Connect with us

    LATEST NEWS

    ಇನ್ಮೇಲೆ ರೂ.500 ನೋಟಿನಲ್ಲಿ ಗಾಂಧೀಜಿ ಬದಲು ಅಂಬೇಡ್ಕರ್ ಚಿತ್ರ

    Published

    on

    ಕೆಲವೊಂದು ವಿಚಾರಗಳು ಭಾರತೀಯ ರೂಪಾಯಿ ನೋಟುಗಳ ಕುರಿತು ಆಗಾಗ ಚರ್ಚೆಗೆ ಬರುತ್ತದೆ. ಹೊಸ ನೋಟುಗಳ ಚಲಾವಣೆ ಆಗುತ್ತದೆ, ಕೆಲವು ನೋಟುಗಳ ಬದಲಾವಣೆ ಆಗುವ ಕುರಿತು ಆಗಾಗ ಸುದ್ಧಿಗಳು ಹಬ್ಬುತ್ತಿರುತ್ತವೆ. ಬಳಿಕ ಅದಕ್ಕೆ ಆರ್‌ಬಿಐ ಸ್ಪಷ್ಟೀಕರಣ ಕೊಟ್ಟು ಆ ವಿಚಾರ ಸುಳ್ಳು ಎಂದು ಸಾಬೀತು ಮಾಡುತ್ತದೆ. ಇದೀಗ ಮತ್ತೆ ಅಂತಹದ್ದೇ ವಿಚಾರ ಒಂದು ಚರ್ಚೆಗೆ ಬಂದಿದ್ದು 500 ರೂಪಾಯಿ ನೋಟುಗಳಲ್ಲಿ ಗಾಂಧೀಜಿ ಬದಲಿಗೆ ಅಂಬೇಡ್ಕರ್  ಚಿತ್ರವನ್ನು ಹಾಕಲಾಗುವುದು ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

    ಅಂಬೇಡ್ಕರ್ ಕುರಿತಾದ ಹೇಳಿಕೆಯ ವಿಚಾರವೊಂದು ದೇಶದಲ್ಲಿ ಭಾರಿ ವಿವಾದಕ್ಕೆ ಕಾರಣವಾದ ಬಳಿಕ ಈ ರೀತಿಯ ಹೊಸ ವಿಚಾರವೊಂದು ಮುನ್ನಲೆಗೆ ಬಂದಿದೆ. ಅದು ಕೂಡ ಬಿಜೆಪಿ ಸರ್ಕಾರ ಡಾ. ಅಂಬೇಡ್ಕರ್ ಅವರ ಜನ್ಮದಿನದಂದು ಅವರ ಫೋಟೋದೊಂದಿಗೆ ಹೊಸ 500 ರೂಪಾಯಿಗಳನ್ನು ಮುದ್ರಿಸಲು ಯೋಜಿಸುತ್ತಿದೆ ಎಂದು ಹೇಳಿಕೊಳ್ಳಲಾಗುತ್ತಿದೆ. ಎಕ್ಸ್ ಬಳಕೆದಾರರೊಬ್ಬರು ಈ ವೈರಲ್ ಚಿತ್ರವನ್ನು ಪೋಸ್ಟ್ ಮಾಡಿ, ‘‘ಈ ಬಾರಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಬಿಜೆಪಿ ಸರ್ಕಾರವು 500 ರೂಪಾಯಿ ನೋಟಿನ ಮೇಲೆ ಅಂಬೇಡ್ಕರ್ ಅವರ ಚಿತ್ರವನ್ನು ಮುದ್ರಿಸಲು ಹೊರಟಿದೆ’’ ಎಂದು ಬರೆದಿದ್ದಾರೆ. ಈ ರೀತಿಯ ಪೋಸ್ಟ್‌ ಕಂಡ ಬಳಿಕ ಅನೇಕರು ಈ ಪೋಸ್ಟ್‌ ಅನ್ನು ತಮ್ಮ ತಮ್ಮ ಖಾತೆಗಳಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

    ಹೊಸ ಸುದ್ಧಿ.. ಏನಿದು ?

