LATEST NEWS
ವಿಶ್ವಪ್ರಸಿದ್ಧ ‘ಮಹಾಕುಂಭ ಮೇಳ’ ಕ್ಕೆ ದಿನಗಣನೆ ಆರಂಭ
Published
4 hours agoon
“ಹಿಂದೆ ನಡೆದಿದ್ದ ಪೂರ್ಣ ಮಹಾಕುಂಭ ಮೇಳದ ಸಮಯದಲ್ಲಿ ಈಗಿನ ಯಾರೂ ಬದುಕಿರಲಿಲ್ಲ. ಮುಂದೆ ನಡೆಯುವ ಮಹಾ ಕುಂಭಮೇಳದ ಸಮಯಕ್ಕೆ ಸಹ ನಾವ್ಯಾರೂ ಬದುಕಿರುವುದಿಲ್ಲ”. 144 ವರ್ಷಗಳ ನಂತರ ನಡೆಯುತ್ತಿರುವ ಐತಿಹಾಸ ಪ್ರಸಿದ್ಧ ಮಹಾ ಕುಂಭಮೇಳಕ್ಕೆ ಪ್ರಯಾಗ್ ನಗರ ಸಜ್ಜಾಗಿದೆ. ಅತ್ಯಂತ ಅಪರೂಪದ ಕುಂಭಮೇಳ ಇದಾಗಿದ್ದು ‘ಮಹಾಕುಂಭ ಮೇಳ’ ಎಂದು ಕರೆಯಲಾಗುತ್ತದೆ.
ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆ 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದ್ದು, ಸುಮಾರು 45 ಕೋಟಿಗೂ ಅಧಿಕ ಮಂದಿ ಪುಣ್ಯ ಸ್ನಾನ ಮಾಡುವ ನಿರೀಕ್ಷೆ ಇದೆ. ಕುಂಭಮೇಳ, ಅರ್ಧ ಕುಂಭ ಮತ್ತು ಪೂರ್ಣ ಕುಂಭಗಳಿಗೆ ಹೋಲಿಸಿದರೆ ಮಹಾ ಕುಂಭಮೇಳ ಬಹಳ ವಿಶೇಷವಾಗಿದೆ. ಮಹಾ ಕುಂಭ ಮೇಳ ವಿಶ್ವದ ಅತಿದೊಡ್ಡ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಭಾರತದ ಪವಿತ್ರ ಸ್ಥಳಗಳಾದ ಒಂದಾದ ಪ್ರಯಾಗ್‌ರಾಜ್, ಹರಿದ್ವಾರ, ಉಜ್ಜಯಿನಿ ಅಥವಾ ನಾಸಿಕ್‌ನಲ್ಲಿ ನಡೆಸಲಾಗುತ್ತದೆ. ಈ ವರ್ಷ ಉತ್ತರ ಪ್ರದೇಶದ ಪ್ರಯಾಗ್ನಲ್ಲಿ ನಡೆಯುತ್ತಿದೆ
ಈ ಪವಿತ್ರ ಕಾರ್ಯಕ್ರಮದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಪವಿತ್ರ ನದಿಯಲ್ಲಿ ಸ್ನಾನ ಮಾಡುವುದರಿಂದ ಪಾಪಗಳು ಕಳೆದು ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ. 44 ದಿನಗಳ ಕಾಲ ನಡೆಯುವ ಮಹಾ ಕುಂಭಮೇಳ 2025 ಜನವರಿ 13 ಮಕರ ಸಂಕ್ರಾಂತಿಯಂದು ಪ್ರಾರಂಭವಾಗಿ ಫೆಬ್ರವರಿ 26 ಮಹಾ ಶಿವರಾತ್ರಿಯಂದು ಮುಕ್ತಾಯಗೊಳ್ಳುತ್ತದೆ.
