Connect with us

DAKSHINA KANNADA

ಮದುವೆ ಮಂಟಪಕ್ಕೆ ರಾಯಲ್ ಎನ್ ಫೀಲ್ಡ್  ಬುಲೆಟ್ ನಲ್ಲಿ ರಾಯಲ್ ಎಂಟ್ರಿ ಕೊಟ್ಟ ವಧು: ವೀಡಿಯೋ ವೈರಲ್ 

Published

on

ಮದುವೆ ಮಂಟಪಕ್ಕೆ ರಾಯಲ್ ಎನ್ ಫೀಲ್ಡ್  ಬುಲೆಟ್ ನಲ್ಲಿ ರಾಯಲ್ ಎಂಟ್ರಿ ಕೊಟ್ಟ ವಧು: ವೀಡಿಯೋ ವೈರಲ್ 

ಮಂಗಳೂರು :ತನ್ನ ಮದುವೆ ಅಂದ್ರೆ ನಾಚಿ ನೀರಾಗ್ತಾಳೆ  ಹೆಣ್ಣು. ಅದರಲ್ಲೂ ಮದುವೆ ದಿನ ಮಂಟಪಕ್ಕೆ  ಕಾರಲ್ಲಿ ನಯ ನಾಚೂಕಾಗಿ ಬರುತ್ತಾಳೆ. ಸೀರೆ, ಆಭರಣದ ಬಗ್ಗೆಯೂ ತುಂಬಾ ಕಾಳಜಿ ವಹಿಸ್ತಾಳೆ.

ಆದ್ರೆ ಇಲ್ಲೊಬ್ಬ ಹೆಣ್ಣು ಮಗಳು ಹೆಣ್ಣು ಮಕ್ಕಳು ಯಾವುದರಲ್ಲೂ ಕಮ್ಮಿಯಿಲ್ಲ ಎನ್ನುವುದನ್ನು  ಮದುವೆ ದಿನ ಮಂಟಪಕ್ಕೆ ರಾಯಲ್ ಎನ್ಫೀಲ್ಡ್ ಬೈಕ್ನಲ್ಲಿ ಎಂಟ್ರಿ ಕೊಡೋ ಮೂಲಕ  ತೋರಿಸಿಕೊಟ್ಟಿದ್ದಾಳೆ.

ಕಾಸರಗೋಡು ಮೂಲದ ಮ್ಯಾಚ್ ಫ್ರೇಮ್ ವೆಡ್ಡಿಂಗ್ ಸಂಸ್ಥೆಯ ಕ್ಯಾಮರಮೆನ್ಸ್ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

ಈ ವೀಡಿಯೋ  ಜಾಲತಾಣದಲ್ಲಿ ಭಾರೀ ವೈರಲ್  ಆಗಿದೆ. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿರೋ ಹೆಣ್ಣು ಮಗಳು

ಸುರತ್ಕಲ್​ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು.

ಮಂಗಳೂರಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ವಿಶೇಷ ಎಂಟ್ರಿ ಕೊಟ್ಟು ಎಲ್ಲರೂ ಮೂಗಿನ ಮೇಲೆ ಬೆರಳಿಡುವಂತೆ ಅಚ್ಚರಿಗೊಳಿಸಿದ್ದಾಳೆ  ವಧು ಪೂಜಾ

 

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು: 14.33% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 14.33 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending