Home ಪ್ರಮುಖ ಸುದ್ದಿ ಈ ಫೇಮಸ್ ನಟಿಯ ಕಾರಿನಲ್ಲಿ ಸಿಕ್ತು 96 ಬಿಯರ್ ಹಾಗೂ 8 ಬಾಟಲಿ ಲಿಕ್ಕರ್…..!!

ಈ ಫೇಮಸ್ ನಟಿಯ ಕಾರಿನಲ್ಲಿ ಸಿಕ್ತು 96 ಬಿಯರ್ ಹಾಗೂ 8 ಬಾಟಲಿ ಲಿಕ್ಕರ್…..!!

ನಟಿ ರಮ್ಯಕೃಷ್ಣ ಕಾರಿನಲ್ಲಿ 96 ಬಿಯರ್​,  8 ಲಿಕ್ಕರ್ಬಾಟಲಿ ಪತ್ತೆ; ವಶಪಡಿಸಿಕೊಂಡ ಪೊಲೀಸರು…

ತಮಿಳುನಾಡು; ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಾ ಕೃಷ್ಣ ಮತ್ತು ಅವರ ತಂಗಿ ವಿನಯ​ ಕೃಷ್ಣ ತಮ್ಮ ಇನೋವಾ ಕಾರಿನಲ್ಲಿ ಮಹಾಬಲಿಪುರಂನಿಂದ ಹಿಂತಿರುಗುತ್ತಿದ್ದರು.

ಮುತ್ತುಕಾಡು ಚೆಕ್ ಪೋಸ್ಟ್​ನಲ್ಲಿ ಪೊಲೀಸರು ತಪಾಸಣೆ ಮಾಡಿದ್ದಾರೆ. ಈ ವೇಳೆ ಪೊಲೀಸರಿಗೆ ಒಂದು ಅಚ್ಚರಿ ಕಾದಿತ್ತು.

ಅದೇನಪ್ಪಾ ಅಂದ್ರೆ ಕಾರಿನಲ್ಲಿ 96 ಬಿಯರ್​ ಬಾಟಲ್ ಸೇರಿದಂತೆ 8 ಲಿಕ್ಕರ್​ ಬಾಟಲಿ ಸಿಕ್ಕಿದ್ದು, ಅದನ್ನು ಪೊಲೀಸರು ಸೀಝ್ ಮಾಡಿದ್ದಾರೆ.

ಕನ್ನಡ, ತಮಿಳು, ತೆಲುಗಿನ ಅನೇಕ ಸಿನಿಮಾದಲ್ಲಿ ನಟಿಸಿ ಖ್ಯಾತಿ ಗಳಿಸಿರುವ ರಮ್ಯಕೃಷ್ಣ ಅವರ ಕಾರಿನಲ್ಲಿ ಮದ್ಯದ ಬಾಟಲಿ ಸಿಕ್ಕಿದ್ದು, ತಮಿಳುನಾಡಿನ ಕಾನತ್ತೂರು ಪೊಲೀಸರು ವಶಕೊಂಡಿರುವ ಘಟನೆ ನಡೆದಿದೆ.

ಕಾರಿನಲ್ಲಿ ಮದ್ಯವನ್ನು ತೆಗೆದುಕೊಂಡು ಹೋಗುತ್ತಿದ್ದ ಕಾರಣಕ್ಕೆ ರಮ್ಯಕೃಷ್ಣ ಅವರ ಕಾರಿನ ಚಾಲಕ ಸೆಲ್ವಕುಮಾರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ನಂತರ ಚಾಲಕನನ್ನು ರಮ್ಯಕೃಷ್ಣ ಅವರು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಕೊರೊನಾ ವೈರಸ್​ ನಿಯಂತ್ರಿಸುವ ದೃಷ್ಠಿಯಿಂದ ಚೆನ್ನೈ ಪೊಲೀಸರು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

ಲಾಕ್ ​ಡೌನ್​ ಸಡಿಲಗೊಂಡಿದ್ದರು ಜನರು ಲಿಕ್ಕರ್​ಗಾಗಿ ಚೆನ್ನೈ ಸಿಟಿಗಳಿಗೆ ತೆರಳುತ್ತಿದ್ದಾರೆ. ಹಾಗಾಗಿ ಅಲ್ಲಿನ ಪೊಲೀಸರು ಟೋಲ್​ಪ್ಲಾಜಾಗಳಲ್ಲಿ ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಈ ವೇಳೆ ನಟಿ ರಮ್ಯಾ ಕೃಷ್ಣ ಅವರ ಇನೋವಾ ಕಾರನ್ನು ಪರಿಶೀಲಿಸುತ್ತಿದ್ದ ವೇಳೆ ಮದ್ಯದ ಬಾಟಲಿಗಳು ದೊರೆತಿವೆ.

RECENT NEWS

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...
error: Content is protected !!