Thursday, February 9, 2023

ಉಳ್ಳಾಲದ ಚೆಂಬುಗುಡ್ಡೆಯ ಯುವಕ ಝಾಕೀರ್ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆ… ಕೊಲೆ ಶಂಕೆ..!

ಉಳ್ಳಾಲ: ಕೆಲವು ದಿನಗಳಿಂದ ನಾಪತ್ತೆಯಾಗಿ ಉಳ್ಳಾಲದ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆ ಎನ್ನುವ ಶಂಕೆ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ನಿವಾಸಿ ಝಾಕಿರ್(36) ಎಂಬವರೇ ಮೃತ ದುರ್ದೈವಿ. ಮೀನು ವ್ಯಾಪಾರಿಯಾಗಿದ್ದ ಇವರಿಗೆ ಪತ್ನಿ, ಏಳು ವರ್ಷದ ಮಗ ಇದ್ದು, ಪತ್ನಿ ಏಳು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ.

ಶಾಂತ ಸ್ವಭಾವದ ಮೂಲಕ ಪರಿಸರದಲ್ಲಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಇವರು, ಕಳೆದ ತಿಂಗಳು ೨೬ರಂದು ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು, ನಂತರ ಹಿಂದಿರುಗಿ ಬಂದಿರಲಿಲ್ಲ. ಮೊಬೈಲ್ ರಿಂಗ್ ಆಗಿ ಸ್ವಿಚ್ಛ್ ಆಫ್ ಆಗುತ್ತಿತ್ತು ಎನ್ನಲಾಗಿದೆ.

ಹತ್ತು ದಿನಗಳಾದರೂ ಸಂಪರ್ಕಕ್ಕೆ ಸಿಗದ ಕಾರಣ ಎರಡು ದಿನಗಳ ಯುವಕನ ಫೊಟೋ ಮತ್ತು ವಿವರವನ್ನು ಜಾಲತಾಣದಲ್ಲಿ ಹರಿಯಬಿಡಲಾಗಿತ್ತು.

ಅವರು ಧರಿಸಿದ್ದ ಬಟ್ಟೆ, ಬೆಲ್ಟ್ ಗುರುತಿನ ಮೇರೆಗೆ ವಾರದ ಹಿಂದೆಯೇ ಮಂಜೇಶ್ವರ ಸಮುದ್ರದಲ್ಲಿ ಶವ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಅಪರಿಚಿತ ಶವವಾಗಿದ್ದ ಕಾರಣ ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಕೆಲವು ದಿನ ಇಡಲಾಗಿದ್ದು, ಪೋಷಕರು ಬಾರದ ಹಿನ್ನೆಲೆಯಲ್ಲಿ ಸಮೀಪದ ಮಸೀದಿಯಲ್ಲಿ ದಫನ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಯುವಕ ಹೋಗಿದ್ದ ಬೈಕ್ ಸೋಮೇಶ್ವದಲ್ಲಿ ಪತ್ತೆಯಾಗಿದ್ದು, ಒಬ್ಬನೇ ಹೋಗಿರುವುದು ಸಿಸಿ ಕೆಮರಾಗಳಲ್ಲಿ ಕಂಡು ಬಂದಿದೆ. ಇವರು ಸ್ಥಿತಿವಂತರಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಇಲ್ಲ, ಇದೊಂದು ಕೊಲೆಯಾಗಿದೆ.

ಮೃತದೇಹದಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ. ಆತನ ಮೊಬೈಲ್ ಲೋಕೇಶನ್ ಸೋಮೇಶ್ವರ ಹಾಗೂ ಮೊನ್ನೆ ಸಂಜೆ ೬:೧೫ರವರೆಗೆ ಪಂಡಿತೌಸ್ ತೋರಿಸಿ ನಂತರ ಸ್ವಿಚ್ಛ್ ಆಫ್ ಆಗಿದೆ.

ಈ ಮೊಬೈಲ್ ಯಾರಲ್ಲಿದೆ ಎನ್ನುವುದು ಗೊತ್ತಾದರೆ ಸಾವಿಗೆ ಕಾರಣವೂ ಗೊತ್ತಾಗಲಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಉಳ್ಳಾಲ ಠಾಣಾಧಿಕಾರಿಯಲ್ಲಿ ಮನವಿ ಮಾಡಿದ್ದು, ಸಿಸಿ ಕೆಮರಾ ಫೂಟೇಜ್‌ಗಳನ್ನೂ ನೀಡಲಾಗಿದೆ.

ಮೃತದೇಹವನ್ನು ಚೆಂಬುಗುಡ್ಡೆಗೆ ತಂದು ಮರು ದಫನ ಮಾಡಲಾಗುವುದು ಎಂದು ಎಂದು ಸಹೋದರ ಅಶ್ರಫ್ ಹರೇಕಳ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...