Connect with us

    BELTHANGADY

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಕಾರು

    Published

    on

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ನಡೆದಿದೆ.

    ಉಡುಪಿಯಿಂದ ಮೂವರು ಯುವಕರು ಅರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಸುಮಾರು ಬೆಳಗ್ಗೆ 4.45 ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಶಿಬೆಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದಿದೆ.

    ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲೆತ್ತಲಾಗಿದೆ.

    BELTHANGADY

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ

    Published

    on

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬುಧವಾರ ನಿಡಿಗಲ್ ಸಮೀಪ ಸಂಭವಿಸಿದೆ.

    ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ.

    ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Continue Reading

    BELTHANGADY

    ಬೆಳ್ತಂಗಡಿ: ಭಾರೀ ಮಳೆಗೆ ಮುಂಡಾಜೆಯಲ್ಲಿ ಗುಡ್ಡ ಕುಸಿತ; ರಸ್ತೆ ಸಂಚಾರ ಬಂದ್

    Published

    on

    ಬೆಳ್ತಂಗಡಿ: ಮುಂಡಾಜೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರಕ್ಕೆ ಅನಾನುಕೂಲವಾಗುವ ರೀತಿಯಲ್ಲಿ ಮುಚ್ವಿ ಹೋಗಿದೆ.

    ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಶ್ರೀಧರ ಪೂಜಾರಿ ಎಂಬವರ ಮನೆಯ ಸಮೀಪ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿದಿದೆ. ರಸ್ತೆಗೆ ಹಾಗೂ ಮನೆಯ ಹಿಂಭಾಗದಲ್ಲಿ ಮಣ್ಣು ಬಿದ್ದಿದೆ.

    ರಸ್ತೆ ಸಂಪೂರ್ಣ ಮುಚ್ಚಿ ಹೋಗಿದ್ದು ಜನರ ಹಾಗೂ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮನೆಯ ಹಿಂಭಾಗದಲ್ಲಿಯೂ ಮಣ್ಣು ಬಿದ್ದಿದ್ದು ಅಪಾಯಕಾರಿ ಸ್ಥಿತಿಯಿದೆ. ಇದೀಗ ಸ್ಥಳೀಯ ಯುವಕರು ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವು ಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ.

    Continue Reading

    BELTHANGADY

    ಬೆಳ್ತಂಗಡಿ:‌ ವೈನ್ ಶಾಪ್‌ ನ ಬೀಗ ಒಡೆದು ನಗದು, ಮದ್ಯ ಕಳ್ಳತನ

    Published

    on

    ಬೆಳ್ತಂಗಡಿ: ನಗರದ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ಸ್ ಶಾಪ್‌ ನ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿಗಳನ್ನು ಕಳ್ಳತನ ಮಾಡಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

    ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರು ಸಾವಿರ ರೂ. ಗಿಂತಲೂ ಹೆಚ್ಚು ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ.

    ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Continue Reading

    LATEST NEWS

    Trending