Connect with us

DAKSHINA KANNADA

ಬ್ರಿಟೀಷರ ಕಾಲದಲ್ಲಿದ್ದ ಯಕ್ಷಗಾನ ಸಂಘದ ಸಾಧನೆ ದಾಖಲಾರ್ಹ-ರವಿಚಂದ್ರ ಶೆಟ್ಟಿ

Published

on

ಮಂಗಳೂರು: ಬ್ರಿಟಿಷರ ಆಳ್ವಿಕೆಯ ಕಾಲದಲ್ಲೂ ಇದ್ದ ಯಕ್ಷಗಾನ ಸಂಘ ಎನ್ನುವುದು ನಿಜಕ್ಕೂ ಆಶ್ಚರ್ಯದ ವಿಚಾರ. ಅಗಲಿದ ಕಲಾವಿದರ ಸಂಸ್ಮರಣೆ, ಹಿರಿಯ ಕಲಾವಿದರ ಸಂಮಾನ ನಿಜಕ್ಕೂ ಅಭಿನಂದನೀಯ. ಇನ್ನಷ್ಟು ಕೀರ್ತಿ ಈ ಸಂಘಕ್ಕೆ ಸಿಗಲಿ ಎಂದು ಹೋಪ್ ಕಾಮ್ಸ್, ಮಂಗಳೂರು ಇದರ ಪ್ರಬಂಧಕ ರವಿಚಂದ್ರ ಶೆಟ್ಟಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ, ವಾಗೀಶ್ವರೀ ಯಕ್ಷಗಾನ ಸಂಘದ ಶತಮಾನೋತ್ಸವದ 23ನೆಯ ಸರಣಿಯ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.


ಕೀರ್ತಿಶೇಷ ಕಾವೂರು ಕೇಶವ ಇವರ ಸಂಸ್ಮರಣೆಯನ್ನು ಅಶೋಕ್ ಬೋಳೂರು ನಿರ್ವಹಿಸಿದರು. ಹಲವು ಪ್ರಸಂಗಗಳನ್ನು ರಚಿಸಿ, ಹಲವು ಕಲಾವಿದರನ್ನು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಪ್ರಖ್ಯಾತ ಸ್ತ್ರೀ ವೇಷಧಾರಿಯಾಗಿ, ಮೇಳಗಳ ಸಂಚಾಲಕರಾಗಿ ಯಕ್ಷಗಾನ ಕ್ಷೇತ್ರಕ್ಕೆ ಕೇಶವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.

ಸುಬ್ರಹ್ಮಣ್ಯ ಹೊಳ್ಳ, ಶಕ್ತಿನಗರ ಇವರ ಅಭಿನಂದನೆಯನ್ನು ಶಿವಪ್ರಸಾದ್ ಪ್ರಭು ಮಾಡಿದರು. ವೇಷಧಾರಿಯಾಗಿ ಹಲವು ಮೇಳಗಳಲ್ಲಿ ದುಡಿದು ಇತ್ತೀಚಿಗೆ ಮುಖ ವರ್ಣಿಕೆಯ ವೃತ್ತಿಯಲ್ಲಿ ಕಲಾ ಸೇವೆಯನ್ನು ಮಾಡುತ್ತಿದ್ದಾರೆ.

ನಮ್ಮ ಸಂಘದಲ್ಲಿ ಹಲವು ವರ್ಷಗಳಿಂದ ಸೇವೆಯನ್ನು ಮಾಡುತ್ತಿರುವ ಹೊಳ್ಳರನ್ನು ಸಂಮಾನಿಸುವುದು ಸಂತೋಷದ ವಿಷಯ ಎಂದರು.

ಸುಬ್ರಹ್ಮಣ್ಯ ಹೊಳ್ಳ, ಸಂಘಕ್ಕೆ ತಾನು ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಂಮಾನಿಸಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ವಿಮರ್ಶಕರ ಸಂಖ್ಯೆ ಪ್ರತಿಯೊಂದು ಕಲಾಪ್ರಕಾರಗಳಲ್ಲಿ ನಾವು ಹೆಚ್ಚಾಗಿ ಕಾಣುತ್ತೇವೆ. ವಿಮರ್ಶೆಯನ್ನೇ ಮಾಡುತ್ತಾ ತಲೆಯ ಮಾಧುರ್ಯವನ್ನು ಸವಿಯುವಲ್ಲಿ ಅವರು ಅಸಮರ್ಥರಾಗುತ್ತಾರೆ.

