Connect with us

    LATEST NEWS

    T20 ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಹಿಟ್ ಮ್ಯಾನ್

    Published

    on

    ಮಂಗಳೂರು/ ನವದೆಹಲಿ : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ನಾಯಕ ಹಿಟ್ ಮ್ಯಾನ್  ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ಅಮೋಘ ಅರ್ಧ ಶತಕ ಬಾರಿಸಿದ್ದಾರೆ. ಈ ಮೂಲಕ ಭಾರತ ತಂಡದ ನಾಯಕನಾಗಿ 5,000 ರನ್ ಗಳಿಸುವ ಮೂಲಕ ಸಾಧನೆ ಮೆರೆದಿದ್ದಾರೆ. ಅಲ್ಲದೇ, ಈ ಸಾಧನೆ ಮಾಡಿದ ಭಾರತದ 5ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಅಜರುದ್ದೀನ್, ಸೌರವ್ ಗಂಗೂಲಿ ಈ ದಾಖಲೆ ಮಾಡಿದ್ದರು.


    ಬಾಬರ್ ಅಜಮ್ ದಾಖಲೆ ಉಡೀಸ್ :

    ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ನಾಕೌಟ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಎಂದೆನಿಸಿಕೊಂಡಿದ್ದಾರೆ. ಟಿ20 ವಿಶ್ವಕಪ್ 2024 ರ ಭಾಗವಾಗಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್-2 ಅನ್ನು 68 ರನ್‌ಗಳ ದೊಡ್ಡ ಅಂತರದಿಂದ ಗೆದ್ದು ಫೈನಲ್​ಗೆ ಲಗ್ಗೆ ಇಟ್ಟಿದೆ.

    ಈ ಪಂದ್ಯದಲ್ಲಿ ರೋಹಿತ್ ಶರ್ಮಾ 39 ಎಸೆತಗಳಲ್ಲಿ, 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 57 ರನ್ ಸಿಡಿಸಿ ಅರ್ಧಶತಕ ಗಳಿಸಿದ್ದರು. ಆ ಮೂಲಕ ಟಿ20 ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಭಾರತದ ಮೊದಲ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

    ಅತಿ ಹೆಚ್ಚು ಗೆಲುವು ದಾಖಲಿಸಿದ ನಾಯಕ :


    ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ನಾಯಕನಾಗಿಯೂ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಬಾಬರ್ ಅಜಮ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಇದುವರೆಗೆ 61 ಪಂದ್ಯಗಳ ನಾಯಕರಾಗಿರುವ ರೋಹಿತ್ ಶರ್ಮಾ ಭಾರತಕ್ಕೆ 49 ಪಂದ್ಯಗಳನ್ನು ಗೆದ್ದಿದ್ದಾರೆ. ಮತ್ತೊಂದೆಡೆ, ಬಾಬರ್ ಅಜಮ್ ಪಾಕಿಸ್ತಾನಕ್ಕೆ 85 ಪಂದ್ಯಗಳಲ್ಲಿ 48 ಗೆಲುವು ದಾಖಲಿಸಿದ್ದರು.


    ಭಾರತ ತಂಡದ ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 5 ಸಾವಿರ ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನೂ ಬರೆದಿದ್ದಾರೆ. ವಿರಾಟ ಕೊಹ್ಲಿ 12,883 ರನ್ ಗಳೊಂದಿಗೆ ಟಾಪ್ ನಲ್ಲಿದ್ದಾರೆ. ಧೋನಿ 11,207 ರನ್, ಮೊಹಮ್ಮದ್ ಅಜರುದ್ದೀನ್ 8,095 ರನ್, ಸೌರವ್ ಗಂಗೂಲಿ 7,643 ರನ್ ಗಳೊಂದಿಗೆ ಟಾಪ್ 5ರಲ್ಲಿ ಸ್ಥಾನ ಪಡೆದಿದ್ದಾರೆ.

    ಇದನ್ನೂ ಓದಿ : WATCH : ಟ್ರಾಫಿಕ್ ಜಾಮ್ ನಿಂದ ಬೇಸತ್ತು ‘ಬಾಹುಬಲಿ’ಯಾದ ಬೈಕ್ ಸವಾರ; ವೀಡಿಯೋ ವೈರಲ್

    ಅತ್ಯಧಿಕ ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಆಟಗಾರ :


    ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ. ಟಿ20 ವಿಶ್ವಕಪ್ ನಲ್ಲಿ ಇದುವರೆಗೂ ರೋಹಿತ್ ಶರ್ಮಾ 50 ಸಿಕ್ಸರ್ ಸಿಡಿಸಿದ್ದಾರೆ. 63 ಸಿಕ್ಸರ್ ಗಳೊಂದಿಗೆ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    DAKSHINA KANNADA

    ವೀರಪ್ಪ ಮೊಯ್ಲಿ ಪುತ್ರಿ ವಿಧಿವಶ..!

