Thursday, April 22, 2021

ಕುಡುಕನ ಬೇಜವಾಬ್ದಾರಿ ಕೃತ್ಯ; ಒಂದೇ ಕುಟುಂಬದ 6ಜನ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ..!

ಮಡಿಕೇರಿ:  ಕುಡುಕನೋರ್ವ  ಮನೆಗೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿ 6ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಮಡಿಕೇರಿಯ ಪೊನ್ನಂಪೇಟೆ ತಾಲೂಕಿನ ಮುಟಗೇರಿ ಗ್ರಾಮದಲ್ಲಿ ನಡೆದಿದೆ.ಮಡಿಕೇರಿಯ ಪೊನ್ನಂಪೇಟೆಯ ಮುಟಗೇರಿ ‌ಗ್ರಾಮದ ಬೋಜ ಎಂಬಾತ ಮದ್ಯ ಸೇವಿಸಿ ನೆರೆಮನೆಯ ಮಂಜು ಎನ್ನುವವರ ಮನೆಯ ಬಾಗಿಲು ಹಾಕಿ ಅವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಮನೆಯೊಳಗೆ ನಿದ್ದೆ ಹೋಗಿದ್ದವರು ಬೆಂಕಿಗೆ ಆಹುತಿಯಾಗಿದ್ದಾರೆ.

ಒಟ್ಟು ಎಂಟು ಜನರಲ್ಲಿ ಮೂವರು ಸಜೀವ ದಹನವಾಗಿದ್ದು ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆ ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

3,6,7ವರ್ಷದ ಮಕ್ಕಳು ಸೇರಿದಂತೆ ಆರು ಜನ ಸಾವನ್ನಪ್ಪಿದ್ದರೆ, ಇಬ್ಬರು ವಯಸ್ಕರು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾವನ್ನಪ್ಪಿರುವವರು  ಬೇಬಿ(45)  ಸೀತೆ(40) ಪ್ರಕಾಶ್  (7)  ಪ್ರಾರ್ಥನಾ (6)  ವಿಶ್ವಾಸ್ (3)  ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

ಪಾನಮತ್ತ  ಭೋಜ ಹಾಗೂ ಆತನ ಪತ್ನಿ ನಡುವೆ ಜಗಳವಾಗಿದ್ದು,  ಮಧ್ಯರಾತ್ರಿ ಪಕ್ಕದ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರಿಂದ ಮನೆಯಲ್ಲಿ  ಮಲಗಿದ್ದ 8ಮಂದಿಯಲ್ಲಿ 6ಮಂದಿ ಸಜೀವ ದಹನವಾಗಿದ್ದಾರೆ.

ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...