Connect with us

    DAKSHINA KANNADA

     ಕರಾವಳಿಯ ವಾಣಿಜ್ಯ ಹೆಬ್ಬಾಗಿಲು  ಎನ್.ಎಂ.ಪಿ.ಟಿಗೆ ಪ್ರತಿಷ್ಠಿತ “ಫಿಕಿ ಪ್ರಶಸ್ತಿ” ಯ ಗರಿ..!

    Published

    on

     ಕರಾವಳಿಯ ವಾಣಿಜ್ಯ ಹೆಬ್ಬಾಗಿಲು  ಎನ್.ಎಂ.ಪಿ.ಟಿಗೆ ಪ್ರತಿಷ್ಠಿತ “ಫಿಕಿ ಪ್ರಶಸ್ತಿ” ಯ ಗರಿ..!

    ಮಂಗಳೂರು: ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಒಕ್ಕೂಟ ಕೊಡ ಮಾಡುವ FICCI ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರಿನಲ್ಲಿ ನಡೆಯಿತು. ಮಂಗಳೂರಿನ  ಟಿ.ಎಂ.ಎ ಪೈ ಕನ್ವೆನ್ಶನ್ ಸಭಾಂಗಣದಲ್ಲಿ ಫಿಕ್ಕಿಯಿಂದ ಆಯೋಜಿಸಲಾದ ‘ಕರ್ನಾಟಕ ಕೋಸ್ಟ್‌ಲೈನ್ ಬ್ಯುಸಿನೆಸ್ ಕಾನ್‌ಕ್ಲೇವ್’ ಉದ್ಘಾಟನಾ ಸಮಾರಂಭದಲ್ಲಿ ವೃತ್ತಿಪರ ನಿರ್ವಹಣೆ ಮತ್ತು ರಾಜ್ಯದ ಆರ್ಥಿಕತೆಗೆ ನೀಡಿದ ವಿಶೇಷ ಕೊಡುಗೆಗಾಗಿ ರಾಜ್ಯದ ಹೆಮ್ಮೆಯ ಮತ್ತು ದೇಶದ ಪ್ರತಿಷ್ಟಿತ ಬಂದರುಗಳಲ್ಲಿ ಒಂದಾದ ಎನ್‌ಎಂಪಿಟಿಗೆ ಪ್ರತಿಷ್ಟಿತ ಫಿಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಎನ್ ಎಂ ಪಿಟಿ ಅಧ್ಯಕ್ಷರಾದ ವೆಂಕಟರಮಣ ಅಕ್ಕರಾಜು ಅವರು ಬೃಹತ್ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದರು.

    ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್,  ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ವೆಂಕಟೇಶ, ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮತ್ತು ಕೆಸಿಸಿಐ ಅಧ್ಯಕ್ಷ ಐಸಾಕ್ ವಾಸ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಇದಕ್ಕೂ ಮುನ್ನ ಸಮಾರಂಭದಲ್ಲಿ ಮಾತನಾಡಿದ ವೆಂಕಟರಮಣ ಅಕ್ಕರಾಜು ಕೈಗಾರಿಕಾ ಮೂಲಸೌಕರ್ಯವು ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾಗಿರುತ್ತದೆ.

    ಕರ್ನಾಟಕ ಕೈಗಾರಿಕಾ ವಲಯವು ದೇಶದಲ್ಲೇ ತನ್ನದೇ ಆದ ಪ್ರಾಮುಖ್ಯತೆ ಹೊಂದಿದೆ. ಪ್ರತಿವರ್ಷವೂ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿದ್ದು, ರಾಷ್ಟ್ರ ಮಟ್ಟದಲ್ಲಿ ಮುಂಚೂಣಿಯಲ್ಲಿದೆ ಎಂದರು.

    https://www.youtube.com/watch?v=wQByzxrqST4

    DAKSHINA KANNADA

    ಜಾತ್ರಾ ವ್ಯಾಪಾರಿಯ ಪ್ರಾಮಾಣಿಕತೆ..! ಬೆಲೆಬಾಳುವ ಬ್ಯಾಗ್ ಮಾಲೀಕರಿಗೆ ವಾಪಾಸ್‌..!

    Published

    on

    ಕಾಪು : ಉಚ್ಚಿಲ ದಸರಾದಲ್ಲಿ ನಮ್ಮ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ರಘು ಧರ್ಮಸ್ಥಳ ಇವರಿಗೆ ದೇವಸ್ಥಾನದ ವಠಾರದಲ್ಲಿ 20,000.ಸಾವಿರ ನಗದು ಮತ್ತು ಕೆಲವೊಂದು ದಾಖಲೆ ಪತ್ರಗಳು, ಬ್ಯಾಗ್ ಸಮೇತ ಸಿಕ್ಕಿತ್ತು.


    ತಕ್ಷಣ ಅವರು ವಾರೀಸುದಾರರಾದ ಧರಣೇಂದ್ರ ಬಳ್ಳಾಂಜ ಅವರ ಫೋನ್ ನಂಬರನ್ನು ಸಂಪರ್ಕಿಸಿ ಸೊತ್ತುಗಳನ್ನು ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    Continue Reading

    DAKSHINA KANNADA

    ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ

    Published

    on

    ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.

    ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
    ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರಿಗೆ ಬಂದ ಕರ್ನಾಟಕ ಸುವರ್ಣ ರಥ

    Published

    on

    ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಸುವರ್ಣ ಕರ್ನಾಟಕ ರಥ ಮಂಗಳೂರಿಗೆ ಆಗಮಿಸಿದೆ.

    ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಸಂಚರಿಸುವ ಈ ರಥವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ ಸರಳ ರೀತಿಯುಲ್ಲಿ ನಡೆಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಆಧಿಕಾರಿಗಳು ರಥವನ್ನು ಸ್ವಾಗತಿಸಿದ್ದಾರೆ. ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ರಥಕ್ಕೆ ಸ್ವಾಗತ ಕೋರಲಾಗಿದ್ದು, ಅಧಿಕಾರಿಗಳಿಂದಲೇ ಸರಳ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.

    ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್‌ ಅವರ ನೇತೃತ್ವದಲ್ಲಿ ರಥವನ್ನು ಸ್ವಾಗತಿಸಲಾಗಿದ್ದು, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ವರ್ಷ ನವೆಂಬರ್ 1 ರಿಂದ ಈ ರಥ ರಾಜ್ಯದಾದ್ಯಂತ ಸಂಚರಿಸಿ ಕರ್ನಾಟಕ ಸುವರ್ಣ ಸಂಭ್ರಮದ ಸಂದೇಶ ಸಾರುತ್ತಿದೆ.

    Continue Reading

    LATEST NEWS

    Trending