Tuesday, May 18, 2021

ಆಗಸದಲ್ಲೇ ಹೊತ್ತಿ ಉರಿದ ವಿಮಾನದ ಇಂಜಿನ್;  ಪೈಲಟ್ ಚಾಣಾಕ್ಷತೆಯಿಂದ  241ಮಂದಿ ಸೇಫ್ ..

 

ಆಗಸದಲ್ಲೇ ಹೊತ್ತಿ ಉರಿದ ವಿಮಾನದ ಇಂಜಿನ್;  ಪೈಲಟ್ ಚಾಣಾಕ್ಷತೆಯಿಂದ  241ಮಂದಿ ಸೇಫ್ ..!

ವಾಷಿಂಗ್ಟನ್: ವಿಮಾನವೊಂದು ಹಾರಾಡುತ್ತಿರುವಾಗಲೇ ಇಂಜಿನ್ ಹೊತ್ತಿ ಉರಿದ ಭಯಾನಕ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುನೈಟೆಡ್ ಏರ್ ಲೈನ್ಸ್ ವಿಮಾನವು 231 ಮಂದಿ ಪ್ರಯಾಣಿಕರು ಮತ್ತು 10 ಜನ ಸಿಬ್ಬಂದಿಗಳೊಂದಿಗೆ ಡೆನ್ವರ್ ನಿಂದ ಹೊನಲುಲುಗೆ ಹೊರಟಿತ್ತು.

ಮಾರ್ಗ ಮಧ್ಯದಲ್ಲಿ ಏಕಾಏಕಿ ವಿಮಾನದ ಇಂಜಿನ್‍ನಲ್ಲಿ ಬೆಂಕಿಯ ಕೆನ್ನಾಲಿಗೆ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೋರ್ವರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.ವಿಮಾನದ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡು, ನಡುಗಲು ಪ್ರಾರಂಭಿಸಿದಾಗ ತಕ್ಷಣ ಫೈಲಟ್ ತುರ್ತು ಭೂಸ್ಪರ್ಶ ಮಾಡಿ 241 ಜನರ ಪ್ರಾಣವನ್ನು ರಕ್ಷಿಸಿದ್ದಾರೆ. ಡೆನ್ವರ್ ನಿಂದ ಹೊನಲುಲುಗೆ ಹೊರಟಿದ್ದ ವಿಮಾನ ಯುಎ 328 ಏಫ್‍ನಲ್ಲಿ ಕಾಣಿಸಿಕೊಂಡ ಇಂಜಿನ್ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಯಾವುದೇ ಸಾವುನೋವುಗಳು ಸಂಭವಿಸದೆ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನಯಾನದ ಆಡಳಿತ ಮಂಡಳಿ ಟ್ವಿಟ್ಟರ್ ನಲ್ಲಿ ತಿಳಿಸಿದೆ.ವಿಮಾನದ ಇಂಜಿನ್ ಹೊತ್ತಿ ಉರಿದ ಪರಿಣಾಮವಾಗಿ ಬಿಡಿಭಾಗಗಳು ಕಟ್ಟಡಗಳ ಮಧ್ಯೆ, ಮತ್ತು ಮೈದಾನಕ್ಕೆ ಬಿದ್ದಿದೆ. ವಿಮಾನದಲ್ಲಿ ಕಾಣಿಸಿಕೊಂಡ ದೋಷವನ್ನು ಪರೀಕ್ಷಿಸಲು ರಾಷ್ಟ್ರೀಯ ಸಾರಿಗೆ ಸುರಕ್ಷಾ ಮಂಡಳಿ ತಯಾರಿ ನಡೆಸಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...