ಕಲಾಪ್ರಕಾರವನ್ನು ಒಟ್ಟಂದದಲ್ಲಿ ಸವಿಯುವಂತಹ ಮನಸ್ಥಿತಿ ಬಂದಾಗ ಕಲೆಗಳು ಮತ್ತಷ್ಟು ಬೆಳೆಯುವುದಕ್ಕೆ ಕಾರಣವಾಗುತ್ತದೆ. ನೂರು ವರ್ಷಗಳ ಕಾಲ ಕ್ರಿಯಾಶೀಲರಾಗಿ, ನಿರಂತತೆಯನ್ನು ಸಾಧಿಸಿಕೊಂಡು ಸಂಘವನ್ನು ನಡೆಸಿಕೊಂಡು ಬಂದಂತಹ ಸಂಘ ಇದು.

ಸ್ವಾತಂತ್ರ್ಯೋತ್ಸವದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ನೂರು ವರ್ಷಗಳ ಯಕ್ಷಗಾನ ಕಲಾವರ್ಧಕ ಸಂಘದ ಬಗ್ಗೆ ಪತ್ರಿಕೆಯಲ್ಲಿ ಬರೆಯಬೇಕಾದುದು ನನ್ನ ಕರ್ತವ್ಯ ಎಂದು ನಾನು ಭಾವಿಸುತ್ತೇನೆ. ಶ್ರಮಿಕರ ರಂಗಭೂಮಿಯೇ ಯಕ್ಷಗಾನ. ಯಕ್ಷಗಾನದಲ್ಲಿ ಗಳಿಸುವಂತಹುದು ಅರಿವು ಮಾತ್ರ.

ಅರಿವು ಸಂಸ್ಕಾರವನ್ನು ನೀಡುತ್ತದೆ ಅದೇ ರೀತಿ ಸಂಸ್ಕೃತಿಯನ್ನು ಬೆಳೆಸುತ್ತದೆ ಅಂತಹ ಒಂದು ಯಕ್ಷಗಾನ ಕಲಾಸಂಘದ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣ ” ಎಂದು ಕಣಿಪುರ ಪತ್ರಿಕೆಯ ಪ್ರಧಾನ ಸಂಪಾದಕ, ಎಂ.ನಾರಾಯಣ ಚಂಬಲ್ತಿಮಾರ್ ತಿಳಿಸಿದರು.

ಬಿ. ಟಿ. ಕುಲಾಲ್ ಸಂಮಾನ ಪತ್ರವನ್ನು ವಾಚಿಸಿದರು.

ಸಂಘದ ಅಧ್ಯಕ್ಷ ಶ್ರೀನಾಥ್ ಪ್ರಭು,ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಸಿ. ಎಸ್, ಭಂಢಾರಿ,ಕೋಶಾಧಿಕಾರಿ ಶಿವಪ್ರಸಾದ್ ಪ್ರಭು, ಪ್ರಧಾನ ಕಾರ್ಯದರ್ಶಿ ಸಂಜಯ ಕುಮಾರ್ ರಾವ್, ಅಶೋಕ್ ಬೋಳೂರು ಉಪಸ್ಥಿತರಿದ್ದರು.

ಶ್ರೀಮತಿ ಶೋಭಾ ಐತಾಳ್ ಕಾರ್ಯಕ್ರಮ ನಿರೂಪಿಸಿದರು.

DAKSHINA KANNADA

ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

Published

on

ಉಪ್ಪಿನಂಗಡಿ : ಕೋವಿಶೀಲ್ಡ್‌ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಯಂತ ಅಡ್ಡ ಪರಿಣಾಮದ ಬಗ್ಗೆ ಒಪ್ಪಿಕೊಂಡಿದ್ದ ಸೀರಂ ಸಂಸ್ಥೆಯಿಂದ ಭಾರತದ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೋವಿಡ್ ಲಸಿಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಆರೋಗ್ಯವಾಗಿದ್ದ ಯುವಕನೊಬ್ಬ ಹೃದಯಾ*ಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ.


ಗಾರೆ ಕೆಲಸ ಮಾಡಿಕೊಂಡು ಆರೋಗ್ಯವಾಗಿದ್ದ 27 ವರ್ಷದ ಜನಾರ್ದನ ಎಂಬ ಯುವಕ ಅಸು ನೀಗಿದ್ದಾನೆ. ಉಪ್ಪಿನಂಗಡಿ ಸಮೀಪದ ನಿನ್ನಿಕಲ್ಲು ನಿವಾಸಿಯಾಗಿದ್ದ ಜನಾರ್ದನ ಮೇಸ್ತ್ರಿಯಾಗಿ ಗಾರೆ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೆಲಸಕ್ಕೆ ರಜೆ ಹಾಕಿ ಬಂದಿದ್ದ ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ನಿದ್ರೆಗೆ ಜಾರಿದ ಜನಾರ್ದನ್ ಮತ್ತೆ ಮೇಲೆದ್ದಿಲ್ಲ.

ಇದನ್ನೂ ಓದಿ : ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

ಮಗ ಮಲಗಿದ್ದಾನೆ ಅಂತ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು ಸಂಜೆ ಬಂದು ಮಗನನ್ನು ಎಬ್ಬಿಸಿದಾಗಲೇ ವಿಚಾರ ಗೊತ್ತಾಗಿದೆ. ಕರೆದರೂ ಮಗ ಎದ್ದಿಲ್ಲ ಎಂದು ತಾಯಿ ಮಗನನ್ನು ಅಲುಗಾಡಿಸಿ ಎಚ್ಚರಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ, ಆ ವೇಳೆ ಯಾವುದೇ ರೆಸ್ಪಾನ್ಸ್‌ ಇಲ್ಲದ ಕಾರಣ ತಾಯಿಗೆ ಅನುಮಾನ ಬಂದು ಉಸಿರು ಪರಿಶೀಲಿಸಿದಾಗ ಮಗ ಮೃ*ತಪಟ್ಟಿರುವುದು ಆರಿವಾಗಿದೆ.

 

Continue Reading

DAKSHINA KANNADA

ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ

Published

on

ಬಂಟ್ವಾಳ : ಬಾಳ್ತಿಲ ಗ್ರಾಮದ ಕುದ್ರಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ದಕ್ಷಿಣ ಭಾಗದ ಗುಡ್ಡಗಳ ನಡುವೆ ಹಚ್ಚ ಹಸುರಿನ ಮೇರು ವೃಕ್ಷಗಳಿಂದ ನಯನಮನೋಹರ ಪರಿಸರದ ನಡುವೆ ಕಂಗೊಳಿಸುತ್ತಿರುವ ಊರಿನ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಶ್ರದ್ಧಾ ಭಕ್ತಿಯ ಕೇಂದ್ರ ಶ್ರೀ ಮಣಿಕಂಠ ಮಂದಿರದ ವಠಾರದಲ್ಲಿರುವ ಸಾನಿಧ್ಯವೇ “ಶ್ರೀ ಕಲ್ಲುರ್ಟಿ ದೈವಸ್ಥಾನ ಕುದ್ರೆಬೆಟ್ಟು”.

