Connect with us

    LATEST NEWS

    ಒಲೆ ಹೊತ್ತಿ ಉರಿದ್ರೆ ಅಡುಗೆ, ಭೂಮಿ ಹೊತ್ತಿ ಉರಿದ್ರೆ ಏನಾಗುತ್ತೆ-ಗೊಂದಲಕ್ಕೀಡು ಮಾಡಿದ ಕೋಡಿಮಠ ಶ್ರೀ ಭವಿಷ್ಯ…!

    Published

    on

    ಬೆಂಗಳೂರು: “ಒಲೆ ಹೊತ್ತಿ ಉರಿದರೆ ಅಡುಗೆ ಆಗುತ್ತದೆ, ಆದರೆ ಭೂಮಿ ಹೊತ್ತಿ ಉರಿದರೆ ಏನಾಬಹುದು?” ಎಂದು ಹೇಳುವ ಮೂಲಕ ಇದೀಗ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಜನರನ್ನು ಗೊಂದಲಕ್ಕೀಡು ಮಾಡಿದ್ದಾರೆ.


    ಬೆಂಗಳೂರಿನಲ್ಲಿ ಕೆಪಿಸಿಸಿ ಸದಸ್ಯ ಕೃಷ್ಣಮೂರ್ತಿ ಜನ್ಮದಿನದ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ಕೊರೊನಾ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ. ಕೊರೊನಾ ನಾಲ್ಕನೇ ಅಲೆ ಪರಿಣಾಮಕಾರಿಯಾಗಿರುವುದಿಲ್ಲ. ಕೊರೊನಾ ಬರುತ್ತದೆ, ಬಂದು ಹೋಗುತ್ತದೆ ಎಂದು ಕೋಡಿ ಮಠದ ಸ್ವಾಮೀಜಿಗಳು ಬಂದಿದ್ದರು.

    ಕೊರೊನಾ ಬಗ್ಗೆ ಯಾರು ಕೂಡ ಆತಂಕ ಪಡಬೇಡಿ, ಈ ಬಾರಿ ಕೊರೊನಾದಿಂದ ಯಾವುದೇ ಸಾವು-ನೋವುಗಳು ಸಂಭವಿಸುವುದಿಲ್ಲ ಎಂದು ತಿಳಿಸಿದ್ದಾರೆ. ನಂತರ ಕರ್ನಾಟಕ ರಾಜಕೀಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲಾ ಪಕ್ಷಗಳು ಒಡೆಯುತ್ತದೆ ಎಂದು ನಾನು ಹಿಂದೆಯೇ ಹೇಳಿದ್ದೇನೆ. ಇದೀಗ ಈ ಮಾತುಗಳು ನಿಜವಾಗುತ್ತಿದೆ ಎಂದಿದ್ದಾರೆ.

    ಅಷ್ಟಕ್ಕೂ ಈ ಮಾತಿನ ಹಿನ್ನೆಲೆ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸುತ್ತಿರುವುದನ್ನು ಮುಂದಿಟ್ಟುಕೊಂಡು ಹೇಳಿದ್ದಾರೆ ಎನ್ನಲಾಗುತ್ತಿದೆ. ನಂತರ ಒಲೆ ಹೊತ್ತಿ ಉರಿದರೆ ಅಡುಗೆ ಆಗುತ್ತದೆ ಆದರೆ ಭೂಮಿ ಹೊತ್ತಿ ಉರಿದರೆ ಏನಾಬಹುದು ಎಂದು ಹೇಳುವ ಮೂಲಕ ಎಲ್ಲರಲ್ಲಿಯೂ ಗೊಂದಲ ಮೂಡಿಸಿದ್ದಾರೆ.

    ಅಲ್ಲದೇ ಈ ಬಗ್ಗೆ ಮುಂದೆ ಭವಿಷ್ಯದಲ್ಲಿ ಹೇಳುತ್ತೇವೆ ಎಂದು ತಮ್ಮ ಉತ್ತರವನ್ನು ಕಾಯ್ದಿರಿಸಿದ್ದಾರೆ. ಆದರೆ ಕೋಡಿ ಶ್ರೀಗಳ ಈ ಹೇಳಿಕೆ ಜನರ ಮನಸ್ಸಿನಲ್ಲಿ ಆತಂಕವನ್ನು ಸೃಷ್ಟಿಸಿದೆ. ಈ ಮುನ್ನ ಈ ವರ್ಷ ಕಾರ್ತಿಕ ಮಾಸದಿಂದ ಜನವರಿವರೆಗೆ ಲೋಕ ಕಂಟಕವಿದೆ, ದೇಹ ಅಶಕ್ತಿಯಿಂದ ಬಿದ್ದು ಸಾಯುತ್ತವೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು.