ಕುಂಭ ಮೇಳದ ಹಿನ್ನಲೆ :
ಕುಂಭಮೇಳದ ಮೂಲವು ಹಿಂದೂ ಪುರಾಣಗಳಲ್ಲಿ, ವಿಶೇಷವಾಗಿ ಸಮುದ್ರ ಮಂಥನದ ಕಥೆಯಲ್ಲಿದೆ. ದೇವತೆಗಳು (ದೇವರುಗಳು) ಮತ್ತು ಅಸುರರು (ರಾಕ್ಷಸರು) ಅಮರತ್ವದ ಅಮೃತವಾದ ಅಮೃತವನ್ನು ಪಡೆಯುವ ಪ್ರಯತ್ನದಲ್ಲಿದ್ದಾಗ ಅಮೃತದಿಂದ ತುಂಬಿದ ಕುಂಭ (ಮಡಿಕೆ) ಹೊರಹೊಮ್ಮಿತು. ರಾಕ್ಷಸರಿಂದ ಅದನ್ನು ರಕ್ಷಿಸಲು, ಮೋಹಿನಿಯ ವೇಷದಲ್ಲಿರುವ ಭಗವಾನ್ ವಿಷ್ಣುವು ಮಡಿಕೆಯನ್ನು ಸ್ವಾಧೀನಪಡಿಸಿಕೊಂಡ. ಈ ರೀತಿ ವಶಪಡಿಸಿಕೊಂಡು ಕೊಂಡೊಯ್ಯುತ್ತಿದ್ದಾಗ ಅಮೃತದ ಹನಿಗಳು ಬಿದ್ದ ನಾಲ್ಕು ಸ್ಥಳಗಳೇ ಇಂದಿನ ಪ್ರಯಾಗರಾಜ್, ಹರಿದ್ವಾರ, ಉಜ್ಜಯಿನಿ ಮತ್ತು ನಾಸಿಕ್ ಕ್ಷೇತ್ರಗಳಾಗಿವೆ. ಈ ಸ್ಥಳಗಳು ಪವಿತ್ರ ಸ್ಥಳಗಳಾಗಿ ಪೂಜಿಸಲ್ಪಡುವುದರಿಂದ ಅಲ್ಲಿಯೇ ಕುಂಭಮೇಳವನ್ನು ಆಚರಿಸಲಾಗುತ್ತದೆ.
ಕುಂಭಮೇಳದ ವಿಧಗಳು :
1. ಕುಂಭಮೇಳ:
ಇದು ಪ್ರತಿ 4 ವರ್ಷಗಳಿಗೊಮ್ಮೆ ಸಂಭವಿಸುತ್ತದೆ. ಹರಿದ್ವಾರ, ಪ್ರಯಾಗರಾಜ್, ಉಜ್ಜಯಿನಿ ಮತ್ತು ನಾಸಿಕ್ ಗಳ ಪೈಕಿ ಒಂದು ನಗರದಲ್ಲಿ ನಡೆಯುತ್ತದೆ. ಮೇಳದ ಸಮಯದಲ್ಲಿ, ಲಕ್ಷಾಂತರ ಭಕ್ತರು ಮತ್ತು ಸಂತರು ಪಾಪಗಳಿಂದ ಮುಕ್ತಿ ಪಡೆಯಲು ಪವಿತ್ರ ನದಿಗಳ ಸಂಗಮದಲ್ಲಿ ಸ್ನಾನ ಮಾಡುತ್ತಾರೆ.
2. ಅರ್ಧ ಕುಂಭಮೇಳ:
ಅರ್ಧ ಕುಂಭಮೇಳವು ಪ್ರತಿ 6 ವರ್ಷಗಳಿಗೊಮ್ಮೆ ನಡೆಯುತ್ತದೆ ಮತ್ತು ಪ್ರಯಾಗ್‌ರಾಜ್ ಮತ್ತು ಹರಿದ್ವಾರದಲ್ಲಿ ಮಾತ್ರ ನಡೆಯುತ್ತದೆ.
3. ಪೂರ್ಣ ಕುಂಭ:
12 ವರ್ಷಗಳಿಗೊಮ್ಮೆ ಪ್ರಯಾಗ್‌ರಾಜ್‌ನ ಸಂಗಮದ ದಡದಲ್ಲಿ ಪೂರ್ಣ ಕುಂಭ ಮೇಳ ನಡೆಯುತ್ತದೆ. ಗ್ರಹಗಳ ಶುಭ ಜೋಡಣೆಯ ಆಧಾರದ ಮೇಲೆ ಕುಂಭಮೇಳದ ದಿನಾಂಕವನ್ನು ನಿರ್ಧರಿಸಲಾಗುತ್ತದೆ, ಈ ಅವಧಿಯಲ್ಲಿ ಲಕ್ಷಾಂತರ ಹಿಂದೂಗಳು ಶಾಹಿ ಸ್ನಾನ (ಪವಿತ್ರ ಸ್ನಾನ) ಮಾಡಲಿದ್ದಾರೆ.
