Connect with us

DAKSHINA KANNADA

ಶತಮಾನೋತ್ಸವ ಆಚರಣೆ ಮಂಗಳೂರು ಶಾರದೆಯ ಬೃಹತ್ ವಿಸರ್ಜನಾ ಮೆರವಣಿಗೆಯೊಂದಿಗೆ ಸಮಾಪನ..!

Published

on

ಮಹಾ ಮಂಗಳಾರತಿಬಳಿಕ ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10.00 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆಯು ಉತ್ಸವಸ್ಥಾನದಿಂದ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜನ ಕಾರ್ಯ ನಡೆಯಿತು. 

ಮಂಗಳೂರು : ಕರಾವಳಿಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ಧ್ದವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100ನೇ ವರ್ಷದ ಕಾರ್ಯಕ್ರಮಗಳನ್ನು ಎಂದಿನoತೆ ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ನೂತನ ವಸಂತ ಮಂಟಪದಲ್ಲಿ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಗುರುವಾರದಂದು ಬ್ರಹತ್ ಶೋಭಾಯಾತ್ರೆಯ ಬಳಿಕ ಶ್ರೀ ಮಾತೆಯ ವಿಗ್ರಹವನ್ನು ಮಹಾಮಯಾ ತೀರ್ಥದಲ್ಲಿ ವಿಸರ್ಜನೆ ನಡೆಯಿತು.

ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವತ್ ಭಕ್ತರು ತನು-ಮನ-ಧನಗಳಿಂದ ಪಾಲುಗೊಂಡು ಶ್ರೀ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾದರು.

ಜಗತ್ತಿಗೆ ಜ್ಞಾನದ ರೂಪದಲ್ಲಿ ಪ್ರತ್ಯಕ್ಷವಾಗಿರುವ, ವೀಣೆ, ವೇದ ಮತ್ತು ಸ್ಪಟಿಕ ಜಪಮಾಲೆಗಳನ್ನು ತನ್ನ ಕೈಯಲ್ಲಿ ಹಿಡಿದಿರುವ, ವರ್ಣದಲ್ಲಿ ಶುಭ್ರವಾದ, ಮೊದಲ ಮತ್ತು ಅಗ್ರಗಣ್ಯವಾದ ದೈವಿಕ ಶಕ್ತಿಯಾದ ಶ್ರೀ ಸರಸ್ವತಿ ದೇವಿಯಲ್ಲಿ ನಮ್ಮೆಲ್ಲರಿಗೆ ಆಶೀರ್ವಾದ ಮತ್ತು ಅವಳಲ್ಲಿ ನಮ್ಮೆಲ್ಲರ ಅಜ್ಞಾನವನ್ನು ಹೋಗಲಾಡಿಸಿ ಬುದ್ಧಿಶಕ್ತಿಯನ್ನು ದಯಪಾಲಿಸಿ ನಮ್ಮಮ್ಮ ಶಾರದೆ ನಮ್ಮೆಲ್ಲರ ಮನೆಯ ಬೆಳಕಾಗಲೆಂಬ ಪ್ರಾರ್ಥನೆಯೊಂದಿಗೆ,

ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಆಚಾರ್ಯರ ಮಠದ ವಸಂತ ಮಂಟಪದಲ್ಲಿ ಕಳೆದ ಒಂದು ಶತಮಾನಗಳಿಂದ ಪೂಜಿಸಿ, ನಡೆಸಿಕೊಂಡು ಬಂದಿರುವ೦ತಹ ಮಂಗಳೂರು ಶ್ರೀ ಶಾರದಾ ಮಹೋತ್ಸವಕ್ಕೆ ಈ ವರ್ಷ ಶತಮಾನೋತ್ಸವದ ಸಂಭ್ರಮ ಹಾಗೂ ನಮಗೆಲ್ಲರಿಗೂ ಬಹಳ ಹರ್ಷವಾಗುತ್ತದೆ.

ಭಾರತ ದೇಶದ ಈ ಪ್ರದೇಶದ ಸತ್ಪ್ರಜೆಗಳನ್ನು  ಏಕೀಕರಿಸುವ ಉದ್ದೇಶದಿಂದ ಜಿ.ಎಸ್.ಬಿ. ಸಮಾಜದ ಹಿರಿಯ ವೈದಿಕರು, ಭಾಂಧವರ ವಿಶಾಲ ದೃಷ್ಟ್ಟಿಕೋನ ಹಾಗೂ ದೂರದರ್ಶಿತ್ವದ ಕಲ್ಪನೆಯ ಕೂಸು ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ, ಅಂದಿನಿ೦ದ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು ಮಣ್ಣಿನಲ್ಲಿ ಜೀವಂತಗೊಳಿಸಿ ಪೂಜಿಸಲು ಪ್ರಾರಂಭವಾಯಿತು.

ಇಂದಿಗೆ ಈ ಉತ್ಸವ ಬೆಳೆದು ಸಮಾಜದ ಎಲ್ಲಾ ವರ್ಗದವರ ಸಹಕಾರದೊಂದಿಗೆ ಈ ವರ್ಷ ಶತಮಾನೋತ್ಸವ ಆಚರಿಸುತ್ತಿರುವುದು ನಮಗೆಲ್ಲರಿಗೂ ಸಂತಸದ ವಿಷಯ.

ಹತ್ತು ದಿನಗಳ ಪರ್ಯಂತ ಶ್ರೀ ಮಾತೆಯ ವಿಗ್ರಹಕ್ಕೆ ವಿವಿಧ ದೇವಿಯ ಅವತಾರಗಳ ಅಲಂಕಾರಗಳು ನಡೆದವು , ಸಹಸ್ರಾರು ಭಜಕರು ಕುಂಕುಮಾರ್ಚನೆ ಸೇವೆ , ರಂಗ ಪೂಜೆ , ಸಹಸ್ರ ಚಂಡಿಕಾ ಮಹಾ ಯಾಗ , ಮಕ್ಕಳಿಗೆ ವಿದ್ಯಾರಂಭ ಕಾರ್ಯಕ್ರಮಗಳು ಅತೀ ವಿಜೃಂಭಣೆಯಿಂದ ಜರಗಿದವು .

ವಿಜಯದಶಮಿಯ ಪರ್ವ ದಿನದಂದು ವಿಸರ್ಜನಾ ಪೂಜೆ ನಡೆದು ಗುರುವಾರದಂದು ಬೆಳಿಗ್ಗಿನಿಂದ ಸರಸ್ವತಿ ಕಲಾ ಮಂಟಪದಲ್ಲಿ ಸೇವಾರೂಪದಲ್ಲಿ ಪ್ರತಿವರ್ಷ ಶಾರದಾ ಹುಲಿವೇಷದಾರಿಗಳಿಂದ ಹುಲಿವೇಷ ಕುಣಿತ ನಡೆಯಿತು .

ರಾತ್ರಿ ಮಹಾ ಮಂಗಳಾರತಿಬಳಿಕ ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10.00 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆಯು ಉತ್ಸವಸ್ಥಾನದಿಂದ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜನ ಕಾರ್ಯ ನಡೆಯಿತು.

ಸ್ವಯಂಸೇವಕರು ಭುಜ ಸೇವೆಯ ಮೂಲಕ ಶ್ರೀ ಮಾತೆಯ ವಿಗ್ರಹದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು.

ವಿವಿಧ ವೇಷದಾರಿಗಳಿಂದ ವಿಶೇಷ ಟ್ಯಾಬ್ಲೋಗಳು , ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋಗಳು ಜನಾಕರ್ಷಣೆಯ ಕೇಂದ್ರವಾಗಿದ್ದವು.

ಈ ಸಂದರ್ಭದಲ್ಲಿ ಶ್ರೀ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ. ಉಮಾನಂದ ಮಲ್ಯ , ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ ಶತಮಾನೋತ್ಸವ ಸಮಿತಿ ಯ ಪದಾಧಿಕಾರಿಗಳು, ಆಚಾರ್ಯ ಮಠದ ಪಂಡಿತ್ ನರಸಿಂಹ ಆಚಾರ್ಯ, ಶ್ರೀ ವೆಂಕಟರಮಣ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು, ಕೆ. ಗಣೇಶ್ ಕಾಮತ್ ಉಪಸ್ಥಿತರಿದ್ದರು.

DAKSHINA KANNADA

ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ  ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

DAKSHINA KANNADA

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!

Published

on

ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.

ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

Continue Reading

DAKSHINA KANNADA

ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?

Published

on

ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.

ಕಲ್ಲಂಗಡಿ ಚಿಕನ್ ಬಿರಿಯಾನಿ

ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್‌ನ villagefoodchannel_official ಪೇಜ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.

ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ

ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.

ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.

ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.

ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.

Continue Reading

LATEST NEWS

Trending