    ಅಂಬೇಡ್ಕರ್‌ ಭಾವಚಿತ್ರವಿರುವ 500 ರೂಪಾಯಿ ನೋಟಿನ ಫೋಟೊ ಫೇಕ್‌ ಆಗಿದ್ದು, ಇದನ್ನು ಎಐ ಟೂಲ್‌ ಬಳಸಿ ಎಡಿಟ್‌ ಮಾಡಲಾಗಿದೆ. ಅಲ್ಲದೇ ಅಂಬೇಡ್ಕರ್‌ ಫೋಟೊ ಮುದ್ರಿಸುತ್ತೇವೆ ಎಂದು ಕೇಂದ್ರ ಸರ್ಕಾರ ಎಲ್ಲಿಯೂ ಹೇಳಿಲ್ಲ. ಇನ್ನು ಆರ್‌ಬಿಐ ವೆಬ್‌ಸೈಟ್‌ನಲ್ಲೂ ಸಹ 500 ನೋಟಿನಲ್ಲಿ ಗಾಂಧಿ ಫೋಟೊ ಇದ್ದು, ಅಲ್ಲಿಯೂ ಸಹ ಈ ಬಗ್ಗೆ ಯಾವುದೇ ವಿಷಯವಿಲ್ಲ. ಹೀಗಾಗಿ ಇದೊಂದು ಫೇಕ್‌ ಫೋಟೊ ಆಗಿದೆ. ಅಲ್ಲದೆ ರಿಸರ್ವ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಹೊಸ ಸರಣಿಯ ಎಲ್ಲಾ ನೋಟುಗಳು ಮಹಾತ್ಮ ಗಾಂಧಿಯವರ ಚಿತ್ರವನ್ನು ಒಳಗೊಂಡಿರುತ್ತವೆ. ಮಹಾತ್ಮಗಾಂಧಿ ಸರಣಿಯ ಹೊಸ ನೋಟುಗಳು ಅದರಲ್ಲೂ 500 ರೂಪಾಯಿ ನೋಟು ಬದಲಾಗಿಲ್ಲ. ರಿಸರ್ವ್ ಬ್ಯಾಂಕ್ ವೆಬ್‌ಸೈಟ್‌ನಲ್ಲಿ ಈ ಬಗ್ಗೆ ಯಾವುದೇ ಮಾಹಿತಿ ಕೂಡ ಇಲ್ಲ.

    DAKSHINA KANNADA

    ದಿ।ಮನಮೋಹನ್ ಸಿಂಗ್ ಸಹಿ ಇರುವ ರೂ 1ರ ನೋಟು ರೂ.100 ಕ್ಕೆ ಮಾರಾಟ…!

    Published

    on

    ಮಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದೊಂದಿಗೆ ಅವರೊಂದಿಗೆ ನಂಟು ಬೆಸೆದುಕೊಂಡಿರುವ ಭಾರತೀಯ ನೋಟುಗಳಿಗೆ ಭಾರಿ ಬೇಡಿಕೆ ಬಂದಿದೆ. ಮನಮೋಹನ್ ಸಿಂಗ್ ಅವರ ಸಹಿ ಇರುವ ನೋಟುಗಳನ್ನು ಜನರು ಆನ್‌ಲೈನ್ ಮೂಲಕ ಖರೀದಿ ಮಾಡುತ್ತಿದ್ದಾರೆ.