4. ಮಹಾ ಕುಂಭ:
12 ಪೂರ್ಣ ಕುಂಭ ಮೇಳಗಳ ನಂತರ 144 ವರ್ಷಗಳಿಗೊಮ್ಮೆ ಮಹಾಕುಂಭಮೇಳ ನಡೆಯುತ್ತದೆ. ಈ ಅಪರೂಪದ ಘಟನೆಗೆ ಹೆಚ್ಚು ಮಹತ್ವವಿದ್ದು ಜನರು ಮಹಾ ಕುಂಭದ ಸಮಯದಲ್ಲಿ ಸ್ನಾನಕ್ಕೆ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಮನುಷ್ಯಜನ್ಮದಲ್ಲಿ ಒಂದೇ ಬಾರಿ ಕಾಣ ಸಿಗುವ ಮೇಳ ಇದಾಗಿದೆ.
DAKSHINA KANNADA
ಯಕ್ಷಬೊಳ್ಳಿ ಕಡಬ ದಿನೇಶ್ ರೈ ಕಲಾಯಾನದ ರಜತ ಸಂಭ್ರಮ ದಿನ ಮುಂದೂಡಿಕೆ
Published
33 minutes agoon
11/01/2025ಮಂಗಳೂರು : ಯಕ್ಷಬೊಳ್ಳಿ ಅಭಿಮಾನಿ ಬಳಗ ಮತ್ತು ಯಕ್ಷಾಭಿಮಾನಿಗಳು ಕಡಬ ನೇತೃತ್ವದಲ್ಲಿ ಯಕ್ಷಗಾನ ಹಾಸ್ಯ ಕಲಾವಿದ ಯಕ್ಷಬೊಳ್ಳಿ ಕಡಬ ದಿನೇಶ್ ರೈ ‘ಕಲಾ ಯಾನದ ರಜತ ಸಂಭ್ರಮ- ಬೊಳ್ಳಿ ಪರ್ಬ- 25’ ಕಾರ್ಯಕ್ರಮ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ಕ್ಷೇತ್ರದ ವಠಾರದಲ್ಲಿ ಆಯೋಜಿಸಲಾಗಿದ್ದು, ಇದೀಗ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.
ಜನವರಿ 22ನೇ ತಾರೀಕು ಬುಧವಾರ ನಡೆಯಬೇಕಿದ್ದ ಕಾರ್ಯಕ್ರಮವನ್ನು ಇದೀಗ ಕಾರಣಾಂತರಗಳಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗುವುದು.
ಕಡಬ ದಿನೇಶ ರೈ ಕಲಾಸೇವೆ ವಿವರ :
ಕಡಬ ದಿನೇಶ ರೈ ಪ್ರಾರಂಭದಲ್ಲಿ ಶ್ರೀ ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸಿ, ಬಳಿಕ ಶ್ರೀ ಕ್ಷೇತ್ರ ಕಟೀಲು, ಪುತ್ತೂರು ಮೇಳ, ಕುಂಟಾರು ಮೇಳ, ಮಂಗಳಾದೇವಿ ಮೇಳ, ತೆಂಕು – ಬಡಗು ಸಮ್ಮಿಶ್ರಗೊಂಡ ಹಿರಿಯಡ್ಕಮೇಳ, ತಳಕಲ ಮೇಳ, ಸುಂಕದಕಟ್ಟೆ ಮೇಳ, ಬಾಚಕೆರೆ ಮೇಳ, ಪ್ರಸ್ತುತ ಗೆಜ್ಜೆಗಿರಿ ಮೇಳದಲ್ಲಿ ಹಾಸ್ಯ ಕಲಾವಿದರಾಗಿ ಸೇವೆಗೈಯುತ್ತಿದ್ದಾರೆ.
