ಉಡುಪಿ:ಕಾಂಕ್ರೀಟ್ ಕೆಲಸಗಾರು ಪ್ರಯಾಣಿಸುತ್ತಿದ್ದ ಟೆಂಪೊವೊಂದು ಪಲ್ಟಿಯಾದ ಘಟನೆ, ಉಡುಪಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ಬೈಕಾಡಿಯ ಬಿಸಿ ರೋಡ್ ಬಳಿ ಭಾನುವಾರ ರಾತ್ರಿ ನಡೆದಿದೆ.ಟೆಂಪೋದಲ್ಲಿ 25 ಕಾರ್ಮಿಕರು ಪ್ರಯಾಣಿಸುತ್ತಿದ್ದು, ಕಾನೂನು ಬಾಹಿರವಾಗಿ ಕಾರ್ಮಿಕರನ್ನು ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದರು.
ಬ್ರಹ್ಮಾವರ ಬೈಕಾಡಿಯಲ್ಲಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಪಲ್ಟಿಯಾಗಿ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟೆಂಪೊ ಪಲ್ಟಿಯಾದ ಕಾರಣದಿಂದಾಗಿ ರಾಷ್ಟೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…