    Published

    on

    ಬೆಂಗಳೂರು : ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿ ರಾತ್ರಿಯೇ ವಾಪಾಸ್ ಆಗಿದ್ದಾರೆ.


    ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಹಲವಾರು ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ವೇದಿಕೆಯಲ್ಲಿ ತಮ್ಮ ನೃತ್ಯ ಪ್ರದರ್ಶನ ನೀಡಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಸಿನಿಮಾʻ ಶೃಂಗಾರಂʼನಲ್ಲಿ ನಟಿಸಿದ್ದರು. ಇತ್ತೀಚೆಗೆ ಮಕ್ಕಳಿಗಾಗಿ ಹಿಂದಿ ನಾಟಕ, ಕ್ಯುನ್ ಕ್ಯುನ್ ಲಡ್ಕಿ, ಅದೇ ಹೆಸರಿನ ಮಹಾಶ್ವೇತಾ ದೇವಿಯವರ ಪುಸ್ತಕದಿಂದ ಸ್ಫೂರ್ತಿ ಪಡೆದಿದ್ದಾರೆ ಮತ್ತು ರವೀಂದ್ರನಾಥ ಟ್ಯಾಗೋರ್ ಅವರು ಮಕ್ಕಳಿಗಾಗಿ ಬರೆದ ಇಂಗ್ಲಿಷ್ ನಾಟಕಕ್ಕೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಮಾಜ ಸೇವೆಯಲ್ಲೂ ಮುಂಚೂಣಿಯಲ್ಲಿದ್ದ ಅವರು ಜನಾನುರಾಗಿ ಎಂದು ಹೆಸರು ಪಡೆದುಕೊಂಡಿದ್ದರು. 46 ವರ್ಷ ಪ್ರಾಯದ ಹಂಸ ಮೊಯ್ಲಿ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡು ನಿನ್ನೆ ಸಂಜೆ ತೀವೃ ಅಸ್ವಸ್ಥರಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

    Continue Reading

    FILM

    ‘ಎಲ್ಲಾ ಹಣೆಬರಹ..ನಾವೇನು ಮಾಡೋಕ್ಕಾಗಲ್ಲ…’ ದರ್ಶನ್ ಕೊಲೆ ಪ್ರಕರಣದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

    Published

    on

    ಬೆಂಗಳೂರು/ಮಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿದ್ದಾರೆ. ದೇಶದೆಲ್ಲೆಡೆ ಈ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ರವರು ದರ್ಶನ್ ಕೊಲೆ ಪ್ರಕರಣದ ಬಗ್ಗೆ ಮೌನ ಮುರಿದಿದ್ದಾರೆ.

    ಎಲ್ಲಾ ಹಣೆಬರಹ ಏನೂ ಮಾಡೋಕಾಗಲ್ಲ. ಇದೆಲ್ಲಾ ಒಂಥರಾ ಪಾರ್ಟ್ ಆಫ್ ದಿ ಲೈಫ್. ಒಳ್ಳೆಯದು ಕೆಟ್ಟದ್ದು ಎರಡೂ ನಡೆಯುತ್ತದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಎಲ್ಲರಿಗೂ ಒಂದು ನ್ಯಾಯ ಸಿಗಬೇಕು. ಎಲ್ಲಾ ಕುಟುಂಬಕ್ಕೂ ಒಳ್ಳೆದಾಗಬೇಕು’ ಎಂದು ಶಿವಣ್ಣ ಹೇಳಿದ್ದಾರೆ.

    ದರ್ಶನ್ ಬೆಂಬಲಕ್ಕೆ ನಿಂತ ಪರಭಾಷಾ ನಟ; ಏನಂದ್ರು ನಾಗಶೌರ್ಯ?

    ನ್ಯಾಯ ಏನಿದೆಯೋ ಅದು ಆಗುತ್ತದೆ. ಇದೆಲ್ಲ ಹಣೆಬರಹ ನಾವೇನು ಮಾಡೋಕಾಗಲ್ಲ. ನಾವ್ ಏನ್ ಮಾಡ್ತೀವಿ ಅದು ಸರಿನಾ ಅಂತ ಯೋಚನೆ ಮಾಡಬೇಕು. ಈ ಘಟನೆಯಿಂದ ರೇಣುಕಾಸ್ವಾಮಿ ಫ್ಯಾಮಿಲಿಗೆ ಆಗಲಿ, ದರ್ಶನ್ ಅವರ‌ ಫ್ಯಾಮಿಲಿಗೆ ಆಗಲಿ ನೋವಾಗಿರುತ್ತೆ. ನ್ಯಾಯ ಏನಿದೆಯೋ ನೋಡೋಣ. ಈಗ ಮಾತಾಡಿ ಪ್ರಯೋಜನ ಇಲ್ಲ’ ಎಂದು ಹೇಳಿದ್ದಾರೆ.

    Continue Reading

    LATEST NEWS

    Trending