LATEST NEWS
ಕುಂದಾಪುರ:ಆಕಸ್ಮಿಕವಾಗಿ ಬೆಂಕಿ ತಗುಲಿ ಫ್ಯಾನ್ಸಿ ಸ್ಟೋರ್ ಭಸ್ಮ
Published
3 months agoon
By
NEWS DESK2ಕುಂದಾಪುರ: ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ಪ್ಲಾಜಾ ಗ್ರೋ ಕಾಂಪ್ಲೆಕ್ಸ್ ನಲ್ಲಿರುವ ಪ್ರತೀಮಾ ಆಚಾರ್ಯ ಅವರಿಗೆ ಸಂಬಂಧಿಸಿದ ಫ್ಯಾನ್ಸಿ ಸ್ಟೋರ್ ಗೆ ಆಕಸ್ಮಿಕವಾಗಿ ಬೆಂ*ಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸು*ಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ.
ಪ್ರತಿಭಾ ವಿಜೇಂದ್ರ ಅರೆಹೊಳೆ ಎಂಬವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು. ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ಐಟಂಗಳು, ಸುಮಾರು 5000 ಹಣ ಇದ್ದಿತ್ತು. ಅಂಗಡಿ ಮಾಲಕಿ ಪ್ರತಿಭಾ ವಿಜೇಂದ್ರ ಅವರು ಮಧ್ಯಾಹ್ನ 12.00ರವರೆಗೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ನಂತರ ದೇವಸ್ಥಾನಕ್ಕೆ ತೆರಳಿದ್ದರು.
ಸುಮಾರು 12.45ರ ಹೊತ್ತಿಗೆ ಹೊಗೆ ತುಂಬಿಕೊಂಡದ್ದನ್ನು ಆಸುಪಾಸಿನ ಅಂಗಡಿಯವರು ಹಾಗೂ ಸ್ಥಳಿಯರು ನೋಡಿ ಅಗ್ನಿಶಾಮಕ ಹಾಗೂ ಪೋಲೀಸರಿಗೆ ಫೋನ್ ಮಾಡಿದ್ದರು. ಅಗ್ನಿ ಶಾಮಕದವರು ಆಗಮಿಸಿ ಬೆಂ*ಕಿ ನಂದಿಸುವ ಹೊತ್ತಿಗೆ ಸಂಪೂರ್ಣ ಸು*ಟ್ಟು ಹೋಗಿದ್ದು ಅಂದಾಜು 3 ಲಕ್ಷಕ್ಕೂ ಮಿಕ್ಕಿ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೈಂದೂರು ಪೋಲೀಸರು ಆಗಮಿಸಿ ಸ್ಥಳ ಪರಿಶೀಲಿಸಿದರು.
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು ಕುಟುಂಬದವರು ನ.21ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಚಿವರ ಜತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೈಸೂರಿನ ಉದ್ಯಮಿ ಎಂ.ಕೆ.ಪೋತ್ರಾಜ್, ಉದ್ಯಮಿ ಕಲಬುರಗಿಯ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಎನ್ಎಸ್ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಉಜಿರೆ, ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು, ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.
ಮಂಗಳೂರು/ಕೇರಳ: ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ನ ಮೂರನೇ ಮಹಡಿಯಿಂದ ಬಿದ್ದು ಮೃ*ತಪಟ್ಟ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದೆ. ಈ ಘಟನೆಗೆ ಸಹಪಾಠಿಗಳ ಪ್ರಚೋದನೆಯೇ ಕಾರಣವೆಂದು ಮೂವರು ಗೆಳತಿಯರನ್ನು ಬಂಧಿಸಲಾಗಿದೆ.
ಅಮ್ಮು ಸಜೀವ್ (21) ಮೃ*ತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪಠಾಣಪುರಂ ನಿವಾಸಿ ಅಲೀನಾ, ಚಂಗನಾಶ್ಶೇರಿ ನಿವಾಸಿ ಅಕ್ಷಿತಾ ಮತ್ತು ಕೊಟ್ಟಾಯಂ ನಿವಾಸಿ ಅಂಜನಾ ಬಂಧಿತ ಆರೋಪಿಗಳು ಎನ್ನಲಾಗಿದೆ. ಚುಟ್ಟಿಪಾರ ಎಸ್ಎಸ್ಇ ನರ್ಸಿಂಗ್ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿನಿ ಅಮ್ಮು ನವೆಂಬರ್ 15 ರಂದು ಹಾಸ್ಟೆಲ್ ಕಟ್ಟಡದ ಮೇಲಿನಿಂದ ಬಿದ್ದು ಸಾ*ವನ್ನಪ್ಪಿದ್ದರು. ಆದರೆ ಆಕೆ ಆ*ತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಕುಟುಂಬದವರು ಪಟ್ಟು ಹಿಡಿದು, ಸಹಪಾಠಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ
ಅಮ್ಮು ನರ್ಸಿಂಗ್ ಕೋರ್ಸ್ ಪೂರ್ಣಗೊಳಿಸಲು ಕೇವಲ ಒಂದೇ ಒಂದು ತಿಂಗಳು ಬಾಕಿ ಇದ್ದು, ಸಾವಿಗೆ ಶರಣಾಗುವ ಮೂಲಕ ತನ್ನ ಆಸೆ, ಕನಸ್ಸುಗಳನ್ನು ನುಚ್ಚನೂರು ಮಾಡಿಕೊಂಡಿದ್ದಾಳೆ. ಈ ಬಗ್ಗೆ ತನಿಖೆ ಆಗಬೇಕು. ಸಾ*ವಿನಲ್ಲಿ ನಿಗೂಢತೆ ಇದೆ ಎಂದು ಪೋಷಕರು ಆರೋಪಿಸಿದ್ದಾರೆ. ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿಗಳ ಕಿರುಕುಳವೇ ಮಗಳ ಸಾ*ವಿಗೆ ಕಾರಣ ಎಂದು ಕುಟುಂಬಸ್ಥರು ವಾದಿಸಿದ್ದಾರೆ. ಸದ್ಯ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್.
Baindooru
ಕಾಸರಗೋಡು: ಮಹಿಳಾ ಪೊಲೀಸ್ಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ
Published
14 minutes agoon
22/11/2024By
NEWS DESK2ಕಾಸರಗೋಡು: ಪೋಲೀಸ್ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆಯತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ.
ಕಾಸರಗೋಡು ಜಿಲ್ಲೆಯ ಚಂದೇರ ಪೋಲೀಸ್ ಠಾಣಾ ಸಿಪಿಒ ಉದ್ಯೋಗಿ ದಿವ್ಯಶ್ರೀ ಎಂಬಾಕೆ ತನ್ನ ಪತಿಯಿಂದಲೇ ಕೊಲೆಗೀಡಾದ ಮಹಿಳೆ. ಈಕೆ ಕೊಲೆ ನಡೆಯುವಾಗ ತಡೆಯಲು ಬಂದ ಆಕೆಯ ತಂದೆ ವಾಸು ಎಂಬವರ ಕೊರಳು, ಹೊಟ್ಟೆಗೆ ಕತ್ತಿ ಇರಿತ, ಕಡಿತಗಳ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗುರುವಾರ (ನ.21) ಮುಸ್ಸಂಜೆ ಈ ದುಷ್ಕೃತ್ಯ ನಡೆದಿದ್ದು, ಆರೋಪಿ ರಾಜೇಶ್ ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ.
ಪತಿ-ಪತ್ನಿಯರಾದ ರಾಜೇಶ ಮತ್ತು ದಿವ್ಯಶ್ರೀ ಕಳೆದ ಕೆಲ ಸಮಯಗಳಿಂದ ಒಟ್ಟಿಗೆ ಬದುಕುತ್ತಿರಲಿಲ್ಲ. ಅವರ ದಾಂಪತ್ಯದಲ್ಲಿ ಸಮಸ್ಯೆಗಳಿದ್ದ ಕಾರಣ ಈರ್ವರೂ ಬೇರೆಯೇ ವಾಸಿಸುತ್ತಿದ್ದರು. ಗುರುವಾರ ಸಂಜೆ ಪತ್ನಿ ಮನೆಯಲ್ಲಿದ್ದಾಳೆಂದು ತಿಳಿದೇ ಬಂದ ಆರೋಪಿ ಆಕೆಯನ್ನು ಆಕ್ರಮಿಸಿ, ಓಡಿಸಿ ಕೊಲೆಗೈದನೆಂದೂ, ಈ ವೇಳೆ ತಡೆಯಲು ಬಂದ ಮಾವನನ್ನೂ ಆಕ್ರಮಿಸಿ ಕೊಲೆಗೆತ್ನಿಸಿದನೆಂದೂ ಮಾಹಿತಿ ಲಭಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಮೃತ ಪೋಲೀಸ್ ಉದ್ಯೋಗಿ ದಿವ್ಯಶ್ರೀಯ ಪತಿ ರಾಜೇಶನನ್ನು ಪೋಲೀಸರು ಬಂಧಿಸಿದ್ದಾರೆ.
LATEST NEWS
ವಾಟ್ಸಾಪ್ ಗ್ರೂಪ್ ನೋಡಿ ಪತ್ನಿಗೆ ಮನೆಯಲ್ಲೇ ಹೆರಿಗೆ ಮಾಡಿಸಿದ ಪತಿ..!
ಎಚ್ಚರ!! ಪ್ರೀತಿ ಪಾತ್ರರ ಸಾವೇ ಟಾರ್ಗೆಟ್; ಸೈಬರ್ ಕ್ರೈಂನಲ್ಲಿ ಅಂತ್ಯಸಂಸ್ಕಾರ
ಮಾರ್ಚ್ 14 ರಿಂದ ಐಪಿಎಲ್ ಆರಂಭ
ಮಂಗಳೂರು: ಟ್ರಾಯ್ನಿಂದ ಕರೆ; 1.71 ಕೋ.ರೂ ವಂಚನೆ
ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ
Pingback: ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ..! ಕ್ಯಾಶ್ ರಿಜಿಸ್ಟರ್ ಮಾಡದ ಬಗ್ಗೆ ಅಸಮಾಧಾನ - NAMMAKUDLA NEWS - ನಮ್ಮಕುಡ್ಲ ನ್ಯೂಸ