ಪ್ರಧಾನಿ ಮೋದಿಗೆ ಕಠೋರ ಪ್ರಾಣ ಕಂಟಕ-ಬ್ರಹ್ಮಾಂಡ ಗುರೂಜಿ ಭವಿಷ್ಯ
ಹಾಸನ : ಪ್ರಧಾನಿ ನರೇಂದ್ರ ಮೋದಿಯ ಈಗಾಗಲೇ ಎರಡು ಕಂಟಕದಿಂದ ಪಾರಾಗಿದ್ದಾರೆ. ಆದರೆ ಮಾಜಿ ಪ್ರಧಾನಿ ಇಂದಿರಾಗಾಂಧಿಯಂತೆ ಪ್ರಧಾನಮಂತ್ರಿ ಮೋದಿಗೂ ಮುಂದೆ ಅಪಾಯ ಎದುರಾಗಬಹುದು.
ಇಂದಿರಾಗಾಂಧಿ ಸಾವಿಗಿಂತಲೂ ಘೋರವಾಗಿ ಮೋದಿ ಸಾವನ್ನಪ್ಪಬಹುದು ಎಂಬುದಾಗಿ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಭವಿಷ್ಯ ನುಡಿದಿದ್ದಾರೆ.
ಅಧಿದೇವತೆ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ರಕ್ಷಣೆಗಾಗಿ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸುವುದು ಸೂಕ್ತ. ಇಲ್ಲವಾದರೆ ಅಪಾಯ ಶತಃಸಿದ್ಧ.
ಪ್ರಧಾನಿ ಮೋದಿಯವರು ಇನ್ನು ಮುಂದೆಯಾದರೂ ತಾಯಿ ಅಥವಾ ಪತ್ನಿಯೊಂದಿಗೆ ಇರಬೇಕೆಂದು ನಾವು ಸಲಹೆ ನೀಡುತ್ತೇವೆ. ಮುಂದಿನ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಬಯಸಿದರೂ ಅವರನ್ನು ಪ್ರಧಾನಿ ಮಾಡಲು ಅವರ ಪಕ್ಷದವರೇ ಒಪ್ಪೋದಿಲ್ಲ. ಸ್ವಪಕ್ಷೀಯರೇ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬಾರದೆಂದು ಸಂಚು ರೂಪಿಸಿದ್ದಾರೆ ಎಂದರು.
ಇನ್ನೂ ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಗ್ಗೆಯೂ ಮಾತನಾಡಿದ ಅವರು, ಮುಂದಿನ ವರ್ಷ ಸಿಎಂ ಯಡಿಯೂರಪ್ಪ ಅವರ ಬದಲಾವಣೆ ಶತಃಸಿದ್ಧ.
ಇನ್ನೂ ಮೂವರು ಮುಖ್ಯಮಂತ್ರಿಗಳು ಬರುವುದರೊಳಗೆ ಕರ್ನಾಟಕ ಇಬ್ಭಾಗ ಆಗುತ್ತೆ. ಮೂರನೇ ಮಹಾಯುದ್ಧ ಸಹ ನಡೆಯುತ್ತೆ. ಭಾರತ ಮೂಲದ 6 ಮಂದಿ ವಿದೇಶದಲ್ಲೂ ಆಳ್ವಿಕೆ ನಡೆಸುತ್ತಾರೆ ಎಂಬುದಾಗಿಯೂ ಭವಿಷ್ಯ ನುಡಿದಿದ್ದಾರೆ.
ನರೇಂದ್ರ ಮೋದಿಯ ಅವಧಿಯೂ ಕೂಡ ಮುಕ್ತಾಯವಾಗುವ ಸಮಯ ಸನಿಹ ಬಂದಿದೆ. ಮುಂದಿನ 13 ವರ್ಷಗಳ ಕಾಲ ದೇಶದಲ್ಲಿ ಆಹಾರದ ಕೊರತೆ ಉಂಟಾಗಿ ಹಸಿವಿನ ಕ್ಷಾಮ ತಲೆದೋರಲಿದೆ. ಹೀಗಾಗಿ ದೇಶದ ರಾಜಕಾರಣಿಗಳು ಮತ್ತು ಅಧಿಕಾರಿಗಳು ಇನ್ನಾದರೂ ಭ್ರಷ್ಟಾಚಾರ ಬಿಟ್ಟು ಧರ್ಮ ಮಾರ್ಗದಲ್ಲಿ ನಡೆಯುವುದು ಸೂಕ್ತ ಎಂದು ಸಲಹೆ ನೀಡಿದರು.
