Connect with us

    DAKSHINA KANNADA

    ಮಂಗಳೂರಿನಲ್ಲಿ ನೀತಿ ಸಂಹಿತೆ ಸಡಿಲಿಕೆ; ನಾಳೆಯಿಂದ ನೂತನ ಮೇಯರ್‌ ಆಡಳಿತ ಪ್ರಾರಂಭ

    Published

    on

    ಮಂಗಳೂರು: ನೂತನ ಮೇಯರ್‌ ಆಗಿ ಮನೋಜ್‌ ಕುಮಾರ್‌ ಅವರು ಅಧಿಕಾರ ವಹಿಸಿಕೊಂಡ ದಿನವೇ ವಿಧಾನಪರಿಷತ್‌ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ನೀತಿ ಸಂಹಿತಿ ಜಾರಿಯಾಗಿತ್ತು.

    ಇದರಿಂದ ಕಳೆದ ಸುಮಾರು ಒಂದು ತಿಂಗಳ ಕಾಲ ಜನಪ್ರತಿನಿಧಿಗಳ ಕಾರ್ಯಕಲಾಪಗಳಿಗೆ ದೊಡ್ಡ ಬ್ರೇಕ್‌ ಬಿದ್ದಿತ್ತು. ಅ.29 ರಿಂದ ನೀತಿ ಸಂಹಿತೆ ತೆರವಾಗಲಿದ್ದು, ನೂತನ ಮೇಯರ್‌ ಅವರ ಆಡಳಿತ ಆರಂಭಗೊಳ್ಳಲಿದೆ.

    ನೀತಿ ಸಂಹಿತೆ ಕಾರಣಕ್ಕೆ ಪಾಲಿಕೆಯಲ್ಲಿರುವ ‘ಮೇಯರ್‌ ಕಚೇರಿ’ಗೆ ಚುನಾವಣಾಧಿಕಾರಿಗಳು ಬೀಗ ಹಾಕಿದ್ದರು. ಮನೋಜ್‌ ಕುಮಾರ್‌ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಕೆಲವು ನಿಮಿಷವಷ್ಟೇ ಚೇಂಬರ್‌ನಲ್ಲಿ ಕುಳಿತಿದ್ದರು. ಆಗಲೇ ನೀತಿ ಸಂಹಿತೆ ಮಾಹಿತಿ ಬಂದಿತ್ತು. ‘ಮೇಯರ್‌ ಕಾರು’ ಬಳಕೆಗೂ ಅವಕಾಶ ಸಿಕ್ಕಿರಲಿಲ್ಲ. ಮಂಗಳವಾರದಿಂದ ನೀತಿ ಸಂಹಿತೆ ತೆರವಾಗಲಿದ್ದು, ಪಾಲಿಕೆಯ ಆಡಳಿತಕ್ಕೆ ಮತ್ತೆ ಹುರುಪು ಬರಲಿದೆ.

    ನೀತಿ ಸಂಹಿತೆ ತೆರವಾದ ಬಳಿಕ ಸ್ಥಾಯೀ ಸಮಿತಿ ಅಧ್ಯಕ್ಷರ ನೇಮಕ ಆಗಬೇಕು. ಸಮಿತಿಗಳಿಗೆ ಪ್ರತ್ಯೇಕವಾಗಿ ನೊಟೀಸ್‌ ನೀಡಿ ಸ್ಥಾಯೀ ಸಮಿತಿ ಅಧ್ಯಕ್ಷರ ನೇಮಕ ಮಾಡಬೇಕು. ಸ್ಥಾಯೀ ಸಮಿತಿ ಸದಸ್ಯರಿಗೆ ನೋಟೀಸ್‌ ನೀಡಿ 7 ದಿನಗಳ ಅವಧಿ ಬೇಕು. ಆ ಬಳಿಕವಷ್ಟೇ ಸ್ಥಾಯೀ ಸಮಿತಿಗೆ ಅಧ್ಯಕ್ಷರ ನೇಮಕವಾಗುತ್ತದೆ. ಅದಾದ ಅನಂತರ ನೂತನ ಮೇಯರ್‌ ಅವರ ಅಧ್ಯಕ್ಷತೆಯಲ್ಲಿ ಮೊದಲ ಸಾಮಾನ್ಯ ಸಭೆ ನಡೆಸಲು ಅವಕಾಶ ಇರುತ್ತದೆ.

    ಮಂಗಳೂರು ನಗರದಲ್ಲಿ ಮಳೆಯಿಂದ ರಸ್ತೆಗಳು ಹದಗೆಟ್ಟಿವೆ. ರಸ್ತೆ ಗುಂಡಿಗಳು ಅಪಘಾತ, ಪ್ರಾಣಹಾನಿಗಳಿಗೆ ಕಾರಣವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳಿಗೆ ಮುಂದಾಗಬೇಕಾಗಿದೆ. ಮಂಗಳೂರು ಮಹಾನಗರದ ತ್ಯಾಜ್ಯ ನಿರ್ವಹಣೆ, ವೈಜ್ಞಾನಿಕ ತ್ಯಾಜ್ಯ ವಿಲೇವಾರಿ, ನಿಷೇಧಿತ ಪ್ಲಾಸ್ಟಿಕ್‌ಗೆ ಕಡಿವಾಣ, ಪಾರ್ಕಿಂಗ್‌ ಸಮಸ್ಯೆ ಸಹಿತ ಹಲವು ವಿಚಾರಗಳ ಬಗ್ಗೆಯೂ ಮೇಯರ್‌ ಅವರು ಗಮನಹರಿಸಬೇಕಾದ ಅವಶ್ಯಕತೆ ಇದೆ ಎನ್ನುತ್ತಾರೆ ಸಾರ್ವಜನಿಕರು.

    DAKSHINA KANNADA

    ನೆಲ್ಯಾಡಿ : ಜಾಗದ ವಿಷಯಕ್ಕೆ ಜಗಳ; ಕತ್ತಿಯಿಂದ ವ್ಯಕ್ತಿಯ ಕಡಿದು ಗಲಾಟೆ ಅಂತ್ಯ

    Published

    on

    ನೆಲ್ಯಾಡಿ : ಜಾಗದ ವಿಷಯಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ ಕೃಷಿಕರೋರ್ವನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ದ.ಕ.ಜಿಲ್ಲೆ ನೆಲ್ಯಾಡಿ ಸಮೀಪ ಗೋಳಿತೊಟ್ಟುವಿನ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ.

    ಪ್ರಗತಿಪರ ಕೃಷಿಕ ರಮೇಶ ಗೌಡ (51) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

    ರಮೇಶ್ ನ ಹತ್ತಿರದದ ಸಂಬಂಧಿ ಹರೀಶ್ ಆರೋಪಿಯಾಗಿದ್ದು, ಇಂದು (ನ.8) ಮುಸ್ಸಂಜೆ ಸರಿಸುಮಾರು 7 ಗಂಟೆ ವೇಳೆ ಕೃತ್ಯ ಎಸಗಿದ್ದಾನೆ.

    ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಬೆಳ್ಳಂಬೆಳಗ್ಗೆ ಏರ್‌ಪೋರ್ಟ್‌ ಪರಿಸರದಲ್ಲಿ ಪ್ರತ್ಯಕ್ಷವಾದ ಚಿರತೆ

    Published

    on

    ಮಂಗಳೂರು:  ಬಜಪೆ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿರುವ ಘಟನೆ ಶುಕ್ರವಾರ(ನ.8) ಮುಂಜಾನೆ ಬೆಳಕಿಗೆ ಬಂದಿದೆ.

    ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ವೀಕ್ಷಕರು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

    ಅಧಿಕಾರಿಯೊಬ್ಬರು ಶುಕ್ರವಾರ ಮುಂಜಾನೆ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಚಿರತೆ ರಸ್ತೆ ದಾಟಿದೆ ಕೂಡಲೇ ಅಧಿಕಾರಿ ತನ್ನ ಮೊಬೈಲ್ ನಿಂದ ಚಿರತೆ ದೃಶ್ಯವನ್ನು ಸೆರೆ ಹಿಡಿದ್ದಿದ್ದಾರೆ,

    ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಜ.22ಕ್ಕೆ ಯಕ್ಷಬೊಳ್ಳಿ ಕಡಬ ದಿನೇಶ್ ರೈ ಕಲಾಯಾನದ ರಜತ ಸಂಭ್ರಮ

    Published

    on

    ಮಂಗಳೂರು: ಯಕ್ಷಬೊಳ್ಳಿ ಅಭಿಮಾನಿ ಬಳಗ ಮತ್ತು ಯಕ್ಷಾಭಿಮಾನಿಗಳು ಕಡಬ ನೇತೃತ್ವದಲ್ಲಿ ಯಕ್ಷಗಾನ ಹಾಸ್ಯ ಕಲಾವಿದ ಯಕ್ಷಬೊಳ್ಳಿ ಕಡಬ ದಿನೇಶ್ ರೈ ‘ಕಲಾ ಯಾನದ ರಜತ ಸಂಭ್ರಮ- ಬೊಳ್ಳಿ ಪರ್ಬ- 25’ ಕಾರ್ಯಕ್ರಮ ಜ.22ಕ್ಕೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ಕ್ಷೇತ್ರದ ವಠಾರದಲ್ಲಿ ಆಯೋಜಿಸಲಾಗಿದೆ.

    ಬೆಳಗ್ಗೆ 8ರಿಂದ ಸಪ್ತಶತಿ ಪಾರಾಯಣ ಸಹಿತ ನವಚಂಡಿಕಾ ಯಾಗ, ಮಧ್ಯಾಹ್ನ 2ರಿಂದ ಬೊಳ್ಳಿ ಪರ್ಬ- 25 ಉದ್ಘಾಟನೆ- ಯಕ್ಷಬೊಳ್ಳಿ ಸಂಭ್ರಮಕ್ಕೆ ಚಾಲನೆ, ಮಧ್ಯಾಹ್ನ 3ರಿಂದ ಸಂಜೆ 5.30ರ ವರೆಗೆ ಜಿಲ್ಲೆಯ ಪ್ರಸಿದ್ಧ ಹಿಮ್ಮೇಳ – ಮುಮ್ಮೇಳ ಕಲಾ – ವಿದರ ಕೂಡುವಿಕೆಯಲ್ಲಿ ಯಕ್ಷ ಹಾಸ್ಯ ವೈಭವ, ಸಂಜೆ 5.30 ರಿಂದ 7.30ರವರೆಗೆ ಸಭಾ ಕಾರ್ಯಕ್ರಮ ಗುರುವಂದನೆ, ಗೌರವಾರ್ಪಣೆ, ಸನ್ಮಾನ ನೆರವೇರಲಿದೆ. ರಾತ್ರಿ 7.30 ರಿಂದ 1.30 ರವರೆಗೆ ಶ್ರೀ ಗೆಜ್ಜೆಗಿರಿ ಮೇಳದವರಿಂದ ತುಳು ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

    ಕಡಬ ದಿನೇಶ ರೈ ಕಲಾಸೇವೆ ವಿವರ :

    ಕಡಬ ದಿನೇಶ ರೈ ಪ್ರಾರಂಭದಲ್ಲಿ ಶ್ರೀ ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸಿ, ಬಳಿಕ ಶ್ರೀ ಕ್ಷೇತ್ರ ಕಟೀಲು, ಪುತ್ತೂರು ಮೇಳ, ಕುಂಟಾರು ಮೇಳ, ಮಂಗಳಾದೇವಿ ಮೇಳ, ತೆಂಕು – ಬಡಗು ಸಮ್ಮಿಶ್ರಗೊಂಡ ಹಿರಿಯಡ್ಕಮೇಳ, ತಳಕಲ ಮೇಳ, ಸುಂಕದಕಟ್ಟೆ ಮೇಳ, ಬಾಚಕೆರೆ ಮೇಳ, ಪ್ರಸ್ತುತ ಗೆಜ್ಜೆಗಿರಿ ಮೇಳದಲ್ಲಿ ಹಾಸ್ಯ ಕಲಾವಿದರಾಗಿ ಸೇವೆಗೈಯುತ್ತಿದ್ದಾರೆ.

    ರವಿ ಕುಮಾರ್ ಸುರತ್ಕಲ್ ರಚಿಸಿದ ನಾಗತಂಬಿಲದ ಕೂಸಮ್ಮ (ನಂಜುಂಡ)ನ ಪಾತ್ರ ಯಕ್ಷ ರಂಗದಲ್ಲಿ ಹೊಸ ತಿರುವು ತಂದು ಕೊಟ್ಟಿತ್ತು. ನಾಗರಪಂಚಮಿಯ ನೋಣಯ್ಯ, ವಜ್ರ ಕುಟುಂಬದ ಕಪಟ ಸ್ವಾಮೀಜಿ, ಪವಿತ್ರ ಪಲ್ಲವಿಯ ಪದ್ಮಾವತಿ, (ಪದ್ದು) ಚೆನ್ನಿ- ಚೆನ್ನಮ್ಮದ ಪುರುಷೋತ್ತಮ, ವಿಜಯಕೇಸರಿಯ ಮಾರುತಿ, ಜೀವನಚಕ್ರದ ನಿಷ್ಠಾವಂತ ಸೇವಕ, ಗುಳಿಗೋದ್ಭವ ಪಂಜುರ್ಲಿ – ಪ್ರತಾಪ ದ ಗೋಪಾಲ, ಹಾಗೂ ಚಂದ್ರ, ಮನ ಸೂರೆಗೊಂಡ ಪಾತ್ರಗಳು. ತೆಂಕು -ಬಡಗಿನಲ್ಲಿ ತುಳು – ಕನ್ನಡದಲ್ಲಿ ಪೌರಾ ಣಿಕ, ಸಾಮಾಜಿಕ, ಐತಿಹಾಸಿಕ ಯಾವುದೇ ಪ್ರಸಂಗವಾದರೂ ಕಥೆಗೆ ಲೋಪ ಬಾರದಂತೆ ತಮ್ಮದೇ ಶೈಲಿಯ ಹಾಸ್ಯದಲ್ಲಿ ಜನರನ್ನು ರಂಜಿಸುತ್ತಿದ್ದಾರೆ. ಯಕ್ಷಗಾನ ಮಾತ್ರವಲ್ಲದೆ ನಾಟಕ, ತುಳು ಸಿನೆಮಾ, ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

    ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಕಡಬ ದಿನೇಶ ರೈ ಗೆ ಇರುವೈಲು ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ‘ಯಕ್ಷ ಬೊಳ್ಳಿ’ ಎಂಬ ಬಿರುದು ನೀಡಿ ಗೌರವಿಸಿದೆ.

    Continue Reading

    LATEST NEWS

    Trending