Sunday, March 26, 2023

ತಲಪಾಡಿ ಟೋಲ್ ಮುಕ್ತ ಸಂಚಾರ ವ್ಯವಸ್ಥೆಗೆ ಒತ್ತಾಯ ಸಾರ್ವಜನಿಕ ಪ್ರತಿಭಟನೆ ಮನವಿ!

ತಲಪಾಡಿ ಟೋಲ್ ಮುಕ್ತ ಸಂಚಾರ ವ್ಯವಸ್ಥೆಗೆ ಒತ್ತಾಯ; ಸಾರ್ವಜನಿಕರ ಪ್ರತಿಭಟನೆ ಮನವಿ!

ಮಂಗಳೂರು: ಕೊರೊನಾ ಸಂಕಷ್ಟದ ನಡುವೆ ಕೇರಳ-ಕರ್ನಾಟಕ ಗಡಿ ಜಿಲ್ಲೆಯ ತಲಪಾಡಿಯಲ್ಲಿ ಸಂಚರಿಸುವ ಲಘು ವಾಣಿಜ್ಯ ವಾಹನಗಳಿಗೆ ಟೋಲ್ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿ, ಟೋಲ್‌ಗೇಟ್ ಮುಂಭಾಗದಲ್ಲಿ ಧರಣಿ ನಡೆಸಿ ನವಯುಗ ಕಂಪೆನಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಎರಡು ವಾರಗಳ ಹಿಂದೆ ಮಂಗಳೂರಿನಿಂದ ತಲಪಾಡಿ ಕಡೆಗೆ ಸಂಚರಿಸುವ ನಗರ ಸಾರಿಗೆ ಬಸ್ಸು ಹಾಗೂ ತಲಪಾಡಿ ಟೋಲ್‌ಗೇಟ್‌ ಮುಂಭಾಗದಲ್ಲಿ 5 ಕಿಲೋ ಮೀಟರ್‌ ವ್ಯಾಪ್ತಿಯ ಸಾರ್ವಜನಿಕರಿಗೆ ಟೋಲ್‌ ಮುಕ್ತ ಸಂಚಾರಕ್ಕೆ ಅವಕಾಶ ನೀಡಬೇಕೆಂದು ಪ್ರತಿಭಟನೆ ನಡೆಸಲಾಗಿತ್ತು.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ನೇತೃತ್ವದಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗಿತ್ತು. ತಲಪಾಡಿ ವ್ಯಾಪ್ತಿಯಲ್ಲಿ ಲಘು ಟ್ಯಾಕ್ಸಿ ಚಾಲಕರು ಟೋಲ್‌ ಮುಕ್ತ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದರು.

ತಾಲೂಕು ಪಂಚಾಯತ್‌ ಸದಸ್ಯರಾದ ಸಿದ್ಧೀಕ್ ತಲಪಾಡಿ, ಲಘು ವಾಹನ ಚಾಲಕರಾದ ಅಶ್ರಫ್‌, ಸಿದ್ಧೀಕ್‌, ಗೋಪಾಲ, ಇಸ್ಮಾಯಿಲ್‌, ಆಸೀಫ್‌, ಹಸೈನಾರ್‌, ಸುನಿಲ್‌ ಮೊದಲಾದವರು ನಿಯೋಗದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಸುಳ್ಯ : ಮನೆ ಕೊಟ್ಟಿಗೆ ಕಾಮಗಾರಿಯ ವೇಳೆ ಘೋರ ದುರಂತ – ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತ್ಯು..!

ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ ನಡೆದು ಮೂವರು ಕಾರ್ಮಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.ಸುಳ್ಯ : ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ...

ಉಡುಪಿ ಪಡುಬಿದ್ರೆಯಲ್ಲಿ ಬೈಕಿಗೆ ಟ್ಯಾಂಕರ್ ಢಿಕ್ಕಿ; ಸವಾರರಿಬ್ಬರು ಮೃತ್ಯು..!

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ಶನಿವಾರ ಸಂಜೆ ನಡೆದಿದೆ.ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30)...

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ವಶ

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ಹಣವನ್ನು ಪೊಲೀಸರು ನಿನ್ನೆ ವಶಪಡಿಸಿಕೊಂಡ ಘಟನೆ ಉಡುಪಿಯ ಮೂಡುತೋನ್ಸೆ ಗ್ರಾಮದ ನೇಜಾರು ಚೆಕ್ ಪೋಸ್ಟ್‌ನಲ್ಲಿ ನಡೆದಿದೆ.ಉಡುಪಿ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ...