LATEST NEWS
ಆಸ್ಪತ್ರೆಯ ಶುಲ್ಕ ಪಾವತಿಸಲಾಗದೆ ಮಗುವನ್ನೇ ಮಾರಾಟ ಮಾಡಿದ ತಂದೆ!
ಮಂಗಳೂರು/ಕುಶಿನಗರ : ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಲ್ಕ ಪಾವತಿಸಲು ಸಾಧ್ಯವಾಗದ ಹಿನ್ನೆಲೆ ತಂದೆಯೊಬ್ಬ ತನ್ನ ಮೂರು ವರ್ಷದ ಮಗನನ್ನು ಮಾರಾಟ ಮಾಡಿದ ಘಟನೆ ಉತ್ತರ ಪ್ರದೇಶದ ಕುಶಿ ನಗರದಲ್ಲಿ ನಡೆದಿದೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬರ್ವಾಪಟ್ಟಿಯ ನಿವಾಸಿ ಹರೀಶ್ ಪಟೇಲ್ ಬಂಧಿತ.
ಹರೀಶ್ ಪಟೇಲ್ ತನ್ನ ಪತ್ನಿಯನ್ನು ಆರನೇ ಮಗುವಿನ ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ, ಆಸ್ಪತ್ರೆಯ ಶುಲ್ಕ ಭರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಆತ ತನ್ನ ಮೂರನೇ ಮಗುವನ್ನು ಮಾರಾಟ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಪ್ರಕರಣದಲ್ಲಿ ಭಾಗಿಯಾದ ಮಗುವನ್ನು ದತ್ತು ಪಡೆದ ಪೋಷಕರು, ಆಸ್ಪತ್ರೆಯ ಸಹಾಯಕಿ, ನಕಲಿ ವೈದ್ಯೆ ತಾರಾ ಕುಶ್ವಾಹಾ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಜಾತ್ರಾ ರಥೋತ್ಸವದ ವೇಳೆ ದುರಂ*ತ; ರಥದ ಚಕ್ರಕ್ಕೆ ಸಿಲುಕಿ ಯುವಕ ಸಾ*ವು
ಅಲ್ಲದೇ, ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ಕಾನಸ್ಟೇಬಲ್ ನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಮಗುವನ್ನು ಪೋಷಕರಿಗೆ ಹಿಂದಿರುಗಿಸಲಾಗಿದೆ ಎಂದು ತಿಳಿದು ಬಂದಿದೆ.
FILM
ಚಿತ್ರರಂಗದ ಖ್ಯಾತ ಹಿರಿಯ ನಟ ಇ*ನ್ನಿಲ್ಲ; ಡೆಲ್ಲಿ ಗಣೇಶ್ ವಿ*ಧಿವಶ
ಡೆಲ್ಲಿ ಗಣೇಶ್ ಪುತ್ರ ಮಹದೇವನ್ ಈ ವಿಷಯ ಖಾತ್ರಿಪಡಿಸಿದ್ದು, ‘ಡೆಲ್ಲಿ ಗಣೇಶ್ ಅವರು, ನಿನ್ನೆ (ನ.9) ರ ತಡರಾತ್ರಿ 11 ಗಂಟೆ ಸುಮಾರಿಗೆ ಮೃ*ತಪಟ್ಟಿದ್ದಾರೆ’ ಎಂದಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, 40 ವರ್ಷಗಳಿಗಿಂತಲೂ ಹೆಚ್ಚು ಸಮಯ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಗಣೇಶ್ ಅಭಿನಯಿಸಿದ್ದಾರೆ.
ಕೆ. ಬಾಲಚಂಧರ್ ಅವರಂಥಹಾ ಮೇರು ನಿರ್ದೇಶಕರ ಸಿನಿಮಾ ಮೂಲಕ ನಟನೆ ಆರಂಭಿಸಿದ ಡೆಲ್ಲಿ ಗಣೇಶ್, ಹಲವು ಸ್ಟಾರ್ ನಟ-ನಟಿಯರೊಡನೆ ತೆರೆ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ನಾಯಕ, ಎರಡನೇ ನಾಯಕ, ವಿಲನ್ ಪಾತ್ರಗಳಲ್ಲಿ ನಟಿಸಿದ ಡೆಲ್ಲಿ ಗಣೇಶ್, ವಯಸ್ಸಾದಂತೆ, ತಂದೆ, ಮಾವ, ಚಿಕ್ಕಪ್ಪ ಹೀಗೆ ಬೇರೆ ಬೇರೆ ಪಾತ್ರಗಳಲ್ಲಿ ನಟಿಸಲು ಆರಂಭಿಸಿದರು. ಹಲವು ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ.
1976 ರಿಂದಲೂ ನಟನೆಯಲ್ಲಿ ತೊಡಗಿಸಿಕೊಂಡಿರುವ ಡೆಲ್ಲಿ ಗಣೇಶ್ ತಮಿಳು, ಮಲಯಾಳ, ತೆಲುಗು ಹಾಗೂ ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಸಹ ನಟಿಸಿದ್ದಾರೆ. ಶಾರುಖ್ ಖಾನ್, ದೀಪಿಕಾ ಪಡುಕೋಣೆ ನಟಿಸಿರುವ ‘ಚೆನ್ನೈ ಎಕ್ಸ್ಪ್ರೆಸ್’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ಸುಮಾರು 25ಕ್ಕೂ ಹೆಚ್ಚು ಟಿವಿ ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ. ಎರಡು ವೆಬ್ ಸರಣಿಗಳಲ್ಲಿಯೂ ಸಹ ಡೆಲ್ಲಿ ಗಣೇಶ್ ನಟಿಸಿದ್ದಾರೆ. ವಿಶೇಷವೆಂದರೆ ಶಂಕರ್ ನಾಗ್ ನಿರ್ದೇಶನ ಮಾಡಿರುವ ‘ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲಿಯೂ ಡಬ್ಬಿಂಗ್ ಕಲಾವಿದರಾಗಿ ಕೆಲಸ ಮಾಡಿದ್ದರು.
ಇದನ್ನೂ ಓದಿ : ಪಂಚಭೂತಗಳಲ್ಲಿ ಲೀನರಾದ ಗುರುಪ್ರಸಾದ್; ಬ್ರಾಹ್ಮಣ ವಿಧಿಯಂತೆ ಅಂತ್ಯಸಂಸ್ಕಾರ.!
ಡೆಲ್ಲಿ ಗಣೇಶ್ ನಿ*ಧನದ ಬಗ್ಗೆ ತಮಿಳು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
DAKSHINA KANNADA
ಟ್ಯಾಂಕರ್ ಸ್ಕೂಟರ್ ಭೀ*ಕರ ಅ*ಪಘಾತ: ಮಹಿಳೆ ಸಾ*ವು
ಉಳ್ಳಾಲ: ಟ್ಯಾಂಕರ್ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅ*ಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಉಳ್ಳಾಲ ಪ್ರೆಸ್ ಕ್ಲಬ್ ಎದುರಿನ ತೊಕ್ಕೊಟ್ಟು – ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆಯಲ್ಲಿ ನಿನ್ನೆ (ನ.9) ಸಂಜೆ ಸಂಭವಿಸಿದೆ.
ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಸಿಬ್ಬಂದಿ ರೆಹಮತ್ (47) ಮೃ*ತ ಮಹಿಳೆ ಎಂದು ಗುರುತಿಸಲಾಗಿದೆ.
ದೇರಳಕಟ್ಟೆ ಕಡೆಯಿಂದ ಸ್ಕೂಟರ್ ನಲ್ಲಿ ತೊಕ್ಕೊಟ್ಟು ಕಡೆಗೆ ದಂಪತಿ ತೆರಳುತ್ತಿದ್ದ ಸಂದರ್ಭ ರಸ್ತೆ ಹೊಂಡ ತಪ್ಪಿಸುವ ಹಂತದಲ್ಲಿ ಸ್ಕೂಟರ್ ಆ*ಯತಪ್ಪಿ ರಸ್ತೆಗೆ ಉರುಳಿಬಿದ್ದಿದೆ. ಈ ಸಂದರ್ಭ ಹಿಂಬದಿಯಲ್ಲಿದ್ದ ಟ್ಯಾಂಕರ್ ಲಾರಿ ರಸ್ತೆಗೆ ಬಿದ್ದಿದ್ದ ರೆಹಮತ್ ಮೇಲೆ ಚ*ಲಿಸಿದೆ. ಪರಿಣಾಮವಾಗಿ ರೆಹಮತ್ ಸ್ಥಳದಲ್ಲೇ ದಾ*ರುಣವಾಗಿ ಸಾ*ವನ್ನಪ್ಪಿದ್ದಾರೆ.
