Connect with us

    LATEST NEWS

    WATCH VIDEO : ಅಂ*ತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪತ್ತೆ!

    Published

    on

    ಮಂಗಳೂರು/ಬೀದರ್ : ಅಂ*ತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಜೋಕಾಲಿಯಲ್ಲಿ ಪ್ರತ್ಯಕ್ಷವಾದ ಆಶ್ಚರ್ಯಕರ ಘಟನೆ ಬೀದರ್‌ನಲ್ಲಿ ನಡೆದಿದೆ.

    ಅ*ನಾರೋಗ್ಯದಿಂದ ಮೃ*ತಪಟ್ಟಿದ್ದ ಮಗುವನ್ನ ಅಂ*ತ್ಯಸಂಸ್ಕಾರ ಮಾಡಲಾಗಿತ್ತು. ಆದರೆ ಮರುದಿನ ಅಂ*ತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃ*ತದೇಹ ಮರದ ಮೇಲೆ ಪತ್ತೆಯಾಗಿದೆ.

    ಏನಿದು ಘಟನೆ?

    ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಅಂಬಯ್ಯ ಸ್ವಾಮಿ ಎಂಬವರ ಒಂದೂವರೆ ವರ್ಷದ ಮಗು ಮೃ*ತಪಟ್ಟಿತ್ತು. ಹೀಗಾಗಿ ಮಗುವನ್ನು ಹೂಳಲಾಗಿತ್ತು. ಮಗುವನ್ನ ಹೊರ ತೆಗೆದು ಕಪ್ಪು ಬಟ್ಟೆಯಲ್ಲಿ ಮರಕ್ಕೆ ಕಟ್ಟಿ ಜೋಳಿಗೆಯಲ್ಲಿ ನೇತು ಹಾಕಲಾಗಿತ್ತು. ಮಾಟ ಮಂತ್ರ ಮಾಡುವವರು ಹೀಗೆ ಮಾಡಿರಬಹುದೆಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ : WATCH VIDEO : ಕಣ್ಣಿಗೆ ಬಿತ್ತು ಹಲಸಿನ ಮರ…ಗಜರಾಜ ಹಲಸಿನ ಹಣ್ಣನ್ನು ಹೇಗೆ ಕೊಯ್ದ ಗೊತ್ತಾ!?

    ದಫನ ಮಾಡಿದ ಮಗುವನ್ನು ಮತ್ತೆ ತೆಗೆದು ಮಾಟ, ಮಂತ್ರ ಪ್ರಯೋಗಗಳಿಗೆ ಬಳಸುವ ಸಲುವಾಗಿ ಈ ರೀತಿ ಮಾಡಲಾಗಿದೆ ಎಂದು ಜನರು ಊಹಿಸಿದ್ದಾರೆ. ಸದ್ಯ ಮರಕ್ಕೆ ಕಟ್ಟಿದ್ದ ಮಗುವಿನ ಮೃ*ತದೇಹವನ್ನು ಮತ್ತೆ ಅದೇ ಸ್ಥಳದಲ್ಲಿ ಗ್ರಾಮಸ್ಥರು ಅಂ*ತ್ಯಸಂಸ್ಕಾರ ಮಾಡಿದ್ದಾರೆ.

    LATEST NEWS

    ಗೋಡೆ ಕುಸಿದು ಮಣ್ಣಿನಡಿಗೆ ಸಿಲುಕಿದ ಇಬ್ಬರು ಕಾರ್ಮಿಕರು..!

    Published

    on

    ಮಂಗಳೂರು : ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದ ಗೋಡೆಯ ಮಣ್ಣು ಕುಸಿದು ಕಾರ್ಮಿಕರಿಬ್ಬರು ಮಣ್ಣಿನ ಅಡಿಗೆ ಸಿಲುಕಿದ್ದಾರೆ. ಮಂಗಳೂರು ನಗರದ ಬಲ್ಮಠ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಇಬ್ಬರು ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

    ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ. ಬಲ್ಮಠ ರಸ್ತೆಯಲ್ಲಿ ನಡೆಯುತ್ತಿದ್ದ ಈ ಕಾಮಾಗಾರಿಯ ವೇಳೆ ರಿಟೈನಿಂಗ್‌ವಾಲ್‌ನ ಮಣ್ಣು ಕುಸಿತವಾಗಿದೆ. ಮಳೆಯಿಂದ ಸಡಿಲಗೊಂಡಿದ್ದ ಮಣ್ಣು ಕಾರ್ಮಿಕರು ಕೆಲಸ ಮಾಡುತ್ತಿದ್ದ ಜಾಗಕ್ಕೆ ಬಿದ್ದಿದೆ.

    Continue Reading

    LATEST NEWS

    ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ಐವರು ಸಾ*ವು, 38 ಮಕ್ಕಳು ಅಸ್ವ*ಸ್ಥ

    Published

    on

    ಮಧ್ಯಪ್ರದೇಶದಲ್ಲಿರುವ ಯುಗಪುರುಷ ಧಾಮ್ ಬೌದ್ಧಿಕ ವಿಕಾಸ ಕೇಂದ್ರದಲ್ಲಿ ವಿಷಪೂರಿತ ಆಹಾರ ಸೇವಿಸಿ ಐದು ಮಕ್ಕಳು ಸಾ*ವನ್ನಪ್ಪಿದ್ದು, 38 ಮಂದಿ ಅಸ್ವ*ಸ್ಥರಾಗಿದ್ದಾರೆ. 38 ಮಕ್ಕಳ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲಾ ಮಕ್ಕಳು ನಗರದ ಸರ್ಕಾರಿ ಚಾಚಾ ನೆಹರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.

    ಒಟ್ಟು 38 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಈ ನಾಲ್ವರು ಐಸಿಯು ವಾರ್ಡ್‌ನಲ್ಲಿ ದಾಖಲಾಗಿದ್ದು, ಮುಂದಿನ 48 ಗಂಟೆಗಳ ಕಾಲ ಶಾಲೆಯಲ್ಲಿ ಯಾವುದೇ ಮಕ್ಕಳಲ್ಲಿ ಯಾವುದೇ ರೋಗಲಕ್ಷಣಗಳು ಕಂಡುಬಂದರೆ, ಆಶ್ರಮದ ಮೇಲೆ ನಿಗಾ ಇಡುತ್ತೇವೆ ಎಂದು ಜಿಲ್ಲಾಧಿಕಾರಿ ಆಶೀಶ್ ಸಿಂಗ್ ತಿಳಿಸಿದ್ದಾರೆ.

    ಘಟನೆಯ ತನಿಖೆ ನಡೆಸಲಾಗುತ್ತಿದೆ. ಆಶ್ರಮದಲ್ಲಿ ಸುಮಾರು 200 ಮಕ್ಕಳು ವಾಸಿಸುತ್ತಿದ್ದಾರೆ. ಇದನ್ನು ಎನ್‌ಜಿಒ ನಿರ್ವಹಿಸುತ್ತದೆ. 5 ರಿಂದ 15 ವರ್ಷದೊಳಗಿನ ಮಕ್ಕಳು ಅಲ್ಲಿದ್ದಾರೆ.

    Continue Reading

    DAKSHINA KANNADA

    ಪತಿಯ ಹ*ತ್ಯೆ ಪ್ರಕರಣ; ಪತ್ನಿ ಸಹಿತ ಐವರಿಗೆ ಜೀವಾವಧಿ ಸಜೆ

    Published

    on

    ಮಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಕಾಸರಗೋಡು: ಪುರುಷ ಹಾಗೂ ಮಹಿಳೆಯ ಮೃ*ತದೇಹ ವಸತಿಗೃಹದಲ್ಲಿ ಪತ್ತೆ

    8 ವರ್ಷಗಳ ಹಿಂದೆ ಅಂದರೆ 2016ರಲ್ಲಿ ಈ ಘಟನೆ ನಡೆದಿತ್ತು. ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪಾವೂರು ನಿವಾಸಿ ಇಸ್ಮಾಯಿಲ್‌ (59) ಕೊಲೆಯಾದವರು. ಅವರ ಪತ್ನಿ ನೆಬಿಸಾ(40), ಆಕೆಯ ಪ್ರಿಯಕರ ಕುತ್ತಾರುಪದವಿನ ಜಮಾಲ್‌ ಅಹಮ್ಮದ್‌ (38), ಉಳ್ಳಾಲದ ಅಬ್ದುಲ್‌ ಮುನಾಫ್ ಯಾನೆ ಮುನ್ನ (41), ಉಳ್ಳಾಲದ ಅಬ್ದುಲ್‌ ರೆಹಮಾನ್‌ (36) ಮತ್ತು ಬೋಳಿಯಾರ್‌ನ ಶಬೀರ್‌ (31) ಶಿಕ್ಷೆಗೊಳಗಾದವರು. ಇಸ್ಮಾಯಿಲ್‌ ಅವರು ನೆಬಿಸಾಳನ್ನು ಎರಡನೇ ವಿವಾಹವಾಗಿದ್ದು ಅವರು ನಾಲ್ವರು ಮಕ್ಕಳನ್ನು ಹೊಂದಿದ್ದರು. ನೆಬಿಸಾ ಮತ್ತು ಜಮಾಲ್‌ನಿಗೆ ಅನೈತಿಕ ಸಂಬಂಧವಿತ್ತು. ಇದು ಇಸ್ಮಾಯಿಲ್‌ಗೆ ಗೊತ್ತಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದೇ ಕಾರಣಕ್ಕೆ ಆಗಾಗ್ಗೆ ಪತಿ -ಪತ್ನಿಯರ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ಹಿನ್ನೆಲೆಯಲ್ಲಿ ನೆಬಿಸಾ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ್ದಳು ಎಂದು ಆರೋಪಿಸಲಾಗಿತ್ತು. ಕೊಣಾಜೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರಾದ ಕಾಂತಜಾರು ಎಸ್‌.ವಿ. ಅವರು ಆರೋಪಿಗಳ ಅಪರಾಧ ಸಾಬೀತಾಗಿರುವುದರಿಂದ ಆರೋಪಿಗಳಿಗೆ ಜೀವಾವಧಿ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಕೊಲೆಯಾದ ಇಸ್ಮಾಯಿಲ್‌ ಅವರ ಮಕ್ಕಳಿಗೆ ಪರಿಹಾರ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ಮಾಡಿದ್ದಾರೆ.

     

     

    Continue Reading

    LATEST NEWS

    Trending