Home ಪುತ್ತೂರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಹೋಟೆಲ್ ರೈಡ್ ಮಾಡಿದ ಅಬಕಾರಿ ಇಲಾಖೆ

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಹೋಟೆಲ್ ರೈಡ್ ಮಾಡಿದ ಅಬಕಾರಿ ಇಲಾಖೆ

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಹೋಟೆಲ್ ರೈಡ್ ಮಾಡಿದ ಅಬಕಾರಿ ಇಲಾಖೆ

ಕಡಬ: ಹೋಟೆಲ್ ಒಂದಕ್ಕೆ ದಾಳಿ ನಡೆಸಿದ ಅಬಕಾರಿ ಇಲಾಖಾಧಿಕಾರಿಗಳು ಅಕ್ರಮ ಮದ್ಯ ಮಾರಾಟವನ್ನು ಪತ್ತೆ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ನಡೆದಿದೆ.

ನೆಟ್ಟಣ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ಹೋಟೆಲ್ ಅಂಬಾಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡಲಾಗುತ್ತಿದೆ,

ಎಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಅಬಕಾರಿ ನಿರೀಕ್ಷಕಿ ಸುಜಾತ ಮತ್ತು ಸಿಬ್ಬಂದಿಗಳು, ಸುಮಾರು 2.52 ಲೀಟರ್ ಮದ್ಯವನ್ನು ವಶಕ್ಕೆ ತೆಗೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.

ಇನ್ನು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ ವಿಬಿನ್ ಎಂಬಾತ ತಪ್ಪಿಸಿಕೊಂಡಿದ್ದಾನೆ.

ಮದ್ಯ ಮಾತ್ರವಲ್ಲದೆ ಈ ಹೋಟೆಲ್ ನಲ್ಲಿ ಅಕ್ರಮವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬುದಾಗಿ ಅಬಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

- Advertisment -

RECENT NEWS

ಕ್ವಾರೆಂಟೈನ್ ನಲ್ಲಿದ್ದ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು ಪ್ರಕರಣ: ತನಿಖೆಗೆ ವಿಚಾರಣಾ ಸಮಿತಿ ರಚನೆ

ಕ್ವಾರೆಂಟೈನ್ ನಲ್ಲಿದ್ದ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು ಪ್ರಕರಣ: ತನಿಖೆಗೆ ವಿಚಾರಣಾ ಸಮಿತಿ ರಚನೆ ಮಂಗಳೂರು: ಮಂಗಳೂರಿನಲ್ಲಿ ಕ್ವಾರೆಂಟೈನ್ ನಲ್ಲಿದ್ದ ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿ ನೇತೃತ್ವದ ವಿಚಾರಣಾ...

ಚಾಲಕನ ಕೇರ್ ಲೆಸ್ ನಿಂದಾಗಿ ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆ.ಎಸ್ಆರ್ ಟಿಸಿ ಬಸ್

ಚಾಲಕನ ಕೇರ್ ಲೆಸ್ ನಿಂದಾಗಿ ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್ ಉಡುಪಿ: ಕೆಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ...

ನೇತ್ರಾವತಿ ನದಿಗೆ ಹಾರಿದ ಯುವಕನ ರಕ್ಷಣೆ ಮಾಡಿದ್ದ ಯುವಕರಿಗೆ ಅಭಿನಂದನೆ ಸಲ್ಲಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ

ನೇತ್ರಾವತಿ ನದಿಗೆ ಹಾರಿದ ಯುವಕನ ರಕ್ಷಣೆ ಮಾಡಿದ್ದ ಯುವಕರಿಗೆ ಅಭಿನಂದನೆ ಸಲ್ಲಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ದುಬೈ: ಇಂದು ಪ್ರಪಂಚವೇ ಕೊರೊನಾ ಎಂಬ ಮಹಾ ವೈರಸ್ ಗೆ ಹೆದರಿ ಜೀವಿಸುತ್ತಿರುವ ಈ ಸಮಯದಲ್ಲಿಯೂ ಮಾನವೀಯತೆ...

ಢಾಕಾದ ಕೋವಿಡ್ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ: ಐವರು ಕೊರೊನಾ ವೈರಸ್ ರೋಗಿಗಳು ಸಾವು.!

ಢಾಕಾದ ಕೋವಿಡ್ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ: ಐವರು ಕೊರೊನಾ ವೈರಸ್ ರೋಗಿಗಳು ಸಾವು.! ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ಕೋವಿಡ್ ಆಸ್ಪತ್ರೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಐವರು ಕೊರೊನಾ ವೈರಸ್ ರೋಗಿಗಳು ಮೃತಪಟ್ಟಿದ್ದಾರೆ. ಬೆಂಕಿ...