Tuesday, January 31, 2023

ಕರ್ತವ್ಯದ ವೇಳೆ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರ ಮಂಗಳೂರಿಗೆ : ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ..! 

ಮಂಗಳೂರು: ಭೋಪಾಲ್‌ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟ ನಗರದ ಯೋಧ ಮುರಳೀಧರ್ ಬಿ.ಎಸ್. (37) ಅವರ ಪಾರ್ಥಿವ ಶರೀರ ವಿಮಾನದ ಮೂಲಕ  ಮಂಗಳೂರಿಗೆ ತರಲಾಗಿದೆ. 

ವಿಮಾನ ನಿಲ್ದಾಣದ ಹುತಾತ್ಮ ಸ್ಮಾರಕದಲ್ಲಿ ಯೋಧ ಮುರಳೀಧರ್‌ರ ಪಾರ್ಥೀವ ಶರೀರಕ್ಕೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ಮದನ್‌ಮೋಹನ್, ಅಧಿಕಾರಿ ವರ್ಗ  ಜಿಲ್ಲಾಡಳಿತ ವತಿಯಿಂದ ಗೌರವ ಸಲ್ಲಿಸಿದರು.

ಮೃತ ಯೋಧ ಮುರಳಿಧರ ಪತ್ನಿ ಮತ್ತು ಮಗು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ನಗರದ ಪದವು ಗ್ರಾಮದ ಶಕ್ತಿನಗರ ಮೊಗರೋಡಿ ನಿವಾಸಿಯಾಗಿದ್ದ ಮುರಳೀಧರ್ 2007ರಲ್ಲಿ ಸಶಸ್ತ್ರ ಸೀಮಾ ಪಡೆಗೆ  ಸೇರಿದ್ದರು.

ಆರು ತಿಂಗಳ ಹಿಂದೆ ಊರಿಗೆ ಬಂದಿದ್ದ ಅವರು ವರ್ಷದ ಹಿಂದೆ ಅಗಲಿದ್ದ ತನ್ನ ತಾಯಿಯ ಮೊದಲ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೆಲವೇ ದಿನಗಳಲ್ಲಿ ಊರಿಗೆ ಮರಳುವವರಿದ್ದರು.

ಅದಕ್ಕಾಗಿ 20 ದಿನಗಳ ರಜೆಯೂ ಮಂಜೂರಾಗಿತ್ತು. ಊರಿಗೆ ಮರಳಲು ತಯಾರಿ ನಡೆಸುತ್ತಿದ್ದಾಗಲೇ ಹೃದಯಾಘಾತವಾಗಿದೆ ಎಂದು ಮುರಳೀಧರರ ಕುಟುಂಬದ ಮೂಲಗಳು ತಿಳಿಸಿವೆ.

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

ಮಂಗಳೂರು: ಪಾಳುಬಾವಿಗೆ ಬಿದ್ದ 4 ಬೃಹತ್ ಹೆಬ್ಬಾವುಗಳ ರಕ್ಷಣೆ..!

ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು...