Connect with us

FILM

ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ಅಲೆಗೆ ಬ*ಲಿ !!

Published

on

ಮಂಗಳೂರು/ಥಾಯ್ಲೆಂಡ್: ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ 24 ವರ್ಷದ ರಷ್ಯಾದ ಖ್ಯಾತ ನಟಿ ಕ್ಯಾಮಿಲ್ಲಾ ಬೆಲ್ಲಾಟಸ್ಕಾಯ ಮೇಲೆ ಭೀ*ಕರ ಸಮುದ್ರದ ಅಲೆಗಳು ಅಪ್ಪಳಿಸಿ, ದುರಂ*ತ ಅಂ*ತ್ಯ ಕಂಡಿದ್ದಾಳೆ.

ನಟಿ ಕ್ಯಾಮಿಲ್ಲಾ ಪ್ರತಿ ದಿನ ಯೋಗ ಮಾಡುತ್ತಾ ದೈಹಿಕವಾಗಿ ಹಾಗೂ ಮಾನಸಿಕವಾಗಿ ಫಿಟ್ ಆಗಿದ್ದಳು. ಇದರಿಂದ ಜೀವನ ಸಂಪೂರ್ಣ ಬದಲಾಗಿರುವುದಾಗಿ ಕ್ಯಾಮಿಲ್ಲಾ ಹೇಳಿಕೊಂಡಿದ್ದರು. ರಷ್ಯಾ ನಟಿ ಕ್ಯಾಮಿಲ್ಲಾ ತನ್ನ ಬಾಯ್‌ಫ್ರೆಂಡ್ ಜೊತೆ ಸೇರಿ ಥಾಯ್ಲೆಂಡ್ ಪ್ರವಾಸದಲ್ಲಿರುವಾಗ ಈ ಘಟನೆ ನಡೆದಿದೆ. ಚಿತ್ರ ಸೇರಿದಂತೆ ಹಲವು ಬ್ಯೂಸಿ ಶೆಡ್ಯೂಲ್ ಬಳಿಕ ನಟಿ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪಕ್ಕೆ ಭೇಟಿ ನೀಡುವುದು ಹೆಚ್ಚಾಗಿತ್ತು. ಇದರಂತೆ ಈ ಬಾರಿಯೂ ಪ್ರವಾಸ ಮಾಡುತ್ತಿದ್ದ ವೇಳೆ ದು*ರಂತ ನಡೆದುಹೋಗಿದೆ.

ಕೊಹ್ ಸಮುಯಿ ದ್ವೀಪದ ಸಮುದ್ರದ ತೀರದಲ್ಲಿನ ಬಂಡೆ ಕಲ್ಲಿನ ಮೇಲೆ ಕುಳಿತು ಪ್ರಾಣಾಯಾಮ ಮಾಡುತ್ತಿದ್ದ ವೇಳೆ ಭೀಕರ ಅಲೆ ಅಪ್ಪಳಿಸಿದೆ. ಏನಾಗುತ್ತಿದೆ ಎನ್ನುವಷ್ಟರಲ್ಲಿ ನಟಿ ಸಮುದ್ರ ಅಲೆಗೆ ಕೊಚ್ಚಿ ಹೋಗಿದ್ದಾರೆ. ಪಕ್ಕದ ಬಂಡೆ ಕಲ್ಲಿನ ಮೇಲಿದ್ದ ಪ್ರವಾಸಿಗರು ನಟಿಯನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಸಾಧ್ಯವಾಗಿಲ್ಲ. ದೈತ್ಯ ಅಲೆಯಿಂದ ನಟಿ ಕೊಚ್ಚಿ ಹೋಗಿದ್ದಾಳೆ. ತಕ್ಷಣವೆ ಕೋಸ್ಟಲ್ ಪೊಲೀಸರು ಆಗಮಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಆದರೆ ರಕ್ಕಸ ಅಲೆಗಳ ಪ್ರಮಾಣ ಹೆಚ್ಚಾದ ಕಾರಣ ಕಾರ್ಯಾಚರಣೆಗೂ ಅಡ್ಡಿಯಾಗಿದೆ.

