Connect with us

    LATEST NEWS

    ರತನ್ ಟಾಟಾ ಇನ್ನಿಲ್ಲ

    Published

    on

    ಮಂಗಳೂರು/ಮುಂಬೈ : ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ದೈವಾಧೀನರಾದರು. ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತ್ತು. ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶರಾದ ಸುದ್ದಿ ಕೇಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇಡೀ ಭಾರತವೇ ಸಂತಾಪ ವ್ಯಕ್ತಪಡಿಸುತ್ತಿದೆ.


    ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ಎಲ್ಲರನ್ನು ಅಗಲಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ರಾತ್ರಿ ರತನ್ ಟಾಟಾ ಆಸ್ಪತ್ರೆಯಲ್ಲಿ ಪಂಚಭೂತಗಳೊಡನೆ ವಿಲೀನರಾಗಿದ್ದಾರೆ.


    ಶ್ರೀಮತಿ ಸೂನಿ ಮತ್ತು ನಾವಲ್ ಹರ್ಮುಸ್ ಜಿ ಟಾಟಾ ದಂಪತಿಯ ಹಿರಿಯ ಮಗನಾಗಿ ರತನ್ ಟಾಟಾ ಬೊಂಬಾಯಿನಲ್ಲಿ 1937ರಲ್ಲಿ ಜನಿಸಿದರು. ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು. ಅವಿವಾಹಿತ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಬೆಳೆದು ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ದಂತಕತೆಯಾಗಿದ್ದರು. ದೇಶದ ಆಸ್ತಿಯಾಗಿದ್ದ ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿದ್ದಾರೆ.
    ಅಂತ್ಯಸಂಸ್ಕಾರ ಎಲ್ಲಿ?
    ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬಯಿಯ ನಾರಿಮನ್ ಪಾಯಿಂಟ್‌ನ ರಾಷ್ಟ್ರೀಯ ಪ್ರದರ್ಸನ ಕಲೆಗಳ ಕೇಂದ್ರದಲ್ಲಿ (ಎನ್‌ಸಿಪಿಎ) ಇರಿಸಲಾಗುತ್ತದೆ. ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದೆ. ಬಳಿಕ ವೊರ್ಲಿ ಪ್ರದೇಶದಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.
    ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ :
    ರತನ್ ಟಾಟಾ ಅವರನ್ನು ಸಂಪೂರ್ಣ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಮಹಾರಾಷ್ಟ್ರ ಸರಕಾರ ತಿಳಿಸಿದೆ. ಉದ್ಯಮಿಯ ನಿಧನದ ಸಲುವಾಗಿ ಮಹಾರಾಷ್ಟ್ರದಲ್ಲಿ ಒಂದು ದಿನದ ಶೋಕಾಚರಣೆ ಘೋಷಿಸಲಾಗಿದೆ. ಅವರ ಗೌರವಾರ್ಥ ಎಲ್ಲ ಸರಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲಾಗುವುದು. ಗುರುವಾರ ನಿಗದಿಯಾದ ಎಲ್ಲ ಮನರಂಜನಾ ಕಾರ್ಯಕ್ರಮಗಳು ರದ್ದಾಗಿವೆ.

    LATEST NEWS

    ಕುಂದಾಪುರ : ರೈಲು ಡಿ*ಕ್ಕಿಯಾಗಿ ಚಿರತೆ ಸಾ*ವು

    Published

    on

    ಕುಂದಾಪುರ : ರೈಲು ಡಿ*ಕ್ಕಿಯಾಗಿ ಚಿರತೆಯೊಂದು ಸಾ*ವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ.

    ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು  ರೈಲ್ವೆ ಹಳಿ ದಾಟುವಾಗ ಈ ಅವಘ*ಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

    ಇದನ್ನೂ ಓದಿ : ಮಂಗಳೂರು: ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ – ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರು ಸಿಸಿಬಿ ಬಲೆಗೆ

    ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ  ಕುಂದಾಪುರ ವಲಯ ಅರಣ್ಯಾಧಿಕಾರಿ  ಹಾಗೂ ಸಿಬಂದಿ ಚಿರತೆಯ ಕಳೇಬರ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಚಿರತೆಯ ಕಳೇಬರವನ್ನು ದಹನ  ಮಾಡಲಾಯಿತು.