    ಅದರಂತೆ ಬಾಂಬ್‌ಗಳು, ಭೂಕಂಪ, ಯುದ್ದಭೀತಿ, ಜನ ಜನಗಳ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುವುದು, ದೇಹ ಅಶಕ್ತಿಯಿಂದ ದಾರಿಯಲ್ಲಿ ಬಿದ್ದು ಸಾಯುವುದು. ದೇಹ ಅಂಗಾಂಗಗಳ ಮೇಲೆ ಪ್ರಭಾವ ಕಳೆದುಕೊಳ್ಳುತ್ತವೆ’ ಎಂದು ಕೋಡಿಶ್ರೀ ನುಡಿದಿದ್ದರು.

    ಅದೇ ರೀತಿ ಇತ್ತೀಚಿನ ಪ್ರಕರಣಗಳನ್ನು ಗಮನಿಸುತ್ತಿದ್ದರೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಈ ಸ್ಪೋಟಕ ಭವಿಷ್ಯ ಈಗ ನಿಜವಾಗುತ್ತಿದೆಯೇ ಎಂಬ ಅನುಮಾನ ಎದುರಾಗಿದೆ. ಕೆಲ ದಿನಗಳ ಹಿಂದಷ್ಟೇ ವ್ಯಕ್ತಿಯೊಬ್ಬರು ಸಾಯಿಬಾಬಾ ದರ್ಶನ ಪಡೆದ ಬಳಿಕ ದೇವಸ್ಥಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದರು.

    ಹಾಗೆಯೇ ಸ್ನೇಹಿತರೊಂದಿಗೆ ರಸ್ತೆಯಲ್ಲಿ ಆರಾಮಾಗಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಉತ್ತರಪ್ರದೇಶದ ಮೀರತ್‌ನಲ್ಲಿ ಕುಸಿದು ಬಿದ್ದು ಸಾವಿಗೀಡಾದ್ದು, ಮೊನ್ನೆಯಷ್ಟೇ ಸುದ್ದಿಯಾಗಿತ್ತು. ನವರಾತ್ರಿಯ ವೇಳೆ ಗರ್ಬಾ ನೃತ್ಯ ಮಾಡುತ್ತಲೇ ಯುವಕನೋರ್ವ ಕುಸಿದು ಬಿದ್ದು ಸಾವು ಕಂಡ ಘಟನೆ ಗುಜರಾತ್‌ನಲ್ಲಿ ನಡೆದಿತ್ತು.

    Click to comment

    Leave a Reply

    Your email address will not be published. Required fields are marked *

    Baindooru

    ಕದ್ರಿ ಪಾರ್ಕ್‌ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್‌ನಿಂದ ಲಾಂಛನ ಬಿಡುಗಡೆ

    Published

    on

    ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಶರಧಿ ಪ್ರತಿಷ್ಟಾನವು ಆಯೋಜಿಸುವ ‘ ಕಲಾ ಪರ್ಬ ‘ ಇದರ ಲಾಂಛನ ಮತ್ತು ಕರಪತ್ರವನ್ನು ಇಂದು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಬಿಡುಗಡೆ ಗೊಳಿಸಿದರು.

