ, ವೀಕ್ಷಕರಿಗೆ ನಿರಾಸೆ ಆಗಿತ್ತು. ಯಾಕೆಂದರೆ, ಚಿತ್ರ ಝೀ 5 ನಲ್ಲಿ ಬಿಡುಗಡೆಗೊಂಡಿರಲಿಲ್ಲ. ಈ ಬಗ್ಗೆ ನೆಟ್ಟಿಗರೊಬ್ಬರ ಪ್ರಶ್ನೆಗೆ ಝೀ5 ಸೋಶಿಯಲ್ ಮೀಡಿಯಾ ಖಾತೆಯಿಂದ ಪ್ರತಿಕ್ರಿಯೆ ಬಂದಿದೆ.

“ಹಾಯ್, ಈ ವಿಷಯದ ಬಗ್ಗೆ ನಮಗೆ ಯಾವುದೇ ಅಪ್‌ಡೇಟ್ ಇಲ್ಲ. ದಯವಿಟ್ಟು ನಮ್ಮ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಪೇಜ್‌ಗಳ ಮೇಲೆ ಕಣ್ಣಿಡಿ” ಎಂದು ಝೀ5 ಉತ್ತರಿಸಿದೆ.

ಜನಮನ ಗೆದ್ದಿದ್ದ ಚಿತ್ರ :

ತೇಜ ಸಜ್ಜ ನಟನೆಯ ಸೂಪರ್ ಹಿಟ್ ಚಿತ್ರ ‘ಹನುಮಾನ್’ ಪ್ರೇಕ್ಷಕರ ಮನಗೆದ್ದಿತ್ತು. ಸಣ್ಣ ಬಜೆಟ್‌ನಲ್ಲಿ ಅದ್ಭುತವಾಗಿ ಸಿನಿಮಾ ಮಾಡಿದ್ದ ತಂಡದ ಶ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದಕ್ಷಿಣದಲ್ಲಿ ಮಾತ್ರವಲ್ಲದೇ ಉತ್ತರ ಭಾರತ ಪ್ರೇಕ್ಷಕರು ಸಿನಿಮಾ ಮೆಚ್ಚಿಕೊಂಡಿದ್ದಾರೆ. ದೇಶ ವಿದೇಶಗಳಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿತ್ತು. ಕರ್ನಾಕಟದಲ್ಲೂ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು.

ಆಂಧ್ರ, ತೆಲಂಗಾಣ ಮಾತ್ರವಲ್ಲದೇ ವಿದೇಶದ ಕೆಲವು ಭಾಗಗಳಲ್ಲಿ ‘ಹನುಮಾನ್’ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು.

ಓಟಿಟಿಯಲ್ಲಿಲ್ಲ…ಟಿವಿ ಪ್ರೀಮಿಯರ್..!

ಸಾಮಾನ್ಯರಲ್ಲಿ ಸಾಮಾನ್ಯನಾದ ಯುವಕನಿಗೆ ಹನುಮಂತನ ಕೃಪಾ ಕಟಾಕ್ಷದಿಂದ ಸೂಪರ್ ಪವರ್ ಸಿಕ್ಕರೆ ಏನಾಗುತ್ತದೆ? ಎಂಬ ಕಥಾಹಂದರದ ‘ಹನುಮಾನ್’ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿಲ್ಲ. ಸದ್ಯ ನಿರ್ದೇಶಕ ಪ್ರಶಾಂತ್ ವರ್ಮಾ ‘ಹನುಮಾನ್’ ಸಕ್ಸಸ್ ಬೆನ್ನಲ್ಲೇ ಸೀಕ್ವೆಲ್ ‘ಜೈ ಹನುಮಾನ್’ ಘೋಷಿಸಿದ್ದಾರೆ. ಇತ್ತೀಚೆಗೆ ಸಿನಿಮಾ 50 ದಿನ ಪೂರೈಸಿತ್ತು. ಆದರೂ ಇನ್ನು ಓಟಿಟಿಗೆ ಬರದೇ ಇರುವುದು ವೀಕ್ಷಕರ ಬೇಸರಕ್ಕೆ ಕಾರಣವಾಗಿದೆ. ಆದರೆ ಈಗ ದಿಢೀರನೆ ಸಿನಿಮಾ ಟಿವಿ ಪ್ರೀಮಿಯರ್ ಆಗುವ ಸುದ್ದಿ ಬಂದಿದೆ.

