LATEST NEWS
2 ದಿನದ ಕಂದಮ್ಮನನ್ನು ತೋಟದಲ್ಲಿ ಬಿಟ್ಟು ಹೋದ ಹೆತ್ತಮ್ಮ
Published
2 hours agoon
ಮಂಗಳೂರು/ಚಿಕ್ಕಮಗಳೂರು: ಮಗು ಹುಟ್ಟಿದ ಎರಡನೇ ದಿನವೇ ಹೆತ್ತ ತಾಯಿ ಕಾಫಿ ತೋಟದಲ್ಲಿ ಕಂದಮ್ಮನನ್ನು ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.
ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಚಂದ್ರಮ್ಮ ಎಂಬುವವರು ಹುಟ್ಟಿದ ಎರಡೇ ದಿನಕ್ಕೆ ಪುಟ್ಟ ಪಾಪುವನ್ನು ಬಿಟ್ಟು ಹೋಗಿದ್ದು, ಇಂದು (ಜ.16) ಬೆಳಗ್ಗಿನ ಜಾವ 6 ಗಂಟೆಯ ಸಮಯದಲ್ಲಿ ಸ್ಥಳೀಯ ಮಹಿಳೆಯೊಬ್ಬಳಿಗೆ ಮಗು ಅಳುವ ಸದ್ದು ಕೇಳಿಸಿದೆ. ಗಂಟೆಗಳು ಕಳೆದರೂ ಕೂಡ ಮಗುವಿನ ಅಳು ನಿಲ್ಲದಿದ್ದಾಗ ತೋಟಕ್ಕೆ ಬಂದು ನೋಡಲು ಮೈ ಮೇಲೆ ಬಟ್ಟೆಯೇ ಇಲ್ಲದೆ ತೋಟದ ಒಂದು ಮೂಲೆಯಲ್ಲಿ ಅಳುತ್ತಿರುವ ಮಗು ಕಂಡು ಬಂದಿದೆ.
ಇದನ್ನೂ ಓದಿ : ಅಂದಿನ ಖ್ಯಾತ ಮಾಡಲ್ ಇಂದಿನ ಸನ್ಯಾಸಿನಿ ; ಯಾರು ಈ ಸುಂದರ ಸಾಧ್ವಿ ?
ಮಗುವನ್ನು ಕರೆತಂದು ತಮ್ಮ ಮನೆಯಲ್ಲಿ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ. ನಂತರ ಗ್ರಾಮದ ಆಯಾಗೆ ವಿಷಯ ತಿಳಿಸಿ ಸ್ಥಳಕ್ಕೆ ಡಾಕ್ಟರನ್ನು ಕರೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ.
LATEST NEWS
ಗೋಪಾನ್ ಸ್ವಾಮಿ ಅವರ ದೇಹದಲ್ಲಿ ಯಾವುದೇ ಗಾಯಗಳಿಲ್ಲ: ಪ್ರಾಥಮಿಕ ವರದಿ
Published
24 seconds agoon
16/01/2025By
NEWS DESK3ಮಂಗಳೂರು/ತಿರುವನಂತಪುರ : ಗೋಪಾನ್‌ಸ್ವಾಮಿಯದು ಸಹಜ ಸಾವು ಎಂದು ಪ್ರಾಥಮಿಕ ವರದಿಯಲ್ಲಿ ಕಂಡುಬಂದಿದೆ.
ಸ್ವಯಂ ಘೋಷಿತ ಗುರು ಗೋಪನ್ ಸ್ವಾಮಿಯ “ಸಮಾಧಿ” ವಿಚಾರವಾಗಿ ಕೇರಳ ಹೈಕೋರ್ಟ್ ಬುಧವಾರ ಕಾಂಕ್ರಿಟ್ ಚೇಂಬರ್ ಅನ್ನು ತೆರೆಯಲು ಅನುಮತಿ ನೀಡಿತ್ತು. ಇಂದು ಬೆಳಗ್ಗೆ ವಿವಾದಕ್ಕಿಡಾಗಿದ್ದ ಗೋಪಾನ್‌ಸ್ವಾಮಿಯವರ ಗೋರಿಯನ್ನು ಕೆಡವಿ ಪಾರ್ಥಿವ ಶರೀರವನ್ನು ಹೊರ ತೆಗೆಯಲಾಯಿತು.
ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹವನ್ನು ಕುತ್ತಿಗೆಯವರೆಗೂ ಪೂಜಾ ಸಾಮಾಗ್ರಿಗಳಿಂದ ಮುಚ್ಚಲಾಗಿತ್ತು. ಬೆಳಗ್ಗೆ 7 ಗಂಟೆಗೆ ಪೊಲೀಸ್ ಬಂದೋಬಸ್ತ್‌ನಲ್ಲಿ ಸಮಾಧಿ ಕೆಡವಲು ಆರಂಭವಾಯಿತು. ಒಂದೂವರೆ ಗಂಟೆಯಲ್ಲಿ ವಿಚಾರಣೆ ಮುಗಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.
ಮೃತದೇಹದ ಪ್ರಾಥಮಿಕ ಪರೀಕ್ಷೆಯಲ್ಲಿ ಗೋಪಾನ್ ಸ್ವಾಮಿಯದು ಸಹಜ ಸಾವು ಎಂದು ವೈದ್ಯರು ಧೃಡಪಡಿಸಿದ್ದಾರೆ. ದೇಹದ ಮೇಲೆ ಯಾವುದೇ ಮಾರಣಾಂತಿಕ ಗಾಯಗಳಿಲ್ಲ ಎಂದು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಗೊತ್ತಾಗಲಿದೆ. ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತಿದ್ದು, ವಿಧಿ ವಿಧಾನಗಳ ಪ್ರಕಾರ ಕುಟುಂಬಸ್ಥರು ಅಂತ್ಯ ಸಂಸ್ಕಾರ ನಡೆಸಲಿದ್ದಾರೆ.
ಇದನ್ನೂ ಓದಿ: ಕೋಟಿ ಬೆಲೆಯ ಕಾರಿದ್ರೂ ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್? ಈಗ ಹೇಗಿದ್ದಾರೆ ನಟ?
ಏನಿದು ಪ್ರಕರಣ ?
ತಿರುವನಂತಪುರ ಜಿಲ್ಲೆಯ ನೆಯ್ಯತ್ತಿಂಕರದಲ್ಲಿನ ಗೋಪನ್ ಕಳೆದ ಶುಕ್ರವಾರ ಕಾಣೆಯಾಗಿದ್ದಾರೆ ಎನ್ನಲಾಗಿತ್ತು. ಗೋಪನ್ ಸ್ವಾಮಿಗಳ ಮಕ್ಕಳಾದ ಸನಂದನ್ ಮತ್ತು ರಾಜಸೇನನ್ ಅವರು ಸ್ಥಳೀಯ ಸಮುದಾಯ ಅಥವಾ ಸಂಬಂಧಿಕರಿಗೆ ತಿಳಿಸದೆ ತಮ್ಮ ತಂದೆಯನ್ನು ನೆಯ್ಯಟಿಂಕರಾದ ದೇವಸ್ಥಾನದ ಬಳಿ ಸಮಾಧಿ ಮಾಡಿದ ನಂತರ ಈ ವಿವಾದ ಭುಗಿಲೆದ್ದಿತ್ತು.