ಇಲ್ಲಿ ಶ್ರದ್ಧಾ ಭಕ್ತಿಯಿಂದ ತಾಯಿ ಕಲ್ಲುರ್ಟಿಯಲ್ಲಿ ಪ್ರಾರ್ಥಿಸಿದರೆ, ಭಕ್ತರ ಇಷ್ಟಾರ್ಥಗಳು ಕ್ಷಣಮಾತ್ರದಲ್ಲಿ ಈಡೇರುತ್ತದೆ ಎಂಬ ನಂಬಿಕೆಯಿದೆ. ಈ ಕ್ಷೇತ್ರದಲ್ಲಿ ದಿನೇ ದಿನೇ ಹರಕೆ ಸೇವೆಗಳು, ಅಗೆಲು ಸೇವೆಗಳ ಸಂಖ್ಯೆ ಗಣನೀಯ ಏರುತ್ತಿವೆ. ಸುಮಾರು 15 ವರ್ಷಗಳ ಹಿಂದೆ ಈ ಸಾನಿಧ್ಯದ ಪ್ರತಿಷ್ಠಾ ಕಾರ್ಯಗಳು ನಡೆದಿವೆ.

ಇದೀಗ ಶಿಥಿಲಾವಸ್ಥೆಯಲ್ಲಿರುವ ಈ ಸಾನಿಧ್ಯವನ್ನು ಊರ ಪರ ಊರ ಭಗವತ್ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಮಾಡಲು ನಿರ್ಧರಿಸಿದ್ದು, ಆ ಪ್ರಕಾರ ಜನಶಕ್ತಿ ಸೇವಾ ಟ್ರಸ್ಟ್ (ರಿ )ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ( ರಿ) ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡಿದೆ. ಅಂತೆಯೇ, ಇದೀಗ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನೂತನ ಸಾನಿಧ್ಯ ನಿರ್ಮಿಸಲಾಗಿದ್ದು, ಅದರ ಪುನಃ ಪ್ರತಿಷ್ಠಾ ಮಹೋತ್ಸವ ಶುಕ್ರವಾರ ನಡೆದಿದೆ.

ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಿತು.

ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ನೇಮ ನಡೆಯಿತು. ಇದೇ ಸಂದರ್ಭ ದೈವಸ್ಥಾನದ ಪುನಃ ಪ್ರತಿಷ್ಠಾ ಕಾರ್ಯಕ್ಕಾಗಿ ಶ್ರಮಿಸಿದವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜನಶಕ್ತಿ ಸೇವಾ ಟ್ರಸ್ಟ್ ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸದಸ್ಯರುಗಳು, ಊರಿನ ಪರ ಊರಿನ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು.

Continue Reading

DAKSHINA KANNADA

ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

Published

on

ಕಡಬ:  ಹದಿನೈದು ದಿನಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಮೇ.3ರ ಸಂಜೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಇಲ್ಲಿನ ಪರ್ವತಮುಖಿ ನಿವಾಸಿ ಸೋಮಸುಂದರ್(34 ವ)ಮೃತಪಟ್ಟವರು.

death

ಸುಬ್ರಹ್ಮಣ್ಯದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಡಿತ್ತು. ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ವೇಳೆ ಸೋಮಸುಂದರ್‌ರವರಿಗೆ ಸಿಡಿಲು ಬಡೆದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಮುಂಧೆ ಓದಿ..; ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ

10 ದಿನಗಳ ಹಿಂದೆಯಷ್ಟೆ ಏ.18ರಂದು ಮೋಹಿನಿ(ಪವಿತ್ರ) ಎಂಬವರ ಜೊತೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯ ಸಭಾಭವನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ವಿಧಿಯಾಟಕ್ಕೆ ಸೋಮಸುಂದರ್ ಬಲಿಯಾಗಿದ್ದಾರೆ. ಹೊಸೋಳಿಕೆ ಪರ್ವತಮುಖಿ ದಿ.ಸಾಂತಪ್ಪ ಗೌಡರ ಪುತ್ರ ಸೋಮಸುಂದರ್ ಪರ್ವತಮುಖಿ ಬಳಿ ಕಾರ್ ವಾಷಿಂಗ್ ಉದ್ಯಮವನ್ನು ನಡೆಸುತ್ತಿದ್ದರು. ಮದುವೆ ಸಂಭ್ರಮ ಮಾಸುವ ಮುನ್ನವೇ ಮನೆಯಲ್ಲಿ ಸಾವಿನ ಛಾಯೆ ಮೂಡಿದೆ. ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.

Continue Reading

LATEST NEWS

Trending