Connect with us

  BANTWAL

  ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಪಾತ್ರಿ ಶ*ವವಾಗಿ ಪತ್ತೆ!

  Published

  on

  ಬಂಟ್ವಾಳ : ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃ*ತದೇಹ ಪತ್ತೆಯಾಗಿದೆ. ಪಾತ್ರಿಯಾಗಿದ್ದ ಗಿರೀಶ್, ದೈವ ಚಾಕಿರಿಯ ಜೊತೆಗೆ ಜೀವನೋಪಾಯಕ್ಕಾಗಿ ಆಟೋ ಚಾಲನೆಯ ಕೆಲಸ ಮಾಡುತ್ತಿದ್ದರು. ಬಜಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ ಇದೆ ಎಂದು ಹೇಳಿ ಬುಧವಾರ ತಡರಾತ್ರಿ ಎರಡು ಗಂಟೆಗೆ ರಿಕ್ಷಾದಲ್ಲಿ ಹೊರಟವರು ಬಳಿಕ ನಾಪತ್ತೆಯಾಗಿದ್ದರು.

  ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗುರುವಾರ ಅವರ ರಿಕ್ಷಾವು ಅಡ್ಡರು-ಪೊಳಲಿ ಸೇತುವೆಯಲ್ಲಿ ಚಾಲನೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೇ ವೇಳೆ ರಾತ್ರಿ ಗಸ್ತಿನಲ್ಲಿದ್ದ ಬಜಪೆ ಪೊಲೀಸರು ಅನುಮಾನಾಸ್ಪದ ವಾಗಿ ಚಾಲನೆಯಲ್ಲೇ ನಿಂತಿದ್ದ ರಿಕ್ಷಾವನ್ನು ಪರಿಶೀಲಿಸಿದರು.

  ಇದನ್ನೂ ಓದಿ : ಹೋಂ ವರ್ಕ್ ಮಾಡುತ್ತಿದ್ದಾಗ ತಲೆಗೆ ಪೆನ್ ಚುಚ್ಚಿ ಯುಕೆಜಿ ಮಗು ಸಾ*ವು!

  ಪರಿಸರದಲ್ಲಿ ಹುಡುಕಿದರೂ ಚಾಲಕನ ಪತ್ತೆಯಾಗಲಿಲ್ಲ, ಬಳಿಕ ರಿಕ್ಷಾದಲ್ಲಿ ದೊರೆತ ದಾಖಲೆ ಪತ್ರದ ಆಧಾರದಲ್ಲಿ ಅವರ ಮನೆಗೆ ಮಾಹಿತಿ ನೀಡಿದ್ದರು. ತೀವ್ರ ಹುಡುಕಾಟದ ಬಳಿಕ ಅವರು ಶ*ವವಾಗಿ ಪತ್ತೆಯಾಗಿದ್ದಾರೆ.

  BANTWAL

  ಬಂಟ್ವಾಳ: ಗದ್ದೆಗೆ ಪಲ್ಟಿಯಾದ ಖಾಸಗಿ ಬಸ್

  Published

  on

  ಬಂಟ್ವಾಳ: ಅಜಿಲಮೊಗರು-ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಸರಪಾಡಿ-ಬಿ.ಸಿ ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಪಲ್ಟಿಯಾದ ಘಟನೆ ಜುಲೈ 15 ರ ಸೋಮವಾರ ನಡೆದಿದೆ.

  ಬಸ್ ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಯಾವೂದೇ ಗಾಯಗಳಿಲ್ಲದೇ ಪಾರಾಗಿದ್ದಾರೆ. ವಿಪರೀತ ಮೆಳೆಯಿಂದಾಗಿ ಗದ್ದೆಯಲ್ಲಿ ನೀರು ತುಂಬಿದ್ದು, ಹೀಗಾಗಿ ಕೆಲ ಪ್ರಯಾಣಿಕರು ಕೆಸರಿನಿಂದ ತುಂಬಿದ್ದರು ಎನ್ನಲಾಗಿದೆ.