ರವಿ ಕುಮಾರ್ ಸುರತ್ಕಲ್ ರಚಿಸಿದ ನಾಗತಂಬಿಲದ ಕೂಸಮ್ಮ (ನಂಜುಂಡ)ನ ಪಾತ್ರ ಯಕ್ಷ ರಂಗದಲ್ಲಿ ಹೊಸ ತಿರುವು ತಂದು ಕೊಟ್ಟಿತ್ತು. ನಾಗರಪಂಚಮಿಯ ನೋಣಯ್ಯ, ವಜ್ರ ಕುಟುಂಬದ ಕಪಟ ಸ್ವಾಮೀಜಿ, ಪವಿತ್ರ ಪಲ್ಲವಿಯ ಪದ್ಮಾವತಿ, (ಪದ್ದು) ಚೆನ್ನಿ- ಚೆನ್ನಮ್ಮದ ಪುರುಷೋತ್ತಮ, ವಿಜಯಕೇಸರಿಯ ಮಾರುತಿ, ಜೀವನಚಕ್ರದ ನಿಷ್ಠಾವಂತ ಸೇವಕ, ಗುಳಿಗೋದ್ಭವ ಪಂಜುರ್ಲಿ – ಪ್ರತಾಪ ದ ಗೋಪಾಲ, ಹಾಗೂ ಚಂದ್ರ, ಮನ ಸೂರೆಗೊಂಡ ಪಾತ್ರಗಳು. ತೆಂಕು -ಬಡಗಿನಲ್ಲಿ ತುಳು – ಕನ್ನಡದಲ್ಲಿ ಪೌರಾ ಣಿಕ, ಸಾಮಾಜಿಕ, ಐತಿಹಾಸಿಕ ಯಾವುದೇ ಪ್ರಸಂಗವಾದರೂ ಕಥೆಗೆ ಲೋಪ ಬಾರದಂತೆ ತಮ್ಮದೇ ಶೈಲಿಯ ಹಾಸ್ಯದಲ್ಲಿ ಜನರನ್ನು ರಂಜಿಸುತ್ತಿದ್ದಾರೆ. ಯಕ್ಷಗಾನ ಮಾತ್ರವಲ್ಲದೆ ನಾಟಕ, ತುಳು ಸಿನೆಮಾ, ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಕಡಬ ದಿನೇಶ ರೈ ಗೆ ಇರುವೈಲು ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ‘ಯಕ್ಷ ಬೊಳ್ಳಿ’ ಎಂಬ ಬಿರುದು ನೀಡಿ ಗೌರವಿಸಿದೆ.
BIG BOSS
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
Published
43 minutes agoon
11/01/2025By
NEWS DESK2ಬಿಗ್ಬಾಸ್ ಫಿನಾಲೆಗೆ ಕೇವಲ ಎರಡು ವಾರ ಮಾತ್ರ ಬಾಕಿ ಇದೆ. ವೀಕ್ಷಕರಲ್ಲಿ ಯಾರು ಬಿಗ್ಬಾಸ್ ಟೈಟಲ್ ಗೆಲ್ತಾರೆ ಅನ್ನೋ ಕ್ಯೂರಿಯಾಸಿಟಿ ಹೆಚ್ಚಾಗ್ತಿದೆ. ಈಗಾಗಲೇ ಓರ್ವ ಸ್ಪರ್ಧಿ ಹನುಮಂತ ಅವರು ಫಿನಾಲೆಗೆ ಪ್ರವೇಶ ಮಾಡಿದ್ದಾರೆ.
ಅಂದ್ಹಾಗೆ ಈ ವಾರ ನಡೆದ ಟಿಕೆಟ್ ಟು ಫಿನಾಲೆ ಫೈಟ್ನಲ್ಲಿ ಗೆದ್ದು, ಫಿನಾಲೆಗೆ ಹನುಮಂತ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಬಿಗ್ಬಾಸ್ ಮತ್ತಷ್ಟು ರಂಗು ಪಡೆದುಕೊಂಡಿದೆ. ಇದರ ಮಧ್ಯೆ ವೀಕೆಂಡ್ ಬಂದಿದ್ದು, ವೀಕ್ಷಕರು ಕಿಚ್ಚನ ಪಂಚಾಯ್ತಿಯನ್ನು ಕಣ್ತುಂಬಿಕೊಳ್ಳಲಿದ್ದಾರೆ.