ಯಾವಾಗ? ಯಾವ ಚಾನೆಲ್? 

‘ಹನುಮಾನ್’ ಚಿತ್ರದ ಹಿಂದಿ ವರ್ಷನ್ ಮಾರ್ಚ್ 16 ರಂದು ರಾತ್ರಿ 8 ಗಂಟೆಗೆ ಕಲರ್ಸ್ ಸಿನೆಪ್ಲೆಕ್ಸ್ ಚಾನೆಲ್‌ನಲ್ಲಿ ಪ್ರೀಮಿಯರ್ ಆಗುತ್ತದೆ. ಜೊತೆಗೆ ಜಿಯೋ ಸಿನಿಮಾ ಓಟಿಟಿ ಫ್ಲಾಟ್‌ಪಾರ್ಮ್‌ನಲ್ಲಿ ವೀಕ್ಷಣೆಗೆ ಸಿಗಲಿದೆ. ಕಲರ್ಸ್ ಸಿನೆಪ್ಲೆಕ್ಸ್ ಸಂಸ್ಥೆ ಈ ವಿಚಾರವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ನಿರ್ದೇಶಕ ಪ್ರಶಾಂತ್ ವರ್ಮಾ ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಹಾಗಾಗಿ ಓಟಿಟಿಗೂ ಮೊದಲು, ಟಿವಿಯಲ್ಲಿ ‘ಹನುಮಾನ್’ ಕಾಣಿಸಿಕೊಳ್ಳಲಿದ್ದಾನೆ.

bengaluru

ಹರ್ಷಿಕಾ ಪೂಣಚ್ಚ – ಭುವನ್ ಗೌಡ ದಂಪತಿ ಮೇಲೆ ಹ*ಲ್ಲೆ; ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ? ಏಂದು ಕೇಳಿದ ನಟಿ

Published

on

ಬೆಂಗಳೂರು : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ಭುವನ್ ಪೊನ್ನಣ್ಣ ದಂಪತಿ ಮೇಲೆ ಹ*ಲ್ಲೆ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಿಣಾಮ ಭುವನ್ ಗೆ ಗಾ*ಯವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹರ್ಷಿಕಾ ಪೂಣಚ್ಚ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಗೆಳೆಯರೇ, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಗ*ಲಾಟೆಯ ವೀಡಿಯೋವನ್ನೂ ಹರ್ಷಿಕಾ ಹಂಚಿಕೊಂಡಿದ್ದಾರೆ. ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭ*ಯಾನಕ ಅನುಭವ ಆಗಿದೆ ಎಂದು ಅವರು ಹೇಳಿದ್ದಾರೆ.

ಹರ್ಷಿಕಾ ಬರೆದ ಪೋಸ್ಟ್ ನಲ್ಲಿ ಏನಿದೆ?

ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ.
ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ.

ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು, ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು.

ನನ್ನ ಪತಿಯ ಚಿನ್ನದ ಸರ ಕಸಿಯಲು ಯತ್ನ : 

ನನ್ನ ಪತಿ “ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ” ಎಂದು ಹೇಳಿದರು. ಏಕೆಂದರೆ ಅವರು ಸಂಭವನೀಯ ಘಟನೆ ಬಗ್ಗೆ ಮಾತನಾಡುತ್ತಿದ್ದು ಅದರಲ್ಲಿ ಅರ್ಥವಿರಲಿಲ್ಲ. ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು.

ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು. ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು. ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು.

ಕನ್ನಡ ಮಾತನಾಡಿದ್ದಕ್ಕೆ ನಿಂದನೆ :

ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ.

ಅಲ್ಲದೆ, ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ಅವರು ನೀವು ನಮ್ಮ ಪ್ರದೇಶಕ್ಕೆ ಬಂದು ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ. “ಯೇ ಲೋಕಲ್ ಕನ್ನಡ್ ವಾಲಾ ಹೇ” (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು.

ನಿಮ್ಮ “ಕನ್ನಡ ಸ್ಟೈಲ್”ಯನ್ನು ನೀವೇ ಇಟ್ಟುಕೊಳ್ಳಿ ಎಂದರು. ಆ ಗುಂಪಿನಲ್ಲಿ ಹೆಚ್ಚಿನವರು ಹಿಂದಿ, ಉರ್ದು ಮತ್ತು ಕೆಲವರು ಮುರಿದ ಕನ್ನಡದಲ್ಲಿ ಮಾತನಾಡುತ್ತಿದ್ದರು.

ಪೊಲೀಸರೂ ಸಹಾಯ ಮಾಡಲಿಲ್ಲ : 

ನಾನು ನಮಗೆ ಪರಿಚಯವಿದ್ದ ಒಬ್ಬರು ಇನ್ಸ್‌ಪೆಕ್ಟರ್‌ಗೆ ತುರ್ತು ಕರೆ ಮಾಡಿದಾಗ ಅವರೆಲ್ಲರೂ ಏನೂ ಆಗಿಲ್ಲ ಎಂಬಂತೆ ಕೆಲವೇ ಸೆಕೆಂಡುಗಳಲ್ಲಿ ಚದುರಿ ಹೋದರು. ನಾವು ಅವರನ್ನು ಹುಡುಕಲು ಪ್ರಯತ್ನಿಸಿದೆವು. ಆದರೆ ಅವರು ಮಾಯವಾಗಿದ್ದರು. ನಾವು ಸಮೀಪದಲ್ಲಿ ಹತ್ತಿರದ ಪೊಲೀಸ್ ಠಾಣೆಯ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ASI ಶ್ರೀ ಉಮೇಶ್ ಅವರಿಗೆ ವಿವರಿಸಿದೆವು.

ಅವರು ನಮಗೆ ಸಹಾಯ ಮಾಡಲು ಹೆಚ್ಚು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವನ್ನು ತೋರಲಿಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್ ನಲ್ಲಿ ಕುಳಿತಿದ್ದರು.

ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬಗಳು ಬೆಂಗಳೂರಿನಲ್ಲಿ ಇಂತಹ ಕೆಟ್ಟ ಅನುಭವಕ್ಕೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾವು ಪಾಕಿಸ್ತಾನದಲ್ಲಿದ್ದೇವಾ? 

ಬೆಂಗಳೂರಿನಲ್ಲಿ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಜನರೊಂದಿಗೆ ಇಂತಹ ಗ*ಲಾಟೆ ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ! ಇದನ್ನು ಕಣ್ಣೆದುರು ನೋಡುತ್ತಿರುವಾಗ ನನ್ನ ಮನಸ್ಸಿನಲ್ಲಿ ಒಂದೆರಡು ಪ್ರಶ್ನೆಗಳು ಮೂಡಿದವು.

1. ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ?
2. ಹಾಗಿದ್ದರೆ ನಾವು ನಮ್ಮ ಊರಿನಲ್ಲಿ ಕನ್ನಡ ಮಾತನಾಡುವುದೇ ತಪ್ಪಾ?
3. ನಮ್ಮ ಸ್ವಂತ ನಗರದಲ್ಲಿ ನಾವು ಎಷ್ಟು ಸುರಕ್ಷಿತವಾಗಿರುತ್ತೇವೆ?
4. ನಮ್ಮ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಇಂತಹ ದೀರ್ಘಾವಧಿಯ ಮಾನಸಿಕ ಆಘಾತಕ್ಕೆ ಕಾರಣವಾಗುವ ಇಂತಹ ಘಟನೆಗಳನ್ನು ಮುಚ್ಚಿ ಹಾಕಬೇಕೆ ?

‘ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿಗಳು ಹಾಗು ಕರ್ನಾಟಕದ ರಾಜ್ಯ ಪೊಲೀಸ್ ಇಲಾಖೆಯವರು ಈ ಬಗ್ಗೆ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ. ಇಂತಿ , ಹರ್ಷಿಕಾ ಪೂಣಚ್ಚ [ಚಿತ್ರನಟಿ]ಬೆಂಗಳೂರು. (ಈ ಇಡೀ ಘಟನೆಯ ನಡುವೆ ನನ್ನ ಕುಟುಂಬದ ಸದಸ್ಯರು ಚಿತ್ರೀಕರಿಸಿದ ವೀಡಿಯೊವನ್ನು ಪೋಸ್ಟ್ ಮಾಡುತ್ತಿದ್ದೇನೆ. ಅಷ್ಟು ಸ್ಪಷ್ಟವಾಗಿಲ್ಲ ಹಾಗು ಘಟನೆಯ ಮದ್ಯದಿಂದ ಅವರಿಗೆ ತಿಳಿದಷ್ಟು ಚಿತ್ರೀಕರಿಸಿದ್ದಾರೆ) ಎಂದು ಹರ್ಷಿಕಾ ಪೋಸ್ಟ್ ಮಾಡಿದ್ದಾರೆ.

 

ಇನ್ನು ಈ ಪೋಸ್ಟ್ ಗೆ ಹಲವರು ಕಮೆಂಟ್ಸ್ ಮಾಡಿದ್ದು, ಕಮಿಷನರ್ ಗೆ ಈ ಪೋಸ್ಟ್ ಟ್ಯಾಗ್ ಮಾಡಿ ಎಂದಿದ್ದಾರೆ. ಇನ್ನು ಕೆಲವರು, ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ. ಇಂತಹ ಹೋಟೆಲ್ ಹಾಗೂ ಸ್ಥಳಗಳಿಗೆ ಭೇಟಿ ನೀಡಬೇಡಿ ಎಂದು ಸಲಹೆ ನೀಡಿದ್ದಾರೆ.

Continue Reading

FILM

ಶಿಲ್ಪಾ ಶೆಟ್ಟಿಗೆ ಶಾಕ್ ನೀಡಿದ ED; ಜಪ್ತಿ ಮಾಡಿದ ಆಸ್ತಿ ಎಷ್ಟು ಗೊತ್ತಾ!?

Published

on

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್‌ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ ಅತಿದೊಡ್ಡ ಶಾಕ್‌ ನೀಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಿಲ್ಪಾ ಶೆಟ್ಟಿ ದಂಪತಿಗೆ ಸೇರಿದ ಬರೋಬ್ಬರಿ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಫ್ಲಾಟ್‌ ಅನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಬಿಟ್‌ಕಾಯಿನ್ ಸೇರಿದಂತೆ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್‌ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರ ಆಸ್ತಿಯ ಜೊತೆಗೆ ಪುಣೆಯಲ್ಲಿರುವ ಬಂಗ್ಲೆ ಮತ್ತು ಷೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

2017ರಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್‌ ಕುಂದ್ರಾ ಅವರನ್ನು 6,600 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬಿಟ್‌ಕಾಯಿನ್‌ ಮೂಲಕ ಹಲವರಿಗೆ ಶೇಕಡಾ 10 ರಷ್ಟು ಹಣ ರಿಟರ್ನ್‌ ಮಾಡುವ ಭರವಸೆ ನೀಡಿ ಮೋಸ ಮಾಡಿದ ಆರೋಪ ಕೂಡ ಕೇಳಿ ಬಂದಿತ್ತು. ಇದೇ ಹಗರಣದಲ್ಲಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಇದೀಗ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ. ಒಟ್ಟಾರೆ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್‌ ಕುಂದ್ರಾ ದಂಪತಿಯ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿದೆ.

