BANTWAL
ಭಾರತವನ್ನು ನಾಶಮಾಡುವ ಕನಸು ಎಂದಿಗೂ ನನಸಾಗದು : ಕಲ್ಲಡ್ಕದಲ್ಲಿ ಪತ್ರಕರ್ತ ಅಜಿತ್ ಹನುಮಕ್ಕನವರ್ ..!
Published
1 year agoon
By
Adminಭಾರತಕ್ಕೆ ಆತ್ಮ ಇದೆ. ಅದು ಜಾಗೃತವಾಗಿದೆ. ಹಾಗಾಗಿ ಭಾರತವನ್ನು ನಾಶಮಾಡಬೇಕು ಎಂದು ಕನಸು ಕಾಣುವವರಿಗೆ ಅದು ಸಾಧ್ಯವಿಲ್ಲ ವೆಂದು ಹಿರಿಯ ಪತ್ರಕರ್ತ ಸುವರ್ಣ ಚಾನೆಲ್ ಸುದ್ದಿ ವಿಭಾಗದ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ಹೇಳಿದ್ದಾರೆ.
ಬಂಟ್ವಾಳ : ಭಾರತಕ್ಕೆ ಆತ್ಮ ಇದೆ. ಅದು ಜಾಗೃತವಾಗಿದೆ. ಹಾಗಾಗಿ ಭಾರತವನ್ನು ನಾಶಮಾಡಬೇಕು ಎಂದು ಕನಸು ಕಾಣುವವರಿಗೆ ಅದು ಸಾಧ್ಯವಿಲ್ಲ ವೆಂದು ಹಿರಿಯ ಪತ್ರಕರ್ತ ಸುವರ್ಣ ಚಾನೆಲ್ ಸುದ್ದಿ ವಿಭಾಗದ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ಹೇಳಿದ್ದಾರೆ.
ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಅಜಾದ್ ಭವನದಲ್ಲಿ ನಡೆದ “ಸ್ವತ್ವದ ಆಧಾರದ ಮೇಲೆ ಭಾರತದ ಪುನರುತ್ಥಾನ ” ಎಂಬ ವಿಷಯದಲ್ಲಿ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ವೇಗವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
ಭಾರತದ ಒಳಗಿನ, ನಮ್ಮೊಳಗಿನ ಗಲಾಟೆ ಮತ್ತು ಅಮಾನವೀಯ ಆಸೆಗಳು ಭಾರತದ ಪರಮವೈಭವನ್ನು ಹಾಳು ಮಾಡಬಹುದೇ ಹೊರತು ಇತರರಿಗೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಅವರು ಭಾರತ ಇಟ್ಟಿರುವ ಹೆಜ್ಜೆಗಳು ಸಣ್ಣದಲ್ಲದ, ಸಡಿಲವಾದುದಲ್ಲ ಎಂದರು.
ಜಗತ್ತಿನಲ್ಲಿ ರಕ್ಷಣಾ ಸಾಮಾಗ್ರಿಗಳನ್ನು ಅಮದು ಮಾಡುವ ಪಟ್ಟಿಯಲ್ಲಿ ಎತ್ತರದ ಸ್ಥಾನದಲ್ಲಿದೆ.
ಭಾರತ ಪ್ರಸ್ತುತ ಉತ್ಪಾದಕ ದೇಶವಾಗಿ ಜಗತ್ತಿನಲ್ಲಿ ಗುರುತಿಸಲ್ಪಟ್ಟಿದೆ ಎಂದು ತಿಳಿಸಿದರು.
ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರು ಸಮಾಜದ ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಮತ್ತು ಧರ್ಮ,ಸಂಸ್ಕ್ರತಿಯನ್ನು ಉಳಿಸುವ ಸಲುವಾಗಿ ಮಾಡಿದ ಸಮಾಜಮುಖಿ ಹೋರಾಟಗಳು ಆದರ್ಶವಾದರೆ, ಶಿಕ್ಷಣ ಸಂಸ್ಥೆಯ ಮೂಲಕ ಸಮಾಜದ ಪರಿವರ್ತನೆಗೆ ನೀಡಿದ ಕೊಡುಗೆ ಅತ್ಯಂತ ದೊಡ್ಡದಾಗಿದೆ ಎಂದು ಹೊಗಳಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಇವರು ವಿಚಾರ ಸಂಕಿರಣದ ಅಗತ್ಯತೆ- ಅನಿವಾರ್ಯತೆ ಬಗ್ಗೆ ಪ್ರಸ್ತಾವನೆಗೈದರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ನಾರಾಯಣ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗದ ವಿಶ್ರಾಂತ ಪ್ರಾಚಾರ್ಯರ ಪ್ರೊ.ಬಿ.ಎಂ.ಕುಮಾರಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
ಶೀಘ್ರದಲ್ಲೇ ಉಬರ್ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
ಉತ್ತರ ಕನ್ನಡದಲ್ಲಿ ಮಂಗನಬಾವು ಸೋಂಕು 125 ಕ್ಕೆ ಏರಿಕೆ
ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?
ಧರ್ಮಸ್ಥಳದಲ್ಲಿ ಪೊಣ್ಣಂ ಪ್ರಭಾಕರ್ ವಿಶೇಷ ಪೂಜೆ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