Connect with us

LATEST NEWS

ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲವೆಂದು ಮಗನ ಶವವನ್ನು ಬಸ್ಸಿನಲ್ಲಿ ಹೊತ್ತು ಸಾಗಿದ ತಂದೆ

Published

on

ವಲಸೆ ಕಾರ್ಮಿಕರೊಬ್ಬರು ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲದೆ ಮಗನ ಶವವನ್ನು ಚೀಲದೊಳಗೆ ಹಾಕಿ 200 ಕಿ.ಮೀಗಳಷ್ಟು ದೂರ ಪ್ರಯಾಣಿಸಿರುವ ಘಟನೆ ನಡೆದಿದೆ.

ಪಶ್ಚಿಮ ಬಂಗಾಳ: ವಲಸೆ ಕಾರ್ಮಿಕರೊಬ್ಬರು ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲದೆ ಮಗನ ಶವವನ್ನು ಚೀಲದೊಳಗೆ ಹಾಕಿ 200 ಕಿ.ಮೀಗಳಷ್ಟು ದೂರ ಪ್ರಯಾಣಿಸಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುಸ್ತಫಾನಗರ ಗ್ರಾಮಪಂಚಾಯತ್​ನ ಡಂಗಿಪಾರಾ ಗ್ರಾಮದ ವಲಸೆ ಕಾರ್ಮಿಕರಾಗಿದ್ದಾರೆ.

ಆಂಬ್ಯುಲೆನ್ಸ್​ ಚಾಲಕ ಕೇಳಿದ ಶುಲ್ಕವನ್ನು ಭರಿಸಲು ಸಾಧ್ಯವಾಗದ ಕಾರಣ ಶವವನ್ನು ಹೊತ್ತುಕೊಂಡು 200 ಕಿ.ಮೀ ದೂರ ಸಾಗಿದ್ದಾರೆ.

ಕಣ್ಣೀರು ತಡೆದುಕೊಂಡು ಬಸ್ ಹತ್ತಿದ್ದರು, ಬಸ್​ನಲ್ಲಿ ಯಾರಿಗೂ ತಿಳಿಯದಂತೆ ಎಚ್ಚರವಹಿಸಿದ್ದರು, ಒಂದೊಮ್ಮೆ ಹೇಳಿಬಿಟ್ಟರೆ ತಮ್ಮನ್ನು ಬಸ್ಸಿನಿಂದ ಇಳಿಸಬಹುದು ಎನ್ನುವ ಭಯವಿತ್ತು ಎಂದು ಹೇಳಿಕೊಂಡಿದ್ದಾರೆ.

ಅಸೀಂ ದೇವಶರ್ಮಾ ಅವರ ಅವಳಿ ಮಕ್ಕಳಿಬ್ಬರೂ ತೀವ್ರ ಅಸ್ವಸ್ಥಗೊಂಡಿದ್ದರು. ಹಾಗಾಗಿ ಅವರನ್ನು ಆರಂಭದಲ್ಲಿ ಕಲಿಯಗಂಜ್​ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ನಂತರ ಮಕ್ಕಳ ಸ್ಥಿತಿ ಹದಗೆಟ್ಟ ಪರಿಣಾಮ ರಾಯ್​ಗಂಜ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು.

ಸುಮಾರು 16,000 ರೂ. ಖರ್ಚು ಆಗಿದೆ ಎಂದು ತಿಳಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂದು ಮಗು ಮೃತಪಟ್ಟಿದೆ ಎನ್ನಲಾಗಿದೆ.

ಮೃತ ಮಗನ ಶವವನ್ನು ತನ್ನ ಮನೆಗೆ ಕರೆ ತರಲು ವೈದ್ಯಕೀಯ ಕಾಲೇಜು ಆಸ್ಪತ್ರೆಯನ್ನು ಸಂಪರ್ಕಿಸಿದ್ದರು, ಆದರೆ ಆಂಬ್ಯುಲೆನ್ಸ್​ ಚಾಲಕ 8 ಸಾವಿರ ರೂ ಕೊಡುವಂತೆ ಹೇಳಿದ್ದರು.

ಇವರ ಕೈಯಲ್ಲಿ ಹಣ ಇಲ್ಲದ ಕಾರಣ ಅಸೀಮ್ ದೇವಶರ್ಮಾ ಅವರು ಮಗನ ಶವವನ್ನು ಚೀಲದೊಳಗೆ ಹಾಕಿ 200 ಕಿ.ಮೀ ಗಳಷ್ಟು ದೂರ ಪ್ರಯಾಣಿಸಿ ಬಂಗಾಳದ ಸಿಲಿಗುರಿಯಿಂದ ರಾಯ್‌ಗಂಜ್‌ಗೆ ಖಾಸಗಿ ಬಸ್‌ ಹತ್ತಿಕೊಂಡು ಬಂದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

Trending