ರಸ್ತೆ ಅವ್ಯವಸ್ಥೆಯಿಂದಾಗಿ ಘಟನೆ ನಡೆದಿರುವುದಾಗಿ ಆರೋಪಿಸಿದ ಉದ್ರಿಕ್ತ ಗುಂಪು ರಸ್ತೆಗೆ ಅಡ್ಡವಾಗಿ ಕಲ್ಲುಗಳನ್ನು ಇಟ್ಟು ಪ್ರತಿಭಟನೆ ನಡೆಸಿದೆ. ಇದರಿಂದಾಗಿ ತೊಕ್ಕೊಟ್ಟು ಕೊಣಾಜೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ವಾಹನಗಳೆಲ್ಲವೂ ಸರತಿ ಸಾಲುಗಳಲ್ಲಿ ನಿಂತರೆ, ಹಲವು ವಾಹನಗಳು ಬೀರಿ ಮಾರ್ಗವಾಗಿ ಸಂಚರಿಸುತ್ತಿದೆ.
ಉದ್ರಿಕ್ತ ಗುಂಪು ಹಾಗೂ ಉಳ್ಳಾಲ ಪೊಲೀಸರ ನಡುವೆ ತೀವ್ರ ವಾಗ್ದಾಳಿ ನಡೆದಿದೆ. ಫೋಳೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
LATEST NEWS
ರಾಜ್ಯದ ‘KSRTC’ ಬಸ್ ಸೇರಿದಂತೆ 4 ಬಸ್‌ಗಳ ಮೇಲೆ ಕಲ್ಲು ತೂರಾಟ; ಕಿಡಿಗೇಡಿಗಳು ಪರಾರಿ
ಮಂಗಲುರು/ಹೈದ್ರಾಬಾದ್ : ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್ಟಿಸಿ ಸಂಸ್ಥೆಯ ಐರಾವತ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಸಿರುವ ಘಟನೆ ಹೈದರಾಬಾದ್ ಸಮೀಪದ ಶಂಶಾಬಾದ್ ನಲ್ಲಿ ನಡೆದಿದೆ.
ಗುರುವಾರ (ನ.7) ರಾತ್ರಿ 11 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಹೈದರಾಬಾದ್‌ನಿಂದ ಬೆಂಗಳೂರು ನಡುವೆ ಸಂಚರಿಸುವ ಸಾರಿಗೆ ಬಸ್ ರಾತ್ರಿ 10:45ರ ಸುಮಾರಿನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿನತ್ತ ಹೊರಟಿತ್ತು.
ಕರ್ನಾಟಕದ ಕೆಎಸ್‌ಆರ್‌ಟಿಸಿ ಬಸ್ ಮಾತ್ರವಲ್ಲದೇ ತೆಲಂಗಾಣದ ಒಂದು ಸರ್ಕಾರಿ ಬಸ್, ಖಾಸಗಿ ಬಸ್ ಸೇರಿದಂತೆ ಒಟ್ಟು 4 ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಬಸ್ಸಿನ ಕಿಟಕಿಯ ಗಾಜುಗಳು ಮಾತ್ರ ಒಡೆದು ಹೋಗಿವೆ.
ಈ ಪ್ರಕರಣದ ಸಂಬಂಧ ಶಂಶಾಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- LATEST NEWS3 days ago
ವಧುವಿನಿಂದ ʼಮೊದಲ ರಾತ್ರಿʼ ನಿರಾಕರಣೆ; ಕಾರಣ ತಿಳಿದು ವರನಿಗೆ ಶಾ*ಕ್
- FILM4 days ago
ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್
- LATEST NEWS5 days ago
ರೈಲ್ವೆ ನಿಲ್ದಾಣದಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶ*ವ ಪತ್ತೆ; ತನಿಖೆ ವೇಳೆ ಬಯಲಾಯ್ತು ಸತ್ಯ!
- LATEST NEWS6 days ago
ಮಹಿಳೆಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 450 ರೂ.ಗೆ ಗ್ಯಾಸ್ ಸಿಲಿಂಡರ್
Pingback: WATCH : ಕದ್ರಿ ಪಾರ್ಕ್ ನ ರಸ್ತೆಯಲ್ಲಿ 'ಅಪರೇಷನ್ ಹೆಬ್ಬಾವು'; ಭಾರಿ ಗಾತ್ರದ ಹಾವನ್ನು ಕಂಡು ಬೆಚ್ಚಿ ಬಿದ್ದ ಜನ - NAMMAK