Connect with us

LATEST NEWS

ಮೃತದೇಹದೊಂದಿಗೆ ಪಾತಕಿ ಕಳೆದಳಾ ಹತ್ತು ದಿನಗಳನ್ನು; ಭಯಾನಕ ಘಟನೆ ಬಯಲಿಗೆ ಬಂದಿದ್ದಾದರೂ ಹೇಗೆ..!

Published

on

ಮೃತದೇಹದೊಂದಿಗೆ ಪಾತಕಿ ಕಳೆದಳಾ ಹತ್ತು ದಿನಗಳನ್ನು; ಭಯಾನಕ ಘಟನೆ ಬಯಲಿಗೆ ಬಂದಿದ್ದಾದರೂ ಹೇಗೆ..!

Ten days past the sinner with the dead body; How the terrible incident unfolded .

ಹರಿಯಾಣ: ಪ್ರೀತಿಯಿಂದ ಏನೆಲ್ಲಾ ಎಡವಟ್ಟಾಗುತ್ತೆ ಅನ್ನೋದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ತನ್ನ ಪತಿಯನ್ನೇ ಕೊಲೆ ಮಾಡಿದ ಮಹಿಳೆಯೋರ್ವಳು ಆತನ ಮೃತದೇಹದೊಂದಿಗೆ 10 ದಿನಗಳನ್ನು ಕಳೆದ ಭಯಾನಕ ಘಟನೆ ಹರಿಯಾಣದಲ್ಲಿ ಬೆಳಕಿಗೆ ಬಂದಿದೆ.

 ಪ್ರಾಪರ್ಟಿ ಡೀಲರ್ ಆಗಿದ್ದ ದಿನೇಶ್‌ ಎಂಬಾತನೇ  ಕೊಲೆಗೀಡಾದ ದುರ್ದೈವಿ.  ದಿನೇಶ್ ಪತ್ನಿ ನಿತಿನ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಇದಕ್ಕೆ ಮುಳ್ಳಾಗಿದ್ದ ಪತಿಯನ್ನು ನಿತಿನ್‌ ಹಾಗೂ ಆತನ ಸ್ನೇಹಿತರ ಜತೆಗೂಡಿ ಕೊಲೆ ಮಾಡಿರುವ ಆರೋಪವಿದೆ.

ಅದಾಗಲೇ ಅವರಿಗೆ ದಿನೇಶ್ ಪತ್ನಿ ನಿತಿನ್ ಎಂಬಾತನ ಜತೆ ಅಕ್ರಮ ಸಂಬಂಧ ಹೊಂದಿರುವ ವಿಷಯ ತಿಳಿದುಬಂದಿದೆ. ಈ ಕಾರಣಕ್ಕೆ ನಿತಿನ್‌ ಮತ್ತು  ಆತನ ಸ್ನೇಹಿತರ ಜತೆಗೂಡಿ ದಿನೇಶ್ ನನ್ನು ಕೊಲೆ ಮಾಡುವ ಪ್ಲ್ಯಾನ್‌ ಮಾಡಿದ್ದಳು. ಇದಕ್ಕೆ ಆಕೆಯ ಚಿಕ್ಕಪ್ಪ ಹರ್ಜೀತ್ ಸಿಂಗ್ ಕೂಡ ಸಾಥ್‌ ನೀಡಿದ್ದ.

ಜನವರಿ 11ರ ರಾತ್ರಿ ಎಲ್ಲರೂ ಸೇರಿ ಕೋಲಿನಿಂದ ಹೊಡೆದು ದಿನೇಶ್ ಅವರನ್ನು ಕೊಲೆ ಮಾಡಿದ್ದಾರೆ. ಬಳಿಕ  ಶವವನ್ನು ಗೋಣಿ ಚೀಲದಲ್ಲಿ ತುಂಬಿ  ಕೂಡಲೇ ಶವವನ್ನು ಎಲ್ಲಿ ಹಾಕುವುದು ಎಂದು ತಿಳಿಯದ ಕಾರಣ ಬಾತ್‌ರೂಮಿನಲ್ಲಿ ಇಟ್ಟಿದ್ದಾರೆ.

ಜನವರಿ 28ರಂದು ಚರಂಡಿಯೊಂದರಲ್ಲಿ ಪೊಲೀಸರಿಗೆ ಕೊಳೆತ ಶವವೊಂದು  ಸಿಕ್ಕಿತ್ತು. ಅಪರಿಚಿತ ಶವದ ತನಿಖೆ ಶುರು ಮಾಡಿದಾಗ ಅದು ದಿನೇಶ್‌ ಅವರ ಶವ ಎನ್ನುವುದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಇನ್ನಷ್ಟು ತನಿಖೆ ಕೈಗೊಂಡಿದ್ದಾರೆ.

ಹಾಗೂ ಪೊಲೀಸರ ಕೈಗೆ  ಸುಲಭದಲ್ಲಿ ಸಿಕ್ಕಿಬೀಳಬಹುದು ಎನ್ನುವ ಭಯದಿಂದ  ಶವವನ್ನು ಮನೆಯಲ್ಲೇ ಇಟ್ಟುಕೊಂಡಿದ್ದಾಳೆ ಮಹಿಳೆ. ಸುಮಾರು 10 ದಿನ ಅಲ್ಲಿಯೇ ಶವವಿದ್ದು, ಅದರ ಜತೆಗೇ ಮಹಿಳೆ ಮನೆಯಲ್ಲಿ ಇದ್ದಾಳೆ!

ಜನವರಿ 18ಕ್ಕೆ ದುರ್ವಾಸನೆ ಬರಲು ಆರಂಭವಾಗಿದೆ. ನಂತರ ನೆರೆಹೊರೆಯವರಿಗೆ ಸಂದೇಹ ಬರಬಹುದು ಎನ್ನುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಅದನ್ನು ಚರಂಡಿಯಲ್ಲಿ ಎಸೆದು ಬಂದಿದ್ದಾರೆ.   ಕೊಲೆಗೆ ಸಹಕರಿಸಿದವರಿಗೆ 41 ಸಾವಿರ ರೂಪಾಯಿಗಳನ್ನೂ ಪತ್ನಿ ನೀಡಿರುವ ವಿಷಯ ಪೊಲೀಸರಿಗೆ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಕೆಲವರು ತಲೆಮರೆಸಿಕೊಂಡಿದ್ದಾರೆ.ತನಿಖೆ ಚುರುಕುಗೊಂಡಿದ್ದು ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

bengaluru

ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!

Published

on

ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.

ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Continue Reading

LATEST NEWS

Trending