ಈ ಬಗ್ಗೆ ಗೋಪನ್ ಅವರ ಮಕ್ಕಳು, ‘ತಮ್ಮ ತಂದೆ ಕುಳಿತ ಭಂಗಿಯಲ್ಲಿ ಧ್ಯಾನ ಮಾಡುತ್ತಿದ್ದಾಗ ನಿಧನರಾದರು ಮತ್ತು ಅವರ ಸಾವಿಗೆ ಯಾರಿಗೂ ಅವಕಾಶ ನೀಡದಂತೆ ಸೂಚನೆ ನೀಡಿದ್ದರು’ ಎಂದು ಹೇಳಿದ್ದಾರೆ. ನಂತರ ಅವರು ತಮ್ಮ ತಂದೆಯ ಸಮಾಧಿಯ ಕುರಿತ ಪೋಸ್ಟರ್ ಗಳನ್ನು ಕುಟುಂಬದವರು ಹಾಕಿದ್ದರು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.
ಹಾಗಾಗಿ ಕಂದಾಯ ಅಧಿಕಾರಿಯ ಆದೇಶ ಪತ್ರದೊಂದಿಗೆ ಪೊಲೀಸರು ತಪಾಸಣೆಗೆ ಮುಂದದಾಗ ಕುಟುಂಬವು ಆಕ್ಷೇಪ ವ್ಯಕ್ತಪಡಿಸಿತ್ತು. ಜತೆಗೆ ಕೆಲವು ಹಿಂದೂ ಸಂಘಟನೆಗೆಳೂ ಕುಟುಂಬದ ಪರ ನಿಂತಿದ್ದವು.
ಜತೆಗೆ ಪೊಲೀಸರು ತಪಾಸಣೆಗೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಸಮಾಧಿ ತೆರೆಯಲು ಪೊಲೀಸರಿಗೆ ಅನುಮತಿ ನೀಡಿತ್ತು.
LATEST NEWS
ಮಾವನ ದೈ*ಹಿಕ ಕಿರುಕುಳ ಸಹಿಸಲಾಗದೆ ಆ*ತ್ಮಹ*ತ್ಯೆಗೆ ಶರಣಾದ ಸೊಸೆ
Published
19 minutes agoon
16/01/2025ಮಂಗಳೂರು/ಬೆಂಗಳೂರು: 25 ವರ್ಷದ ಯುವತಿಯೊಬ್ಬಳು ದೈ*ಹಿಕ ಸಂಪರ್ಕಕ್ಕೆ ಪೀಡಿಸಿದಕ್ಕೆ ಪೆಟ್ರೋಲ್ ಸುರಿದು, ಬೆಂ*ಕಿ ಹಚ್ಚಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಆರೋಪಿ ಸಂಬಂಧದಲ್ಲಿ ಯುವತಿಗೆ ಮಾವನಾಗಬೇಕು. ಮೊದಲು ಇಬ್ಬರು ಚೆನ್ನಾಗಿದ್ದು, ಟ್ರಿಪ್ ಹೋಗುತ್ತಿದ್ದರು. ಇತ್ತೀಚೆಗೆ ಆರೋಪಿ ದೈ*ಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ. ನಗರದ ಹೋಟೆಲ್ ವೊಂದರಲ್ಲಿ ರೂಮ್ ಬುಕ್ ಮಾಡಿದ್ದ ಯುವತಿಯನ್ನು ಹೋಟೆಲ್ ರೂಮ್ ಗೆ ಬರುವಂತೆ ಕರೆದಿದ್ದಾನೆ. ಬರದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ನೊಂದ ಯುವತಿ ಪೆ*ಟ್ರೋಲ್ ಸುರಿ*ದುಕೊಂಡು ಬೆಂ*ಕಿ ಹಚ್ಚಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ : 2 ದಿನದ ಕಂದಮ್ಮನನ್ನು ತೋಟದಲ್ಲಿ ಬಿಟ್ಟು ಹೋದ ಹೆತ್ತಮ್ಮ
ಈ ಘಟನೆ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
FILM
ಕೋಟಿ ಬೆಲೆಯ ಕಾರಿದ್ರೂ ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್? ಈಗ ಹೇಗಿದ್ದಾರೆ ನಟ?
Published
41 minutes agoon
16/01/2025By
NEWS DESK4ಮಂಗಳೂರು/ಮುಂಬೈ : ಸೈಫ್ ಅಲಿ ಖಾನ್ ಮೇಲೆ ನಡೆದ ಚೂ*ರಿ ಇ*ರಿತ ಪ್ರಕರಣ ಇಡೀ ಬಾಲಿವುಡನ್ನೇ ಬೆಚ್ಚಿ ಬೀಳಿಸಿದೆ. ಆರು ಕಡೆಗಳಿಗೆ ಚೂ*ರಿ ಇರಿ*ತಕ್ಕೊಳಗಾಗಿ ತೀ*ವ್ರ ರ*ಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾ*ಣಾಪಾಯದಿಂದ ಅವರು ಪಾರಾಗಿದ್ದಾರೆ. ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಇದೆ.
ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್?
ಸದ್ಯ ಈ ಪ್ರಕರಣ ಹಲವು ಅನುಮಾನ ಹುಟ್ಟು ಹಾಕಿದೆ. ಏನೇನೋ ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಗಮನಕ್ಕೆ ಬಂದ ಮತ್ತೊಂದು ವಿಚಾರವಂದ್ರೆ ಅದು ಸೈಫ್ ಆಸ್ಪತ್ರೆ ಸೇರಿದ್ದು ಹೇಗೆ ಎಂಬುದು.
ಹೇಳಿ ಕೇಳಿ ಸಿನಿಮಾ ನಟ. ಅದರಲ್ಲೂ ಶ್ರೀಮಂತ ಮನೆತನದ ನಟ. ಭವ್ಯವಾದ ಮನೆ, ಆಳು ಕಾಳು ಇದ್ದಾರೆ. ಸಿನಿಮಾ ಮಂದಿಗೆ ಕಾರಿನ ಕ್ರೇಜ್ ಇದ್ದೇ ಇದೆ. ಸೈಫ್ ಬಳಿಯೂ ಕೋಟಿಗಟ್ಟಲೆ ಬೆಲೆ ಬಾಳುವ ಕಾರುಗಳಿವೆ. ಆದ್ರೆ, ಹ*ಲ್ಲೆಗೊಳಗಾದ ವೇಳೆ ಅವರು ಆಟೋದಲ್ಲಿ ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗಿದೆ.
ಸದ್ಯ ವೀಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಆಟೋ ಹಾಗೂ ಅದರ ಪಕ್ಕದಲ್ಲಿ ಕರೀನಾ ಕಪೂರ್ ನಿಂತಿರೋದನ್ನು ಕಾಣಬಹುದಾಗಿದೆ. ವರದಿಗಳ ಪ್ರಕಾರ, ಸೈಫ್ ಅಲಿ ಖಾನ್ ದಾ*ಳಿಗೊಳಗಾದಾಗ ಕಾರು ರೆಡಿ ಇರಲಿಲ್ಲ. ತೀವ್ರ ರ*ಕ್ತಸ್ರಾವದಿಂದ ಪರದಾಡುತ್ತಿದ್ದಾಗ ಆಟೋ ಹಿಡಿದು ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗಿದೆ.
ಸೈಫ್ ಹಿರಿಯ ಪುತ್ರ ಇಬ್ರಾಹಿಂ ಸೈಫ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದು, ಕಾರಿನಲ್ಲಿ ಹೋದ್ರೆ ಹೆಚ್ಚು ಸಮಯವಾಗುತ್ತೆ ಎಂಬ ಕಾರಣಕ್ಕೆ ಈ ನಿರ್ಧಾರ ತಳೆಯಲಾಗಿತ್ತು ಎಂದೂ ಹೇಳಲಾಗಿದೆ.