    ಕಲಾವಿದರೆಲ್ಲರನ್ನೂ ಒಗ್ಗೂಡಿಸಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ಕಡೆ ಅಭಿವ್ಯಕ್ತ ಪಡಿಸುವ ಮತ್ತು ಇದರ ಮೂಲಕ ಕಲಾ ಕ್ಷೇತ್ರ ಇನ್ನಷ್ಟು ವಿಕಸನವಾಗುವ ಉದ್ದೇಶವನ್ನು ಇಟ್ಟುಕೊಂಡು ಈ ಕಲಾ ಪರ್ಬವನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಮೂರ್ತ – ಅಮೂರ್ತ, ಹಿರಿಯ – ಕಿರಿಯ ಎಂಬ ಯಾವುದೇ ಅಂತರ, ಬೇಧ ಇಲ್ಲದೇ ಎಲ್ಲಾ ಕಲಾವಿದರು ತಮ್ಮ ಕಲಾ ಪ್ರಕಾರಗಳನ್ನು ಕಲಾ ವೀಕ್ಷಕರಿಗೆ, ಕಲಾಭಿಮಾನಿಗಳಿಗೆ ಕಲಾಕೃತಿಗಳ ಪ್ರದರ್ಶನ, ಮಾರಾಟ ಮತ್ತು ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸುವುದು ಪ್ರಮುಖವಾಗಿರುತ್ತದೆ. ಚಿತ್ರ ಕಲೆ, ಶಿಲ್ಪಕಲೆ ಮತ್ತು ನೃತ್ಯ ಪ್ರಕಾರಗಳ ವಿವಿಧ ರೂಪಗಳ ಅಭಿವ್ಯಕ್ತ ಹರಿವು, ಸೆಳವುಗಳ ಮೂಲಕ ಮೇಳದ ರೂಪದಲ್ಲಿ ಇಲ್ಲಿ ಆಗುತ್ತಿರುವುದು ಕಲಾ ಸಂಭ್ರಮ ಮತ್ತು ಕಲಾ ಜಂಗಮ.

    ಸುಮಾರು 200 ಮಳಿಗೆಗಳಲ್ಲಿ ಕಲಾಕೃತಿ, ಛಾಯಾ ಚಿತ್ರ 30 ಮಳಿಗೆಗಳಲ್ಲಿ ಶಿಲ್ಪ ಕಲಾ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಇರುವುದು. ಕಲಾಕೃತಿಗಳನ್ನು ಮಿತ ದರದಲ್ಲಿ ಖರೀದಿಸುವವರಿಗೆ ಉತ್ತಮ ಅವಕಾಶವಿದು.

    ಲಾಂಛನದ ಅರ್ಥ :

    ಈ ಕಲಾಪರ್ಬದ ಲಾಂಛನವು ಒಂದು ಸಂದೇಶವನ್ನು ನೀಡುತ್ತಿದೆ. ಇಲ್ಲಿ ಒಂದು ಕ್ಯಾನ್ವಾಸ್ ನಲ್ಲಿ 3 ಬಣ್ಣಗಳ ಸಂಗಮ ( K ) ಇಲ್ಲಿ ಕ್ಯಾನ್ವಾಸ್ ಕಲಾಕೃತಿಯ ಪ್ರತೀಕವಾದರೂ ನಮ್ಮ ಸಮಾಜವೇ ಒಂದು ರೀತಿಯ ಕ್ಯಾನ್ವಾಸ್ ಎಂಬ ಚೌಕಟ್ಟು. ಈ ಬದುಕಿನ ಚೌಕಟ್ಟಿನ ಒಳಗೆ ಎಲ್ಲರದ್ದೂ ಒಂದು ರೀತಿಯ ಬಣ್ಣದ ಬದುಕು. ನಮ್ಮ ನಿತ್ಯ ದಿನಚರಿ, ಚಟುವಟಿಕೆಗಳಿಂದ ಸಮಾಜಕ್ಕೆ, ಪ್ರಕೃತಿಗೆ ಒಂದು ಕೊಡುಗೆಯನ್ನು ನೀಡಬೇಕಾದರೆ ನಮ್ಮ ಸೀಮಿತ ಚೌಕಟ್ಟಿನಿಂದ ವಾದ ಮತ್ತು ಪಾದಗಳನ್ನು ಹೊರಗಿಡಲೇ ಬೇಕು. ಇದರ ಪ್ರತಿ ರೂಪವಾಗಿ ಕ್ಯಾನ್ವಾಸ್ ನಿಂದ ಒಂದು ಕಡೆ ಕುಂಚ ( ವಾದ…ತತ್ವ, ಸಿದ್ದಾಂತ ) ಹೊರಗೆ ಬಂದಿರುತ್ತದೆ. ಇನ್ನೊಂದು ಕಡೆ ಹೆಜ್ಜೆ ( ಪಾದ…ನಡೆ, ನಡತೆ ) ಹೊರಗೆ ಬಂದಿರುತ್ತದೆ.

    ಅಂದರೆ ಕಲಾಕ್ಷೇತ್ರದಲ್ಲಿ ಆಗಲಿ, ಸಮಾಜದಲ್ಲಾಗಲಿ ನಾವು ನಮ್ಮದೇ ಸೀಮಿತ ಬಣ್ಣ, ಬದುಕು ಎಂಬ ಚೌಕಟ್ಟಿನಲ್ಲಿ ಕಂಡು ಕೊಂಡದ್ದಕ್ಕಿಂತ, ನಾವು ಚೌಕಟ್ಟು ಮೀರಿ ಹೊರ ಆಯಾಮವನ್ನು ತಲುಪಲು ಪ್ರಯತ್ನಿಸಿದರೆ ( ಖಾಸಗಿ ಬದುಕಿನಿಂದ ಸಾಮಾಜಿಕ ಬದುಕಿಗೆ ) ಉತ್ತಮವಾದ ಕಲಾಕೃತಿಯನ್ನು ಮತ್ತು ಸಮಾಜವನ್ನು ರೂಪಿಸಬಹುದು ಎಂಬುದು ಈ ಲಾಂಛನದ ಒಳಾರ್ಥ.

    ಅದೇ ರೀತಿ ಕರ ಪತ್ರದಲ್ಲಿ ಬಣ್ಣದ ಹುಡುಗಿಯೊಬ್ಬಳು ಸಂಭ್ರಮಿಸುತ್ತಿದ್ದಾಳೆ. ಆಕೆಯ ಮುಖ ಬಣ್ಣದ ಪಾಲೇಟ್ ಮತ್ತು ನೀರಿನ ಹೂಜಿ, ಕೈ, ಕಾಲುಗಳು ಕುಂಚ ( ಚಿತ್ರ ಕಲಾ ಮೇಳ ಆಗಿರುವುದರಿಂದ ) ಕೆಳಗಿನ ಪಾದದ ಕುಂಚಗಳಲ್ಲಿ ಹೆಜ್ಜೆ – ಗೆಜ್ಜೆ ( ಈ ಪರ್ಬದಲ್ಲಿ ನೃತ್ಯವೂ ಇರುವುದರಿಂದ ) ಉಟ್ಟ ಲಂಗವು ಶಿಲಾ ಹಾಸುಗಳ ಪ್ರತಿರೂಪ ( ಈ ಪರ್ಬದಲ್ಲಿ ಶಿಲ್ಪ ಕಲೆಯೂ ಇರುವುದರಿಂದ ) ಎದೆ ಭಾಗದಲ್ಲಿ ಕ್ಯಾಮೆರಾ ಲೆನ್ಸ್ ( ಈ ಪರ್ಬದಲ್ಲಿ ಛಾಯಾ ಚಿತ್ರ ಪ್ರದರ್ಶನವೂ ಇರುವುದರಿಂದ ) ಇದೆಲ್ಲರ ಪ್ರತೀಕವಾಗಿ ಈ ಚಿತ್ರವನ್ನು ರಚಿಸಲಾಗಿದೆ.

    ಬನ್ನಿ ಕಲಾ ಪರ್ಬ ನಿಮ್ಮದೇ…ಬಣ್ಣದ ಲೋಕದಲ್ಲಿ ಸಂಭ್ರಮಿಸೋಣ. ನಿಮ್ಮ ಬೆಂಬಲವೇ ಈ ಪರ್ಬದ ಯಶಸ್ಸು

    Continue Reading

    LATEST NEWS

    ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

    Published

    on

    ಮಂಗಳೂರು/ಬೆಂಗಳೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಈಗಾಗಲೇ ಮುಗಿದಿದ್ದು, ನಾಳೆ ಮತ ಎಣಿಕೆ ನಡೆಯಲಿದ್ದು ಅಭ್ಯರ್ಥಿಗಳ ಸೋಲು, ಗೆಲುವಿನ ಭವಿಷ್ಯ ನಾಳೆ ನಿರ್ಧಾರವಾಗಲಿದೆ.


    ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ನವೆಂಬರ್ 23ಕ್ಕೆ ನಿರ್ಧಾರವಾಗಲಿದ್ದು, ಈಗಾಗಲೇ ಎಕ್ಸಿಟ್ ಪೋಲ್ ಸಮೀಕ್ಷೆಯು ಬಂದಿದೆ. ಮೂರು ಕ್ಷೇತ್ರಗಳಲ್ಲಿ 2 ಕ್ಷೇತ್ರವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಒಂದರಲ್ಲಿ ಕಾಂಗ್ರೇಸ್ ಗೆಲುವು ಸಾಧಿಸಲಿದೆ ಎಂದು ಹೇಳಿದೆ.