  Continue Reading

  BANTWAL

  ಆಟೋ ರಿಕ್ಷಾದಲ್ಲೇ 4 ರಾಜ್ಯ ಸುತ್ತಿದ ಬಂಟ್ವಾಳದ ಯುವಕರು

  Published

  on

  ಬಂಟ್ವಾಳ: ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ.

  ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್‌ವೇರ್ ಇಂಜಿನಿಯರ್ ವಿಶ್ವಾಸ್ ಪ್ರಭು ಅವರು ಜೂ.26 ರಂದು ಮುಂಜಾನೆ 4 ಗಂಟೆಗೆ ಪ್ರವಾಸ ಆರಂಭಿಸಿ ಜು.9 ರಂದು ಊರಿಗೆ ಮರಳಿದ್ದಾರೆ.

  ಊರಿನಿಂದ ಹೊರಟ ಯುವಕರು ಕರ್ನಾಟಕ, ಗೋವಾವನ್ನು ದಾಡಿ ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿ ಗೃಷ್ಣೇಶ್ವರ, ಭೀಮಾಶಂಕರ, ತ್ರ್ಯಂಬಕೇಶ್ವರ ಜ್ಯೋತಿರ್ಲಿಂಗ ಕ್ಷೇತ್ರಗಳ ದರ್ಶನ ಮಾಡಿ ಮುಂದೆ ಗುಜರಾತ್‌ನ ನಾಗೇಶ್ವರ, ಸೋಮನಾಥ ಜ್ಯೋತಿರ್ಲಿಂಗ ಕ್ಷೇತ್ರಗಳಿಗೆ ತೆರಳಿದ್ದಾರೆ. ಜತೆಗೆ ಎಲ್ಲೋರ, ದ್ವಾರಕಾ, ಏಕತಾ ವಿಗ್ರಹ ಮುಂತಾದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

  ಇದಕ್ಕಾಗಿ ತಲಾ 14 ಸಾವಿರ ರೂ. ಖರ್ಚಾಗಿದೆ. 1 ದಿನಗಳ ಪ್ರವಾಸದಲ್ಲಿ ಊಟ-ಉಪಾಹಾರವನ್ನು ಇವರೇ ತಯಾರಿಸಿದ್ದಾರೆ. ಇದಕ್ಕಾಗಿ ದಿನಸಿ ಸಾಮಾನು, ಗ್ಯಾಸ್, ಪಾತ್ರೆಗಳನ್ನು ಜತೆಯಲ್ಲಿ ಕೊಂಡೊಯ್ದಿದ್ದರು.

  ಇವರಿಬ್ಬರೂ ಬಾಲ್ಯ ಸ್ನೇಹಿತರಾಗಿದ್ದು, ಈ ಹಿಂದೆ ಆಟೋ ರಿಕ್ಷಾದ ಮೂಲಕ ಅನಂತಪುರ, ಚಾರ್ಮಾಡಿ ಮೊದಲಾದ ಭಾಗಗಳಿಗೆ ಸಾಕಷ್ಟು ಬಾರಿ ತೆರಳಿದ್ದರು. ಆದರೆ ಇಷ್ಟು ದೂರದ ಪ್ರವಾಸವನ್ನು ಇದೇ ಮೊದಲ ಬಾರಿಗೆ ಕೈಗೊಂಡಿದ್ದರು.

  Continue Reading

  BANTWAL

  ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳ

  Published

  on

  ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ.ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ.

  ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ನ ಎಲ್ಲಾ ಗೇಟ್ ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯಲ್ಲೂ ನೀರಿನ ಮಟ್ಟ ಹೆಚ್ಚಳಗೊಂಡಿದೆ ಎನ್ನಲಾಗಿದೆ.

  ಬಂಟ್ವಾಳದಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5 ಮೀ. ತಲುಪಿದರೆ ಪಾಣೆಮಂಗಳೂರಿನ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ.

  Continue Reading

  LATEST NEWS

  Trending