Home ದೇಶ-ವಿದೇಶ ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಬೆಳ್ತಂಗಡಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನಲ್ಲಿ ನಿರ್ಮಿಸಲಾದ ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಸೌದಿ ಕರ್ನಾಟಕ ಕಲ್ಚರಲ್ ಫೌಂಡೇಶನ್‌ ವತಿಯಿಂದ ದಾರುಲ್ ಅಮಾನ್ ವಸತಿ ಯೋಜನೆಯಡಿ ಉಚಿತ ಮನೆ ನಿರ್ಮಾಣ ಮಾಡಲಾಗಿದ್ದು, ಅಸ್ಸಯ್ಯಿದ್ ಝೈನುಲ್ ಆಬಿದೀನ್ ಜಮಾಲುಲೈಲಿ ತಂಙಳ್ ಕಾಜೂರು ಅವರು ಉದ್ಘಾಟಿಸಿದರು.

ಅಸ್ಸಯ್ಯಿದ್ ಮುಹಮ್ಮದ್ ಇಂಬಿಚ್ಚಿ ಕೋಯ ತಂಙಳ್ ಅವರು ದುಆ ನೆರವೇರಿಸಿದರು. ಡಾ.ಮುಹಮ್ಮದ್ ಫಾಝಿಲ್ ರಝ್ವಿ, ಮನೆಯ ಕೀ ಹಸ್ತಾಂತರ ಮಾಡಿದರು.

ಇನ್ನು ದಾರುಲ್ ಅಮಾನ್ ವಸತಿ ಯೋಜನೆಯಡಿ ಬಡ ಕುಟುಂಬಗಳಿಗೆ ಆಸರೆಯಾಗಿ ಉಚಿತವಾಗಿ ಮನೆಗಳನ್ನು ನಿರ್ಮಿಸಿ ಕೊಡುತ್ತಿದ್ದು,

ಈಗಾಗಲೇ ಕರ್ನಾಟಕದ ಹಲವು ಭಾಗಗಳಲ್ಲಿ ಅನೇಕ ಅರ್ಹ ಬಡ ಕುಟುಂಬಗಳಿಗೆ ಮನೆ ಕಟ್ಟಲು ಸಹಾಯ ಧನ ಕೊಟ್ಟಿದೆ ಮತ್ತು ಹಲವು ಮನೆಗಳನ್ನು ದುರಸ್ತಿ ಮಾಡಿಸಿದೆ.

ಈ ವೇಳೆ ಮಾತನಾಡಿದ ಕೆ.ಸಿ.ಎಪ್ ಇಂಟರ್ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಡಾ. ಶೈಖ್ ಬಾವ, ಸುಮಾರು 600 ಚದರ ಅಡಿಯ ಮನೆಯನ್ನು 7 ಲಕ್ಷ 50 ಸಾವಿರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿಕೊಡಲಾಗಿದೆ.

ಮನೆಗೆ ಅವಶ್ಯಕವಾದ ಪೀಠೋಪಕರಣ ಸೇರಿದಂತೆ ಮೂಲಭೂತ ವ್ಯವಸ್ಥೆಯನ್ನು ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಅಲ್ಪಕಾಲಾವಧಿಯಲ್ಲಿ  ಉತ್ತಮವಾಗಿ ಮನೆ ನಿರ್ಮಿಸಿದ  ಯಾಕೂಬ್ ಮಲೆಬೆಟ್ಟು ಅವರನ್ನು ಈ  ಸಂದರ್ಭ ಸನ್ಮಾನಿಸಲಾಯಿತು.

RECENT NEWS

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ…

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ… ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು...

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!!

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈಬ್ ಅವರಿಗೂ ಕೋವಿಡ್ 19 ಸೋಂಕು...

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!!

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!! ಮಂಗಳೂರು: ಉಳ್ಳಾಲದಲ್ಲಿ ಬುಧವಾರ ನಡೆಸಲಾದ ರ್ಯಾಂಡಮ್ ಟೆಸ್ಟ್ ವರದಿ ನಿನ್ನೆ (ಜುಲೈ 3) ಬಂದಿದ್ದು ಮತ್ತೆ 28 ಮಂದಿಯಲ್ಲಿ...

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!!

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!! ಉಡುಪಿ: ಉಡುಪಿಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ವರದಿಯಾಗಿದೆ. ಮಹಾರಾಷ್ಟ್ರ4, ಕೇರಳ ರಾಜ್ಯದ 1 ಕೇಸ್ ಪತ್ತೆಯಾಗಿದೆ. ಬೆಂಗಳೂರಿಂದ ಬಂದ ನಾಲ್ವರಲ್ಲಿ...
error: Content is protected !!