Continue Reading

FILM

ಅಂದು ಸುಮಲತಾ, ಇಂದು ಸ್ಟಾರ್ ಚಂದ್ರುಗೆ ಜೈ ಎಂದ ದರ್ಶನ್; ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತ ಡಿ ಬಾಸ್ ಏನಂದ್ರು?

Published

on

ಮಂಡ್ಯ : ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಎಂದಿನಂತೆ ಮಂಡ್ಯ ಹೈ ವೋಲ್ಟೇಜ್ ಕ್ಷೇತ್ರ. ಹೇಗಾದರೂ ಈ ಕ್ಷೇತ್ರ ತಮ್ಮದಾಗಿಸಿಕೊಳ್ಳಬೇಕು ಎಂದು ಅತ್ತ ಬಿಜೆಪಿ+ ಜೆಡಿಎಸ್ , ಇತ್ತ ಕಾಂಗ್ರೆಸ್ ಶ್ರಮಿಸುತ್ತಿದೆ.

ಕಳೆದ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದ ಸುಮಲತಾಗೆ ಮಂಡ್ಯ ಜನತೆ ಜೈ ಎಂದಿದ್ದರು. ಸುಮಲತಾ ಗೆಲುವಿಗಾಗಿ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ – ರಾಕಿಂಗ್ ಸ್ಟಾರ್ ಯಶ್ ಜೋಡೆತ್ತುಗಳಾಗಿ ಅಬ್ಬರಿಸಿದ್ದರು. ಆದರೆ, ಈ ಬಾರಿ ಎಲ್ಲವೂ ಉಲ್ಟಾ ಆಗಿದೆ. ಸುಮಲತಾ ‘ಕಮಲ’ ಹಿಡಿದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅಚ್ಚರಿಯ ಬೆಳವಣಿಗೆ ಎಂಬಂತೆ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಸ್ಟಾರ್ ಚಂದ್ರು ಪರ ದರ್ಶನ್ :

ಸುಮಲತಾ ಜೊತೆ ಇರುತ್ತೇನೆ ಎಂದಿದ್ದ ಡಿ ಬಾಸ್ ಈ ಬಾರಿ ಕಾಂಗ್ರೆಸ್ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶತಾಯಗತಾಯ ಸೋಲಿಸಲೇಬೇಕು ಎಂದು ಕಾಂಗ್ರೆಸ್ ಪಣತೊಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಕಣದಲ್ಲಿದ್ದು, ಅವರ ಪರ ದರ್ಶನ್ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ.

ವ್ಯಕ್ತಿ ಪರ ಅಂದ ದರ್ಶನ್ : 

ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ಇಳಿದಿರುವುದರಿಂದ ಹಲವು ಅನುಮಾನ ಹುಟ್ಟಿಸಿದ್ದವು. ಸುಮಲತಾ ಅವರೊಂದಿಗೆ ಸದಾ ಕಾಣಿಸಿಕೊಳ್ಳುವ ಡಿ ಬಾಸ್ ಬಿಜೆಪಿ ಪರವಾಗಿ ನಿಲ್ಲಲಿದ್ದಾರೆ ಎಂದೇ ಭಾವಿಸಲಾಗಿತ್ತು. ಆದರೆ, ಅವರು ಕಾಂಗ್ರೆಸ್ ಪರ ಬ್ಯಾಟ್ ಬೀಸಿ ಪ್ರಶ್ನೆ ಹುಟ್ಟು ಹಾಕಿದ್ದರು. ಇದಕ್ಕೆ ಇದೀಗ ಅವರೇ ಉತ್ತರ ನೀಡಿದ್ದಾರೆ.

ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ. ಆದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಎಲ್ಲೆಲ್ಲಿ ಪ್ರಚಾರ :
ಹಲಗೂರಿನಿಂದ ಸ್ಟಾರ್ ಚಂದ್ರು ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರ ಜೊತೆಗೂಡಿ ದರ್ಶನ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ. ಕಾಗೇಪುರ (ತಳಗವಾದಿ) ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

Continue Reading

LATEST NEWS

Trending