    ಇದನ್ನೂ ಓದಿ:ಹಾಸ್ಟೆಲ್‌ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾ*ವು: ಮೂವರ ಬಂಧನ

    ಜಿದ್ದಾಜಿದ್ದಿನ ಕ್ಷೇತ್ರವಾದ ಚೆನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ. ಯೋಗೆಶ್ವರ್ ಸೋಲಲಿದ್ದು, ಬಿಜೆಪಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಕಾಣಲಿದ್ದಾರೆ ಎಂಬ ಲೆಕ್ಕಚಾರವಿದೆ. ಹೀಗಾಗಿ ಜೆಡಿಎಸ್ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವ ನಿರೀಕ್ಷೆ ಇದೆ. ಆದರೆ ಕಾಂಗ್ರೇಸ್ ನ ಡಿಕೆ ಬ್ರದರ್ಸ್ ಗೆ ಚನ್ನಪಟ್ಟಣ ಕ್ಷೇತ್ರ ತಮ್ಮ ಪ್ರತಿಷ್ಥೆಯ ಕಣವಾಗಿದೆ.
    ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆ ಇದೆ. ಈ ಮೂಲಕ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಸ್ಪರ್ಧಿಸಿದ್ದ ಅನ್ನಪೂರ್ಣ ತುಕರಾಂ ಜಯ ಗಳಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳುತ್ತಿದೆ. ಈ ಮೂಲಕ ಕಾಂಗ್ರೆಸ್ ತನ್ನ ಭದ್ರ ಕೋಟೆಯನ್ನು ಉಳಿಸಿಕೊಂಡಂತಾಗುತ್ತದೆ.

    ಮುಸ್ಲಿಂ ಪ್ರಾಬಲ್ಯವಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಲಿಂಗಾಯುತರ ಮತಗಳೇ ನಿರ್ಣಾಯಕವಾಗಿದೆ. ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಬಿಜೆಪಿ ಆಭ್ಯರ್ಥಿಯಾಗಿ ಸ್ಪರ್ಧಿಸಿದರೆ, ಅವರ ವಿರುದ್ದ ಕಾಂಗ್ರೆಸ್ ನ ಯಾಸಿರ್ ಅಹಮಾದ್ ಖಾನ್ ಪಠಣ್ ಸ್ಪರ್ಧಿಸಿದ್ದಾರೆ. ಈ ಬಾರಿ ಶಿಗ್ಗಾಂವಿಯಲ್ಲಿ ಮತದಾರರು ಬಿಜೆಪಿಯತ್ತ ವಾಲಿದ್ದಾರೆ. ಆ ಮೂಲಕ ಭರತ್ ಬೊಮ್ಮಾಯಿ ಗೆಲ್ಲುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ.
    ಒಂದು ಕಡೆ ಕಾಂಗ್ರೆಸ್ ಗೆ ಈ ಉಪಚುನಾವಣೆಯ ಗೆಲುವು ಪ್ರತಿಷ್ಠೆಯ ಕಣವಾದರೆ, ಬಿಜೆಪಿ- ಜೆಡಿಎಸ್ ಗೆ ಮೂರು ಕ್ಷೇತ್ರವನ್ನು ಗೆಲ್ಲುವುದರ ಮೂಲಕ ಸರ್ಕಾರದ ವೈಫಲ್ಯವನ್ನು ತೋರಿಸುವ ಪ್ರಯತ್ನವಾಗಲಿದೆ. ಇದಕ್ಕೆಲ್ಲಾ ನಾಳೆಯ ಫಲಿತಾಂಶ ಉತ್ತರ ನೀಡಲಿದೆ.

    Continue Reading

    Baindooru

    WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ

    Published

    on

    ಉಡುಪಿ : ಚಾಲಕನ ನಿಯಂತ್ರಣ ತಪ್ಪಿ  ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಉಡುಪಿಯ  ಅಂಬಾಗಿಲು – ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.

    ಘಟನೆಯ ಸಂದರ್ಭ ಸ್ಥಳದಲ್ಲಿ ಯಾವುದೇ ವಾಹನ ಇರದೇ ಇದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ತೆರಳುತ್ತಿತ್ತು.

    ಇದನ್ನೂ ಓದಿ : ಶೀಘ್ರದಲ್ಲೇ ಉಬರ್‌ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?

    ಪೆರಂಪಳ್ಳಿಗೆ ತೆರಳುವ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    Continue Reading

    LATEST NEWS

    Trending