    ದೇಶದಲ್ಲಿ ನೋಟುಗಳ ಮೇಲೆ ಸಹಿ ಮಾಡಿರುವ ಏಕೈಕ ಪ್ರಧಾನಿ ಮನಮೋಹನ್ ಸಿಂಗ್. ಅದರಲ್ಲೂ ಒಂದು ರೂಪಾಯಿಂದ ಹಿಡಿದು ಎಲ್ಲಾ ಮುಖಬೆಲೆಯ ನೋಟುಗಳ ಮೇಲೆ ಸಹಿ ಮಾಡಿದ ಏಕೈಕ ವ್ಯಕ್ತಿ ಕೂಡಾ ಮನಮೋಹನ್ ಸಿಂಗ್. 1976 ರಲ್ಲಿ ದೇಶದ ಹಣಕಾಸು ಕಾರ್ಯದರ್ಶಿಯಾಗಿದ್ದ ಮನಮೋಹನ್ ಸಿಂಗ್ ಅವರು 1982 ರಿಂದ 1985 ರ ತನಕ ಭಾರತೀಯ ರಿಸರ್ವ ಬ್ಯಾಂಕ್‌ ನ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು.


    1976 ರಲ್ಲಿ ಹಣಕಾಸು ಕಾರ್ಯದರ್ಶಿ ಆಗಿದ್ದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರು ಒಂದು ರೂಪಾಯಿ ಮುಖಬೆಲೆಯ ನೋಟುಗಳಿಗೆ ಸಹಿ ಮಾಡಿದ್ದರು. ಈ ಒಂದು ರೂಪಾಯಿಗಳ ನೋಟಿನ ಮೇಲೆ ಸಹಿ ಮಾಡುವ ಅಧಿಕಾರ ಕೇವಲ ಹಣಕಾಸು ಕಾರ್ಯದರ್ಶಿಗೆ ಮಾತ್ರ ಇರುತ್ತದೆ. ಇದಾದ ಬಳಿಕ 1982 ರಲ್ಲಿ ರಿಸರ್ವ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆದ ಮನಮೋಹನ್ ಸಿಂಗ್ ಅವರು ಗವರ್ನರ್ ಗೆ ಇರುವ ಅಧಿಕಾರದಂತೆ ಉಳಿದ ಎಲ್ಲಾ ಮುಖಬೆಲೆಯ ಕರೆನ್ಸಿಗೆ ಸಹಿ ಮಾಡಿದ್ದರು.


    ಡಿಸೆಂಬರ್ 26 ರಂದು ತಮ್ಮ 92 ನೇ ವಯಸ್ಸಿನಲ್ಲಿ ನಿಧನರಾದ ಮನಮೋಹನ್ ಸಿಂಗ್ ಅವರ ಸಹಿ ಇರುವ ನೋಟಿಗೆ ಈಗ ಬೇಡಿಕೆ ಬಂದಿದೆ. ಆನ್‌ಲೈನ್‌ನಲ್ಲಿ ಪುರಾತನ ನಾಣ್ಯಗಳು ಮತ್ತು ನೋಟುಗಳನ್ನು ಮಾರಾಟ ಮಾಡುವ ವೇದಿಕೆಯಾದ ಬಿಡ್ ಕಯೂರಿಯೋಸ್‌ ನಲ್ಲಿ ಮನಮೋಹನ್ ಸಿಂಗ್ ಅವರ ಸಹಿ ಇರುವ ನೋಟುಗಳು ಮಾರಾಟ ಮಾಡಲಾಗುತ್ತಿದೆ. ಅದರಲ್ಲೂ ಒಂದು ರೂಪಾಯಿ ಮುಖಬೆಲೆಯ ನೋಟುಗಳು ನೂರು ರೂಪಾಯಿಗಳಿಗೆ ಮಾರಾಟವಾಗುತ್ತಿದೆ.

    Continue Reading

    LATEST NEWS

    ವಿಂಡೀಸ್ ವಿರುದ್ಧ ಏಕದಿನ ಸರಣಿ ಕ್ಲೀನ್‌ಸ್ವೀಪ್ ಮಾಡಿದ ಭಾರತೀಯ ಮಹಿಳಾ ತಂಡ

    Published

    on

    ಮಂಗಳೂರು/ವಡೋದರ : ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಶುಕ್ರವಾರ(ಡಿ.27) ಹೊಸ ದಾಖಲೆ ಬರೆದಿದೆ.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ಗೆ ಇಳಿದ ವೆಸ್ಟ್ ಇಂಡೀಸ್  38.5 ಓವರ್ ಗಳಲ್ಲಿ ಕೇವಲ 162 ರನ್ ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ರೇಣುಕಾ ಸಿಂಗ್ 4 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ 6 ವಿಕೆಟ್ ಪಡೆಯುವ ಮೂಲಕ ವೆಸ್ಟ್ ಇಂಡೀಸ್‌ ತಂಡವನ್ನು ಕಟ್ಟಿ ಹಾಕಿದರು.

    ವೆಸ್ಟ್ ಇಂಡೀಸ್ ನೀಡಿದ 163 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ ಕೇವಲ 4 ರನ್ ಗಳಿಸಲಷ್ಟೇ ಶಕ್ತರಾದರು.  ಪ್ರತಿಕಾ ರಾವಲ್ 18, ನಾಯಕಿ ಹರ್ಮನ್ ಪ್ರೀತ್ ಕೌರ್ 32, ರೋಡ್ರಿಗಸ್ 29, ದೀಪ್ತಿ ಶರ್ಮಾ ಅಜೇಯ 39, ರಿಚಾ ಘೋಶ್ 23 ರನ್ ಗಳಿಸುವ ಮೂಲಕ 28.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ ಗೆದ್ದು ಬೀಗಿದರು.

    ಇದನ್ನೂ ಓದಿ : ನಿನ್ನೆ ಚಪ್ಪಲಿ ಧರಿಸಲ್ಲ ಎಂಬ ಶಪಥ… ಇಂದು ಅಂಗಿ ಬಿಚ್ಚಿ, ಚಾಟಿಯಿಂದ ಬಾರಿಸಿಕೊಂಡ ಅಣ್ಣಾಮಲೈ

    ಈ ಮೂಲಕ ಭಾರತ ತಂಡ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವಿಪ್ ಮಾಡಿತು. ದೀಪ್ತಿ ಶರ್ಮಾ ಫ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

    Continue Reading

    LATEST NEWS

    ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್‌ ವಿರುದ್ಧ ಗುಡುಗಿದ ಹರೀಶ್ ಪೂಂಜಾ

    Published

    on

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಬೆಳ್ತಂಗಡಿ ಶಾಸಕರ ವಿರುದ್ಧ ನೀಡಿದ ಹೇಳಿಕೆ ಈಗ ಅಸೋಸಿಯೇಷನ್‌ಗೆ ತಿರುಗುಬಾಣವಾಗಿದೆ. ಜಿಲ್ಲೆಯ ಕಬಡ್ಡಿ ಅಸೋಸಿಯೇಷನ್ ಬಗ್ಗೆ ಮಾತನಾಡುವ ಶಾಸಕ ಹರೀಶ್ ಪೂಂಜಾ ಅವರ ವಿರುದ್ದ ಪತ್ರಿಕಾಗೋಷ್ಠಿ ನಡೆಸಿದ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ಹಲವು ಆರೋಪದ ಜೊತೆ ಸವಾಲು ಕೂಡಾ ಎಸೆದಿದ್ದರು. ಇದೀಗ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿಕೆಗೆ ಶಾಸಕ ಹರೀಶ್ ಪೂಂಜಾ ತಿರುಗೇಟು ನೀಡಿದ್ದಾರೆ.

    ಕಬಡ್ಡಿ ಅಸೋಸಿಯೇಷನ್‌ನಲ್ಲಿ ನಡೆದ ಅವ್ಯವಹಾರ ಹಾಗೂ ಕಬಡ್ಡಿ ಆಟಗಾರರಿಗೆ ಆಗುತ್ತಿದ್ದ ಅನ್ಯಾಯಗಳನ್ನು ದಾಖಲೆ ಸಮೇತ ಮಾದ್ಯಮದ ಮುಂದೆ ಇಟ್ಟಿದ್ದಾರೆ. ಖಾಸಗಿ ಹೊಟೇಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಹರೀಶ್ ಪೂಂಜಾ ತಾನು ರಾಜ್ಯದ ಕಬಡ್ಡಿ ಆಟಗಾರರ ಹಿತಕ್ಕಾಗಿ ಸದನದಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ್ದೆ ಎಂದು ಹೇಳಿದ್ದಾರೆ. 2012 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ಜಿಲ್ಲೆಯ ಆಟಗಾರರಿಗೆ ಏನು ಮಾಡಿದ್ದಾರೆ ಎಂಬ ಪ್ರಶ್ನೆ ಮುಂದಿಟ್ಟಿದ್ದಾರೆ.

    2009 ರಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಕೇಶ್ ಮಲ್ಲಿ ಸಂಸ್ಥೆಯ ಸಧಸ್ಯತ್ವವನ್ನು 2012 ರಲ್ಲಿ ಪಡೆದುಕೊಂಡು ಅಧ್ಯಕ್ಷರಾಗಿದ್ದಾರೆ. ಅದಾದ ಬಳಿಕ ನಿರಂತರ 2024 ರ ತನಕವೂ ಅಧಿಕಾರದಲ್ಲಿದ್ದು, ಎಷ್ಟು ಆಟಗಾರರನ್ನು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಿದ್ದಾರೆ ಎಂಬ ಲೆಕ್ಕ ನೀಡಲಿ ಎಂದು ಸವಾಲು ಹಾಕಿದ್ದಾರೆ. ಅಷ್ಟೇ ಅಲ್ಲದೆ ದ.ಕ. ಜಿಲ್ಲಾ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್‌ನಲ್ಲಿ ನಡೆದ ಅವ್ಯವಹಾರಗಳನ್ನು ದಾಖಲೆ ಸಮೇತ ವಿವರಿಸಿದ್ದಾರೆ.

    ಅವ್ಯವಹಾರದ ಕುರಿತಾದ ದೂರಿನ ಮೇಲೆ ತನಿಕೆ ನಡೆಸಿದ ತನಿಖಾಧಿಕಾರಿಗಳು ಅಸೋಸಿಯೇಷನ್‌ಗೆ ಆಡಳಿತ ಅಧಿಕಾರಿ ನೇಮಕ ಮಾಡಲು ಶಿಫಾರಸು ಮಾಡಿದ್ದು, ಚುನಾವಣೆ ನಡೆಸದೆ ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆ, ಚುನಅವಣೆ ಗೆಲ್ಲಲು ಅನರ್ಹ ಸದಸ್ಯರ ನೊಂದಣಿ, ಸದಸ್ಯ ಹಣವನ್ನು ಖಾತೆಗೆ ಹಾಕದೆ ವಂಚನೆ, ನಕಲಿ ದಾಖಲೆಯ ಸೃಷ್ಟಿ , ನಕಲಿ ಸಹಿ ಬಳಕೆ ಆರೋಪ ಹೀಗೆ ಹಲವಾರು ಲೋಪಗಳನ್ನು ತನಿಕಾ ಅಧಿಕಾರಿ ಗುರುತಿಸಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್‌ ಗೆ ಸರ್ಕಾರ ತಕ್ಷಣ ಆಡಳಿತ ಅಧಿಕಾರಿಯನ್ನು ನೇಮಕ ಮಾಡಬೇಕು ಮತ್ತು ಜಿಲ್ಲೆಯ ಕಬಡ್ಡಿ ಆಟಗಾರರ ಹಿತ ಕಾಪಾಡಬೇಕು ಎಂದು ಶಾಸಕ ಹರೀಶ್ ಪೂಂಜಾ ಸಹಕಾರಿ ಸಚಿವರಿಗೆ ಒತ್ತಾಯಿಸಿದ್ದಾರೆ.

    Continue Reading

    LATEST NEWS

    Trending