ಮಂಗಳೂರು/ಬೆಂಗಳೂರು : ರಾಜ್ಯವೇ ಬೆಚ್ಚಿ ಬೀಳುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕ್ರೂ*ರಿ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮಗಳನ್ನು ಕೊಂ*ದಿರುವ ಅಮಾನವೀಯ ಘಟನೆ ನಡೆದಿದೆ. ಅಲ್ಲದೇ ಬಳಿಕ ಆಕೆ ಆತ್ಮಹ*ತ್ಯೆಗೂ ಯತ್ನಿಸಿದ್ದಾಳೆ .
ಎಲ್ಲವೂ ಚೆನ್ನಾಗಿತ್ತು…ಅನುಮಾನ ಶುರುವಾಯ್ತು :
ಆ ಕುಟುಂಬ ಕಳೆದ ತಿಂಗಳಷ್ಟೇ ಜಾರ್ಖಂಡ್ ನಿಂದ ಬಂದು ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ವಾಸವಾಗಿತ್ತು. ಪತಿ ಸುನೀಲ್ ಸಾಹೋ, ಪತ್ನಿ ಮಮತಾ ಸಾಹೋ, ಮಕ್ಕಳಾದ ಶಂಭು ಸಾಹೋ, ಶಿಯಾ ಸಾಹೋ…ಪುಟ್ಟ ಸಂಸಾರ…ಸಣ್ಣದೊಂದು ಬಾಡಿಗೆ ಮನೆಯಲ್ಲಿ ವಾಸ…ಆಟೋ ಚಾಲಕನಾಗಿ ದುಡಿಯುತ್ತಿದ್ದ ಸುನೀಲ್ ಸಾಹೋ..ಹೀಗೆ ಸಂಸಾರ ಸಾಗುತ್ತಿತ್ತು. ಎಲ್ಲವೂ ಸರಿಯಾಗಿತ್ತು. ಅದ್ಯಾವಾಗ ಗಂಡನ ಬಗ್ಗೆ ಅ*ನೈತಿಕ ಸಂಬಂಧದ ಅನುಮಾನ ಹುಟ್ಟಿಕೊಂತೋ ಎಲ್ಲವೂ ಎಕ್ಕುಟ್ಹೋಗಿತ್ತು. ಪತಿ ಬೇರೊಂದು ಯುವತಿಯೊಂದಿಗೆ ಮಾತಾಡುತ್ತಿರುವುದನ್ನು ಮಮತಾ ಕೇಳಿಸಿಕೊಂಡಿದ್ದಳಂತೆ. ಇದೇ ದಂಪತಿ ನಡುವೆ ನಿತ್ಯ ಜಗಳಕ್ಕೆ ಬುನಾದಿ ಹಾಕಿತ್ತಂತೆ. ನಿನ್ನೆಯೂ(ನ.21) ಜಗಳ ಮುಂದುವರಿದಾಗ ಸುನೀಲ್ ಆಟೋ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ.
ಗಂಡ ಹೊರಹೋದ ಮೇಲೆ ಬಾಗಿಲು ಹಾಕಿ, ಇತ್ತ ಮಕ್ಕಳಿಬ್ಬರನ್ನೂ ಕತ್ತು ಹಿಸುಕಿ ಮಮತಾ ಕೊಂ*ದಿದ್ದಾಳೆ. ಬಳಿಕ ತಾನೂ ಚಾ*ಕುವಿನಿಂದ ಕತ್ತು ಕೊ*ಯ್ದುಕೊಂಡಿದ್ದಾಳೆ. ಎಲ್ಲ ಆದ ಮೇಲೆ ತಪ್ಪಿನ ಅರಿವಾಗಿ ಪತಿಗೆ ಸೆಲ್ಫಿ ಫೋಟೋ ಕಳುಹಿಸಿದ್ದಾಳೆ. ಅಷ್ಟೇ ಅಲ್ಲ, ‘ಗಲತ್ ಹೋಗಯಾ…ಮಾಫ್ ಕರೋ’ ಅಂತ ಮೆಸೇಜ್ ಬೇರೆ ಹಾಕಿದ್ದಾಳೆ.
ಮೆಸೇಜ್ ನೋಡಿದ ತಕ್ಷಣ ಮನೆಯತ್ತ ದೌಡಾಯಿಸಿದ ಪತಿ ಬಾಗಿಲು ಒಡೆದು ಒಳ ಹೋಗಿ ಹೆಂಡತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದಾನೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಮತಾ ಸಾಹೋ ಪ್ರಾ*ಣಾ*ಪಾಯದಿಂದ ಪಾರಾಗಿದ್ದಾಳೆ. ಆದರೆ, ಏನೂ ಅರಿಯದ ಕಂದಮ್ಮಗಳು ಪತಿ – ಪತ್ನಿ ಜಗಳಕ್ಕೆ ಬ*ಲಿಯಾಗಿವೆ.
ಕನ್ನಡದ ‘ಬಿಗ್ ಬಾಸ್ ಕನ್ನಡ 11’ರ ಆಟ ರಂಗೇರಿದೆ. ತಮ್ಮ ಮುಗ್ಧತೆಯಿಂದ ಜನರ ಮನಸ್ಸನ್ನು ಗೆದ್ದಿರುವ ಹನುಮಂತ ಇದೀಗ ಸುದೀಪ್ ಮನಸ್ಸನ್ನು ಕೂಡ ಗೆದ್ದಿದ್ದಾರೆ. ಆಡಿದ ಮಾತಿನಂತೆ ಸುದೀಪ್ ಅವರು ಕುರಿಗಾಹಿ ಹನುಮಂತಗೆ ವಿಶೇಷ ಗಿಫ್ಟ್‌ವೊಂದನ್ನು ಕಳುಹಿಸಿದ್ದಾರೆ.
ದೊಡ್ಮನೆಯಲ್ಲಿರುವ ಹನುಮಂತಗೆ ಸುದೀಪ್ ಸ್ಪೆಷಲ್ ಗಿಫ್ಟ್‌ವೊಂದನ್ನು ನೀಡಿದ್ದಾರೆ. ಬ್ರಾಂಡೆಂಡ್ ಬಟ್ಟೆಗಳು, ಹೊಸ ಚಡ್ಡಿ, ಲುಂಗಿಯನ್ನು ಕಳುಹಿಸಲಾಗಿದೆ. ಸುದೀಪ್ ಕಳುಹಿಸಿದ ಉಡುಗೊರೆ ನೋಡಿ ಹನುಮಂತ ಭಾವುಕರಾಗಿದ್ದಾರೆ. ಅವರು ಕೊಟ್ಟಿರುವ ಉಡುಗೊರೆ ನೋಡಿದ್ರೆ, ನನಗೆ ನಂಬೋಕೆ ಆಗುತ್ತಿಲ್ಲ. ಅಷ್ಟೊಂದು ಖುಷಿಯಾಗುತ್ತಿದೆ. ಧನ್ಯವಾದಗಳು ಸರ್ ಎಂದಿದ್ದಾರೆ. ಹೊಸ ಬಟ್ಟೆಗಳ ಜೊತೆ ಚಡ್ಡಿ ಇರೋದನ್ನು ನೋಡಿ ಮಾವೋ 3 ಸಾವಿರದ ಚಡ್ಡಿ ಎಂದು ಹನುಮಂತ ನಕ್ಕಿದ್ದಾರೆ. ಇದರೊಂದಿಗೆ ವಿಶೇಷ ಕವನವೊಂದನ್ನು ಸುದೀಪ್ ಬರೆದು ಕಳುಹಿಸಿದ್ದಾರೆ.
ಕಳೆದ ವಾರಾಂತ್ಯದಲ್ಲಿ ಸುದೀಪ್ ಅವರು ಹನುಮಂತಗೆ ಪ್ರತಿದಿನ ನೀವ್ಯಾಕೆ ಸ್ನಾನ ಮಾಡುವುದಿಲ್ಲ ಎಂದು ಪ್ರಶ್ನಿಸಿದ್ದರು. ಆಗ ನನ್ನ ಬಳಿ 4ರಿಂದ 5 ಬಟ್ಟೆಗಳಿವೆ. ಪ್ರತಿದಿನ ಸ್ನಾನ ಮಾಡಿದ್ರೆ ಪದೇ ಪದೇ ಬಟ್ಟೆ ಒಗೆಯಬೇಕು ಎಂದು ಹನುಮಂತ ಉತ್ತರಿಸಿದರು. ಅವರ ಮಾತು ಕೇಳಿದ ಸುದೀಪ್, ನಿಮ್ಮ ಬಟ್ಟೆಯ ಅಳತೆ ನಮಗೆ ಕೊಡಿ. ನಮ್ಮ ಡಿಸೈನರ್‌ಗೆ ಹೇಳಿ ನಿಮಗೆ ಬಟ್ಟೆ ಕಳುಹಿಸುತ್ತೇನೆ ಎಂದು ಸುದೀಪ್ ಹೇಳಿದ್ದರು. ಇದೀಗ ಕೊಟ್ಟ ಮಾತನ್ನು ಅವರು ಪೂರೈಸಿದ್ದಾರೆ. ಕಿಚ್ಚನ ನಡೆಗೆ ಅಭಿಮಾನಿಗಳಿಂದ ಶ್ಲಾಘನೆ ವ್ಯಕ್ತವಾಗಿದೆ. ಬಿಗ್ ಬಾಸ್ ಮನೆಯ ಸ್ಪರ್ಧಿಗಳು ಕೂಡ ಖುಷಿಪಟ್ಟಿದ್ದಾರೆ.
ಬೆಂಗಳೂರು : ಮಾದಕ ವಸ್ತು ಮಾರಾಟ, ಸಾಗಾಟ ಜಾಲದ ಮೇಲೆ ಕಣ್ಣಿಟ್ಟಿರುವ ಸಿಸಿಬಿ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಮಾ*ದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಹೊಸ ವರ್ಷಕ್ಕೆ ಗಾಂ*ಜಾ ಸಪ್ಲೈ :
ಹೊಸ ವರ್ಷಾಚರಣೆಯ ಸಲುವಾಗಿ ಕ್ವಿಂಟಾಲ್ ಗಟ್ಟಲೆ ಗಾಂ*ಜಾ ಸಪ್ಲೈ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಪೆಡ್ಲರ್ ಅಚ್ಚು ಹಾಗೂ ಜಮೀರ್, ರೇಷ್ಮಾ ದಂಪತಿ ಬಂಧಿತರು. ಆರೋಪಿಗಳಿಂದ 3.25 ಕೋಟಿ ರೂಪಾಯಿ ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.
ಮೂವರು ಆರೋಪಿಗಳು ಒಡಿಶಾ ಮತ್ತು ಆಂಧ್ರದಲ್ಲಿ ಗಾಂ*ಜಾ ಸಂಗ್ರಹಿಸಿದ್ದರು. ಹೊಸ ವರ್ಷಾಚರಣೆ ವೇಳೆ ಬೆಂಗಳೂರು, ಕೇರಳದಲ್ಲಿ ಮಾರಾಟ ಮಾಡಲು ಯೋಜಿಸಿದ್ದರು. ಜಮೀರ್ ಮತ್ತು ರೇಷ್ಮಾ ದಂಪತಿ ಬೆಂಗಳೂರಿನಲ್ಲಿ, ಪೆಡ್ಲರ್ ಅಚ್ಚು ಕೇರಳದಲ್ಲಿ ಗಾಂ*ಜಾ ಮಾರಲು ನಿರ್ಧರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ಬೆಂಗಳೂರು ಮತ್ತು ಕೇರಳಕ್ಕೆ ಸಾಗಿಸಲು ಆರೋಪಿಗಳು ಸೆಲ್ಫ್ ಡ್ರೈವಿಂಗ್ ಕಾರು ಬಾಡಿಗೆಗೆ ಪಡೆದಿದ್ದರು. ಬಳಿಕ ಬೆಡ್ ಶೀಟ್ ನಲ್ಲಿ ಗಾಂಜಾ ತುಂಬಿ ಕಾರಿನಲ್ಲಿ ಬೆಂಗಳೂರಿಗೆ ತರುತ್ತಿದ್ದರು . ಗಾಂಜಾ ತರುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಠಾಣೆ ಪೊಲೀಸರು ಹೆಚ್ ಬಿ ಆರ್ ಲೇಔಟ್ ಬಳಿ ಕಾರನ್ನು ಅಡ್ಡ ಹಾಕಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುವಾಗ ಕಾರಿನಲ್ಲಿ 3 ಕೋಟಿ ರೂ. ಮೌಲ್ಯದ ಗಾಂ*ಜಾ ಪತ್ತೆಯಾಗಿದೆ. ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಅಚ್ಚು ಕೇರಳ ಪೊಲೀಸರಿಗೆ ಬೇಕಾದ ಮೋಸ್ಟ್ ವಾಂಟೆಡ್ ಆರೋಪಿ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದ್ದು, ಆತನ ವಿರುದ್ಧ ಕೇರಳದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.
ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಸ್ ಅರೆಸ್ಟ್ :
ಬೆಂಗಳೂರಿನಲ್ಲಿ ವಿದೇಶಿ ಡ್ರ*ಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾ*ಳಿ ನಡೆಸಿದ ಸಿಸಿಬಿ ಅಧಿಕಾರಿಗಳು, 1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಏನಾಶ್ಚರ್ಯ ? ಈ ಡಯಟ್ನಿಂದ ಪತ್ನಿಯ 4ನೇ ಸ್ಟೇಜ್ ಸ್ತನ ಕ್ಯಾನ್ಸರ್ ಮಾಯ !!
ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರ*ಗ್ಸ್ ತರಿಸುತ್ತಿದ್ದರು. ಹೊಸ ವರ್ಷಾಚರಣೆಯಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ, ಈ ವಿದೇಶಿ ಪೆಡ್ಲರ್ ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರು ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ.