Friday, August 12, 2022

ಮುಲ್ಕಿಯಲ್ಲಿ ವಿದ್ಯುತ್ ಕಂಬಕ್ಕೆ ಗುದ್ದಿದ ಟೆಂಪೋ: ಚಾಲಕ ಜೀವಾಂತ್ಯ-ಇಬ್ಬರಿಗೆ ಗಂಭೀರ

ಮುಲ್ಕಿ: ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು ಟೆಂಪೋದಲ್ಲಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ಪ್ರಮುಖ ರಸ್ತೆಯಲ್ಲಿ ಸಂಭವಿಸಿದೆ.


ಮೃತ ಚಾಲಕನನ್ನು ಕೆಎಸ್ ರಾವ್ ನಗರ ಲಿಂಗಪ್ಪಯ್ಯಕಾಡು ವಿಜಯಪುರ ಕಾಲೋನಿ ನಿವಾಸಿ ಯಶವಂತರಾಯ ಎಂದು ಗುರುತಿಸಲಾಗಿದೆ. ಹಾಗೂ ಗಾಯಾಳುಗಳನ್ನು ಭಗವಂತರಾಯ ಮತ್ತು ಕುಮಾರ ಎಂದು ಗುರುತಿಸಲಾಗಿದೆ.

ಮುಲ್ಕಿಯ ಕೆಎಸ್ ರಾವ್ ನಗರ ಲಿಂಗಪ್ಪಯ್ಶ ಕಾಡುವಿನಿಂದ ಕೂಲಿ ಕೆಲಸಕ್ಕೆ ಬೆಳಗ್ಗೆ ಟೆಂಪೋದಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಕೋಲ್ನಾಡು ಕೈಗಾರಿಕಾ ಪ್ರದೇಶದ ಪ್ರಮುಖ ರಸ್ತೆಯಲ್ಲಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.


ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು ಚಾಲಕ ಹಾಗೂ ಟೆಂಪೋದಲ್ಲಿದ್ದ ಇಬ್ಬರೂ ಕೂಲಿ ಕಾರ್ಮಿಕರು ಟೆಂಪೋದ ಒಳಗೆ ಸಿಲುಕಿಕೊಂಡು ಒದ್ದಾಡುತ್ತಿದ್ದು ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸಂದರ್ಭ ಟೆಂಪೋ ಚಾಲಕ ಯಶವಂತರಾಯ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ, ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಕೃಷಿಕರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾhttp://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್...

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...

ಸ್ವಾತಂತ್ರ್ಯ ಸಂಭ್ರಮಕ್ಕೆ ಅಹಿತಕರ ಘಟನೆ ಆಗದಂತೆ ದ.ಕದಲ್ಲಿ ಟೈಟ್ ಸೆಕ್ಯೂರಿಟಿ

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ.ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ...