ಹಾಸನ: ಸ್ಪೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದು ಒಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ರಾಜ್ಯದಲ್ಲಿ ಕೆಲ ತಿಂಗಳ ಹಿಂದೆ 2 ಬಹುದೊಡ್ಡ ಜಿಲೆಟಿನ್ ಸ್ಫೋಟ ಸಂಭವಿಸಿ, ಭಾರೀ ಸಾವು ನೋವು ಸಂಭವಿಸಿತ್ತು. ಇದೀಗ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲೇ ಸ್ಪೋಟ ಸಂಭವಿಸಿದ್ದು ಸ್ಪೋಟದ ರಭಸಕ್ಕೆ ಸಂಪತ್ ಎಂಬಾತ ಸ್ಥಳದಲ್ಲೇ ಮೃತಪಟ್ಟರೆ ನಟರಾಜ್ ಎಂಬಾತ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇನ್ನೋರ್ವ ಕಾರ್ಮಿಕ ಗಂಭೀರ ಗಾಯಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಪಟ್ಟ ಇಬ್ಬರು ಹೊಳೆನರಸೀಪುರದ ಬೆಟ್ಟದಹಳ್ಳಿಯವರು ಎಂದು ತಿಳಿದು ಬಂದಿದೆ.