ಸೈಫ್ ಔಟ್ ಆಫ್ ಡೇಂ*ಜರ್ :
ಸದ್ಯ ಲೀಲಾವತಿ ಆಸ್ಪತ್ರೆಯಲ್ಲಿ ಸೈಫ್ ಚೇತರಿಸಿಕೊಳ್ಳುತ್ತಿದ್ದಾರೆ. ಖಾನ್ ಅವರ ದೇಹಕ್ಕೆ 6 ಬಾರಿ ಇರಿಯಲಾಗಿದೆ. ಎರಡು ಕಡೆ ಆಳವಾದ ಗಾ*ಯಗಳಾಗಿದ್ದು, ತುರ್ತು ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಜೀ*ವಕ್ಕೆ ಯಾವುದೇ ಅ*ಪಾಯವಿಲ್ಲ.
ಇದನ್ನೂ ಓದಿ : ಎಟಿಎಂಗೆ ಹಣ ತುಂಬಲು ಬಂದ ಸಿಬ್ಬಂದಿ ಮೇಲೆ ಗುಂ*ಡಿನ ದಾ*ಳಿ; 93 ಲಕ್ಷ ದರೋಡೆ
ಬೆನ್ನು ಮೂಳೆಯಿಂದ ಚಾ*ಕುವಿನ ತುದಿಯನ್ನು ಹೊರತೆಗೆಯಲಾಗಿದೆ. ಖಾನ್ ಆರೋಗ್ಯ ಸ್ಥಿರವಾಗಿದೆ. ನಾಳೆ ಬೆಳಿಗ್ಗೆ ಐಸಿಯುವಿನಿಂದ ಹೊರತರುತ್ತೇವೆ ಎಂದು ಆಸ್ಪತ್ರೆಯ ವೈದ್ಯ ನಿತಿನ್ ಡಾಂಗೆ ಮಾಹಿತಿ ನೀಡಿದ್ದಾರೆ.
LATEST NEWS
2 ದಿನದ ಕಂದಮ್ಮನನ್ನು ತೋಟದಲ್ಲಿ ಬಿಟ್ಟು ಹೋದ ಹೆತ್ತಮ್ಮ
ಬಾಂಬೆ ಐಐಟಿಯ ಅಭಯ್ ಸಿಂಗ್ ನಾಗಸಾಧು ಆಗಿದ್ದು ಹೇಗೆ ?
ಮಹಾನಗರ ಪಾಲಿಕೆಯಾಗಿ ಉಡುಪಿ ನಗರಸಭೆ ಮೇಲ್ದರ್ಜೆಗೆ; ಪ್ರಸ್ತಾವನೆ ಸಲ್ಲಿಸಲು ಸೂಚನೆ
ಎಟಿಎಂಗೆ ಹಣ ತುಂಬಲು ಬಂದ ಸಿಬ್ಬಂದಿ ಮೇಲೆ ಗುಂ*ಡಿನ ದಾ*ಳಿ; 93 ಲಕ್ಷ ದರೋಡೆ
ತುಳು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟ ‘ಗೋಲ್ಡನ್ ಮೂವೀಸ್’; ಕುದ್ರೋಳಿ ಕ್ಷೇತ್ರದಲ್ಲಿ ‘ಪ್ರೊಡಕ್ಷನ್ ನಂ 1’ಗೆ ಅದ್ದೂರಿ ಚಾಲನೆ
ಅಂದಿನ ಖ್ಯಾತ ಮಾಡಲ್ ಇಂದಿನ ಸನ್ಯಾಸಿನಿ ; ಯಾರು ಈ ಸುಂದರ ಸಾಧ್ವಿ ?
Trending
- BIG BOSS5 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS6 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS3 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS2 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
Pingback: ಮಾವನ ದೈ*ಹಿಕ ಕಿರುಕುಳ ಸಹಿಸಲಾಗದೆ ಆ*ತ್ಮಹ*ತ್ಯೆಗೆ ಶರಣಾದ ಸೊಸೆ - NAMMAKUDLA NEWS - ನಮ್ಮಕುಡ್ಲ ನ್ಯೂಸ್