Connect with us

    STATE

    ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ; 9 ದಿನವಾದರೂ ಸಿಗದ ಸುಳಿವು..!

    Published

    on

    ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ; 9 ದಿನವಾದರೂ ಸಿಗದ ಸುಳಿವು..!

    ಮಡಿಕೇರಿ : ಜಿಲ್ಲೆಯ ಪವಿತ್ರ ಧಾರ್ಮಿಕ ಸ್ಥಳ ತಲಕಾವೇರಿಯ ಬೃಹ್ಮಗಿರಿ ಬೆಟ್ಟ ಕುಸಿದು 9 ದಿನವಾದರೂ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಕಣ್ಮರೆಯಾಗಿದ್ದ ಐದು ಜನರ ಪೈಕಿ ಮೂವರು ಬರೋಬ್ಬರಿ ಎಂಟು ದಿನಗಳಾದರೂ ಮೂವರ ಯಾವುದೇ ಸುಳಿವು ಸಿಕ್ಕಿಲ್ಲ.

    ಮೂವರ ಸುಳಿವು ಸಿಗದಿರುವುದು ರಕ್ಷಣಾ ತಂಡಗಳಿಗೆ ತಲೆನೋವಾಗಿದೆ. ಆಗಸ್ಟ್ 8 ರಂದು ನಾರಾಯಣ ಆಚಾರ್ ಅವರ ಸಹೋದರ ಆನಂದತೀಥ ಅವರ ಮೃತದೇಹ ದೊರೆತಿತ್ತು.

    ಬಳಿಕ ಮಾರ್ಚ್ 11 ರಂದು ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ದೊರೆತಿತ್ತು. ಅವರಿಬ್ಬರ ಮೃತದೇಹಗಳು ದೊರೆತ ಸ್ಥಳದಿಂದ ಇನ್ನೂ ಮುಂದಕ್ಕೆ ಉಳಿದ ಮೂವರ ಪತ್ತೆಗಾಗಿ ಹುಡುಕಾಟ ಆರಂಭಿಸಲಾಗಿದೆ.

    ಬೆಟ್ಟ ಕುಸಿಯುವುದಕ್ಕೂ ಮೊದಲು ಮನೆ ಇದ್ದ ಸ್ಥಳದಿಂದ ಬರೋಬ್ಬರಿ ನಾಲ್ಕು ಕಿಲೋಮೀಟರ್ ದೂರದಲ್ಲಿ ಈ ಮೂವರು ಪತ್ತೆಯಾಗಬಹುದಾ ಎಂಬ ಆಶಾವಾದದೊಂದಿಗೆ ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ದಳ ಪೊಲೀಸ್ ಸೇರಿದಂತೆ 75 ಕ್ಕೂ ಹೆಚ್ಚು ಸಿಬ್ಬಂದಿ ಮೂರು ನಾಲ್ಕು ತಂಡಗಳಾಗಿ ಹುಡುಕುವ ಕಾರ್ಯ ಮುಂದುವರೆಸಿದ್ದಾರೆ.

    ಇನ್ನು ಭೂಕುಸಿತವಾದ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಣೆಯಾದವರ ಪತ್ತೆ ಕಾರ್ಯದಲ್ಲಿ ತೊಡಗಿದ್ದ ವಿವಿಧ ರಕ್ಷಣಾ ತಂಡದ ಸಿಬ್ಬಂಧಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    Baindooru

    ಬಿಗ್ ಬಾಸ್ ಗೆ ಮೂರನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ಹಿಂದೂ ಫೈರ್ ಬ್ರಾಂಡ್ ಚೈತ್ರಾ

    Published

    on

    ಮಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರೋ ಈ ಶೋಗೆ ಸ್ಪರ್ಧಿಗಳು ಯಾರಾಗ್ತಾರೆ ಅನ್ನೋದು ಕುತೂಹಲವೇ ಹೆಚ್ಚು. ಈ ಬಾರಿ ಅಂದ್ರೆ ಸೀಸನ್ 11 ರ ಸ್ಪರ್ಧಿಗಳು ಯಾರು ಅನ್ನೋ ‘ರಾಜ ರಾಣಿ’ ರಿಯಾಲಿಟಿ ಶೋ ನ ಗ್ರ್ಯಾಂಡ್ ಫಿನಾಲೇಲಿ ರಿವೀಲ್ ಆಗುತ್ತಿದೆ.

    ಎಂಟ್ರಿ ಕೊಟ್ಟ ಚೈತ್ರಾ!