ಸತತ ಕಾರ್ಯಾಚರಣೆ ಬಳಿಕ ಪೊಲೀಸರು ಕಿ.ಮೀ. ದೂರದಲ್ಲಿ ರಷ್ಯಾ ನಟಿ ಕ್ಯಾಮಿಲ್ಲಾ ಮೃ*ತದೇಹ ಪತ್ತೆರಯಾಗಿದೆ. ಕ್ಯಾಮಿಲ್ಲಾ ದು*ರಂತ ಅಂ*ತ್ಯ ಕಂಡ ಅದೇ ಬಂಡೆ ಕಲ್ಲಿನ ಮೇಲೆ ಹಲವು ಬಾರಿ ಯೋಗ ಮಾತ್ತಿದ್ದಳು. ಕ್ಯಾಮಿಲ್ಲಾ ಅತೀ ಹೆಚ್ಚು ಪ್ರವಾಸ ಮಾಡಿದ ಪ್ರದೇಶದಲ್ಲಿ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಹಲವು ಬಾರಿ ಈ ‘ದ್ವೀಪ ನನ್ನ ಎರಡನೇ ತವರು ಮನೆ’ ಎಂದು ಹೇಳಿಕೊಂಡಿದ್ದರು. ಸಂಜೆ ವೇಳೆ ಯೋಗ ಮಾಡಿ ವಾಪಸ್ ಬರುವುದಾಗಿ ಬಾಯ್‌ಫ್ರೆಂಡ್‌ಗೆ ಹೇಳಿ ಹೊಟೆಲ್‌ನಿಂದ ಹೊರಟಿದ್ದಾರೆ. ಆದರೆ ಮರಳಿ ಬರಲೇ ಇಲ್ಲ. ಸಮುದ್ರದ ದೈ*ತ್ಯ ಅಲೆಗಳು ಅಪ್ಪಳಿಸುತ್ತಿರುವ ಕಾರಣ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಹೆಚ್ಚಿನ ಸುರಕ್ಷತಾ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

DAKSHINA KANNADA

ಉಳ್ಳಾಲ: ಯುಐ ಚಿತ್ರದ ಯಶಸ್ಸಿಗೆ ಕೊರಗಜ್ಜನಿಗೆ ಅಡ್ಡಬಿದ್ದ ಉಪೇಂದ್ರ

Published

on

ಉಳ್ಳಾಲ: ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಕ್ಷೇತ್ರವು ಪ್ರಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್‌ನ ರಿಯಲ್ ಸ್ಟಾರ್ ನಟ , ನಿರ್ದೇಶಕ ಉಪೇಂದ್ರ ಹೇಳಿದರು.

ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರದಂದು ಅವರು ಭೇಟಿ ನೀಡಿ ಡಿಸೆಂಬರ್ 20 ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ ಯುಐ ಸಿನೆಮಾದ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.

ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪ್ರಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆಯು ನಮ್ಮ ಮೇಲಿರಲಿ ಎಂದರು.  ಚಿತ್ರದ ನಿರ್ಮಾಪಕರಾದ ಕೆ ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್ , ರಾಜೇಶ್ ಭಟ್ ಮೊದಲಾದವರಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನು  ಕ್ಷೇತ್ರದ ಪರವಾಗಿ ಅಭಿನಂದಿಸಿದರು.

Continue Reading

BIG BOSS

ಐಶ್ವರ್ಯ-ಮಂಜು ನಡುವೆ ಹೊತ್ತಿಕೊಂಡ ಬೆಂಕಿ !

Published

on

ಮಂಗಳೂರು/ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 11’ ರೋಚಕ ಘಟ್ಟ ತಲುಪುತ್ತಿದೆ.

ಈಗಾಗೀ ಸ್ಪರ್ಧಿಗಳ ನಡುವೆ ಸದ್ಯ ಬಿಗ್ ಬಾಸ್ ಮನೆ ಎರಡು ಟಿವಿ ವಾಹಿನಿಗಳಾಗಿ ಪರಿವರ್ತನೆ ಆಗಿದೆ. ಎರಡು ವಾಹಿನಿಗಳ ಉದ್ಯೋಗಿಗಳು ಎದುರಾಳಿಗಳಿಗೆ ಟಕ್ಕರ್ ನೀಡುವ, ಕಾಲೆಳೆಯುವ ಟಾಸ್ಕ್ ಜೋರಾಗಿ ನಡೆಯುತ್ತಿದೆ.

ಇದರ ನಡುವೆ ದೊಡ್ಮನೆಯಲ್ಲಿ ನಾಮಿನೇಷನ್ ಕಾವು ಜೋರಾಗಿದೆ. ಬಿಗ್ ಬಾಸ್ ಇಂದು ನಾಮಿನೇಷನ್ ಗೆ ಸಂಬಂಧಿಸಿದ ಟಾಸ್ಕ್ ನೀಡಿದ್ದಾರೆ. ಈ ಸಲದ ನಾಮಿನೇಷನ್ ಪ್ರಕ್ರಿಯೆ ವಿಭಿನ್ನವಾಗಿದ್ದು, ಮನೆಯಲ್ಲಿ ಇರಲು ಯೋಗ್ಯತೆ ಇಲ್ಲದ ಸದಸ್ಯರನ್ನು ಆರಿಸಿ, ಬೆನ್ನಿಗೆ ಚೂರಿಯನ್ನು ಚುಚ್ಚಬೇಕು ಎಂಬ ಟಾಸ್ಕ್ ನೀಡಲಾಗಿದೆ.

ಇದನ್ನೂ ಓದಿ: ಮುಖ್ಯಶಿಕ್ಷಕನಿಂದಲೇ ಬ*ಲತ್ಕಾರಕ್ಕೊಳಗಾದ 5ನೇ ತರಗತಿ ವಿದ್ಯಾರ್ಥಿನಿ !

