Wednesday, December 1, 2021

ಪ್ರಧಾನಿ ಮೋದಿಗೆ ಕಠೋರ ಪ್ರಾಣ ಕಂಟಕ-ಬ್ರಹ್ಮಾಂಡ ಗುರೂಜಿ ಭವಿಷ್ಯ

ಪ್ರಧಾನಿ ಮೋದಿಗೆ ಕಠೋರ ಪ್ರಾಣ ಕಂಟಕ-ಬ್ರಹ್ಮಾಂಡ ಗುರೂಜಿ ಭವಿಷ್ಯ

ಹಾಸನ : ಪ್ರಧಾನಿ ನರೇಂದ್ರ ಮೋದಿಯ ಈಗಾಗಲೇ ಎರಡು ಕಂಟಕದಿಂದ ಪಾರಾಗಿದ್ದಾರೆ. ಆದರೆ ಮಾಜಿ ಪ್ರಧಾನಿ ಇಂದಿರಾಗಾಂಧಿಯಂತೆ ಪ್ರಧಾನಮಂತ್ರಿ ಮೋದಿಗೂ ಮುಂದೆ ಅಪಾಯ ಎದುರಾಗಬಹುದು.

ಇಂದಿರಾಗಾಂಧಿ ಸಾವಿಗಿಂತಲೂ ಘೋರವಾಗಿ ಮೋದಿ ಸಾವನ್ನಪ್ಪಬಹುದು ಎಂಬುದಾಗಿ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಭವಿಷ್ಯ ನುಡಿದಿದ್ದಾರೆ.

ಅಧಿದೇವತೆ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ರಕ್ಷಣೆಗಾಗಿ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸುವುದು ಸೂಕ್ತ. ಇಲ್ಲವಾದರೆ ಅಪಾಯ ಶತಃಸಿದ್ಧ.

ಪ್ರಧಾನಿ ಮೋದಿಯವರು ಇನ್ನು ಮುಂದೆಯಾದರೂ ತಾಯಿ ಅಥವಾ ಪತ್ನಿಯೊಂದಿಗೆ ಇರಬೇಕೆಂದು ನಾವು ಸಲಹೆ ನೀಡುತ್ತೇವೆ. ಮುಂದಿನ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಬಯಸಿದರೂ ಅವರನ್ನು ಪ್ರಧಾನಿ ಮಾಡಲು ಅವರ ಪಕ್ಷದವರೇ ಒಪ್ಪೋದಿಲ್ಲ. ಸ್ವಪಕ್ಷೀಯರೇ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬಾರದೆಂದು ಸಂಚು ರೂಪಿಸಿದ್ದಾರೆ ಎಂದರು.

ಇನ್ನೂ ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಗ್ಗೆಯೂ ಮಾತನಾಡಿದ ಅವರು, ಮುಂದಿನ ವರ್ಷ ಸಿಎಂ ಯಡಿಯೂರಪ್ಪ ಅವರ ಬದಲಾವಣೆ ಶತಃಸಿದ್ಧ.

ಇನ್ನೂ ಮೂವರು ಮುಖ್ಯಮಂತ್ರಿಗಳು ಬರುವುದರೊಳಗೆ ಕರ್ನಾಟಕ ಇಬ್ಭಾಗ ಆಗುತ್ತೆ. ಮೂರನೇ ಮಹಾಯುದ್ಧ ಸಹ ನಡೆಯುತ್ತೆ. ಭಾರತ ಮೂಲದ 6 ಮಂದಿ ವಿದೇಶದಲ್ಲೂ ಆಳ್ವಿಕೆ ನಡೆಸುತ್ತಾರೆ ಎಂಬುದಾಗಿಯೂ ಭವಿಷ್ಯ ನುಡಿದಿದ್ದಾರೆ.

ನರೇಂದ್ರ ಮೋದಿಯ ಅವಧಿಯೂ ಕೂಡ ಮುಕ್ತಾಯವಾಗುವ ಸಮಯ ಸನಿಹ ಬಂದಿದೆ. ಮುಂದಿನ 13 ವರ್ಷಗಳ ಕಾಲ ದೇಶದಲ್ಲಿ ಆಹಾರದ ಕೊರತೆ ಉಂಟಾಗಿ ಹಸಿವಿನ ಕ್ಷಾಮ ತಲೆದೋರಲಿದೆ. ಹೀಗಾಗಿ ದೇಶದ ರಾಜಕಾರಣಿಗಳು ಮತ್ತು ಅಧಿಕಾರಿಗಳು ಇನ್ನಾದರೂ ಭ್ರಷ್ಟಾಚಾರ ಬಿಟ್ಟು ಧರ್ಮ ಮಾರ್ಗದಲ್ಲಿ ನಡೆಯುವುದು ಸೂಕ್ತ ಎಂದು ಸಲಹೆ ನೀಡಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...