    Continue Reading

    LATEST NEWS

    ಬ್ಲೂಫಿಲ್ಮ್ ತೋರಿಸಿ ನಿತ್ಯವೂ ಚಿತ್ರಹಿಂಸೆ : ಮಗನ ಜೊತೆ ಸೇರಿ ಪತ್ನಿಯಿಂದ ಗಂಡನ ಬರ್ಬರ ಹತ್ಯೆ!

    Published

    on

    ಬೆಂಗಳೂರು: ಬ್ಲೂಫಿಲ್ಮ್ ತೋರಿಸಿ ನಿತ್ಯವೂ ಚಿತ್ರಹಿಂಸೆ ನೀಡುತ್ತಿದ್ದ ಗಂಡನನ್ನು ತನ್ನ ಮಗನ ಜೊತೆಗೆ ಸೇರಿ ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 40 ವರ್ಷದ ಮುನಿರತ್ನ ನಿತ್ಯ ಕುಡಿದು ಬಂದು, ಪತ್ನಿಗೆ ಬ್ಲೂ ಫಿಲ್ಮ್ ತೋರಿಸಿ ಚಿತ್ರಹಿಂಸೆ ನೀಡುತ್ತಿದ್ದ. ನಿನ್ನೆ ರಾತ್ರಿಯೂ ಕುಡಿದು ಬಂದು ಪತ್ನಿಗೆ ಕಿರುಕುಳ ನೀಡಿದ್ದಾನೆ. ಈ ವೇಳೆ ಪತ್ನಿ ಮಗನ ಜೊತೆಗೆ ಸೇರಿಕೊಂಡು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾಳೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪತ್ನಿ ಗೀತಾ ಹಾಗೂ 17 ವರ್ಷದ ಮಗನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ.

    Continue Reading

    LATEST NEWS

    ಮಂಗಳೂರು: ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ – ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರು ಸಿಸಿಬಿ ಬಲೆಗೆ

    Published

    on

    ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದೆ.

    ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಬಂಧಿತ ಆರೋಪಿಗಳು. ಮುಮ್ತಾಜ್ ಅಲಿಯವರು ಕೂಳೂರು ಸೇತುವೆಯ ಬಳಿ ಕಾರನ್ನು ನಿಲ್ಲಿಸಿ ಫಲ್ಗುಣಿ ನದಿಗೆ ಹಾರಿ ಆತ್ಮಹ*ತ್ಯೆ ಮಾಡಿದ್ದರು. ಸೋಮವಾರ ಬೆಳಗ್ಗೆ ಅವರ ಮೃ*ತದೇಹ ಪತ್ತೆಯಾಗಿತ್ತು. ಈ ನಡುವೆ ಮುಮ್ತಾಜ್ ಅಲಿಯವರ ಸಹೋದರ ಬಿ.ಎಂ. ಹೈದರ್ ಅಲಿಯವರು ಆತ್ಮಹ*ತ್ಯೆಯ ಹಿಂದೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್, ಹನಿಟ್ರ್ಯಾಪ್ ಮಾಡಿರೋದೇ ಕಾರಣ ಎಂದು ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಸದ್ಯ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಎ1 ಆರೋಪಿ ರೆಹಮತ್ ಮತ್ತು ಆಕೆಯ ಪತಿ ಶೋಯಬ್ ಎಂಬವರನ್ನು ಈಗಾಗಲೇ ವಶಪಡಿಸಿಕೊಂಡಿತ್ತು. ಇದೀಗ ಪ್ರಕರಣದ ಕಿಂಗ್ ಪಿನ್ ಅಬ್ದುಲ್ ಸತ್ತಾರ್ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ಕಾವೂರು ಪೊಲೀಸ್ ಠಾಣೆಯ ತನಿಖಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದಾರೆ.

    Continue Reading

    LATEST NEWS

    Trending