    ಮೊದಲ ಸ್ಪರ್ಧಿಯಾಗಿ ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, 2ನೇ ಸ್ಪರ್ಧಿಯಾಗಿ ಲಾಯರ್ ಜಗದೀಶ್‌ ಬಿಗ್ ಬಾಸ್ ಮನೆ ಸೇರುತ್ತಿದ್ದು, ಇನ್ನೂ 3ನೇ ಸ್ಪರ್ಧಿಯಾಗಿ ‘ಬಿಗ್ ಬಾಸ್‌’ ಮನೆಯೊಳಗೆ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಎಂಟ್ರಿ ಕೊಟ್ಟಿದ್ದಾರೆ.
    ಖಡಕ್‌ ಮಾತುಗಳಿಂದಲೇ, ಹಿಂದುತ್ವದ ಹೆಸರಿನಲ್ಲಿ ಭಾಷಣ ಮಾಡಿ, ತಮ್ಮದೇ ಆದ ಅಪಾರ ಹಿಂಬಾಲಕರನ್ನು ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಚೈತ್ರಾ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
    ಅಲ್ಲದೇ, ಖಾಸಗಿ ವಾಹಿನಿ, ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ಇದೆ.

    ಇದನ್ನು ಓದಿ: ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!

    ವಂಚನೆ ಪ್ರಕರಣ:
    ಪ್ರಖರ ಭಾಷಣಗಳ ಮೂಲಕ ಗಮನ ಸೆಳೆದಿದ್ದ ಚೈತ್ರಾ ಕಾಂಟ್ರವರ್ಸಿಗಳ ಮೂಲಕವೂ ಸದ್ದು ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಟಿಕೆಟ್ ಕೊಡುವ ವಿಚಾರದಲ್ಲಿ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದಡಿ ಜೈಲು ಪಾಲಾಗಿದ್ದರು.
    ಸದ್ಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿರುವ ಚೈತ್ರಾ ಅಲ್ಲಿ ಹೇಗಿರ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.

    Continue Reading

    LATEST NEWS

    ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

    Published

    on

    ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಆದೇಶ ನೀಡಿದೆ.

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚುನಾವಣಾ ಬಾಂಡ್ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಿದ್ದಾರೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. FIR ದಾಖಲಿಸಬೇಕು ಎಂದು ಜನಾಧಿಕಾರ ಸಂಘರ್ಷ ಪರಿಷತ್ ನ ಆದರ್ಶ್ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.

    ಈ ಅರ್ಜಿಯ ವಿಚಾರಣೆ ಇಂದು ನಡೆಸಿರುವ ಕೋರ್ಟ್ FIR ದಾಖಲಿಸಿ ಎಂದು ಬೆಂಗಳೂರಿನ ತಿಲಕ್ ನಗರದ ಪೊಲೀಸರಿಗೆ ಆದೇಶಿಸಿದೆ. ಅಲ್ಲದೇ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಕೋರ್ಟ್ ಮುಂದೂಡಿದೆ.

    Continue Reading

    LATEST NEWS

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್

    Published

    on

    ಮಂಗಳೂರು/ಬೆಂಗಳೂರು:  ಈಗಾಗಲೇ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಹಿಂದೆ ಬಾಂ*ಬ್ ಬೆದರಿಕೆ ಕರೆಗಳು ಬಂದಿದ್ದವು. ಇದೀಗ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂ*ಬ್ ಬೆದರಿಕೆ ಮೇಲ್ ಬಂದಿದೆ. ಹೊಟೇಲ್ ನಲ್ಲಿ ಬಾಂಬ್ಇಟ್ಟು ಸ್ಪೋ*ಟಿಸುವುದಾಗಿ ಮೇಲ್ಸಂದೇಶ ಕಳುಹಿಸಲಾಗಿದೆ.

    ಗೂಗಲ್ ಚಿತ್ರ

    ಈ ಬಗ್ಗೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂ*ಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅದೊಂದು ಹುಸಿ ಬಾಂ*ಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ನಗರದ ಖ್ಯಾತ ಪಂಚತಾರಾ ಹೊಟೇಲ್ ಗಳಲ್ಲಿ ತಾಜ್ವೆಸ್ಟ್ಎಂಡ್​​ ಕೂಡ ಒಂದು. ಇಲ್ಲಿ ಆಗಾಗ ರಾಜಕಾರಣಿಗಳು, ಕ್ರಿಕೆಟರ್ಗಳು, ಉದ್ಯಮಿಗಳು ವಾಸ್ತವ್ಯ ಹೂಡುತ್ತಾರೆ.

    ಇದನ್ನೂ ಓದಿ : ಮಗಳಿಂದಲೇ ತಾಯಿಯ ಕೊ*ಲೆ; ಕುಪ್ಪಾಣಿಯಿಂದ ಹೊ*ಡೆದು ಕೊಂ*ದ ಅಪ್ರಾಪ್ತೆ

    ಸ್ಥಳೀಯ ಪೊಲೀಸರು ಮತ್ತು ಬಾಂ*ಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದ್ದು, ತಪಾಸಣೆ ನಡೆಯುತ್ತಿದೆ. ಘಟನೆ ಬಗ್ಗೆ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ಹೆಚ್. ಟಿ. ತಿಳಿಸಿದ್ದಾರೆ.

    Continue Reading

    LATEST NEWS

    Trending