ನೂರು ದಿನಗಳ ಕಾಲ ನಡೆದ ರೋಚಕ ಆಟ, ಕಾದಾಟಗಳಿಗೆ ಟ್ವಿಸ್ಟ್ ಸಿಗುತ್ತಿದೆ. ಈ ವಾರ ಮನೆಯಿಂದ ಹೊರ ಹೋಗಲು ಒಟ್ಟು ಐವರು ನಾಮಿನೇಟ್ ಆಗಿದ್ದಾರೆ. ಭವ್ಯಗೌಡ, ತ್ರಿವಿಕ್ರಮ್, ಧನರಾಜ್, ಮೋಕ್ಷಿತಾ, ಚೈತ್ರಾ ಕುಂದಾಪುರ ಅವರು ಮನೆಯಿಂದ ಹೋಗಲು ನಾಮಿನೇಟ್ ಆಗಿದ್ದಾರೆ. ಯಾರಿಗೆ ಗೇಟ್ಪಾಸ್ ಸಿಗಲಿದೆ ಅನ್ನೋದು ಕಿಚ್ಚನ ಪಂಚಾಯ್ತಿಯಲ್ಲಿ ಗೊತ್ತಾಗಲಿದೆ.
ಅಲ್ಲದೇ ಇಂದಿನ ಕಿಚ್ಚನ ಎಪಿಸೋಡ್ನಲ್ಲಿ ಯಾವೆಲ್ಲ ವಿಚಾರಗಳ ಬಗ್ಗೆ ಚರ್ಚೆ ಆಗಲಿದೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ. ಇಡೀ ವಾರ ಟಿಕೆಟ್ ಟು ಫಿನಾಲೆ ಟಾಸ್ಕ್ ನಡೆದಿದೆ. ಈ ವೇಳೆ ನಡೆದ ಸರಿ ತಪ್ಪುಗಳು ಮತ್ತು ಫಿನಾಲೆಗೆ ಎಂಟ್ರಿ ನೀಡಲು ಸ್ಪರ್ಧಿಗಳನ್ನು ಮತ್ತಷ್ಟು ಹುರಿದುಂಬಿಸುವ ಕೆಲಸವನ್ನು ಮಾಡಲಿದ್ದಾರೆ.
LATEST NEWS
‘ಹಮಾರಿ ಅಧೂರಿ ಕಹಾನಿ’ ಫೇಸ್ ಬುಕ್ ಪೋಸ್ಟ್ ಹಾಕಿ ವ್ಯಕ್ತಿ ಆ*ತ್ಮಹತ್ಯೆ;ಡೆತ್ ನೋಟ್ ನಲ್ಲಿತ್ತು ನೋವಿನ ಕಥೆ !
Published
1 hour agoon
11/01/2025By
NEWS DESK3ಮಂಗಳೂರು/ಲಖನೌ : ಪ್ರೇಮ ವಿವಾಹದ ಹಿನ್ನೆಲೆಯಲ್ಲಿ ಹುಡುಗಿಯ ಮನೆಯವರ ಕಿರುಕುಳದಿಂದ 25ರ ಹರೆಯದ ವ್ಯಕ್ತಿಯೊಬ್ಬರು ಗುರುವಾರ ರಾತ್ರಿ ಆ*ತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಸುಧೀರ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಖೋರ್ ಗ್ರಾಮದವರು ಎಂದು ತಿಳಿದುಬಂದಿದೆ. ತನ್ನ ಮನೆಯಿಂದ 200 ಮೀಟರ್ ದೂರದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆ*ತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆ*ತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಸುಧೀರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಮ್ಮ ಮದುವೆಯ ಪ್ರಮಾಣಪತ್ರ ಮತ್ತು ಮದುವೆಯ ಚಿತ್ರಗಳನ್ನು ಪೋಸ್ಟ್ ಮಾಡಿ, “ಹಮಾರಿ ಅಧೂರಿ ಕಹಾನಿ” (ನಮ್ಮ ಅಪೂರ್ಣ ಕಥೆ) ಎಂಬ ವಾಖ್ಯಾನದೊಂದಿಗೆ ಶೀರ್ಷಿಕೆ ನೀಡಿದ್ದಾನೆ.
ಇದನ್ನೂ ಓದಿ: ಕರ್ನಾಟಕ ಇನ್ನೂ ನಕ್ಸಲ್ ಮುಕ್ತ ರಾಜ್ಯವಾಗಿಲ್ಲ; ಹಾಗಾದರೆ ಉಳಿದಿರುವ ಆ ಮೋಸ್ಟ್ ವಾಂಟೆಡ್ ನಕ್ಸಲ್ ಯಾರು ?
ಡೆತ್ ನೋಟ್ ನಲ್ಲಿ ಏನಿತ್ತು?
ಸುಧೀರ್ ಅವರ ಆತ್ಮಹತ್ಯೆಯ ನಿರ್ಧಾರದ ಹಿಂದಿನ ತಮ್ಮ ನೋವನ್ನು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಇದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸುಧೀರ್ ಮತ್ತು ಪಕ್ಕದ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿ ತನ್ನ ಸಹೋದರನ ಬಳಿ ಸುಧೀರ್ ಅವರನ್ನ ಪರಿಚಯಮಾಡಿಸಿದ್ದಳು. ಆರಂಭದಲ್ಲಿ ಇಬ್ಬರ ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದ ಸಹೋದರ ನಂತರ ವಿರೋಧಿಸಿದ್ದನು.
ಮನೆಯವರ ವಿರೋಧದ ನಡುವೆಯೂ ಇವರಿಬ್ಬರೂ ರಿಜಿಸ್ಟ್ರರ್ ಮ್ಯಾರೇಜ್ ಮೂಲಕ ಮದುವೆಯಾದರು. ಆದರೆ, ಹುಡುಗಿಯ ಪೋಷಕರು ಮತ್ತು ಸೋದರ ಮಾವ, ಸುಧೀರ್ ಗೆ ಕಿರುಕುಳ ನೀಡುತ್ತಿದ್ದರು. ಹೀಗಾಗಿ ತನ್ನ ಜೀವವನ್ನೇ ಅಂತ್ಯಗೊಳಿಸಬೇಕಾಯಿತು ಎಂದು ಸುಧೀರ್ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
LATEST NEWS
ಎಚ್ಚರ !! ಪರ್ಫ್ಯೂಮ್ ಬಾಟಲಿ ಸ್ಫೋ*ಟ; ಇಬ್ಬರು ಮಕ್ಕಳ ಸಹಿತ ನಾಲ್ವರು ಗಂ*ಭೀರ
ಎನ್ಕೌಂಟರ್, ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಸಂಶಯವಿದೆ : ಅಣ್ಣಾಮಲೈ
ಇದು ಜಗತ್ತಿನ ಅತ್ಯಂತ ಸುರಕ್ಷಿತ ಬಿಲ್ಡಿಂಗ್
ಪುತ್ತೂರು : ಖತರ್ನಾಕ್ ಮನೆಗಳ್ಳ ಅರೆಸ್ಟ್; ತನಿಖೆ ವೇಳೆ ಬಹಿರಂಗವಾಯ್ತು ಹಲವು ಪ್ರಕರಣ
ಕರ್ನಾಟಕ ಇನ್ನೂ ನಕ್ಸಲ್ ಮುಕ್ತ ರಾಜ್ಯವಾಗಿಲ್ಲ; ಹಾಗಾದರೆ ಉಳಿದಿರುವ ಆ ಮೋಸ್ಟ್ ವಾಂಟೆಡ್ ನಕ್ಸಲ್ ಯಾರು ?
ವಿಶ್ವಪ್ರಸಿದ್ಧ ‘ಮಹಾಕುಂಭ ಮೇಳ’ ಕ್ಕೆ ದಿನಗಣನೆ ಆರಂಭ
Trending
- FILM5 days ago
ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?
- FILM3 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- LATEST NEWS24 hours ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- FILM2 days ago
ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