ಈ ಟಾಸ್ಕ್ ನಲ್ಲಿ ಎಲ್ಲಾ ಸ್ಪರ್ಧಿಗಳು ಮಂಜು ಬೆನ್ನಿಗೆ ಚುರಿ ಚುಚ್ಚಿದ್ದಾರೆ. ಎಂಟು ಮಂದಿ ಸ್ಪರ್ಧಿಗಳ ಚೂರಿಗಳು ಮಂಜು ಬೆನ್ನಿಗೆ ಬಿದ್ದಿದೆ. ಮಂಜು ಅವರಿಗೆ ಐಶ್ವರ್ಯ ಚೂರಿ ಚುಚ್ಚುವ ವೇಳೆ ನೀಡಿರುವ ಕಾರಣ, ಮಂಜು ಅವರನ್ನು ಕೆರಳಿಸುವಂತೆ ಮಾಡಿದೆ.
ಇಬ್ಬರು ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ನೀವು ಮಾನಸಿಕವಾಗಿ ನನ್ನನ್ನು ಕುಗ್ಗಿಸಲು ನೋಡಿದ್ರೆ, ನಾನು ಕುಗ್ಗುವಂತಹ ಮಗಳೇ ಅಲ್ಲ. ಅದು ಏನೇನು ಚುಚ್ಚಿ ಮಾತನಾಡ್ತಿರೋ ಆಡಿ ಎಂದು ಐಶ್ವರ್ಯ ಸವಾಲ್ ಹಾಕಿದ್ದಾರೆ.

ಅದಕ್ಕೆ ಮಂಜು ಅವರು ಯಾವ ರೀತಿ ಕೌಂಟರ್ ನೀಡುತ್ತಾರೆ ? ಅದು ಅಲ್ಲದೆ ಇವರಿಬ್ಬರ ನಡುವೆ ಬೆಂಕಿ ಹೊತ್ತಿಕೊಳ್ಳಲು ನಿಜವಾದ ಕಾರಣ ಏನು ಅನ್ನೋದು ಇಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

 

Continue Reading

FILM

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು !

Published

on

ಮಂಗಳೂರು/ಬೆಂಗಳೂರು: ಸರಿಯಾಗಿ ಒಂದು ತಿಂಗಳ ಬಳಿಕ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ಹಿಂದಿನ ರಹಸ್ಯ ಬಹಿರಂಗಗೊಂಡಿದೆ.


ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ತನಿಖೆಯಿಂದ ಹಲವು ಸಂಗತಿಗಳು ಬಯಲಿಗೆ ಬಂದಿವೆ. ಅವರು ಹಣ ಇಲ್ಲದೇ ಸಾಲ ಮಾಡಿಕೊಂಡಿದ್ದರು. ಸ್ನೇಹಿತರು, ಸಂಬಂಧಿಕರು ಸೇರಿ ಹಲವರ ಬಳಿ ಕೋಟ್ಯಂತರ ರೂ. ಸಾಲ ಮಾಡಿದ್ದಾರೆ.

ಇದನ್ನೂ ಓದಿ: ತಾಯಿಯ ಆಸೆ ಈಡೇರಿಸಲು ಹೋಗಿ ಕಂಬಿ ಎಣಿಸುತ್ತಿರುವ ಮಗ !

ಸಾಲದಿಂದ ರೋಸಿ ಹೋಗಿದ್ದ ಗುರುಪ್ರಸಾದ್, ಆನ್ ಲೈನ್ ಜೂಜಿನ ಚಟಕ್ಕೆ ಸಿಲುಕಿರುವ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಸಾಲ ಹೆಚ್ಚಾದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಲ ಕೇಳುವಾಗ ‘ಫಿಲ್ಮ್ ಮಾಡ್ತಿದ್ದೀನಿ, ಸಿನಿಮಾದಿಂದ ಖಂಡಿತ ಹಣ ಬರುತ್ತೆ, ಆಗ ಹಣ ವಾಪಸ್ ಕೊಡುತ್ತೀನಿ ಎಂದು ಹೇಳುತ್ತಿದ್ದರಂತೆ. ಹೀಗಾಗಿ ಆನ್ ಲೈನ್ ಗೇಮ್ ಗಳಲ್ಲಿ ಬೆಟ್ಟಿಂಗ್ ಆಡುತ್ತಿದ್ದರು ಎಂದು ತಿಳಿದುಬಂದಿದೆ. ಅದರಲ್ಲೂ ಗುರುಪ್ರಸಾದ್ ರಮ್ಮಿ ಸರ್ಕಲ್ ಸುಳಿಗೆ ಸಿಲುಕ್ಕಿದ್ದರು. ಸಾಲ ಹೆಚ್ಚಾದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading

LATEST NEWS

Trending

Exit mobile version