Connect with us

    DAKSHINA KANNADA

    ULLALA : ಕಂಪೌಂಡ್ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರ ದು*ರ್ಮರಣ

    Published

    on

    ಉಳ್ಳಾಲ : ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳ ಸಹಿತ ತಂದೆ ತಾಯಿ ಇಹಲೋಕ ತ್ಯಜಿಸಿರುವ ಘಟನೆ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ನಡೆದಿದೆ.

    ಮದನಿ ನಗರದ ನಿವಾಸಿ ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಬಿದ್ದಿದೆ. ಇದು ಪಕ್ಕದಲ್ಲಿದ್ದ ಯಾಸೀರ್ ಎಂಬವರ ಮನೆಯ ಮೇಲೆ ಬಿದ್ದು ಯಾಸೀರ್ ಅವರ ಮನೆಯ ಗೋಡೆ ಕುಸಿತದಿಂದ ಈ ದುರಂ*ತ ಸಂಭವಿಸಿದೆ.

    ಇದನ್ನೂ ಓದಿ  : ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    ಯಾಸೀರ್, ಪತ್ನಿ ಮರಿಯಮ್ಮ, ಮಕ್ಕಳಾದ ರಿಯಾನಾ ಹಾಗೂ ರಿಫಾನಾ ಇಹಲೋಕ ತ್ಯಜಿಸಿದವರು. ಘಟನೆ ನಡೆದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯ ಆರಂಭಿಸಿದ್ದರು. ಈ ವೇಳೆಗಾಗಲೇ ಮನೆಯ ಒಳಗಿದ್ದ ನಾಲ್ವರೂ ಇಹಲೋಕ ತ್ಯಜಿಸಿದ್ದರು.

    DAKSHINA KANNADA

    ಅತ್ಯಂತ ಉದ್ದದ ಮಾನವ ಸರಪಳಿ: ದ.ಕ.ಜಿಲ್ಲೆಗೆ ದ್ವಿತೀಯ ಸ್ಥಾನ

    Published

    on

    ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಜಿಲ್ಲೆಗಳಿಗೆ ಒಟ್ಟು ಐದು ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿತ್ತು. ಈ ವಿಭಾಗಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

    ನ.26ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

    Continue Reading

    BIG BOSS

    ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

    Published

    on

    ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.

    ‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು

    Continue Reading

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    LATEST NEWS

    Trending