ದೇಶಾದ್ಯಂತ ಪ್ರದರ್ಶನವಾಗುತ್ತಿರುವ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಅಭಿನಯಿಸಿದ ನಟಿ ಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ದೇಶಾದ್ಯಂತ ಪ್ರದರ್ಶನವಾಗುತ್ತಿರುವ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ಅಭಿನಯಿಸಿದ ನಟಿ ಸೋನಿಯಾ ಬಾಲಾನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.
‘ದಿ ಕೇರಳ ಸ್ಟೋರಿ’ ಚಿತ್ರ ಸಾಕಷ್ಟು ಸದ್ದು ಮಾಡುತ್ತಿದ್ದಾರೆ, ಅದರಲ್ಲಿ ನಟಿಸಿದ ನಟಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಸೋನಿಯಾ ಹೇಳುತ್ತಿದ್ದಾರೆ.
ಈ ಹಿಂದೆ ಚಿತ್ರದ ನಾಯಕಿ ಅದಾ ಶರ್ಮಾಗೂ ಕೊಲೆ ಬೆದರಿಕೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸ್ ಭದ್ರತೆಯನ್ನೂ ನೀಡಲಾಗಿತ್ತು ಎನ್ನಲಾಗಿದೆ.
ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಸೋನಿಯಾ ಮುಸ್ಲಿಂ ಹುಡುಗಿಯಾಗಿ, ಹಿಂದೂ ಹುಡುಗಿಯರನ್ನು ಮತಾಂತರ ಮಾಡುವ ಪ್ರಕ್ರಿಯೆಯಲ್ಲಿ ಸಹಾಯ ಮಾಡುವ ಪಾತ್ರಕ್ಕೆ ಜೀವ ತುಂಬಿದ್ದಾರೆ.
ಈ ಪಾತ್ರದಲ್ಲಿ ನಟಿಸಿರುವುದಕ್ಕೆ ಕೊಲೆ ಬೆದರಿಕೆ ಸಂದೇಶಗಳು ಬಂದಿದೆ ಎಂದು ಸೋನಿಯಾ ಹೇಳಿದ್ದಾರೆ.
ಬೆದರಿಕೆಗಳಿಗೆ ಪ್ರತಿಕ್ರಿಯಿಸಿದ ಸೋನಿಯಾ, “ನನಗೆ ಬೆದರಿಕೆಗಳು ಬರುವುದು ದೊಡ್ಡ ವಿಷಯವಲ್ಲ, ನಾನು ಮತಾಂತರಗೊಂಡ 7 ಸಾವಿರ ಹುಡುಗಿಯರನ್ನು ಭೇಟಿ ಮಾಡಿದ್ದೇನೆ. ಆ ಹುಡುಗಿಯರೆಲ್ಲರೂ ಈಗ ಆಶ್ರಮದಲ್ಲಿ ವಾಸಿಸುತ್ತಿದ್ದಾರೆ” ಎಂದು ಹೇಳಿದರು.
“ಈ ರೀತಿಯ ಪಾತ್ರಗಳನ್ನು ನಿರ್ವಹಿಸುವ ಅನೇಕ ನಟರಿಗೆ ಇದುವರೆಗೆ ಇಂತಹ ಬೆದರಿಕೆಗಳು ಬಂದಿವೆ. ಆದ್ದರಿಂದ ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.
ಈ ಚಿತ್ರತಂಡವು ನಟಿ ಸೋನಿಯಾಗೆ ಭದ್ರತೆಯನ್ನು ನೀಡಬೇಕೆಂದು ಮನವಿ ಮಾಡಿಕೊಂಡಿದೆ.
ವಿವಾದ, ನಿಷೇಧದ ನಡುವೆಯೂ ಇಂದು ಅದು 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.
ಶನಿವಾರಕ್ಕೆ 183 ಕೋಟಿ ರೂಪಾಯಿಗೂ ಅಧಿಕ ಬಾಕ್ಸ್ ಆಫೀಸ್ ಬಾಚಿಕೊಂಡಿದೆ.